27.05.2019

ದಿನ ಭವಿಷ್ಯ

         

ವಿಕಾರಿನಾಮ ಸಂವತ್ಸರ / ಉತ್ತರಾಯಣ /
ವಸಂತ ಋತು / ವೈಶಾಖ ಮಾಸ/

ಕೃಷ್ಣಪಕ್ಷ/ಅಷ್ಠಮಿ ತಿಥಿ/

ಸೋಮವಾರ/ಶತಭಿಷಾ ನಕ್ಷತ್ರ /



ದಿನಾಂಕ: 27.05.2019

 °~•~°~•~°~•~°~•~°~•~°

ಮೇಷ
ನಿಮ್ಮ ಕೆಲಸದಲ್ಲಿ  ಶ್ರದ್ಧೆಯಿಂದ ಮುನ್ನಡೆಯಿರಿ. ಆರ್ಥಿಕವಾದ ಮುನ್ನಡೆ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ  ನೆಲೆಗೊಳ್ಳುತ್ತದೆ. ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬರುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ಕಂಡುಬರುತ್ತದೆ.

ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.

ಜಪಿಸಲು :
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ

ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ

ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥

°~•~°~•~°~•~°~•~°~•~°

    

ವೃಷಭ

ನೂತನ ವ್ಯವಹಾರಸ್ಥರಿಗೆ ಉತ್ತಮ ಅವಕಾಶ ದೊರೆಯುವುದು. ಆರ್ಥಿಕವಾದ ಹಿನ್ನಡೆ ಕಂಡುಬರಬಹುದು. ದಾಂಪತ್ಯದಲ್ಲಿ ಸುಖ. ಮೂತ್ರ ಸಂಬಂಧಿ ತೊಂದರೆ, ಜ್ವರ, ದೇಹದಲ್ಲಿ ಉಷ್ಣತೆ ಮೊದಲಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಆಲಸ್ಯತನ ವನ್ನು ಬಿಟ್ಟು ನಡೆದರೆ ಮಾತ್ರ ಅಭಿವೃದ್ಧಿ.

ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.

ಜಪಿಸಲು :
ಸರ್ವದೇವಮಯೇ ದೇವಿ

ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್

ಸಫಲಂ ಕುರು ನಂದಿನಿ ||

°~•~°~•~°~•~°~•~°~•~°



ಮಿಥುನ

     ಆಲಸ್ಯ ತನವನ್ನು ಬಿಟ್ಟು ಮುನ್ನಡೆಯಿರಿ. ಯಾರಿಗೂ ಮೋಸವನ್ನು ಮಾಡಿದಿರಿ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣ ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆಯಿರಿ.



ಪರಿಹಾರ  
ನರಸಿಂಹನ ಆರಾಧನೆಯನ್ನು ಮಾಡಿ.

ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್

ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಮಹಾವೀರಮ್

ನಮಾಮಿ ಋಣಮುಕ್ತಯೇ ||

  °~•~°~•~°~•~°~•~°~•~°



ಕರ್ಕಾಟಕ

ವ್ಯವಹಾರದಲ್ಲಿ ಉತ್ತಮ ಅಭಿವೃದ್ಧಿ ಸ್ಥಾನಮಾನ ಗೌರವಗಳು ಲಭಿಸಲಿದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ದೊರೆಯಲಿದೆ. ದಾಂಪತ್ಯ ಜೀವನದಲ್ಲಿ ಸುಖ ನೆಲೆಗೊಳ್ಳುತ್ತದೆ. ಆರೋಗ್ಯದಲ್ಲಿ ವ್ಯತ್ಯಾಸ ಎದುರಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ  ಮುನ್ನಡೆಯಬೇಕು.

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||

 °~•~°~•~°~•~°~•~°~•~°



ಸಿಂಹ

   ನೂತನ ವ್ಯವಹಾರವನ್ನು ಆರಂಭಿಸುವವರಿಗೆ ಉತ್ತಮ ಅವಕಾಶ. ಹಣಕಾಸಿನ ವಿಚಾರದಲ್ಲೂ ಉತ್ತಮ ಏಳ್ಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಹಾಗೂ ಯುವಕ-ಯುವತಿಯರಿಗೆ ವಿವಾಹಯೋಗ ಭಾಗ್ಯ ಒದಗಿ ಬರುತ್ತದೆ. ಆರೋಗ್ಯಕ್ಕೆ ಸಂಬಂಧಿಸಿದ ಸಣ್ಣಪುಟ್ಟ ತೊಂದರೆಗಳು ಎದುರಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆಯಬೇಕು.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||

    °~•~°~•~°~•~°~•~°~•~°      


ಕನ್ಯಾ


     ಮಾಡುವಂತಹಾ ಕೆಲಸಕಾರ್ಯಗಳಲ್ಲಿ ನಿಧಾನಗತಿಯ ಅಭಿವೃದ್ಧಿ ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ  ತಕ್ಕಮಟ್ಟಿನ ಏಳಿಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ನೆಲೆಗೊಳ್ಳುವುದು. ವಿದ್ಯಾರ್ಥಿಗಳು ಆಲಸ್ಯವನ್ನು ಬಿಟ್ಟು ಮುನ್ನಡೆಯಬೇಕು.



ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ

ಜಪಿಸಲು :
ವಸುದೇವಸುತಂ  ದೇವಮ್

ಕಂಸಚಾಣೂರಮರ್ದನಮ್  |
ದೇವಕೀಪರಮಾನಂದಮ್

ಕೃಷ್ಣಂ ವಂದೇ  ಜಗದ್ಗುರುಮ್ ||

  °~•~°~•~°~•~°~•~°~•~°       


ತುಲಾ

ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ದೊರೆಯುತ್ತದೆ. ಆರ್ಥಿಕ ಮುನ್ನಡೆ  ಕಂಡುಬಂದರೂ ಕೂಡ ಖರ್ಚುವೆಚ್ಚಗಳು ಒದಗಿಬರುತ್ತವೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.  


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಸರ್ವರೂಪಮಯೀ ದೇವೀ

ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್

ನಮಾಮಿ ಪರಮೇಶ್ವರೀಮ್ ||


 °~•~°~•~°~•~°~•~°~•~°


ವೃಶ್ಚಿಕ

ಮಾತಿನ ಮೂಲಕ ಜಗಳಗಳು ಸಂಭವಿಸುವ ಲಕ್ಷಣ ಗಳಿರುವುದರಿಂದ ಜಾಗರೂಕತೆಯಿಂದ ಇರಬೇಕು. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಆರೋಗ್ಯ ಸಂಬಂಧವಾಗಿ ತೊಂದರೆಗಳು ಎದುರಾಗುತ್ತದೆ. ವಿದ್ಯಾರ್ಥಿಗಳು  ಆಲಸಿ ತನವನ್ನು ಬಿಟ್ಟು ಪರಿಶ್ರಮದಿಂದ ಮುನ್ನಡೆಯಿರಿ.

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್

ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ

ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°


ಧನು


ಆಹಾರದ ಮೂಲಕವಾಗಿ ಆರೋಗ್ಯ ಹದಗೆಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಮಾಡುವಂತಹ ವ್ಯವಹಾರದಲ್ಲಿ ಮೋಸ ಹೋಗುವ ಸಾಧ್ಯತೆಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳಿವೆ. ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.  

ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು  ಪಡೆಯಿರಿ.

ಜಪಿಸಲು :
ಅಖಂಡಮಂಡಲಾಕಾರಮ್

ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ

ತಸ್ಮೈ ಶ್ರೀಗುರವೇ ನಮಃ ||

     °~•~°~•~°~•~°~•~°~•~°


ಮಕರ


   ಉದ್ಯೋಗಕ್ಷೇತ್ರದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕರಾಗಿರಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ಕಂಡುಬರುತ್ತದೆ   
ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.  

ಜಪಿಸಲು :
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||

   °~•~°~•~°~•~°~•~°~•~°          


ಕುಂಭ  

ನೂತನ   ವ್ಯವಹಾರವನ್ನು ತೊಡಗಿಸಿಕೊಳ್ಳುವ ಉತ್ತಮ ಅವಕಾಶ. ಹಣಕಾಸಿನ  ವಿಚಾರದಲ್ಲಿ ಉತ್ತಮ ಅಭಿವೃದ್ಧಿ. ದಾಂಪತ್ಯ ಜೀವನದಲ್ಲಿ ಸುಖ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳು ಎದುರಾಗುತ್ತವೆ.  ತೊಂದರೆಗಳು ಎದುರಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.



ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


     ನಿಮ್ಮ ಆಲಸಿತನ ದಿಂದಾಗಿ ಕೆಲವೊಂದು   ಉತ್ತಮ ಅವಕಾಶಗಳನ್ನು ಕಳೆದುಕೊಳ್ಳಬೇಕಾಗುತ್ತದೆ. ಆರ್ಥಿಕವಾದ ಮುನ್ನಡೆ  ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು, ಮಲಬದ್ಧತೆ, ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆಯಿರಿ.  


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *