28.02.2019

ದಿನ ಭವಿಷ್ಯ

         

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಮಾಘ ಮಾಸ /
ಕೃಷ್ಣ ಪಕ್ಷ /ನವಮಿ ತಿಥಿ/

ಗುರುವಾರ/ಮೂಲಾ ನಕ್ಷತ್ರ /

ದಿನಾಂಕ28.02..2019

 °~•~°~•~°~•~°~•~°~•~°

ಮೇಷ

        ಮಾಡುತ್ತಿರುವ ಕೆಲಸ ಕಾರ್ಯಗಳಲ್ಲಿ  ನಿಧಾನಗತಿಯ ಹಿನ್ನಡೆ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು.  ಆರೋಗ್ಯದಲ್ಲಿ ತೊಂದರೆಯನ್ನು ಅನುಭವಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ
ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋಸ್ತು ತೇ ||

°~•~°~•~°~•~°~•~°~•~°

    

ವೃಷಭ

         ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಸ್ಥಾನಮಾನ ದೊರೆಯಲಿದೆ.  ಮಾಡುತ್ತಿರುವ ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಶಾಂತಿ ನೆಲೆಗೊಳ್ಳುತ್ತದೆ. ಅನಾರೋಗ್ಯವನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ  ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು




ಪರಿಹಾರ
ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||

°~•~°~•~°~•~°~•~°~•~°



ಮಿಥುನ


   ನಿಮ್ಮ ಕಾರ್ಯಕ್ಷಮತೆ ಗೆ ಅನುಗುಣವಾಗಿ ನೂತನ ಅವಕಾಶಗಳು, ಉನ್ನತ ಹುದ್ದೆ, ಉತ್ತಮ ಸ್ಥಾನಮಾನಗಳು ದೊರೆಯಲಿದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಮುನ್ನಡೆ ಕಂಡುಬಂದರೂ ಕೂಡ ದುಂದುವೆಚ್ಚ ಮಾಡದಿರಿ.  ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲಗೊಳ್ಳಲಿದೆ. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು ಬರುವ ಲಕ್ಷಣಗಳು ಇದೆ. ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು.



ಪರಿಹಾರ  
ಶ್ರೀಕೃಷ್ಣನ ಆರಾಧನೆ,ಗುರುದೇವತಾ ಆರಾಧನೆಯಿಂದ ಶುಭ.

ಜಪಿಸಲು :
ವಸುದೇವಸುತಂ ದೇವಮ್

ಕಂಸಚಾಣೂರಮರ್ದನಮ್ |

ದೇವಕೀಪರಮಾನನ್ದಮ್

ಕೃಷ್ಣಂ ವನ್ದೇ ಜಗದ್ಗುರುಮ್ ||

  °~•~°~•~°~•~°~•~°~•~°



ಕರ್ಕಾಟಕ

    ಕೈಗೆತ್ತಿಕೊಂಡ ಕೆಲಸದಲ್ಲಿ ಅಡೆತಡೆಗಳು ಕಂಡು ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ತೊಂದರೆಯನ್ನು ಅನುಭವಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲಹಗಳು ಕಂಡುಬರುವುದು. ಅನಾರೋಗ್ಯವನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ  
ದುರ್ಗೇದೇವಿ ನಮೋಸ್ತು ತೇ ||

 °~•~°~•~°~•~°~•~°~•~°



ಸಿಂಹ

      ವ್ಯಾವಹಾರಿಕ ಕ್ಷೇತ್ರದಲ್ಲಿ  ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು‌.  ಆರ್ಥಿಕವಾದ ಹಿನ್ನಡೆಯನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯದಲ್ಲಿ ಚೇತರಿಕೆ ಕಂಡುಬರುವುದು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ

    °~•~°~•~°~•~°~•~°~•~°      


ಕನ್ಯಾ


    ಯಾವುದೇ ಕೆಲಸವನ್ನು ಕೈಗೆತ್ತಿಕೊಂಡರು ಕೂಡ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವ್ಯಾವಹಾರಿಕ ಕ್ಷೇತ್ರದಲ್ಲಿ ನಷ್ಟ ಕಂಡುಬರುವುದು. ಹಣಕಾಸಿನ ವಿಚಾರದಲ್ಲಿ ಹಿನ್ನಡೆ ಕಂಡುಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು.  ಹೊಟ್ಟೆಗೆ ಸಂಬಂಧಿಸಿದತೊಂದರೆ ಕಂಡು ಬರುವ ಲಕ್ಷಣಗಳು ಇರುವುದರಿಂದ ಜಾಗ್ರತೆಯಿಂದ ಇರಬೇಕು.



ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ  ಶುಭ.

ಜಪಿಸಲು :
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ |  
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||

  °~•~°~•~°~•~°~•~°~•~°       


ತುಲಾ


        ವ್ಯಾವಹಾರಿಕ ಕ್ಷೇತ್ರಗಳಲ್ಲಿ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಚರ್ಮ ಸಂಬಂಧಿ ತೊಂದರೆಗಳು, ಜ್ವರ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಉತ್ತಮ ಅಭಿವೃದ್ಧಿಯನ್ನು ಸಾಧಿಸುತ್ತಾರೆ.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀ ಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||


 °~•~°~•~°~•~°~•~°~•~°


ವೃಶ್ಚಿಕ


  
ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ತೊಂದರೆಯನ್ನು ಎದುರಿಸಬೇಕಾಗುತ್ತದೆ.  ದಾಂಪತ್ಯ ಜೀವನದಲ್ಲಿ ಜಗಳಗಳು ಸಂಭವಿಸುವ ಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯದಲ್ಲಿ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಜಾಗೃತೆಯಿಂದ ಇರಿ. ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು  ಮುಂದುವರಿಯಬೇಕು.

ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.


ಜಪಿಸಲು :
ಷಡಾನನಂ ಕುಂಕುಮರಕ್ತವರ್ಣಮ್

ಮಹಾಮತಿಂ ದಿವ್ಯಮಯೂರವಾಹಮ್ |

ರುದ್ರಸ್ಯ ಸೂನುಂ ಸುರಸೈನ್ಯನಾಥಮ್

ಗುಹಂ ಸದಾ ಶರಣಮಹಂ ಪ್ರಪದ್ಯೇ ||

°~•~°~•~°~•~°~•~°~•~°


ಧನು


ವ್ಯಾವಹಾರಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಕಂಡು ಬರುತ್ತದೆ. ಉತ್ತಮ ಸ್ಥಾನಮಾನಗಳು ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ  ಸುಖ ಶಾಂತಿ ನೆಲೆಗೊಳ್ಳುತ್ತದೆ. ಮಾತಿನ ಮೂಲಕವಾಗಿ ಜಗಳಗಳು ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು.

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಜಪಿಸಲು :
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

     °~•~°~•~°~•~°~•~°~•~°


ಮಕರ


    ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಪುಟ್ಟ ತೊಂದರೆ ಎದುರಿಸಬೇಕಾಗುತ್ತದೆ.  ಹಣಕಾಸಿನ ವಿಚಾರದಲ್ಲಿ ಅಡೆತಡೆಗಳು ಕಂಡುಬರುತ್ತದೆ. ದಾಂಪತ್ಯ ಜೀವನದಲ್ಲಿ ಕಲಹಗಳು ಸಂಭವಿಸುವ ಲಕ್ಷಣ ಗಳಿರುವುದರಿಂದ ಜಾಗರೂಕತೆಯಿಂದ ಇರಬೇಕು . ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು ಮುಂದುವರೆದಲ್ಲಿ  ಅಭಿವೃದ್ಧಿ ಕಂಡು ಬರುವುದು.



ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.  

ಜಪಿಸಲು :
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

   °~•~°~•~°~•~°~•~°~•~°          


ಕುಂಭ  


      ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆ ಏನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಶೀತ ಜ್ವರ, ಕಫ, ಮುಂತಾದ ತೊಂದರೆಯನ್ನು ಅನುಭವಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ಕಂಡು ಬರುವುದು.



ಪರಿಹಾರ  
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.

ಜಪಿಸಲು :
ರುದ್ರಂ ಪಶುಪತಿಂ ಸ್ಥಾಣುಮ್

ನೀಲಕಂಠಂ ಉಮಾಪತಿಮ್ |

ನಮಾಮಿ ಶಿರಸಾ ದೇವಮ್

ಕಿಂ ನೋ ಮೃತ್ಯುಃ ಕರಿಷ್ಯತಿ  ||

°~•~°~•~°~•~°~•~°~•~°


ಮೀನ   


  ವ್ಯಾವಹಾರಿಕ ಕ್ಷೇತ್ರದಲ್ಲಿ ಉತ್ತಮ ಮುನ್ನಡೆ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ  ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶಾಂತಾಕಾರಂ ಭುಜಗಶಯನಮ್

ಪದ್ಮನಾಭಂ ಸುರೇಶಮ್

ವಿಶ್ವಾಧಾರಂ ಗಗನಸದೃಶಮ್

ಮೇಘವರ್ಣಂ ಶುಭಾಂಗಮ್ |

ಲಕ್ಷ್ಮೀಕಾಂತಂ ಕಮಲನಯನಮ್

ಯೋಗಿಹೃದ್ಧ್ಯಾನಗಮ್ಯಮ್

ವಂದೇ ವಿಷ್ಣುಂ ಭವಭಯಹರಂ

ಸರ್ವಲೋಕೈಕನಾಥಮ್  ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Leave a Reply

Your email address will not be published. Required fields are marked *