04.05.2019

ದಿನ ಭವಿಷ್ಯ

         
ವಿಕಾರಿನಾಮ ಸಂವತ್ಸರ / ಉತ್ತರಾಯಣ /
ವಸಂತ ಋತು / ಚೈತ್ರ ಮಾಸ /
ಕೃಷ್ಣ ಪಕ್ಷ /ಅಮಾವಾಸ್ಯ ತಿಥಿ/

ಶನಿವಾರ/ಅಶ್ವಿನಿ ನಕ್ಷತ್ರ /

ದಿನಾಂಕ 04.05.2019

 °~•~°~•~°~•~°~•~°~•~°

ಮೇಷ

          ನೂತನ ಉದ್ಯೋಗವನ್ನು ತೊಡಗಿಸಿಕೊಳ್ಳುವ ಅವರಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಚರ್ಮರೋಗ, ಜ್ವರ, ದೇಹದಲ್ಲಿ ಉಷ್ಣತೆ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆಯಬೇಕು



ಪರಿಹಾರ:
ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋಸ್ತು ತೇ ||

°~•~°~•~°~•~°~•~°~•~°

    

ವೃಷಭ

         ಮಾಡುವಂತಹ ಕೆಲಸ ಕಾರ್ಯಗಳಲ್ಲಿ  ಅಭಿವೃದ್ಧಿ ಕಂಡು ಬಂದರೂ ಕೂಡ ಮಾನಸಿಕವಾದ ನೆಮ್ಮದಿಯನ್ನು ಕಳೆದುಕೊಳ್ಳಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುವುದರಿಂದ   ಜಾಗರೂಕತೆಯಿಂದ ಖರ್ಚುವೆಚ್ಚವನ್ನು ನಿಭಾಯಿಸಿ. ಆರೋಗ್ಯ ಸಂಬಂಧವಾದ ಸಣ್ಣ ಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಮುನ್ನಡೆ ದೊರೆಯುತ್ತದೆ




ಪರಿಹಾರ
ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ  / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ  / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ  / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ  / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ  / ಶ್ರೀಚಂಡಿಕಾಯೈ ನಮಃ ||

°~•~°~•~°~•~°~•~°~•~°



ಮಿಥುನ


   ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ ಸಣ್ಣ  ಪುಟ್ಟ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ  ಕಲಹ ಏರ್ಪಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆದರೆ ಉತ್ತಮ ಏಳಿಗೆ ದೊರೆಯುತ್ತದೆ



ಪರಿಹಾರ  
ಶ್ರೀಕೃಷ್ಣನ ಆರಾಧನೆ,ಗುರುದೇವತಾ ಆರಾಧನೆಯಿಂದ ಶುಭ.

ಜಪಿಸಲು :
ವಸುದೇವಸುತಂ ದೇವಮ್

ಕಂಸಚಾಣೂರಮರ್ದನಮ್ |

ದೇವಕೀಪರಮಾನನ್ದಮ್

ಕೃಷ್ಣಂ ವನ್ದೇ ಜಗದ್ಗುರುಮ್ ||

  °~•~°~•~°~•~°~•~°~•~°



ಕರ್ಕಾಟಕ

    ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ ಉತ್ತಮ ಏಳಿಗೆ ದೊರೆಯುವುದು. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಮೈ ಕೈ ಗಂಟು ನೋವು, ತಲೆನೋವು ನರಸಂಬಂಧಿ ತೊಂದರೆಗಳು, ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ದೊರೆಯುತ್ತದೆ



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ  
ದುರ್ಗೇದೇವಿ ನಮೋಸ್ತು ತೇ ||

 °~•~°~•~°~•~°~•~°~•~°



ಸಿಂಹ

      ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಅಡೆತಡೆಗಳು ಕಷ್ಟನಷ್ಟಗಳು ಎದುರಾಗುತ್ತವೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಆರೋಗ್ಯ ಸಂಬಂಧವಾದ ಕೆಲವೊಂದು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ನಿಧಾನಗತಿಯ  ಮುನ್ನಡೆ ಕಂಡುಬರುವುದು


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

    °~•~°~•~°~•~°~•~°~•~°      


ಕನ್ಯಾ


    ತೊಡಗಿಸಿಕೊಂಡ ಕೆಲಸಕಾರ್ಯಗಳಲ್ಲಿ ಅಡೆತಡೆಗಳು ಎದುರಾಗುತ್ತವೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು ಹಾಗೂ ಉತ್ತಮ ಕಾರ್ಯಗಳಿಗೆ ಹಣವನ್ನು ವಿನಿಯೋಗಿಸಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಹಾಗೂ ಯುವಕ ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಆರೋಗ್ಯ ಸಂಬಂಧವಾದ ತೊಂದರೆಗಳು ಎದುರಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ದೊರೆಯುವುದು



ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ  ಶುಭ.

ಜಪಿಸಲು :
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ |  
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||

  °~•~°~•~°~•~°~•~°~•~°       


ತುಲಾ


        ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ, ಸ್ಥಾನಮಾನ ಗೌರವಗಳು ಲಭಿಸುತ್ತದೆ. ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು ಹಾಗೂ ಯುವಕ ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ .ಶೀತ ಜ್ವರ, ತಲೆನೋವು ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ಕಂಡುಬರುವುದು


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮಃ  / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ  / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀ ಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||


 °~•~°~•~°~•~°~•~°~•~°


ವೃಶ್ಚಿಕ


  
 ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ಹಾಗೂ ದುಂದು ವೆಚ್ಚವನ್ನು ಮಾಡಬೇಡಿ. ದಾಂಪತ್ಯ ಜೀವನದಲ್ಲಿ ಕಲಹ ಏರ್ಪಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು ಮುಂದುವರಿದರೆ ಮಾತ್ರ  ಏಳಿಗೆ ದೊರೆಯುತ್ತದೆ

ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.


ಜಪಿಸಲು :
ಷಡಾನನಂ ಕುಂಕುಮರಕ್ತವರ್ಣಮ್

ಮಹಾಮತಿಂ ದಿವ್ಯಮಯೂರವಾಹಮ್ |

ರುದ್ರಸ್ಯ ಸೂನುಂ ಸುರಸೈನ್ಯನಾಥಮ್

ಗುಹಂ ಸದಾ ಶರಣಮಹಂ ಪ್ರಪದ್ಯೇ ||

°~•~°~•~°~•~°~•~°~•~°


ಧನು


   ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಎದುರಾಗುತ್ತದೆ. ದಾಂಪತ್ಯ ಜೀವನದಲ್ಲಿ  ಕಲಹ ಏರ್ಪಡುವ ಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಅನುಮಾನಗಳಿಗೆ ಆಸ್ಪದ ನೀಡಬೇಡಿ. ವಿದ್ಯಾರ್ಥಿಗಳು ಆಲಸಿ ತನವನ್ನು ಬಿಟ್ಟೂ ಮುಂದುವರೆದಲ್ಲಿ ಮಾತ್ರ ಅಭಿವೃದ್ಧಿ ಕಂಡು ಬರುವುದು

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಜಪಿಸಲು:
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

     °~•~°~•~°~•~°~•~°~•~°


ಮಕರ


    ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಸ್ಥಾನಮಾನಗಳು, ಗೌರವಗಳು ಲಭಿಸುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ದೊರೆಯುತ್ತದೆ.  ಗೃಹೋಪಯೋಗಿ ವಸ್ತುಗಳ ಖರೀದಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ



ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.  

ಜಪಿಸಲು :
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

   °~•~°~•~°~•~°~•~°~•~°          


ಕುಂಭ  


      ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಸಣ್ಣಪುಟ್ಟ ಅಡೆತಡೆಗಳು ಕಂಡುಬಂದರೂ ಕೂಡ ಧೃತಿಗೆಡದೆ  ಉತ್ತಮ ಪರಿಶ್ರಮದಿಂದ ಮುನ್ನಡೆದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲೂ ಉತ್ತಮ ಅಭಿವೃದ್ಧಿ ಕಂಡು ಬರುವುದು. ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆಹಾರದ ಮೂಲಕವಾಗಿ ಆರೋಗ್ಯ ಹದಗೆಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ದೊರೆಯುತ್ತದೆ



ಪರಿಹಾರ  
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.

ಜಪಿಸಲು :
ರುದ್ರಂ ಪಶುಪತಿಂ ಸ್ಥಾಣುಮ್

ನೀಲಕಂಠಂ ಉಮಾಪತಿಮ್ |

ನಮಾಮಿ ಶಿರಸಾ ದೇವಮ್

ಕಿಂ ನೋ ಮೃತ್ಯುಃ ಕರಿಷ್ಯತಿ  ||

°~•~°~•~°~•~°~•~°~•~°


ಮೀನ   


   ತೊಡಗಿಸಿಕೊಂಡ ಕೆಲಸಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ದೊರೆಯುತ್ತದೆ. ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಉತ್ತಮ ಆರೋಗ್ಯವನ್ನು ಹೊಂದುತ್ತೀರಿ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಮುನ್ನಡೆ ದೊರೆಯಲಿದೆ


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶಾಂತಾಕಾರಂ ಭುಜಗಶಯನಮ್  

ಪದ್ಮನಾಭಂ ಸುರೇಶಮ್

ವಿಶ್ವಾಧಾರಂ ಗಗನಸದೃಶಮ್

ಮೇಘವರ್ಣಂ ಶುಭಾಂಗಮ್ |

ಲಕ್ಷ್ಮೀಕಾಂತಂ ಕಮಲನಯನಮ್

ಯೋಗಿಹೃದ್ಧ್ಯಾನಗಮ್ಯಮ್

ವಂದೇ ವಿಷ್ಣುಂ ಭವಭಯಹರಮ್

ಸರ್ವಲೋಕೈಕನಾಥಮ್  ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *