15.03.2019

ದಿನ ಭವಿಷ್ಯ

         

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಪಾಲ್ಗುನ ಮಾಸ /
ಶುಕ್ಲ ಪಕ್ಷ / ನವಮಿ ತಿಥಿ /

ಶುಕ್ರವಾರ/ ಆರ್ದ್ರಾ ನಕ್ಷತ್ರ/

ದಿನಾಂಕ: 15.03.2019

 °~•~°~•~°~•~°~•~°~•~°

ಮೇಷ

        ಆತ್ಮಸ್ಥೈರ್ಯ ಹಾಗೂ ಶ್ರದ್ಧೆಯಿಂದ ಉದ್ಯೋಗವನ್ನು ಮುನ್ನಡೆಸಿಕೊಂಡು ಬಂದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ತಾವು ಸಂಪಾದಿಸಿದ ಹಣವನ್ನು  ಉತ್ತಮ ಕಾರ್ಯಗಳಿಗೋಸ್ಕರ ವಾಗಿ ವಿನಿಯೋಗಿಸಿ. ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಜೀವನದಲ್ಲಿ ಉತ್ತಮ ಸುಖ ಶಾಂತಿ ದೊರೆಯುತ್ತದೆ. ವಿದ್ಯಾಭ್ಯಾಸದಲ್ಲಿ ಅಭಿವೃದ್ಧಿ ಕಂಡು ಬರುತ್ತದೆ.



ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.

ಜಪಿಸಲು:
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ

ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ

ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥

°~•~°~•~°~•~°~•~°~•~°

    

ವೃಷಭ

         ಉನ್ನತ ಹುದ್ದೆ, ಗೌರವ, ಸ್ಥಾನಮಾನಗಳು  ವ್ಯಾವಹಾರಿಕ ಕ್ಷೇತ್ರದಲ್ಲಿ ದೊರೆಯುತ್ತದೆ. ವ್ಯಾಪಾರಸ್ಥರಿಗೆ ಉತ್ತಮ ಲಾಭ  ಒದಗಿ ಬರುತ್ತದೆ. ಉತ್ತಮ ಸಂಪಾದನೆ ಯಾಗುವುದು. ಮನೆಯಲ್ಲಿ ಉತ್ತಮ ಮನ ಶಾಂತಿ ದೊರೆಯುತ್ತದೆ. ಮೂತ್ರ ಸಂಬಂಧಿ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು ಹಾಗೂ ನೀರನ್ನು ಜಾಸ್ತಿಯಾಗಿ ಕುಡಿಯಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ಕಂಡು ಬರುವುದು.




ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.

ಜಪಿಸಲು :
ಸರ್ವದೇವಮಯೇ ದೇವಿ

ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್

ಸಫಲಂ ಕುರು ನಂದಿನಿ ||

°~•~°~•~°~•~°~•~°~•~°



ಮಿಥುನ


   ತೊಡಗಿಸಿಕೊಂಡ ಕೆಲಸ ಕಾರ್ಯದಲ್ಲಿ  ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಸರಕಾರಿ ಕೆಲಸದವರು ಹಾಗೂ ತಾಮ್ರದ ವ್ಯಾಪಾರಸ್ಥರಿಗೆ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಉನ್ನತ ಹುದ್ದೆ ಸ್ಥಾನ ಮಾನಗಳು ದೊರೆಯುತ್ತದೆ. ಉತ್ತಮ ಮಾರ್ಗದಲ್ಲಿ ಹಣ ಸಂಪಾದಿಸಿ ಹಾಗೂ ಉತ್ತಮ  ಕಾರ್ಯಗಳಿಗೋಸ್ಕರವಾಗಿ ವಿನಿಯೋಗಿಸಿ. ದಾಂಪತ್ಯ ಜೀವನದಲ್ಲಿ ಕಲಹಗಳು ಸಂಭವಿಸುತ್ತದೆ. ಆರೋಗ್ಯ ಹದಗೆಡುವ ಲಕ್ಷಣಗಳು ಇರುವುದರಿಂದ ಜಾಗೃತರಾಗಿರಬೇಕು. ವಿದ್ಯಾಭ್ಯಾಸದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ ಹಾಗೂ ಚಾಂಚಲ್ಯತೆ ಬಿಟ್ಟು ಏಕಾಗ್ರತೆಯಿಂದ ಮುಂದುವರಿಯಬೇಕು.
.



ಪರಿಹಾರ  
ನರಸಿಂಹನ ಆರಾಧನೆಯನ್ನು ಮಾಡಿ.

ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್

ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹ ಮಹಾವೀರಮ್

ನಮಾಮಿ ಋಣಮುಕ್ತಯೇ ||

  °~•~°~•~°~•~°~•~°~•~°



ಕರ್ಕಾಟಕ

   ನೂತನ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ಒದಗಿ ಬರುತ್ತವೆ. ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ, ಗೌರವ,  ದೊರೆಯುತ್ತವೆ. ಭೂ ಸಂಬಂಧಿ ವ್ಯವಹಾರ ಮಾಡುವವರಿಗೆ ಉತ್ತಮ ಅಭಿವೃದ್ಧಿ ಕಂಡು ಬರುವುದು. ಪಿತ್ರಾರ್ಜಿತವಾದ  ಆಸ್ತಿ ಲಭಿಸುವ ಅವಕಾಶಗಳಿವೆ. ಆರೋಗ್ಯದಲ್ಲಿ ತೊಂದರೆ ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ಹಾಗೂ  ಅವಕಾಶಗಳು ದೊರೆಯುತ್ತದೆ.



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||

 °~•~°~•~°~•~°~•~°~•~°



ಸಿಂಹ

     ಉತ್ತಮ ಮನಸ್ಸಿನಿಂದ  ಹಾಗೂ ಶ್ರದ್ಧೆಯಿಂದ ನಿಮ್ಮ ಕೆಲಸ-ಕಾರ್ಯಗಳನ್ನು ಮುನ್ನಡೆಸಿ. ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಎದುರಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ದೇಹದಲ್ಲಿ ಉಷ್ಣತೆ, ಜ್ವರ, ಕಿವಿ ನೋವು ಮುಂತಾದವುಗಳು ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳಿಗೆ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ ಹಾಗೂ ಹಿರಿಯರ ಪ್ರೋತ್ಸಾಹ ಅಗತ್ಯವಿದೆ.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||

    °~•~°~•~°~•~°~•~°~•~°      


ಕನ್ಯಾ


     ರಾಜಕಾರಣಿಗಳು, ಸರಕಾರಿ ಕೆಲಸದಲ್ಲಿರುವವರು, ತಾಮ್ರ  ವ್ಯಾಪಾರಸ್ಥರಿಗೆ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ,  ಆರ್ಥಿಕ ವಾದ ಏಳಿಗೆ ದೊರೆಯುತ್ತದೆ. ಗಂಡ ಹೆಂಡತಿಯರ ನಡುವೆ ಕಲಹಗಳು ಸಂಭವಿಸುವ ಲಕ್ಷಣ ಗಳಿರುವುದರಿಂದ  ಜಾಗರೂಕತೆಯಿಂದ ಇರಬೇಕು. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಅಭಿವೃದ್ಧಿಯನ್ನು ಪಡೆಯುತ್ತಾರೆ.



ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ

ಜಪಿಸಲು :
ವಸುದೇವಸುತಂ  ದೇವಮ್

ಕಂಸಚಾಣೂರ-ಮರ್ದನಮ್  |
ದೇವಕೀಪರಮಾನಂದಮ್

ಕೃಷ್ಣಂ ವಂದೇ  ಜಗದ್ಗುರುಮ್ ||

  °~•~°~•~°~•~°~•~°~•~°       


ತುಲಾ


       ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಕೃಷಿಕರಿಗೆ, ಭೂ ಸಂಬಂಧಿ ವ್ಯವಹಾರ ಮಾಡುವವರಿಗೆ, ವ್ಯಾಪಾರಸ್ಥರಿಗೆ ಉತ್ತಮ ಏಳಿಗೆ ಕಂಡು ಬರುವುದು. ಆರ್ಥಿಕ ಅಭಿವೃದ್ಧಿ ಕಂಡು ಬರುತ್ತದೆ. ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ದೊರೆಯುತ್ತದೆ. ಹೊಟ್ಟೆಗೆ ಸಂಬಂಧಿಸಿದ ತೊಂದರೆ, ದೇಹದಲ್ಲಿ ಉಷ್ಣ, ಶ್ವಾಸ ಸಂಬಂಧಿ ತೊಂದರೆ, ಚರ್ಮರೋಗ ಮುಂತಾದ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಉತ್ತಮವಾಗಿ ನೀರು ಕುಡಿಯಬೇಕು. ವಿದ್ಯಾಭ್ಯಾಸದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಸರ್ವರೂಪಮಯೀ ದೇವೀ

ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್

ನಮಾಮಿ ಪರಮೇಶ್ವರೀಮ್ ||


 °~•~°~•~°~•~°~•~°~•~°


ವೃಶ್ಚಿಕ


  
ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಉತ್ತಮ ಸ್ಥಾನಮಾನಗಳು ದೊರೆಯಲಿದೆ. ಉತ್ತಮ ಸಂಪಾದನೆ ಆದರೂ ಕೂಡ  ಖರ್ಚುವೆಚ್ಚಗಳು ಒದಗಿ ಬರುವುದರಿಂದ ಜಾಗರೂಕತೆಯಿಂದ ವಿನಿಯೋಗಿಸಿ. ಕುಟುಂಬದಲ್ಲಿ ಕಲಹಗಳು ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕರಾಗಿರಬೇಕು. ವಾಹನ ಪ್ರಯಾಣಗಳಲ್ಲಿ ಜಾಗರೂಕರಾಗಿರಬೇಕು. ವಿದ್ಯಾಭ್ಯಾಸದಲ್ಲಿ ವಿದ್ಯಾರ್ಥಿಗಳು ಆಲಸ್ಯವನ್ನು ಬಿಟ್ಟು ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡು ಬರುತ್ತದೆ.

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್

ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ

ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°


ಧನು


    ಆಲಸ್ಯತನ ವನ್ನು ಬಿಟ್ಟು  ಶ್ರದ್ಧೆಯಿಂದ ತೊಡಗಿಸಿಕೊಂಡ ಕೆಲಸ ಕಾರ್ಯದಲ್ಲಿ ಮುನ್ನಡೆಯಬೇಕು. ಭೂ ಸಂಬಂಧಿ ವ್ಯವಹಾರ ಮಾಡುವವರಿಗೆ ಅಡೆತಡೆಗಳು ಕಂಡುಬರುತ್ತದೆ.  ಹಣಕಾಸಿನ ವಿಚಾರದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ದಂಪತಿಗಳ ನಡುವೆ ಕಲಹಗಳು ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ವ್ಯವಹರಿಸಿ. ಮಾತಿನ ಮೂಲಕ ಜಗಳಗಳು ಸಂಭವಿಸುವ ಲಕ್ಷಣಗಳು  ಕಂಡುಬರುವುದು. ಕೋಪವನ್ನು ಹಿಡಿತದಲ್ಲಿಡಿ. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ಹಾಗೂ ಅವಕಾಶಗಳು ಒದಗಿ ಬರುತ್ತದೆ.


ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು  ಪಡೆಯಿರಿ.

ಜಪಿಸಲು :
ಅಖಂಡಮಂಡಲಾಕಾರಮ್

ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ

ತಸ್ಮೈ ಶ್ರೀಗುರವೇ ನಮಃ ||

     °~•~°~•~°~•~°~•~°~•~°


ಮಕರ


    ನೂತನ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ಒದಗಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು.  ದಂಪತಿಗಳ ನಡುವೆ ಕಲಹಗಳು ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಪತಿ/ ಪತ್ನಿ ಆರೋಗ್ಯ ಹದಗೆಡುವ ಲಕ್ಷಣಗಳು ಇರುವುದರಿಂದ  ಜಾಗರೂಕತೆ ಇಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.  

ಜಪಿಸಲು :
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||

   °~•~°~•~°~•~°~•~°~•~°          


ಕುಂಭ  


      ಉತ್ತಮ ಮನಸ್ ಸಂಕಲ್ಪದಿಂದ ಮುನ್ನಡೆದರೆ  ಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಕುಟುಂಬ ದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕರಾಗಿರಬೇಕು. ಮನೆಯಲ್ಲಿ  ಅಶಾಂತಿ ನೆಲೆಗೊಳ್ಳುವುದು. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಮುನ್ನಡೆದರೆ ಮಾತ್ರ ಅಭಿವೃದ್ಧಿ ಸಾಧ್ಯ.



ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


  ತಮ್ಮ ಮನೋ ದೈರ್ಯದಿಂದ ತಾವು ತೊಡಗಿಸಿಕೊಂಡ ಯಾವುದೇ ಕೆಲಸವಾದರೂ ಯಶಸ್ಸನ್ನು ಸಾಧಿಸುತ್ತದೆ. ರಾಜಕಾರಣಿಗಳು, ಸರಕಾರಿ ಕೆಲಸದಲ್ಲಿರುವವರು,  ವ್ಯಾಪಾರಸ್ಥರಿಗೆ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಏಳಿಗೆ ದೊರೆಯುತ್ತದೆ. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ  ಜಾಗರೂಕತೆಯಿಂದ ಇರಬೇಕು. ಆಹಾರದಲ್ಲಿ ನಿಯಂತ್ರಣವಿರಲಿ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *