16.03.2019

ದಿನ ಭವಿಷ್ಯ

         

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಪಾಲ್ಗುನ ಮಾಸ /
ಶುಕ್ಲ ಪಕ್ಷ / ದಶಮಿ ತಿಥಿ /

ಶನಿವಾರ/ ಪುನರ್ವಸು ನಕ್ಷತ್ರ/

ದಿನಾಂಕ: 16.03.2019

 °~•~°~•~°~•~°~•~°~•~°

ಮೇಷ

        ವ್ಯವಹಾರಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಕಂಡು ಬರುತ್ತದೆ. ತಾವು ಸಂಪಾದಿಸಿದ ಹಣವನ್ನು ಉತ್ತಮ ಕಾರ್ಯಗಳಿಗೆ ಓಸ್ಕರ ವಾಗಿ ವಿನಿಯೋಗಿಸಿ. ಉತ್ತಮ ಮನ ಶಾಂತಿ ದೊರೆಯುತ್ತದೆ. ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆಹಾರದ ಮೂಲಕವಾಗಿ ಆರೋಗ್ಯ ಹದಗೆಡುವ ಲಕ್ಷಣಗಳು ಇರುವುದರಿಂದ ಆಹಾರದಲ್ಲಿ ಗಮನವಿರಲಿ. ಮಕ್ಕಳು ಉತ್ತಮ ಪರಿಶ್ರಮದಿಂದ ವಿದ್ಯಾಭ್ಯಾಸದಲ್ಲಿ ತೊಡಗಿಸಿಕೊಂಡಲ್ಲಿ ಮಾತ್ರ ಅಭಿವೃದ್ಧಿ ಕಂಡು ಬರುವುದು



ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.

ಜಪಿಸಲು:
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ

ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ

ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥

°~•~°~•~°~•~°~•~°~•~°

    

ವೃಷಭ

         ವ್ಯವಹಾರಿಕ ಕ್ಷೇತ್ರದಲ್ಲಿ ಗೌರವ ಸ್ಥಾನಮಾನಗಳು ಲಭಿಸುತ್ತದೆ ಉದ್ಯೋಗ ಕ್ಷೇತ್ರದಲ್ಲಿ  ಮನ ಶಾಂತಿ ದೊರೆಯುತ್ತದೆ. ಹಣ ಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ಕುಟುಂಬದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಜ್ವರ, ಕಣ್ಣು ನೋವು ಗಂಟಲು ನೋವು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕರಾಗಿರಬೇಕು. ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು




ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.

ಜಪಿಸಲು :
ಸರ್ವದೇವಮಯೇ ದೇವಿ

ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್

ಸಫಲಂ ಕುರು ನಂದಿನಿ ||

°~•~°~•~°~•~°~•~°~•~°



ಮಿಥುನ


   ತಮ್ಮ ಆಲಸ್ಯತನ ದಿಂದಾಗಿ ಕೆಲಸದಲ್ಲಿ ಹಿನ್ನಡೆ ಕಂಡುಬರುತ್ತದೆ. ಶಿಸ್ತಿನಿಂದ ಕಾರ್ಯವನ್ನು ನಿಭಾಯಿಸಿ. ಸಂಪಾದಿಸಿದ ಹಣವನ್ನು ಉತ್ತಮ ಕಾರ್ಯಗಳಿಗೆ ವಿನಿಯೋಗಿಸಿ. ವ್ಯಾಪಾರಸ್ಥರಿಗೆ ಮೋಸ ಹೋಗುವ ಸಾಧ್ಯತೆಗಳಿದ್ದು ಜಾಗರೂಕತೆಯಿಂದ ವ್ಯವಹರಿಸಿ. ದಂಪತಿಯರ ನಡುವೆ ಜಗಳಗಳು ಸಂಭವಿಸುವ ಲಕ್ಷಣಗಳಿದ್ದು ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಆಲಸ್ಯತನ ಬಿಟ್ಟು ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡು ಬರುತ್ತದೆ



ಪರಿಹಾರ  
ನರಸಿಂಹನ ಆರಾಧನೆಯನ್ನು ಮಾಡಿ.

ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್

ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹ ಮಹಾವೀರಮ್

ನಮಾಮಿ ಋಣಮುಕ್ತಯೇ ||

  °~•~°~•~°~•~°~•~°~•~°



ಕರ್ಕಾಟಕ

   ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ.ಕೃಷಿಕರಿಗೆ,ಭೂಮಿ ಸಂಬಂಧ ವ್ಯವಹಾರ ಮಾಡುವವರಿಗೆ ಉತ್ತಮ ಏಳಿಗೆ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ತೊಂದರೆ ಬರುವುದರಿಂದ ವೃಥಾ ಖರ್ಚು ಮಾಡಬೇಡಿ.   ಯುವಕಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಮುಂದುವರಿಯಬೇಕು



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||

 °~•~°~•~°~•~°~•~°~•~°



ಸಿಂಹ

     ಉತ್ತಮ ಶ್ರಮ ಹಾಗೂ ಏಕಾಗ್ರತೆಯಿಂದ ತಮ್ಮ ಕೆಲಸಗಳಲ್ಲಿ ತೊಡಗಿಸಿಕೊಂಡಲ್ಲಿ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ಕುಟುಂಬದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು.  ಮೂತ್ರ ಸಂಬಂಧಿ ತೊಂದರೆ ಮೈ ಕೈ ಗಂಟು ನೋವು, ಕಣ್ಣು ನೋವು, ಹೊಟ್ಟೆ ನೋವು, ಮೊದಲಾದವುಗಳು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳುಏಕಾಗ್ರತೆಯಿಂದ ಮುಂದುವರಿಯಬೇಕು.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||

    °~•~°~•~°~•~°~•~°~•~°      


ಕನ್ಯಾ


     ವೈದ್ಯರು, ಸರಕಾರಿ ಕೆಲಸದಲ್ಲಿರುವವರು, ರಾಜಕಾರಣಿಗಳು, ಮೊದಲಾದವರಿಗೆ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಹಿರಿಯ ಅಧಿಕಾರಿಗಳಿಂದ ಪ್ರಶಂಸನೀಯ ಮಾತುಗಳು ಕೇಳಿ ಬರುತ್ತದೆ. ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು ವಿದ್ಯಾರ್ಥಿಗಳಿಗೆ ಮುನ್ನಡೆ ದೊರೆಯುತ್ತದೆ.



ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ

ಜಪಿಸಲು :
ವಸುದೇವಸುತಂ  ದೇವಮ್

ಕಂಸಚಾಣೂರ-ಮರ್ದನಮ್  |
ದೇವಕೀಪರಮಾನಂದಮ್

ಕೃಷ್ಣಂ ವಂದೇ  ಜಗದ್ಗುರುಮ್ ||

  °~•~°~•~°~•~°~•~°~•~°       


ತುಲಾ


       ಭೂ ಸಂಬಂಧಿ ವ್ಯವಹಾರ ಮಾಡುವವರಿಗೆ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಕೃಷಿಕರಿಗೆ ಉತ್ತಮ ಬೆಳೆ ದೊರೆಯುತ್ತದೆ. ಉತ್ತಮ ಹಣ ಸಂಪಾದನೆ ಆಗುತ್ತದೆ. ದಾಂಪತ್ಯ ಜೀವನದಲ್ಲಿ ಶಾಂತಿ ನೆಲೆಗೊಳ್ಳುತ್ತದೆ. ಚರ್ಮರೋಗ, ಶ್ವಾಸ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು.  ವಿದ್ಯಾರ್ಥಿಗಳಿಗೆ ಏಳಿಗೆ ಕಂಡು ಬರುತ್ತದೆ.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಸರ್ವರೂಪಮಯೀ ದೇವೀ

ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್

ನಮಾಮಿ ಪರಮೇಶ್ವರೀಮ್ ||


 °~•~°~•~°~•~°~•~°~•~°


ವೃಶ್ಚಿಕ


  
ಮಾಡುವ ಕೆಲಸದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬಂದರೂ ಕೂಡ ಮನಃಶಾಂತಿ ಕಳೆದುಕೊಳ್ಳಬೇಕಾಗುತ್ತದೆ. ಆರ್ಥಿಕ ತೊಂದರೆ ಎದುರಿಸಬೇಕಾಗುತ್ತದೆ. ಕುಟುಂಬದಲ್ಲಿ ಕಲಹ ಸಂಭವಿಸುವ ಲಕ್ಷಣಗಳಿವೆ. ಜ್ವರ, ದೇಹದಲ್ಲಿ ಉಷ್ಣತೆ, ಪಿತ್ತ ಸಂಬಂಧವಾದ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು.  ಆಲಸ್ಯ ತನವನ್ನು ಬಿಟ್ಟು ಮುಂದುವರೆದರೆ ಮಾತ್ರ ವಿದ್ಯಾರ್ಥಿಗಳಿಗೆ ಅಭಿವೃದ್ಧಿ ಕಂಡು ಬರುತ್ತದೆ

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್

ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ

ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°


ಧನು


    ತೊಡಗಿಸಿಕೊಂಡ ಕೆಲಸದಲ್ಲಿ ಕಷ್ಟ ನಷ್ಟವನ್ನು ಎದುರಿಸಬೇಕಾಗುತ್ತದೆ.  ನಿಮ್ಮ ಕೈ ಕೆಳಗೆ ಕೆಲಸ ಮಾಡುವವರಿಂದ ತೊಂದರೆ ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು. ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಆರೋಗ್ಯ ಹದಗೆಡುವ ಲಕ್ಷಣಗಳು ಇರುವುದರಿಂದ ಉತ್ತಮವಾಗಿ ನೀರು ಕುಡಿಯಿರಿ. ಆಲಸ್ಯತನ ವನ್ನು ಬಿಟ್ಟು ವಿದ್ಯಾರ್ಥಿಗಳು ಮುಂದುವರಿಯಬೇಕು


ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು  ಪಡೆಯಿರಿ.

ಜಪಿಸಲು :
ಅಖಂಡಮಂಡಲಾಕಾರಮ್

ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ

ತಸ್ಮೈ ಶ್ರೀಗುರವೇ ನಮಃ ||

     °~•~°~•~°~•~°~•~°~•~°


ಮಕರ


    ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ.  ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಅವಕಾಶ ಒದಗಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುವುದರಿಂದ ಖರ್ಚುವೆಚ್ಚಗಳಲ್ಲಿ ಗಮನವಿರಲಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಜ್ವರ, ಶೀತ, ಮಲಬದ್ಧತೆ ಮುಂತಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಮುಂದುವರಿಯಬೇಕು



ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.  

ಜಪಿಸಲು :
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||

   °~•~°~•~°~•~°~•~°~•~°          


ಕುಂಭ  


      ತಾವು ಮಾಡುವ ಒಳ್ಳೆಯ ಕೆಲಸದಿಂದಾಗಿ ಉತ್ತಮ ಹೆಸರು, ಸ್ಥಾನಮಾನ, ಗೌರವಗಳು ಲಭಿಸಲಿದೆ. ವ್ಯವಹಾರಿಕ ಕ್ಷೇತ್ರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ.  ಕುಟುಂಬದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಪುತ್ರನ ಆಗಮನದಿಂದಾಗಿ ಮನ ಶಾಂತಿ ದೊರೆಯುತ್ತದೆ. ಆರೋಗ್ಯದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಅಭಿವೃದ್ಧಿ ಕಂಡು ಬರುತ್ತದೆ



ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


  ತಮ್ಮ ಆಲಸ್ಯತನ, ನಿರ್ಲಕ್ಷತನ ವ್ಯವಹಾರಿಕ ಕ್ಷೇತ್ರಕ್ಕೆ ಹಿನ್ನಡೆ ಒದಗಿಸುತ್ತದೆ. ಉತ್ತಮ ಶ್ರದ್ಧೆಯಿಂದ, ಪರಿಶ್ರಮದಿಂದ ಮುನ್ನಡೆದರೆ ಮಾತ್ರ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಹೊಟ್ಟೆಗೆ ಸಂಬಂಧಿಸಿದ ತೊಂದರೆ, ಮೈ ಕೈ ಗಂಟು ನೋವು, ಚರ್ಮ ಸಂಬಂಧಿ ತೊಂದರೆಯನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *