18.02.2019

ದಿನ ಭವಿಷ್ಯ

         

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಮಾಘ ಮಾಸ /
ಶುಕ್ಲ ಪಕ್ಷ / ಚತುರ್ದಶೀ ತಿಥಿ /

ಸೋಮವಾರ/ ಪುಷ್ಯ ನಕ್ಷತ್ರ /

ದಿನಾಂಕ: 18.02.2019

 °~•~°~•~°~•~°~•~°~•~°

ಮೇಷ

        ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಏಳಿಗೆ ಕಂಡುಬರುತ್ತದೆ. ಕೃಷಿ ಕ್ಷೇತ್ರದಲ್ಲಿರುವವರಿಗೆ ಉತ್ತಮ ಬೆಳೆ ಆಗುವುದು. ದಾಂಪತ್ಯಜೀವನದಲ್ಲಿ ಶಾಂತಿ ನೆಲೆಸುತ್ತದೆ. ಜ್ವರ, ದೇಹದಲ್ಲಿ ಉಷ್ಣತೆ, ಕೆಮ್ಮು, ಅಲರ್ಜಿ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಆಲಸ್ಯ ಬಿಟ್ಟು ಮುಂದುವರಿಯಬೇಕು.



ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.

ಜಪಿಸಲು:
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ

ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯ-ಪಾದಾರವಿನ್ದೇ

ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥

°~•~°~•~°~•~°~•~°~•~°

    

ವೃಷಭ

         ಮಾಡುವಂತಹ ಕೆಲಸದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಅಧ್ಯಾಪಕ ವೃತ್ತಿ,  ಸರಕಾರಿ ಕೆಲಸ ಮಾಡುವವರಿಗೆ ಉತ್ತಮ ಅಭಿವೃದ್ಧಿ ಕಂಡುಬರುತ್ತದೆ. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಆರೋಗ್ಯ ಹದಗೆಡುವ ಲಕ್ಷಣಗಳಿದ್ದು ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಆಲಸ್ಯ ಬಿಟ್ಟು ಮುಂದುವರಿಯಬೇಕು.



ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.

ಜಪಿಸಲು:
ಸರ್ವದೇವಮಯೇ ದೇವಿ

ಸರ್ವದೇವೈ-ರಲಂಕೃತೇ |
ಮಾತರ್ಮಮಾ-ಭಿಲಷಿತಂ

ಸಫಲಂ ಕುರು ನಂದಿನಿ ||

°~•~°~•~°~•~°~•~°~•~°



ಮಿಥುನ


   ತೊಡಗಿಸಿಕೊಂಡ ಕೆಲಸದಲ್ಲಿ ಅಡೆತಡೆ ಎದುರಿಸಬೇಕಾಗುತ್ತದೆ. ಮೋಸ ಹೋಗುವ ಸಾಧ್ಯತೆಗಳಿರುವುದರಿಂದ ಜಾಗರೂಕತೆಯಿಂದ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಕುಟುಂಬದಲ್ಲಿ ಉತ್ತಮ ಶಾಂತಿ ನೆಲೆಸುವುದು. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಆಹಾರದ ಬಗ್ಗೆ ಗಮನ ಇಡಬೇಕು. ವಿದ್ಯಾರ್ಥಿಗಳು ಪರಿಶ್ರಮದಿಂದ ಮುಂದುವರೆದಲ್ಲಿ ಉತ್ತಮ ಅಭಿವೃದ್ಧಿ ಹಾಗೂ ಫಲಿತಾಂಶ ಕಂಡುಬರುವುದು.



ಪರಿಹಾರ  
ನರಸಿಂಹನ ಆರಾಧನೆಯನ್ನು ಮಾಡಿ.

ಜಪಿಸಲು:
ದೇವತಾಕಾರ್ಯ-ಸಿದ್ಧ್ಯರ್ಥಂ

ಸಭಾಸ್ತಂಭ-ಸಮುದ್ಭವಮ್ |
ಶ್ರೀನೃಸಿಂಹ ಮಹಾವೀರಂ

ನಮಾಮಿ ಋಣಮುಕ್ತಯೇ ||

  °~•~°~•~°~•~°~•~°~•~°



ಕರ್ಕಾಟಕ

   ಕೆಲಸದಲ್ಲಿ ಉತ್ತಮ ಏಳಿಗೆ ಲಭ್ಯವಾಗಲಿದೆ. ಭೂಮಿಗೆ ಸಂಬಂಧಿಸಿದ ಕೆಲಸ ಮಾಡುವವರು ಹಾಗೂ ಜಲ ಸಂಬಂಧಿ ಕೆಲಸ ಮಾಡುವವರಿಗೆ ಉತ್ತಮ  ಅಭಿವೃದ್ಧಿ ಕಂಡುಬರುವುದು. ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ, ಕುಟುಂಬದಲ್ಲಿ ಕಲಹಗಳು ಏರ್ಪಡುವ ಲಕ್ಷಣ ಇರುವುದರಿಂದ ಜಾಗರೂಕತೆಯಿಂದ ಇರಿ. ಮೈ ಕೈ ಗಂಟು ನೋವು, ಶೀತ, ಕಫ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ  ಮುಂದುವರಿಯಬೇಕು.



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮ: / ಶ್ರೀಶಾಂತ್ಯೈ ನಮ: / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮ: / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮ: / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮ: / ಶ್ರೀಮಹಾಮಾಯಾಯೈ ನಮ: / ಶ್ರೀಯೋಗನಿದ್ರಾಯೈ ನಮ: / ಶ್ರೀಚಂಡಿಕಾಯೈ ನಮ:

 °~•~°~•~°~•~°~•~°~•~°



ಸಿಂಹ

     ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಅಭಿವೃದ್ಧಿ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ಏಳಿಗೆ ಕಂಡುಬರುವುದು. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಕೈ ಗಂಟು ನೋವು, ಬೆನ್ನು ನೋವು, ಕಾಲು ನೋವು,  ಶೀತ, ಕಫ, ದೇಹದಲ್ಲಿ ಉಷ್ಣತೆ, ವಿಪರೀತ ಆಯಾಸ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಆಲಸ್ಯ ಬಿಟ್ಟು ಮುಂದುವರಿಯಬೇಕು.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು:
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಂ|
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||

    °~•~°~•~°~•~°~•~°~•~°      


ಕನ್ಯಾ


    ವ್ಯಾವಹಾರಿಕ ಕ್ಷೇತ್ರದಲ್ಲಿ ಹಿರಿಯ ಅಧಿಕಾರಿಗಳಿಂದ ಅಸಮಾನತೆಯ ನುಡಿಗಳು ಕೇಳಿಬರುವುದು. ಉತ್ತಮ ಶ್ರಮದಿಂದ ಕೆಲಸವನ್ನು ಮುಂದುವರಿಸಿದಲ್ಲಿ ಉತ್ತಮ ಏಳಿಗೆ ಲಭ್ಯ ಇದೆ. ಹಣಕಾಸಿನ ವಿಚಾರದಲ್ಲಿ  ಸಣ್ಣಪುಟ್ಟ ತೊಂದರೆ ಎದುರಿಸಬೇಕಾಗುತ್ತದೆ. ಅಲರ್ಜಿ, ಶೀತ ಕಫ,ಕೆಮ್ಮು, ಅಜೀರ್ಣ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ

ಜಪಿಸಲು:
ವಸುದೇವಸುತಂ  ದೇವಂ

ಕಂಸಚಾಣೂರ-ಮರ್ದನಮ್  |
ದೇವಕೀ-ಪರಮಾನಂದಂ  

ಕೃಷ್ಣಂ ವಂದೇ  ಜಗದ್ಗುರುಮ್ ||

  °~•~°~•~°~•~°~•~°~•~°       


ತುಲಾ


       ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಏಳಿಗೆ ಕಂಡುಬರುತ್ತದೆ. ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಅವಕಾಶ ಒದಗಿಬರುತ್ತದೆ. ಕೃಷಿ ಕ್ಷೇತ್ರದಲ್ಲಿ ಇರುವವರಿಗೆ ಉತ್ತಮ ಬೆಳೆ ಹಾಗೂ ಲಾಭದಾಯಕವಾದ ಆದಾಯ ಸಿಗುವುದು. ಹಣಕಾಸಿನ ವಿಚಾರದಲ್ಲಿ ಏಳಿಗೆ ಕಂಡುಬರುವುದು. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಉತ್ತಮ ಆರೋಗ್ಯ ಪಡೆಯುತ್ತೀರಿ.  ವಿದ್ಯಾರ್ಥಿಗಳು ಪರಿಶ್ರಮದಿಂದ ಉತ್ತಮ ಅಂಕವನ್ನು ಪಡೆದು ಹಿರಿಯರ ಪ್ರೀತಿಗೆ ಪಾತ್ರರಾಗುತ್ತಾರೆ.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು:
ಸರ್ವರೂಪಮಯೀ ದೇವೀ

ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಂ

ನಮಾಮಿ ಪರಮೇಶ್ವರೀಮ್ ||


 °~•~°~•~°~•~°~•~°~•~°


ವೃಶ್ಚಿಕ


  
ವ್ಯಾವಹಾರಿಕ ಕ್ಷೇತ್ರದಲ್ಲಿ ಸಣ್ಣ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ವ್ಯಾಪಾರಸ್ಥರಿಗೆ ಹಿನ್ನಡೆ ಕಂಡುಬರುತ್ತದೆ. ಹಣ ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯಜೀವನದಲ್ಲಿ ಮಾತಿನ ಮೂಲಕ ಜಗಳಗಳು ಬರುವ ಲಕ್ಷಣಗಳು ಇರುವುದರಿಂದ ಮಾತಿನಲ್ಲಿ ಗಮನ ಇರಲಿ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ. ವಿದ್ಯಾರ್ಥಿಗಳು ಪರಿಶ್ರಮದಿಂದ ಮುಂದುವರೊದಲ್ಲಿ ಉತ್ತಮ ಏಳಿಗೆ ಲಭ್ಯವಾಗಲಿದೆ.

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್

ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾ:

ಸುಬ್ರಮಣ್ಯ-ಮುಪಾಸ್ಮಹೇ ||

°~•~°~•~°~•~°~•~°~•~°


ಧನು


    ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ನಿಧಾನಗತಿಯ ಬೆಳವಣಿಗೆ ಕಂಡುಬರುವುದು. ಹಣಕಾಸಿನ ವಿಚಾರದಲ್ಲಿ  ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯಜೀವನದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಗುಹ್ಯರೋಗ, ಶೀತ, ಕಫ, ಮೈ ಕೈ ಗಂಟು ನೋವುಗಳು, ಮನಸ್ಸಿನಲ್ಲಿ ಅಶಾಂತಿ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಆಲಸ್ಯ ಬಿಟ್ಟು ಮುಂದುವರಿದಲ್ಲಿ ಮಾತ್ರ ಉತ್ತಮ ಏಳಿಗೆ ಲಭ್ಯ.


ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು  ಪಡೆಯಿರಿ.

ಜಪಿಸಲು:
ಅಖಂಡಮಂಡಲಾಕಾರಂ

ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ

ತಸ್ಮೈ ಶ್ರೀಗುರವೇ ನಮಃ ||

     °~•~°~•~°~•~°~•~°~•~°


ಮಕರ


    ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಹಿನ್ನಡೆ ಕಂಡುಬರುತ್ತದೆ. ನೂತನ ವ್ಯವಹಾರವನ್ನು ತೊಡಗಿಸಿಕೊಳ್ಳುವ ಅವರಿಗೆ ಅವಕಾಶಗಳು ಒದಗಿ ಬರುತ್ತದೆ.  ಹಣಕಾಸಿನ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ. ಯುವಕ-ಯುವತಿಯರಿಗೆ ವಿವಾಹ ಯೋಗ ಒದಗಿಬರುತ್ತದೆ. ಚರ್ಮರೋಗ, ಅಲರ್ಜಿ, ಶೀತ, ಕಫ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.  ವಿದ್ಯಾರ್ಥಿಗಳು ಆಲಸ್ಯ ಬಿಟ್ಟು ಏಕಾಗ್ರಚಿತ್ತದಿಂದ ಮುಂದುವರಿಯಬೇಕು.



ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.  

ಜಪಿಸಲು:
ಶುದ್ಧಸ್ಫಟಿಕ-ಸಂಕಾಶಂ
ಶುದ್ಧವಿದ್ಯಾ-ಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಂ
ಸದಾಶಿವಮಹಂ ಭಜೇ ||

   °~•~°~•~°~•~°~•~°~•~°          


ಕುಂಭ  


      ಮಾಡುವ ಕೆಲಸ ಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುತ್ತದೆ. ಹಣಕಾಸಿನ ಅಭಿವೃದ್ಧಿ ಕಂಡುಬರುತ್ತದೆ. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ. ಉತ್ತಮ ಆರೋಗ್ಯ ಪಡೆಯುವಿರಿ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ  ಮುಂದುವರಿಯಬೇಕು.



ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು:
ಅಂಜನಾಗರ್ಭ-ಸಂಭೂತ
ಕಪೀಂದ್ರ-ಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಂ
ಹನುಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


  ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಅಭಿವೃದ್ಧಿ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ಏಳಿಗೆ ಕಂಡುಬರುವುದು. ದಾಂಪತ್ಯಜೀವನದಲ್ಲಿ ಕಲಹ ಏರ್ಪಡುವ ಲಕ್ಷಣ ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯ ಹದಗೆಡುವ ಲಕ್ಷಣಗಳು ಇರುವುದರಿಂದ  ಆಹಾರದ ಬಗ್ಗೆ ಗಮನವಿರಲಿ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರೆಯಬೇಕು.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥ ಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು:    
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *