25.02.2019

ದಿನ ಭವಿಷ್ಯ

         

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಮಾಘ ಮಾಸ /
ಕೃಷ್ಣ ಪಕ್ಷ /ಷಷ್ಠಿ ತಿಥಿ/

ಸೋಮವಾರ/ವಿಶಾಖಾ ನಕ್ಷತ್ರ /

ದಿನಾಂಕ: 25.02.2019

 °~•~°~•~°~•~°~•~°~•~°

ಮೇಷ

        ಉದ್ಯೋಗ ಆಕಾಂಕ್ಷಿಗಳಿಗೆ ಅವಕಾಶಗಳು ಒದಗಿ ಬರುತ್ತದೆ, ಉದ್ಯೋಗದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ಕಂಡುಬರುತ್ತದೆ, ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯಗಳು ಒದಗಿ ಬರುತ್ತದೆ. ಚರ್ಮರೋಗ, ಜ್ವರ ಮುಂತಾದ ತೊಂದರೆ ಅನುಭವಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಏಳಿಗೆ ಕಂಡು ಬರುವುದು



ಪರಿಹಾರ :
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.

ಜಪಿಸಲು :
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ

ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ

ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥

°~•~°~•~°~•~°~•~°~•~°

    

ವೃಷಭ

         ಯಾವುದೇ ಕೆಲಸವನ್ನು ಕೈಗೊಂಡರು ಕೂಡ ಉತ್ತಮ ಶ್ರದ್ಧೆಯಿಂದ ಮುಂದುವರಿಯಿರಿ. ಆಲಸ್ಯತನ ವನ್ನು ಬಿಟ್ಟು  ಮುಂದುವರೆದಲ್ಲಿ ದಲ್ಲಿ ಮಾತ್ರ ಶುಭ. ಹಣಕಾಸಿನ ವಿಚಾರದಲ್ಲಿ ತೊಂದರೆಯನ್ನು ಅನುಭವಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಶೀತ ಜ್ವರ, ಕಫ,  ತಲೆನೋವು ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಸ್ವಪ್ರಯತ್ನದಿಂದ ಮುಂದುವರಿಯಬೇಕು.




ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.

ಜಪಿಸಲು :
ಸರ್ವದೇವಮಯೇ ದೇವಿ

ಸರ್ವದೇವೈರಲಂಕೃತೇ |
ಮಾತರ್ಮಮಾ-ಭಿಲಷಿತಮ್  

ಸಫಲಂ ಕುರು ನಂದಿನಿ ||

°~•~°~•~°~•~°~•~°~•~°



ಮಿಥುನ


   ಮಾಡುತ್ತಿರುವ ಕೆಲಸ ಕಾರ್ಯಗಳಲ್ಲಿ ಅಡೆತಡೆಗಳು ಕಂಡುಬರುವುದು. ಹಿರಿಯ ಅಧಿಕಾರಿಗಳಿಂದ ಅಸಮಾಧಾನದ ಮಾತುಗಳು ಕೇಳಿ ಬರುವುದು. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಶಾಂತಿ ನೆಲೆಗೊಳ್ಳುತ್ತದೆ. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಆಹಾರದಲ್ಲಿ ಗಮನವಿರಲಿ. ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು.



ಪರಿಹಾರ  
ನರಸಿಂಹನ ಆರಾಧನೆಯನ್ನು ಮಾಡಿ.

ಜಪಿಸಲು :
ದೇವತಾಕಾರ್ಯ-ಸಿದ್ಧ್ಯರ್ಥಮ್

ಸಭಾಸ್ತಂಭ-ಸಮುದ್ಭವಮ್ |
ಶ್ರೀನೃಸಿಂಹ ಮಹಾವೀರಮ್

ನಮಾಮಿ ಋಣಮುಕ್ತಯೇ ||

  °~•~°~•~°~•~°~•~°~•~°



ಕರ್ಕಾಟಕ

   ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನೂತನ ಅಭಿವೃದ್ಧಿ ಕಂಡು ಬರುತ್ತದೆ. ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಅವಕಾಶಗಳು ಒದಗಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಕಂಡು ಬರುವುದು. ನೂತನ ಗೃಹಪಯೋಗಿ ವಸ್ತುಗಳು, ವಾಹನ ಖರೀದಿ,  ಭೂಖರೀದಿ, ಅಲಂಕಾರಿಕ ವಸ್ತುಗಳು ಮುಂತಾದವುಗಳನ್ನು ತೆಗೆದುಕೊಳ್ಳಲು ಅವಕಾಶಗಳು ಒದಗಿ ಬರುತ್ತದೆ. ಜೀವನದಲ್ಲಿ ಶಾಂತಿ ನೆಲೆಗೊಳ್ಳುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||

 °~•~°~•~°~•~°~•~°~•~°



ಸಿಂಹ

     ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ  ಅಭಿವೃದ್ಧಿ ಕಂಡುಬರುವುದು. ಹಣಕಾಸಿನ ವಿಚಾರದಲ್ಲಿ  ಮುನ್ನಡೆ ಕಂಡುಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಉದರ ಸಂಬಂಧಿ ತೊಂದರೆಗಳು, ಮೈ ಕೈ ಗಂಟು ನೋವು, ಜ್ವರ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಸ್ವಪ್ರಯತ್ನದಿಂದ ಮುಂದುವರಿಯಬೇಕು.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||

    °~•~°~•~°~•~°~•~°~•~°      


ಕನ್ಯಾ


    ಮಾಡುತ್ತಿರುವ ಕೆಲಸ ಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ, ನೂತನ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ಒದಗಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ  ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯಗಳು ಒದಗಿ ಬರುತ್ತದೆ. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಆಹಾರದಲ್ಲಿ ನಿಯಂತ್ರಣವಿರಲಿ.  ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಏಕಾಗ್ರತೆಯಿಂದ ಮುಂದುವರಿಯಬೇಕು.



ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ.

ಜಪಿಸಲು :
ವಸುದೇವಸುತಂ  ದೇವಮ್

ಕಂಸಚಾಣೂರ-ಮರ್ದನಮ್  |
ದೇವಕೀ-ಪರಮಾನಂದಮ್

ಕೃಷ್ಣಂ ವಂದೇ  ಜಗದ್ಗುರುಮ್ ||

  °~•~°~•~°~•~°~•~°~•~°       


ತುಲಾ


       ವ್ಯವಹಾರ ಕ್ಷೇತ್ರಗಳಲ್ಲಿ ನೂತನ ಬದಲಾವಣೆಗಳು ಕಂಡು ಬರುತ್ತದೆ, ಉತ್ತಮ ಸ್ಥಾನಮಾನ ದೊರೆಯುತ್ತದೆ, ನೂತನ ಉದ್ಯೋಗ ಬಯಸುವವರಿಗೆ ಅವಕಾಶಗಳು ಒದಗಿ ಬರುತ್ತದೆ, ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ದೂರದ ಬಂಧುಗಳ ಆಗಮನದಿಂದ ಮನ ಶಾಂತಿ ದೊರೆಯುತ್ತದೆ. ವಿದ್ಯಾರ್ಥಿಗಳು ತಮ್ಮ ಉತ್ತಮ ಪರಿಶ್ರಮದಿಂದ ಸಫಲತೆಯನ್ನು ಕಾಣುತ್ತಾರೆ.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಸರ್ವರೂಪಮಯೀ ದೇವೀ

ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್

ನಮಾಮಿ ಪರಮೇಶ್ವರೀಮ್ ||


 °~•~°~•~°~•~°~•~°~•~°


ವೃಶ್ಚಿಕ


  
ಮಾಡುತ್ತಿರುವ ಕೆಲಸ ಕಾರ್ಯಗಳಲ್ಲಿ ನಿಧಾನಗತಿಯ ಏಳಿಗೆ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಮಾತಿನ ಮೂಲಕ ಜಗಳಗಳು ಸಂಭವಿಸುವ ಲಕ್ಷಣಗಳು ಇರುವುದರಿಂದ  ಜಾಗರೂಕರಾಗಿರಬೇಕು. ಪಿತ್ತ ಸಂಬಂಧಿತ ತೊಂದರೆಗಳು ಬರುವ ಲಕ್ಷಣಗಳು ಇದೆ. ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು ಮುಂದುವರೆದಲ್ಲಿ ಮಾತ್ರ ಅಭಿವೃದ್ಧಿ ಕಂಡು ಬರುವುದು.

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್

ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ ||

ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°


ಧನು


    ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ  ಬದಲಾವಣೆಗಳು ಕಂಡು ಬರುವುದು. ಉದ್ಯೋಗಾಕಾಂಕ್ಷಿಗಳಿಗೆ  ಅವಕಾಶಗಳು ಒದಗಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ  ಸುಖ ಶಾಂತಿ ನೆಲೆಗೊಳ್ಳುತ್ತದೆ. ವಾಹನ ಖರೀದಿ, ಭೂ ಸಂಬಂಧಿ ವ್ಯವಹಾರಗಳು, ಆಭರಣಗಳ ಖರೀದಿ ಮುಂತಾದವುಗಳಿಗೆ ಅವಕಾಶಗಳು ಒದಗಿ ಬರುತ್ತದೆ ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು.


ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು  ಪಡೆಯಿರಿ.

ಜಪಿಸಲು :
ಅಖಂಡಮಂಡಲಾಕಾರಮ್

ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ

ತಸ್ಮೈ ಶ್ರೀಗುರವೇ ನಮಃ ||

     °~•~°~•~°~•~°~•~°~•~°


ಮಕರ


    ಉದ್ಯೋಗ ಕ್ಷೇತ್ರದಲ್ಲಿ ನೂತನ ಅಭಿವೃದ್ಧಿ ಕಂಡು ಬರುತ್ತದೆ.  ಕೃಷಿಕರಿಗೆ ಉತ್ತಮ ಬೆಳೆ ಲಭ್ಯವಾಗಲಿದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಉತ್ತಮ ಮನ ಶಾಂತಿ ದೊರೆಯುತ್ತದೆ .ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಆಹಾರದಲ್ಲಿ ನಿಗಾ ಇರಲಿ. ವಿದ್ಯಾರ್ಥಿಗಳು ನಿಧಾನಗತಿಯ ಅಭಿವೃದ್ಧಿಯನ್ನು ಕಾಣುತ್ತಾರೆ.



ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.  

ಜಪಿಸಲು:
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾ-ಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||

   °~•~°~•~°~•~°~•~°~•~°          


ಕುಂಭ  


      ಮಾಡುತ್ತಿರುವ ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ಏಳಿಗೆ . ದಾಂಪತ್ಯ ಜೀವನದಲ್ಲಿ ಶಾಂತಿ ಒದಗುತ್ತದೆ. ಶೀತ ಜ್ವರ, ಮೈ ಕೈ ನೋವು ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಉತ್ತಮ ಪರಿಶ್ರಮದಿಂದ  ಸಾಫಲ್ಯತೆ ಯನ್ನು ಕಾಣುತ್ತಾರೆ.



ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು:
ಅಂಜನಾಗರ್ಭಸಂಭೂತ
ಕಪೀಂದ್ರ-ಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನುಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


  ಉತ್ತಮ ಅಭಿವೃದ್ಧಿ ಗಳು ಸ್ಥಾನಮಾನಗಳು ಮಾಡುತ್ತಿರುವ ಕೆಲಸ ಕಾರ್ಯದಲ್ಲಿ ಇದ್ದರೆ ಇಲ್ಲಿದೆ. ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಅವಕಾಶಗಳು ಒದಗಿ ಬರುತ್ತದೆ. ಗೃಹ ಖರೀದಿಗೆ ಸುಸಮಯ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯಗಳು ಒದಗಿ ಬರುವುದು. ವಿದ್ಯಾರ್ಥಿಗಳಿಗೆ  ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥ ಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *