21.02.2019

ದಿನ ಭವಿಷ್ಯ

         

ವಿಲಂಬನಾಮ ಸಂವತ್ಸರ / ಉತ್ತರಾಯಣ
ಶಿಶಿರ ಋತು / ಮಾಘ ಮಾಸ
ಕೃಷ್ಣ ಪಕ್ಷ / ದ್ವಿತೀಯ ತಿಥಿ /

ಗುರುವಾರ / ಹುಬ್ಬಾ / ಉತ್ತರಾ ನಕ್ಷತ್ರ

ದಿನಾಂಕ: 21.02.2019

 °~•~°~•~°~•~°~•~°~•~°

ಮೇಷ

        ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮವಾದ ಏಳಿಗೆ ಕಂಡು ಬರಬಹುದು. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಮುನ್ನಡೆಗಳು ಕಂಡುಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಉತ್ತಮ ಆರೋಗ್ಯವನ್ನು ಹೊಂದುತ್ತೀರಿ. ವಿದ್ಯಾರ್ಥಿಗಳು ಉತ್ತಮ  ಪರಿಶ್ರಮದಿಂದ ಮುಂದುವರಿಯಬೇಕು



ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.

ಜಪಿಸಲು:
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ

ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ

ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥

°~•~°~•~°~•~°~•~°~•~°

    

ವೃಷಭ

         ವ್ಯವಹಾರಿಕ ಕ್ಷೇತ್ರಗಳಲ್ಲಿ ನಿಧಾನಗತಿಯ ಏಳಿಗೆ ಕಂಡು ಬರುತ್ತದೆ. ಆರ್ಥಿಕವಾದ ಮುನ್ನಡೆ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯದಲ್ಲಿ ಏರುಪೇರುಗಳ ಆಗುವ ಸಂಭವ ಇರುವುದರಿಂದ ಜಾಗ್ರತೆಯಿಂದ ಇರಬೇಕು. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ  ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು.




ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.

ಜಪಿಸಲು:
ಸರ್ವದೇವಮಯೇ ದೇವಿ

ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್

ಸಫಲಂ ಕುರು ನಂದಿನಿ ||

°~•~°~•~°~•~°~•~°~•~°



ಮಿಥುನ


   ಕೆಲಸ ಕಾರ್ಯಗಳಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.  ಹಣಕಾಸಿನ ವಿಚಾರದಲ್ಲಿ ಅಡೆತಡೆಗಳು ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸಣ್ಣಪುಟ್ಟ ಕಲಹಗಳ  ಎದುರಿಸಬೇಕಾಗುತ್ತದೆ. ಹೊಟ್ಟೆಗೆ ಸಂಬಂಧಿಸಿದ ತೊಂದರೆ ಬರುವ ಲಕ್ಷಣಗಳು ಇರುವುದರಿಂದ ಆಹಾರದಲ್ಲಿ ನಿಯಂತ್ರಣವಿರಲಿ. ವಿದ್ಯಾರ್ಥಿಗಳು  ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ  
ನರಸಿಂಹನ ಆರಾಧನೆಯನ್ನು ಮಾಡಿ.

ಜಪಿಸಲು:
ದೇವತಾಕಾರ್ಯಸಿದ್ಧ್ಯರ್ಥಮ್

ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹ ಮಹಾವೀರಮ್

ನಮಾಮಿ ಋಣಮುಕ್ತಯೇ ||

  °~•~°~•~°~•~°~•~°~•~°



ಕರ್ಕಾಟಕ

   ತಾವು ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಆರ್ಥಿಕವಾದ ಮುನ್ನಡೆಯನ್ನು  ಹೊಂದುತ್ತೀರಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಮೈಕೈ ಗಂಟು ನೋವು ತಲೆನೋವು ಮುಂತಾದತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಆಲಸಿ ತನವನ್ನು ಬಿಟ್ಟು ಒಂದು ಬರೆಯಬೇಕು



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ

 °~•~°~•~°~•~°~•~°~•~°



ಸಿಂಹ

     ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿಯನ್ನು  ಹೊಂದುತ್ತೀರಿ, ಉತ್ತಮ ಸ್ಥಾನಮಾನಗಳು ಲಭಿಸಲಿದೆ. ಹಣಕಾಸಿನ ವಿಚಾರದಲ್ಲಿ ಏಳಿಗೆ ಲಭ್ಯವಾಗಲಿದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ  ನೆಲೆಸಲಿದೆ, ಹಾಗೂ ಯುವಕ ಯುವತಿಯರಿಗೆ ವಿವಾಹ ಯೋಗ ಭಾಗ್ಯಗಳು ಒದಗಿ ಬರುತ್ತದೆ. ಉತ್ತಮ ಆರೋಗ್ಯವನ್ನು ಹೊಂದಿರುತ್ತೀರಿ. ವಿದ್ಯಾರ್ಥಿಗಳು  ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು:
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ಧೇ ಶ್ರೀಮಹಾದೇವ ಶಂಭೋ ||

    °~•~°~•~°~•~°~•~°~•~°      


ಕನ್ಯಾ


    ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ  ಸಣ್ಣ ಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲಹಗಳನ್ನು ಎದುರಿಸಬೇಕಾಗುತ್ತದೆ. ಆರೋಗ್ಯದಲ್ಲಿ ಏರು ಪೇರುಗಳು ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗ್ರತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು



ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ

ಜಪಿಸಲು :
ವಸುದೇವಸುತಂ  ದೇವಮ್

ಕಂಸಚಾಣೂರಮರ್ದನಮ್  |
ದೇವಕೀಪರಮಾನಂದಮ್

ಕೃಷ್ಣಂ ವನ್ದೇ ಜಗದ್ಗುರುಮ್ ||

  °~•~°~•~°~•~°~•~°~•~°       


ತುಲಾ


       ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು. ಹಣಕಾಸಿನ ವಿಚಾರದಲ್ಲಿ  ಏಳಿಗೆ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಶಾಂತಿ ನೆಲೆಗೊಳ್ಳುತ್ತದೆ. ಅಜೀರ್ಣ ಮುಂತಾದ ತೊಂದರೆಗಳು ಬರುವ ಗಳಿರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಸರ್ವರೂಪಮಯೀ ದೇವೀ

ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್

ನಮಾಮಿ ಪರಮೇಶ್ವರೀಮ್ ||


 °~•~°~•~°~•~°~•~°~•~°


ವೃಶ್ಚಿಕ


  
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ  ಉತ್ತಮ ಅಭಿವೃದ್ಧಿ ಹಾಗೂ ಸ್ಥಾನಮಾನಗಳು   ಲಭ್ಯವಾಗಲಿದೆ. ಹಣಕಾಸಿನ ವಿಚಾರಗಳಲ್ಲಿ ಸಣ್ಣ  ಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳಲು ಇದೆ. ವಿದ್ಯಾರ್ಥಿಗಳು ಪರಿಶ್ರಮದಿಂದ ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು.

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್

ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ

ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°


ಧನು


    ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿಯ ಮುನ್ನಡೆ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸಣ್ಣ ಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.  ಆರೋಗ್ಯದಲ್ಲಿ ಸಣ್ಣಪುಟ್ಟ ತೊಂದರೆಗಳು ಕಂಡುಬರುವುದರಿಂದ ಜಾಗರೂಕತೆಯಿಂದ ಇರಬೇಕು ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು ಕಠಿಣ ಪರಿಶ್ರಮದಿಂದ ಮುಂದುವರಿಯಬೇಕು.


ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು  ಪಡೆಯಿರಿ.

ಜಪಿಸಲು:
ಅಖಂಡಮಂಡಲಾಕಾರಂ

ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ

ತಸ್ಮೈ ಶ್ರೀಗುರವೇ ನಮಃ ||

     °~•~°~•~°~•~°~•~°~•~°


ಮಕರ


    ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಬರುವ ತೊಂದರೆಯಿಂದಾಗಿ ಮನಃಶಾಂತಿಯನ್ನು ಕಳೆದುಕೊಳ್ಳಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲಹಗಳು  ಏರ್ಪಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಉತ್ತಮ ಆರೋಗ್ಯವನ್ನು ಹೊಂದುತ್ತೀರಿ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು



ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.  

ಜಪಿಸಲು :
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||

   °~•~°~•~°~•~°~•~°~•~°          


ಕುಂಭ  


      ಮಾಡುವಂತಹ ಕೆಲಸ ಕಾರ್ಯಗಳಲ್ಲಿ ನಿಧಾನಗತಿಯ ಏಳಿಗೆ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ, ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯಗಳು ಒದಗಿ ಬರುತ್ತದೆ. ಉತ್ತಮ ಆರೋಗ್ಯವನ್ನು ಹೊಂದಿರುತ್ತೀರಿ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರೆದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು



ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು:
ಅಂಜನಾಗರ್ಭಸಂಭೂತ
ಕಪೀಂದ್ರ ಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


  ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಸಣ್ಣ  ಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಏಳಿಗೆ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಕಲಹಗಳನ್ನು ಎದುರಿಸಬೇಕಾಗುತ್ತದೆ. ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರೆದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥ ಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು:    
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *