15.05.2019

ದಿನ ಭವಿಷ್ಯ

         

ವಿಕಾರಿನಾಮ ಸಂವತ್ಸರ / ಉತ್ತರಾಯಣ /
ವಸಂತ ಋತು / ವೈಶಾಖ ಮಾಸ/

ಶುಕ್ಲಪಕ್ಷ /ಏಕಾದಶಿ ತಿಥಿ/

ಬುಧವಾರ/ ಉತ್ತರಾ/ಹಸ್ತಾ ನಕ್ಷತ್ರ /



ದಿನಾಂಕ: 15.05.2019

 °~•~°~•~°~•~°~•~°~•~°

ಮೇಷ

        ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬಂದರೂ ಕೂಡ ಮಾನಸಿಕ ನೆಮ್ಮದಿಯನ್ನು ಕಳೆದುಕೊಳ್ಳಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುವುದು. ಶೀತ ಜ್ವರ, ತಲೆನೋವು, ಗಂಟಲು ನೋವು, ಚರ್ಮ ಸಂಬಂಧಿ ತೊಂದರೆಗಳು  ಮೊದಲಾದ ಆರೋಗ್ಯ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಮಾತ್ರ ಅಭಿವೃದ್ಧಿ ಕಂಡು ಬರುವುದು.



ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.

ಜಪಿಸಲು :
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ

ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ

ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥

°~•~°~•~°~•~°~•~°~•~°

    

ವೃಷಭ

          ಉತ್ತಮ ಪರಿಶ್ರಮದಿಂದ ಕೆಲಸ ಕಾರ್ಯವನ್ನು ತೊಡಗಿಸಿಕೊಂಡಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಕಣ್ಣು ನೋವು, ಕತ್ತು ನೋವು ಕತ್ತು ನೋವು, ಬೆನ್ನು ನೋವು ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಆಲಸ್ಯತನ ವನ್ನು ಬಿಟ್ಟು  ಮುಂದುವರಿಯಬೇಕು.




ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.

ಜಪಿಸಲು :
ಸರ್ವದೇವಮಯೇ ದೇವಿ

ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್

ಸಫಲಂ ಕುರು ನಂದಿನಿ ||

°~•~°~•~°~•~°~•~°~•~°



ಮಿಥುನ


     ಆಲಸ್ಯತನ ವನ್ನು ಬಿಟ್ಟು ಕೆಲಸ ಕಾರ್ಯದಲ್ಲಿ ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಏಳಿಗೆ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕರಾಗಿರಬೇಕು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಉತ್ತಮ ಅವಕಾಶಗಳು ಒದಗಿ ಬರುವುದು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ  
ನರಸಿಂಹನ ಆರಾಧನೆಯನ್ನು ಮಾಡಿ.

ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್

ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಮಹಾವೀರಮ್

ನಮಾಮಿ ಋಣಮುಕ್ತಯೇ ||

  °~•~°~•~°~•~°~•~°~•~°



ಕರ್ಕಾಟಕ

   
ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ.  ಕೈ ಗಂಟು ನೋವು ತಲೆನೋವು ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಪರಿಶ್ರಮದಿಂದ ಮುನ್ನಡೆಯಬೇಕು.

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||

 °~•~°~•~°~•~°~•~°~•~°



ಸಿಂಹ

   ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ಕಂಡುಬರುವುದು.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||

    °~•~°~•~°~•~°~•~°~•~°      


ಕನ್ಯಾ


        ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತವೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು ಹಾಗೂ ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಆರೋಗ್ಯದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.



ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ

ಜಪಿಸಲು :
ವಸುದೇವಸುತಂ  ದೇವಮ್

ಕಂಸಚಾಣೂರಮರ್ದನಮ್  |
ದೇವಕೀಪರಮಾನಂದಮ್

ಕೃಷ್ಣಂ ವಂದೇ  ಜಗದ್ಗುರುಮ್ ||

  °~•~°~•~°~•~°~•~°~•~°       


ತುಲಾ


         ಉದ್ಯೋಗ ಕ್ಷೇತ್ರದಲ್ಲಿ ಅಡೆತಡೆಗಳು ಕಷ್ಟನಷ್ಟಗಳು ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಿ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಹಾಗೂ ಯುವಕ ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುವುದು. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು, ಅಲರ್ಜಿ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಸರ್ವರೂಪಮಯೀ ದೇವೀ

ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್

ನಮಾಮಿ ಪರಮೇಶ್ವರೀಮ್ ||


 °~•~°~•~°~•~°~•~°~•~°


ವೃಶ್ಚಿಕ

ತೊಡಗಿಸಿಕೊಂಡ ಕೆಲಸ  ಕಾರ್ಯಗಳಲ್ಲಿ ಅಡೆತಡೆಗಳು ಕಷ್ಟನಷ್ಟಗಳು ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಎದುರಾಗುವುದರಿಂದ ದುಂದುವೆಚ್ಚವನ್ನು ಮಾಡಬೇಡಿ. ದಾಂಪತ್ಯ ಜೀವನದಲ್ಲಿ ಕಲಹ ಎದುರಿಸಬೇಕಾಗುವುದು ರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯ ಸಂಬಂಧಿ ಸಣ್ಣ ಪಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆಯಬೇಕು.

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್

ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ

ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°


ಧನು


ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತವೆ. ಉತ್ತಮ ಸ್ಥಾನಮಾನ ಗೌರವಗಳು ಲಭಿಸುತ್ತವೆ. ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ ಎದುರಾಗುತ್ತದೆ. ಆರೋಗ್ಯ ಸಂಬಂಧಿ ತೊಂದರೆಗಳು ಎದುರಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.

ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು  ಪಡೆಯಿರಿ.

ಜಪಿಸಲು :
ಅಖಂಡಮಂಡಲಾಕಾರಮ್

ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ

ತಸ್ಮೈ ಶ್ರೀಗುರವೇ ನಮಃ ||

     °~•~°~•~°~•~°~•~°~•~°


ಮಕರ


   ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.  ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.
ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.  

ಜಪಿಸಲು :
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||

   °~•~°~•~°~•~°~•~°~•~°          


ಕುಂಭ  


      ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬಂದರೂ ಕೂಡ ಸಣ್ಣ ಪುಟ್ಟ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಏಳಿಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.



ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


  ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ. ಸಮಾಜದಲ್ಲಿ ಉತ್ತಮ ಸ್ಥಾನಮಾನ ಗೌರವಗಳು ಲಭಿಸಲಿದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿ  ಏಳಿಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು ಹಾಗೂ ಯುವಕ ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಆರೋಗ್ಯ ಸಂಬಂಧಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *