09.05.2019

ದಿನ ಭವಿಷ್ಯ

         
ವಿಕಾರಿನಾಮ ಸಂವತ್ಸರ / ಉತ್ತರಾಯಣ /
ವಸಂತ ಋತು / ವೈಶಾಖ ಮಾಸ/

                       ಶುಕ್ಲಪಕ್ಷ /ಪಂಚಮಿ ತಿಥಿ/

ಗುರುವಾರ/ಆರ್ದ್ರ ನಕ್ಷತ್ರ /

ದಿನಾಂಕ 09.05.2019

 °~•~°~•~°~•~°~•~°~•~°

ಮೇಷ

ಉತ್ತಮ ಪ್ರಯತ್ನದಿಂದ ಯಾವುದೇ ಕೆಲಸವನ್ನು ತೊಡಗಿಸಿಕೊಂಡರೂ ಕೂಡ  ಉತ್ತಮ ಸಫಲತೆ ಕಂಡುಬರುವುದು. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಕಂಡು ಬರುತ್ತದೆ, ಹಾಗೂ   ಸಹೋದರರಿಂದ ಸಹಾಯ ಒದಗಿ ಬರುತ್ತದೆ. ವೈವಾಹಿಕ ಜೀವನದಲ್ಲಿ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ತಮ್ಮ ಪರಿಶ್ರಮದಿಂದ ಮಾತ್ರ ಅಭಿವೃದ್ಧಿ ಕಂಡು ಬರುವುದು.



ಪರಿಹಾರ:
ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋಸ್ತು ತೇ ||

°~•~°~•~°~•~°~•~°~•~°

    

ವೃಷಭ

         ಮಾಡುತ್ತಿರುವ ಕೆಲಸ ಕಾರ್ಯಗಳಲ್ಲಿ ಅಡೆತಡೆಗಳು ಕಷ್ಟ ನಷ್ಟಗಳನ್ನು ಎದುರಿಸಬೇಕಾಗುತ್ತದೆ. ಹಿರಿಯ ಅಧಿಕಾರಿಗಳಿಂದ  ಅಸಮಧಾನದ ಮಾತುಗಳು ಕೇಳಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು ಹಾಗೂ ದುಂದು ವೆಚ್ಚ ಮಾಡಬೇಡಿ. ಉತ್ತಮ ಆರೋಗ್ಯವನ್ನು ಹೊಂದುತ್ತೀರಿ. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ಕಂಡು ಬರುವುದು.




ಪರಿಹಾರ
ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ  / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ  / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ  / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ  / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ  / ಶ್ರೀಚಂಡಿಕಾಯೈ ನಮಃ ||

°~•~°~•~°~•~°~•~°~•~°



ಮಿಥುನ


   ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತವೆ. ಉದ್ಯೋಗದಲ್ಲಿ ಉನ್ನತ ಸ್ಥಾನಮಾನ,  ಹಿರಿಯ ಅಧಿಕಾರಿಗಳಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುವುದು. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ  ಕಲಹಗಳ ಲಕ್ಷಣ ಗಳಿರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.



ಪರಿಹಾರ  
ಶ್ರೀಕೃಷ್ಣನ ಆರಾಧನೆ,ಗುರುದೇವತಾ ಆರಾಧನೆಯಿಂದ ಶುಭ.

ಜಪಿಸಲು :
ವಸುದೇವಸುತಂ ದೇವಮ್

ಕಂಸಚಾಣೂರಮರ್ದನಮ್ |

ದೇವಕೀಪರಮಾನನ್ದಮ್

ಕೃಷ್ಣಂ ವನ್ದೇ ಜಗದ್ಗುರುಮ್ ||

  °~•~°~•~°~•~°~•~°~•~°



ಕರ್ಕಾಟಕ

    ಭೂ ಸಂಬಂಧಿ ವ್ಯವಹಾರ ಮಾಡುವವರಿಗೆ ಅಡತಡೆಗಳು ಎದುರಾಗುತ್ತದೆ. ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯದಲ್ಲಿ ಏರು ಪೇರುಗಳು ಎದುರಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ಕಂಡು ಬರುವುದು.



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ  
ದುರ್ಗೇದೇವಿ ನಮೋಸ್ತು ತೇ ||

 °~•~°~•~°~•~°~•~°~•~°



ಸಿಂಹ

      ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉನ್ನತ ಸ್ಥಾನಗಳು ಲಭಿಸುತ್ತವೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿ ಏಳಿಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಏಕಾಗ್ರತೆಯಿಂದ ಮುನ್ನಡೆಯಬೇಕು.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

    °~•~°~•~°~•~°~•~°~•~°      


ಕನ್ಯಾ


     ತೊಡಗಿಸಿಕೊಂಡ ಕೆಲಸಕಾರ್ಯಗಳಲ್ಲಿ ಅಡೆತಡೆಗಳು ಎದುರಾಗುತ್ತವೆ. ವ್ಯಾವಹಾರಿಕ ಕ್ಷೇತ್ರದಲ್ಲಿ ಜಗಳಗಳು ಸಂಭವಿಸುವ ಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಿ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ದೊರೆಯುತ್ತದೆ.



ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ  ಶುಭ.

ಜಪಿಸಲು :
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ |  
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||

  °~•~°~•~°~•~°~•~°~•~°       


ತುಲಾ

ಉತ್ತಮ ಪರಿಶ್ರಮದಿಂದ  ತೊಡಗಿಸಿಕೊಂಡರೆ ಮಾತ್ರ ವ್ಯವಹರಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಉತ್ತಮ ಆರೋಗ್ಯ ದೊರೆಯುತ್ತದೆ. ವಿದ್ಯಾರ್ಥಿಗಳಿಗೆ  ಉತ್ತಮ ಪರಿಶ್ರಮದಿಂದ ಅಭಿವೃದ್ಧಿ ಕಂಡು ಬರುತ್ತದೆ.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮಃ  / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ  / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀ ಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||


 °~•~°~•~°~•~°~•~°~•~°


ವೃಶ್ಚಿಕ


  
 ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ  ಉತ್ತಮ ಅಭಿವೃದ್ಧಿ ಕಂಡು ಬಂದರೂ ಕೂಡ ಮಾನಸಿಕ ನೆಮ್ಮದಿಯನ್ನು ಕಳೆದುಕೊಳ್ಳಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಏಳಿಗೆ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು  ಉತ್ತಮ ಪರಿಶ್ರಮದಿಂದ ಮುನ್ನಡೆದರೆ ಮಾತ್ರ ಅಭಿವೃದ್ಧಿ ಕಂಡು ಬರುತ್ತದೆ.

ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.


ಜಪಿಸಲು :
ಷಡಾನನಂ ಕುಂಕುಮರಕ್ತವರ್ಣಮ್

ಮಹಾಮತಿಂ ದಿವ್ಯಮಯೂರವಾಹಮ್ |

ರುದ್ರಸ್ಯ ಸೂನುಂ ಸುರಸೈನ್ಯನಾಥಮ್

ಗುಹಂ ಸದಾ ಶರಣಮಹಂ ಪ್ರಪದ್ಯೇ ||

°~•~°~•~°~•~°~•~°~•~°


ಧನು


   ಉದಾಸೀನತೆ ಯಿಂದಾಗಿ  ವ್ಯವಹಾರಿಕ ಕ್ಷೇತ್ರಗಳಲ್ಲಿ ಹಿನ್ನಡೆಯನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲಹಗಳು ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರ್ಥಿಕ  ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಕುಟುಂಬದಲ್ಲಿ ಕಲಹಗಳು ಸಂಭವಿಸುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು.

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಜಪಿಸಲು:
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

     °~•~°~•~°~•~°~•~°~•~°


ಮಕರ


    ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು.  ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕರಾಗಿರಿ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಮುನ್ನಡೆ ದೊರೆಯುತ್ತದೆ.



ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.  

ಜಪಿಸಲು :
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

   °~•~°~•~°~•~°~•~°~•~°          


ಕುಂಭ  


      ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯ ಸಂಬಂಧವಾದ ಸಣ್ಣ  ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಏಳಿಗೆ ದೊರೆಯುವುದು.



ಪರಿಹಾರ  
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.

ಜಪಿಸಲು :
ರುದ್ರಂ ಪಶುಪತಿಂ ಸ್ಥಾಣುಮ್

ನೀಲಕಂಠಂ ಉಮಾಪತಿಮ್ |

ನಮಾಮಿ ಶಿರಸಾ ದೇವಮ್

ಕಿಂ ನೋ ಮೃತ್ಯುಃ ಕರಿಷ್ಯತಿ  ||

°~•~°~•~°~•~°~•~°~•~°


ಮೀನ   


   ಉದಾಸೀನತೆಯನ್ನು ಬಿಟ್ಟು ಕೆಲಸ ಕಾರ್ಯವನ್ನು ಉತ್ತಮ ಪರಿಶ್ರಮದಿಂದ ಮುನ್ನಡೆಸಿಕೊಂಡು ಬಂದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಏಳಿಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಉತ್ತಮ ಆರೋಗ್ಯವನ್ನು ಹೊಂದುತ್ತೀರಿ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ದೊರೆಯುವುದು.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶಾಂತಾಕಾರಂ ಭುಜಗಶಯನಮ್  

ಪದ್ಮನಾಭಂ ಸುರೇಶಮ್

ವಿಶ್ವಾಧಾರಂ ಗಗನಸದೃಶಮ್

ಮೇಘವರ್ಣಂ ಶುಭಾಂಗಮ್ |

ಲಕ್ಷ್ಮೀಕಾಂತಂ ಕಮಲನಯನಮ್

ಯೋಗಿಹೃದ್ಧ್ಯಾನಗಮ್ಯಮ್

ವಂದೇ ವಿಷ್ಣುಂ ಭವಭಯಹರಮ್

ಸರ್ವಲೋಕೈಕನಾಥಮ್  ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *