16.04.2019

ದಿನ ಭವಿಷ್ಯ

         

ವಿಕಾರಿನಾಮ ಸಂವತ್ಸರ / ಉತ್ತರಾಯಣ /
ವಸಂತ ಋತು /ಚೈತ್ರ ಮಾಸ /
ಶುಕ್ಲ ಪಕ್ಷ /ದ್ವಾದಶಿ ತಿಥಿ /

ಮಂಗಳವಾರ/ಹುಬ್ಬಾ ನಕ್ಷತ್ರ/

ದಿನಾಂಕ: 16.04.2019

 °~•~°~•~°~•~°~•~°~•~°

ಮೇಷ

        ಉತ್ತಮ ಕಾರ್ಯಕ್ಷಮತೆ ಇಂದಾಗಿ ಅಧಿಕಾರಿಗಳಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತದೆ ಹಣಕಾಸಿನ ವಿಚಾರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಚರ್ಮ ಸಂಬಂಧಿ ತೊಂದರೆಗಳು, ಅಲರ್ಜಿ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಮುನ್ನಡೆ ದೊರೆಯಲಿದೆ



ಪರಿಹಾರ:
ಮಂಗಳ ಗ್ರಹರ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಧರಣೀಗರ್ಭಸಂಭೂತಮ್ | ವಿದ್ಯುತ್ಕಾಂತಿಸಮಪ್ರಭಮ್ |
ಕುಮಾರಂ ಶಕ್ತಿಹಸ್ತಂ ಚ | ಮಂಗಲಮ್ ಪ್ರಣಮಾಮ್ಯಹಮ್ ||

°~•~°~•~°~•~°~•~°~•~°

    

ವೃಷಭ

         ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ತೊಂದರೆ ಕಂಡು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ವ್ಯವಹರಿಸಿ. ಜೀವನದಲ್ಲಿ ಸುಖ-ಶಾಂತಿ ನೆಲೆಸಲಿದೆ.  ಗೃಹಪಯೋಗಿ ವಸ್ತುಗಳ ಖರೀದಿಗೆ ಅವಕಾಶಗಳು ಒದಗಿ ಬರುತ್ತದೆ. ಆರೋಗ್ಯದಲ್ಲಿ ಉತ್ತಮ ಚೇತರಿಕೆ ಕಂಡು ಬರುವುದು. ಆಲಸ್ಯತನ ವನ್ನು ಬಿಟ್ಟು ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ವಿದ್ಯಾಭ್ಯಾಸದಲ್ಲಿ ತೊಡಗಿಸಿಕೊಳ್ಳಬೇಕು.




ಪರಿಹಾರ
ಶುಕ್ರ  ಗ್ರಹರ ಆರಾಧನೆಯನ್ನು ಮಾಡಿಕೊಂಡು ಬಂದಲ್ಲಿ  ಶುಭ.

ಜಪಿಸಲು :
ಹಿಮಕುಂದ ಮೃಣಾಲಾಭಮ್ (ಸಮಾಭಾಸಂ) | ದೈತ್ಯಾನಾಂ ಪರಮಂ ಗುರುಮ್ |
ಸರ್ವಶಾಸ್ತ್ರಪ್ರವಕ್ತಾರಮ್ | ಭಾರ್ಗವಂ ಪ್ರಣಮಾಮ್ಯಹಮ್ ||

°~•~°~•~°~•~°~•~°~•~°



ಮಿಥುನ


   ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು. ಕುಟುಂಬದಲ್ಲಿ ಕಲಹ ಸಂಗ್ರಹಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಇತರರಿಂದ ಸಹಾಯ ಒದಗಿ ಬರುತ್ತದೆ. ನರ ಸಂಬಂಧಿ ತೊಂದರೆ, ರಕ್ತ ಸಂಬಂಧಿ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಮುನ್ನಡೆದರೆ ಮಾತ್ರ ಅಭಿವೃದ್ಧಿ



ಪರಿಹಾರ  
ಬುಧ  ಗ್ರಹರ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಪ್ರಿಯಂಗುಕಲಿಕಾಶ್ಯಾಮಮ್ |  ರೂಪೇಣಾಪ್ರತಿಮಂ ಬುಧಮ್ |
ಸೌಮ್ಯಂ ಸೌಮ್ಯಗುಣೋಪೇತಮ್ | ತಂ ಬುಧಂ  ಪ್ರಣಮಾಮ್ಯಹಮ್ ||

  °~•~°~•~°~•~°~•~°~•~°



ಕರ್ಕಾಟಕ

   
ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ವ್ಯಾಪಾರಸ್ಥರಿಗೆ ಸರಕಾರಿ ಕೆಲಸದಲ್ಲಿ ಇರುವವರಿಗೆ ಉತ್ತಮ ಅಭಿವೃದ್ಧಿ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಸಲಿದೆ. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು, ನರಸಂಬಂಧಿ ತೊಂದರೆಗಳು, ಮೈ ಕೈ ಗಂಟು ನೋವು ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ

ಪರಿಹಾರ
ಚಂದ್ರ ಗ್ರಹರ ಆರಾಧನೆಯಿಂದ ಉತ್ತಮ ಅಭಿವೃದ್ಧಿ ಕಂಡು ಬರುವುದು.

ಜಪಿಸಲು :
ದಧಿಶಂಖತುಷಾರಾಭಮ್ |  ಕ್ಷೀರೋದಾರ್ಣವಸಂಭವಮ್ (ಸನ್ನಿಭಮ್) |
ನಮಾಮಿ ಶಶಿನಂ ಸೋಮಮ್ | ಶಂಭೋರ್ಮುಕುಟಭೂಷಣಮ್ ||

 °~•~°~•~°~•~°~•~°~•~°



ಸಿಂಹ

 ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ  ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ.ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಸಂಭವಿಸುತ್ತದೆ.  ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣ ಗಳಿರುವುದರಿಂದ ಜಾಗರೂಕತೆಯಿಂದ ಇರಬೇಕು. ಬೆನ್ನು ನೋವು, ಮೈ ಕೈ ಗಂಟು ನೋವು, ಮಾನಸಿಕ ಅಸಮಧಾನ ತೆ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.   ವಿದ್ಯಾರ್ಥಿಗಳುಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು


ಪರಿಹಾರ
ರವಿ ಗ್ರಹರ ಆರಾಧನೆಯಿಂದ  ಶುಭವಾಗಲಿದೆ.

ಜಪಿಸಲು :
ಜಪಾಕುಸುಮಸಂಕಾಶಮ್ | ಕಾಶ್ಯಪೇಯಂ ಮಹಾದ್ಯುತಿಮ್ |
ತಮೋಽರಿಂ ಸರ್ವಪಾಪಘ್ನಮ್ | ಪ್ರಣತೋಽಸ್ಮಿ ದಿವಾಕರಮ್ ||

    °~•~°~•~°~•~°~•~°~•~°      


ಕನ್ಯಾ


     ನೂತನ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರೆಯಲಿವೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ವ್ಯವಹಾರದಲ್ಲಿ ಉತ್ತಮ ಸ್ಥಾನಮಾನಗಳು ದೊರೆಯಲಿದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಹಾಗೂ ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ.  ಆರೋಗ್ಯ ಸಂಬಂಧವಾದ ತೊಂದರೆಗಳು ಎದುರಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ದೊರೆಯುತ್ತದೆ



ಪರಿಹಾರ
ಗೋಪಾಲ ಕೃಷ್ಣನ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ವಂದೇ ವೃಂದಾವನಚರಮ್ | ವಲ್ಲವೀಜನವಲ್ಲಭಮ್ |
ಜಯಂತೀ ಸಂಭವಂ ಧಾಮ | ವೈಜಯಂತೀವಿಭೂಷಣಮ್ ||

  °~•~°~•~°~•~°~•~°~•~°       


ತುಲಾ


       ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರ್ಥಿಕವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಜ್ವರ, ದೇಹದಲ್ಲಿ ಉಷ್ಣತೆ, ತಲೆನೋವು ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ವಿದ್ಯಾರ್ಥಿಗಳಿಗೆ ನಿಧಾನಗತಿಯ ಮುನ್ನಡೆ ದೊರೆಯುತ್ತದೆ.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||


 °~•~°~•~°~•~°~•~°~•~°


ವೃಶ್ಚಿಕ


  
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಕುಟುಂಬದಲ್ಲಿ ಶಾಂತಿ ನೆಲೆಸುತ್ತದೆ. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು.  ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ದೊರೆಯುತ್ತದೆ

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್ | ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ | ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°


ಧನು


    
ತೊಡಗಿಸಿಕೊಂಡ ಕೆಲಸಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು, ಕೆಲಸದಲ್ಲಿ ಉತ್ತಮ ಬದಲಾವಣೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕರಾಗಿರಬೇಕು.
ಪರಿಹಾರ
ಗುರು ಗ್ರಹರ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ದೇವಾನಾಂ ಚ ಋಷೀಣಾಂ ಚ | ಗುರುಂ ಕಾಂಚನಸನ್ನಿಭಮ್ |
ಬುದ್ಧಿಭೂತಂ ತ್ರಿಲೋಕೇಶಮ್ | ತಂ ನಮಾಮಿ ಬೃಹಸ್ಪತಿಮ್ ||

     °~•~°~•~°~•~°~•~°~•~°


ಮಕರ


    ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ, ನೂತನ ಉದ್ಯೋಗವನ್ನು ತೊಡಗಿಸಿಕೊಳ್ಳುವ ಅವರಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯದಲ್ಲಿ ಏರುಪೇರು ಆಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಿ. ವಿದ್ಯಾರ್ಥಿಗಳಿಗೆ ನಿಧಾನಗತಿಯ ಮುನ್ನಡೆ



ಪರಿಹಾರ
ಶನಿ ದೇವರ ಆರಾಧನೆಯಿಂದ ಶುಭ.  

ಜಪಿಸಲು :
ನೀಲಾಂಜನಸಮಾಭಾಸಮ್ | ರವಿಪುತ್ರಂ ಯಮಾಗ್ರಜಮ್ |
ಛಾಯಾಮಾರ್ತಾಂಡ ಸಂಭೂತಮ್ | ತಂ ನಮಾಮಿ ಶನೈಶ್ಚರಮ್||

   °~•~°~•~°~•~°~•~°~•~°          


ಕುಂಭ  


       ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗಳಲಿದೆ. ಆರೋಗ್ಯ ಸಂಬಂಧವಾದ ತೊಂದರೆಗಳು ಎದುರಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆಯಬೇಕು.
ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಅಂಜನಾಗರ್ಭಸಂಭೂತ | ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್  | ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


    ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ, ಸ್ಥಾನಮಾನ ಗೌರವಗಳು, ಉನ್ನತ ಹುದ್ದೆ  ಮುಂತಾದವುಗಳು ಲಭಿಸುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುವುದು. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ

ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ನಮಸ್ತೇ ಪುಂಡರೀಕಾಕ್ಷ | ನಮಸ್ತೇ ಪುರುಷೋತ್ತಮ |
ನಮಸ್ತೇ  ಸರ್ವಲೋಕಾತ್ಮನ್ | ನಮಸ್ತೇ ತಿಗ್ಮಚಕ್ರಿಣೇ ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *