29.03.2019

ದಿನ ಭವಿಷ್ಯ

         

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಪಾಲ್ಗುನ ಮಾಸ /
ಕೃಷ್ಣ ಪಕ್ಷ /ನವಮಿ ತಿಥಿ /

ಶುಕ್ರವಾರ/ಪೂರ್ವಾಷಾಢಾ ನಕ್ಷತ್ರ/

ದಿನಾಂಕ: 29.03.2019

 °~•~°~•~°~•~°~•~°~•~°

ಮೇಷ

        ಉತ್ತಮ ಶ್ರಮದಿಂದ  ಕೆಲಸವನ್ನು ಮುಂದು ವರಿಸಿಕೊಂಡು ಬಂದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ  ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಚರ್ಮ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ಕಂಡುಬರುವುದು.



ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.

ಜಪಿಸಲು :
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ

ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ

ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥

°~•~°~•~°~•~°~•~°~•~°

    

ವೃಷಭ

         ತೊಡಗಿಸಿಕೊಂಡ ಕೆಲಸ ಕಾರ್ಯದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಕುಟುಂಬದಲ್ಲಿ ಕಲಹ ಎದುರಾಗುವ ಸಂಭವವಿರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಆಲಸ್ಯತನ ಬಿಟ್ಟು ಮುಂದುವರಿಯಬೇಕು.




ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.

ಜಪಿಸಲು :
ಸರ್ವದೇವಮಯೇ ದೇವಿ

ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್

ಸಫಲಂ ಕುರು ನಂದಿನಿ ||

°~•~°~•~°~•~°~•~°~•~°



ಮಿಥುನ


   ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ  ಕಷ್ಟ ನಷ್ಟಗಳು ಎದುರಾಗುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ.   ದಾಂಪತ್ಯ ಜೀವನದಲ್ಲಿ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಹಾಗೂ ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಹೊಟ್ಟೆಗೆ ಸಂಬಂಧಿಸಿದ ತೊಂದರೆ ಬರುವ ಲಕ್ಷಣಗಳು ಇರುವುದರಿಂದ ಆಹಾರದಲ್ಲಿ ನಿಗಾ ಇರಲಿ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ  
ನರಸಿಂಹನ ಆರಾಧನೆಯನ್ನು ಮಾಡಿ.

ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್

ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಮಹಾವೀರಮ್

ನಮಾಮಿ ಋಣಮುಕ್ತಯೇ ||

  °~•~°~•~°~•~°~•~°~•~°



ಕರ್ಕಾಟಕ

   
ಮಾಡುತ್ತಿರುವ ಕೆಲಸ ಕಾರ್ಯಗಳಲ್ಲಿ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ.  ಆರೋಗ್ಯ ಸಂಬಂಧವಾದ ತೊಂದರೆ ಎದುರಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||

 °~•~°~•~°~•~°~•~°~•~°



ಸಿಂಹ

 ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಅಡೆತಡೆಗಳು ಎದುರಾಗುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ಗೊಳ್ಳುತ್ತದೆ ಹಾಗೂ ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಮಾನಸಿಕ ಒತ್ತಡ, ಶೀತ ಜ್ವರ ಮೊದಲಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರೆಯಬೇಕು.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||

    °~•~°~•~°~•~°~•~°~•~°      


ಕನ್ಯಾ


     ತೊಡಗಿಸಿಕೊಂಡ ಕೆಲಸಕಾರ್ಯಗಳಲ್ಲಿ ಅಡೆತಡೆಗಳು ಎದುರಾಗುತ್ತವೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಕಲಹ ಎದುರಿಸಬೇಕಾಗುತ್ತದೆ. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆದರೆ ಉತ್ತಮ ಅಭಿವೃದ್ಧಿ ಕಂಡು ಬರುವುದು.



ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ

ಜಪಿಸಲು :
ವಸುದೇವಸುತಂ  ದೇವಮ್

ಕಂಸಚಾಣೂರಮರ್ದನಮ್  |
ದೇವಕೀಪರಮಾನಂದಮ್

ಕೃಷ್ಣಂ ವಂದೇ  ಜಗದ್ಗುರುಮ್ ||

  °~•~°~•~°~•~°~•~°~•~°       


ತುಲಾ


       ವ್ಯವಹಾರಿಕ ಕ್ಷೇತ್ರದಲ್ಲಿ ಹಿನ್ನಡೆ ಕಂಡುಬರುವುದು,   ಸ್ನೇಹಿತರಿಂದ ಸಹಾಯ ಒದಗಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ ವೃದ್ಧಿ ಕಂಡುಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಹೊಟ್ ಹೊಟ್ಟೆಗೆ ಸಂಬಂಧಿಸಿದ ತೊಂದರೆ ಎದುರಾಗುವ ಲಕ್ಷಣಗಳು ಇರುವುದರಿಂದ  ಜಾಗರುಕತೆಯಿಂದ ಇರಬೇಕು. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆಯಬೇಕು.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಸರ್ವರೂಪಮಯೀ ದೇವೀ

ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್

ನಮಾಮಿ ಪರಮೇಶ್ವರೀಮ್ ||


 °~•~°~•~°~•~°~•~°~•~°


ವೃಶ್ಚಿಕ


  
ಉತ್ತಮ  ಪರಿಶ್ರಮದಿಂದ ಮಾತ್ರ ಅಭಿವೃದ್ಧಿ ಕಂಡು ಬರುತ್ತದೆ.  ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ  ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆಯಬೇಕು.

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್

ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ

ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°


ಧನು


    
ತೊಡಗಿಸಿಕೊಂಡು ಕೆಲಸ ಕಾರ್ಯದಲ್ಲಿ ಅಡೆತಡೆಗಳು ಎದುರಾಗುತ್ತವೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಕಲಹ ಎದುರಿಸಬೇಕಾಗುತ್ತದೆ. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.
ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು  ಪಡೆಯಿರಿ.

ಜಪಿಸಲು :
ಅಖಂಡಮಂಡಲಾಕಾರಮ್

ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ

ತಸ್ಮೈ ಶ್ರೀಗುರವೇ ನಮಃ ||

     °~•~°~•~°~•~°~•~°~•~°


ಮಕರ


    ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯದಲ್ಲಿ  ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಆಲಸ್ಯತನ ಬಿಟ್ಟು ಮುಂದುವರೆಯಬೇಕು.



ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.  

ಜಪಿಸಲು :
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||

   °~•~°~•~°~•~°~•~°~•~°          


ಕುಂಭ  


      ಸಮಾಜದಲ್ಲಿ ಉತ್ತಮ ಸ್ಥಾನಮಾನ ಗೌರವಗಳು ಲಭಿಸಲಿದೆ. ವ್ಯವಹಾರಿಕ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಆರೋಗ್ಯ ಸಂಬಂಧ ತೊಂದರೆ ಎದುರಿಸಬೇಕಾಗುತ್ತದೆ ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.



ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


  ಉದಾಸೀನತೆ ಬಿಟ್ಟು ಮುಂದುವರೆದರೆ ಮಾತ್ರ ವ್ಯವಹಾರಿಕ  ಕ್ಷೇತ್ರದಲ್ಲಿ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ   ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ  ಜಾಗರೂಕತೆಯಿಂದ ಇರಬೇಕು. ಆರೋಗ್ಯ ಸಂಬಂಧವಾದ ತೊಂದರೆ ಎದುರಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆಯಬೇಕು.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *