22.03.2019

ದಿನ ಭವಿಷ್ಯ

         

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಪಾಲ್ಗುನ ಮಾಸ /
ಕೃಷ್ಣ ಪಕ್ಷ /ದ್ವಿತೀಯ ತಿಥಿ /

ಶುಕ್ರವಾರ/ಹಸ್ತಾ ನಕ್ಷತ್ರ/

ದಿನಾಂಕ: 22.03.2019

 °~•~°~•~°~•~°~•~°~•~°

ಮೇಷ

        ಉತ್ತಮ ಶ್ರದ್ಧೆ ಹಾಗೂ ಏಕಾಗ್ರತೆಯಿಂದ ಕೆಲಸ ಕಾರ್ಯ ಮುನ್ನಡೆಸಿಕೊಂಡು ಬಂದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ಉತ್ತಮ ಹಣ ಸಂಪಾದನೆಯಾಗುತ್ತದೆ ಹಾಗೂ ಉತ್ತಮ ಕಾರ್ಯಗಳಿಗೆ ವಿನಿಯೋಗಿಸಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಶೀತ ಜ್ವರ, ಶ್ವಾಸ ಸಂಬಂಧಿ ತೊಂದರೆ, ಮೈ ಕೈ ಗಂಟು ನೋವು ತಲೆನೋವು ಗಳನ್ನು ಎದುರಿಸಬೇಕಾಗುತ್ತದೆ. ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕರಾಗಿರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮವನ್ನು ಪಟ್ಟು ಮುಂದುವರಿಯಬೇಕು.



ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.

ಜಪಿಸಲು :
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ

ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ

ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥

°~•~°~•~°~•~°~•~°~•~°

    

ವೃಷಭ

         ನೂತನ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ ಒದಗಿ ಬರುತ್ತದೆ. ಉತ್ತಮ ಸ್ಥಾನಮಾನ ಹಾಗೂ ಗೌರವಗಳು ಲಭಿಸುತ್ತವೆ. ವಾಹನ ಪ್ರಯಾಣಗಳ ಸಂದರ್ಭಗಳಲ್ಲಿ ಜಾಗರೂಕರಾಗಿರಬೇಕು. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಕುಟುಂಬದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕರಾಗಿರಬೇಕು. ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ವಿದ್ಯಾರ್ಥಿಗಳು ಉತ್ತಮ  ಶ್ರಮದಿಂದ ಮುಂದುವರಿಯಬೇಕು. ಮಕ್ಕಳ ಓಡಾಟಗಳ ಸಂದರ್ಭಗಳಲ್ಲಿ ಜಾಗರೂಕರಾಗಿರಬೇಕು.




ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.

ಜಪಿಸಲು :
ಸರ್ವದೇವಮಯೇ ದೇವಿ

ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್

ಸಫಲಂ ಕುರು ನಂದಿನಿ ||

°~•~°~•~°~•~°~•~°~•~°



ಮಿಥುನ


   ವ್ಯವಹಾರಕ್ಷೇತ್ರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬಂದರೂ ಕೂಡ ಮನಃಶಾಂತಿ ಕಳೆದುಕೊಳ್ಳಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ.  ಗೃಹೋಪಯೋಗಿ ವಸ್ತುಗಳ ಖರೀದಿಗೆ ಅವಕಾಶಗಳು ಒದಗಿ ಬರುತ್ತವೆ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕರಾಗಿರಬೇಕು. ಹೊಟ್ಟೆಗೆ ಸಂಬಂಧಿಸಿದ ತೊಂದರೆ ಬರುವ ಲಕ್ಷಣಗಳು ಇರುವುದರಿಂದ ಆಹಾರದಲ್ಲಿ ಗಮನವಿರಲಿ. ಆಲಸ್ಯತನ ವನ್ನು ಬಿಟ್ಟು ವಿದ್ಯಾರ್ಥಿಗಳು ಶ್ರದ್ಧೆಯಿಂದ ಮುಂದುವರಿಯಬೇಕು.



ಪರಿಹಾರ  
ನರಸಿಂಹನ ಆರಾಧನೆಯನ್ನು ಮಾಡಿ.

ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್

ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಮಹಾವೀರಮ್

ನಮಾಮಿ ಋಣಮುಕ್ತಯೇ ||

  °~•~°~•~°~•~°~•~°~•~°



ಕರ್ಕಾಟಕ

   ಉತ್ತಮ ಸ್ಥಾನಮಾನ ಗೌರವ ಸಮಾಜದಲ್ಲಿ ಮನ್ನಣೆ ದೊರೆಯುತ್ತದೆ. ನೂತನ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ಒದಗಿ ಬರುತ್ತವೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರಲಿದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ.  ಸಹೋದರನ ಆಗಮನದಿಂದಾಗಿ ಸಂತೋಷ ದೊರೆಯುತ್ತದೆ. ಮೈ ಕೈ ಗಂಟು ನೋವು, ನರಸಂಬಂಧಿ ತೊಂದರೆಗಳು, ತಲೆನೋವು ಮೊದಲಾದವುಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||

 °~•~°~•~°~•~°~•~°~•~°



ಸಿಂಹ

     ನಿಮ್ಮ ಉತ್ತಮ ಕಾರ್ಯಕ್ಷಮತೆ ಯಿಂದಾಗಿ ಹಿರಿಯ ಅಧಿಕಾರಿಗಳಿಂದ ಮನ್ನಣೆ ದೊರೆಯುತ್ತದೆ.ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಸ್ಥಾನಮಾನ ಗೌರವಗಳು ಲಭಿಸುತ್ತವೆ. ನೂತನ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ ಒದಗಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಕುಟುಂಬದಲ್ಲಿ ಉತ್ತಮ ಶಾಂತಿ ದೊರೆಯುತ್ತದೆ. ಮಗನ ಆರೋಗ್ಯದಲ್ಲಿ ಸಮಸ್ಯೆ ಬರುವ ಲಕ್ಷಣಗಳು ಇರುವುದರಿಂದ ಜಾಗರೂಕರಾಗಿರಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ಕಂಡುಬರಲಿದೆ.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||

    °~•~°~•~°~•~°~•~°~•~°      


ಕನ್ಯಾ


     ಉತ್ತಮ ಶ್ರದ್ಧೆಯಿಂದ ಕಾರ್ಯವನ್ನು  ತೊಡಗಿಸಿಕೊಂಡಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರಲಿದೆ, ಹಿರಿಯ ಅಧಿಕಾರಿಗಳಿಂದ ಅಸಮಾಧಾನದ ಮಾತುಗಳು ಕೇಳಿ ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಚರ್ಮ ಸಂಬಂಧಿ ತೊಂದರೆ, ಅಲರ್ಜಿ, ಜ್ವರ ಬದಲಾದ ತೊಂದರೆಯನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮಪಟ್ಟು ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡು ಬರಬಹುದು.



ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ

ಜಪಿಸಲು :
ವಸುದೇವಸುತಂ  ದೇವಮ್

ಕಂಸಚಾಣೂರಮರ್ದನಮ್  |
ದೇವಕೀಪರಮಾನಂದಮ್

ಕೃಷ್ಣಂ ವಂದೇ  ಜಗದ್ಗುರುಮ್ ||

  °~•~°~•~°~•~°~•~°~•~°       


ತುಲಾ


       ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ ಅಡೆತಡೆ ಕಷ್ಟ ನಷ್ಟಗಳನ್ನು ಎದುರಿಸಬೇಕಾಗುತ್ತದೆ, ಕೃಷಿಕರಿಗೆ ಬೆಳೆ ನಷ್ಟವಾಗುವ ಸಾಧ್ಯತೆಗಳಿವೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಹೊಟ್ಟೆಗೆ ಸಂಬಂಧಿಸಿದ ತೊಂದರೆ, ಜ್ವರ ಶೀತ ಮೊದಲಾದ ತೊಂದರೆ ಎದುರಿಸಬೇಕಾಗುತ್ತದೆ. ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕರಾಗಿರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ  ಮುಂದುವರೆದರೆ ಉತ್ತಮ ಅಭಿವೃದ್ಧಿ ಕಂಡುಬರುತ್ತದೆ.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಸರ್ವರೂಪಮಯೀ ದೇವೀ

ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್

ನಮಾಮಿ ಪರಮೇಶ್ವರೀಮ್ ||


 °~•~°~•~°~•~°~•~°~•~°


ವೃಶ್ಚಿಕ


  
ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಕುಟುಂಬಕ್ಕಾಗಿ ಹಣ ವಿನಿಯೋಗ ಮಾಡಬೇಕಾಗುತ್ತದೆ. ಹಾಗೂ ಅಧಿಕ ಧನವ್ಯಯವಾಗಲಿದೆ.  ಕುಟುಂಬದಲ್ಲಿ ಕಲಹ ಏರ್ಪಡುವ ಲಕ್ಷಣಗಳು ಇರುವುದರಿಂದ ಜಾಗರೂಕರಾಗಿರಬೇಕು. ವಾಹನ ಪ್ರಯಾಣದ ಸಂದರ್ಭದಲ್ಲಿ ಜಾಗರೂಕರಾಗಿರಬೇಕು‌. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ,  ವಾಹನ ಲಾಭ, ಭೂಲಾಭ, ನೂತನ ಗೃಹೋಪಯೋಗಿ ವಸ್ತುಗಳ ಖರೀದಿಗೆ ಅವಕಾಶ ಒದಗಿ ಬರುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್

ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ

ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°


ಧನು


    ಉತ್ತಮ ಶ್ರದ್ಧೆಯಿಂದ ಮುನ್ನಡೆದರೆ ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಏಳಿಗೆ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಕಲಹ ಎದುರಿಸಬೇಕಾಗುತ್ತದೆ. ಆಹಾರದ ಮೂಲಕವಾಗಿ ತೊಂದರೆ ಬರುವ ಲಕ್ಷಣಗಳು ಇರುವುದರಿಂದ ಆಹಾರದಲ್ಲಿ ಗಮನವಿರಲಿ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.


ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು  ಪಡೆಯಿರಿ.

ಜಪಿಸಲು :
ಅಖಂಡಮಂಡಲಾಕಾರಮ್

ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ

ತಸ್ಮೈ ಶ್ರೀಗುರವೇ ನಮಃ ||

     °~•~°~•~°~•~°~•~°~•~°


ಮಕರ


    ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡು ಬರಬಹುದು. ಕುಟುಂಬದಲ್ಲಿ ಶಾಂತಿ ನೆಲೆಗೊಳ್ಳುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಚರ್ಮ ಸಂಬಂಧಿ ತೊಂದರೆಯನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ಕಂಡುಬರುವುದು.



ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.  

ಜಪಿಸಲು :
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||

   °~•~°~•~°~•~°~•~°~•~°          


ಕುಂಭ  


      ನಿಮ್ಮ ಕಾರ್ಯಕ್ಷಮತೆಗೆ ಮೆಚ್ಚಿ ಹಿರಿಯ ಅಧಿಕಾರಿಗಳಿಂದ ಪ್ರಶಂಸನಾ ಮಾತುಗಳು ಕೇಳಿ ಬರುತ್ತದೆ, ಗೌರವ ಸ್ಥಾನಮಾನಗಳು ದೊರೆಯುತ್ತದೆ, ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ ಒದಗಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯಗಳು ಒದಗಿ ಬರುತ್ತದೆ. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಮುಂದುವರಿದರೆ ಮಾತ್ರ ಅಭಿವೃದ್ಧಿ ಕಂಡು ಬರುವುದು.



ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


  ನಿಮ್ಮ ಕಾರ್ಯಶ್ರದ್ಧೆ ಹಾಗೂ ಏಕಾಗ್ರತೆಗೆ ಉತ್ತಮ ಗೌರವ ಸ್ಥಾನಮಾನಗಳು ದೊರೆಯುತ್ತದೆ. ನೂತನ ವ್ಯವಹಾರವನ್ನು ತೊಡಗಿಸಿಕೊಳ್ಳುವ ಅವರಿಗೆ ಅವಕಾಶಗಳು ಒದಗಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ತೊಂದರೆ ಎದುರಿಸಬೇಕಾಗುತ್ತದೆ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ವಿವಾಹ ಭಾಗ್ಯ ಒದಗಿ ಬರುತ್ತದೆ. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಏಕಾಗ್ರತೆಯಿಂದ ಮುಂದುವರಿಯಬೇಕು.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *