18.05.2019

ದಿನ ಭವಿಷ್ಯ

         

ವಿಕಾರಿನಾಮ ಸಂವತ್ಸರ / ಉತ್ತರಾಯಣ /
ವಸಂತ ಋತು / ವೈಶಾಖ ಮಾಸ/

ಶುಕ್ಲಪಕ್ಷ/ಪೂರ್ಣಿಮಾ ತಿಥಿ/

ಶನಿವಾರ/ವಿಶಾಖಾ ನಕ್ಷತ್ರ /



ದಿನಾಂಕ: 18.05.2019

 °~•~°~•~°~•~°~•~°~•~°

ಮೇಷ

        ನೂತನ ವ್ಯವಹಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ಕಾರ್ಯಕ್ಷೇತ್ರದಲ್ಲಿ ಉನ್ನತ ಸ್ಥರ, ಸ್ಥಾನಮಾನ ಗೌರವಗಳು ಲಭಿಸುತ್ತವೆ. ಆರ್ಥಿಕ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುವುದುರಿಂದ ಜಾಗರೂಕತೆಯಿಂದ ಖರ್ಚುವೆಚ್ಚವನ್ನು ನಿಭಾಯಿಸಿ. ದಾಂಪತ್ಯ  ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು ಹಾಗೂ ಯುವಕ-ಯುವತಿಯರಿಗೆ ವಿವಾಹಯೋಗ ಭಾಗ್ಯ ಒದಗಿ ಬರುತ್ತದೆ. ಅಲರ್ಜಿ ,ಚರ್ಮರೋಗ ಮೊದಲಾದ ತೊಂದರೆ ಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪ್ರಯತ್ನದಿಂದ ವಿದ್ಯಾಭ್ಯಾಸದಲ್ಲಿ ತೊಡಗಿಸಿಕೊಂಡರೆ ಮಾತ್ರ ಅಭಿವೃದ್ಧಿ ಕಂಡುಬರುವುದು.



ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.

ಜಪಿಸಲು :
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ

ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ

ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥

°~•~°~•~°~•~°~•~°~•~°

    

ವೃಷಭ

          ಸರಕಾರಿ ಕೆಲಸದಲ್ಲಿರುವವರು, ರಾಜಕಾರಣಿಗಳು, ಮೊದಲಾದವರಿಗೆ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನ ದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಶೀತ ಜ್ವರ, ತಲೆನೋವು, ಮೂತ್ರ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಉತ್ತಮವಾಗಿ ನೀರನ್ನು ಕುಡಿಯಿರಿ. ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡುಬರುವುದು.

ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.

ಜಪಿಸಲು :
ಸರ್ವದೇವಮಯೇ ದೇವಿ

ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್

ಸಫಲಂ ಕುರು ನಂದಿನಿ ||

°~•~°~•~°~•~°~•~°~•~°



ಮಿಥುನ


     ನಿಮ್ಮ ಆಲಸಿತನ ದಿಂದಾಗಿ ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಅಡೆತಡೆಗಳು ಕಷ್ಟನಷ್ಟಗಳು ಎದುರಾಗುತ್ತವೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡುಬರುವುದು. ದಾಂಪತ್ಯಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು, ನರಸಂಬಂಧಿ ತೊಂದರೆಗಳು, ದೇಹದಲ್ಲಿ ಉಷ್ಣತೆ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುವುದು ರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.



ಪರಿಹಾರ  
ನರಸಿಂಹನ ಆರಾಧನೆಯನ್ನು ಮಾಡಿ.

ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್

ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಮಹಾವೀರಮ್

ನಮಾಮಿ ಋಣಮುಕ್ತಯೇ ||

  °~•~°~•~°~•~°~•~°~•~°



ಕರ್ಕಾಟಕ

   
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು.  ನೂತನ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ  ಏಳಿಗೆ ದೊರೆಯುವುದು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಮೈ ಗಂಟು ನೋವು, ತಲೆನೋವು, ನರಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪ್ರಯತ್ನದಿಂದ ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡುಬರುವುದು.

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||

 °~•~°~•~°~•~°~•~°~•~°



ಸಿಂಹ

   ಉತ್ತಮ ಪರಿಶ್ರಮದಿಂದ ಕೆಲಸಕಾರ್ಯಗಳಲ್ಲಿ  ತೊಡಗಿಸಿಕೊಳ್ಳಬೇಕು. ಹಣಕಾಸಿನ ವಿಚಾರದಲ್ಲಿ  ಸಣ್ಣ ಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುವುದುರಿಂದ ದುಂದುವೆಚ್ಚ ಮಾಡದಿರಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||

    °~•~°~•~°~•~°~•~°~•~°      


ಕನ್ಯಾ


        ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ  ಅಡೆತಡೆಗಳು ಕಷ್ಟನಷ್ಟಗಳು ಎದುರಾಗುತ್ತವೆ ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು.  ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ. ತಾಯಿಯ ಆರೋಗ್ಯ ಹದಗೆಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಏಕಾಗ್ರತೆಯಿಂದ ಮುಂದುವರಿಯಬೇಕು.



ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ

ಜಪಿಸಲು :
ವಸುದೇವಸುತಂ  ದೇವಮ್

ಕಂಸಚಾಣೂರಮರ್ದನಮ್  |
ದೇವಕೀಪರಮಾನಂದಮ್

ಕೃಷ್ಣಂ ವಂದೇ  ಜಗದ್ಗುರುಮ್ ||

  °~•~°~•~°~•~°~•~°~•~°       


ತುಲಾ


         ನೂತನ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು, ಉತ್ತಮ ಸ್ಥಾನಮಾನ ಗೌರವಗಳು ಲಭಿಸುತ್ತವೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು. ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಹಾಗೂ ಯುವಕ-ಯುವತಿಯರಿಗೆ ವಿವಾಹಯೋಗ ಭಾಗ್ಯ ಒದಗಿ ಬರುವುದು. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಮುಂದುವರಿಯಬೇಕು.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಸರ್ವರೂಪಮಯೀ ದೇವೀ

ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್

ನಮಾಮಿ ಪರಮೇಶ್ವರೀಮ್ ||


 °~•~°~•~°~•~°~•~°~•~°


ವೃಶ್ಚಿಕ

ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬಂದರೂ ಕೂಡ ಮಾನಸಿಕ ನೆಮ್ಮದಿಯನ್ನು ಕಳೆದುಕೊಳ್ಳಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಮೋಸ ಹೋಗುವ ಲಕ್ಷಣಗಳು ಇರುವುದರಿಂದ  ಜಾಗರೂಕತೆಯಿಂದ ವ್ಯವಹಾರವನ್ನು ನಿಭಾಯಿಸಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್

ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ

ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°


ಧನು


ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಕಾರ್ಯಕ್ಷಮತೆಯಿಂದ ಮುನ್ನಡೆಯಬೇಕು. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡುಬರುವುದು. ದಾಂಪತ್ಯಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ  ಜಾಗೃತರಾಗಿ ಇರಬೇಕು. ಆರೋಗ್ಯದಲ್ಲಿ ಏರುಪೇರುಗಳ ಆಗುವ ಸಂಭವವಿದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.

ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು  ಪಡೆಯಿರಿ.

ಜಪಿಸಲು :
ಅಖಂಡಮಂಡಲಾಕಾರಮ್

ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ

ತಸ್ಮೈ ಶ್ರೀಗುರವೇ ನಮಃ ||

     °~•~°~•~°~•~°~•~°~•~°


ಮಕರ


   ನೂತನ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರೆಯುತ್ತದೆ. ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಗೌರವಗಳು ಲಭಿಸುತ್ತದೆ ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯ ಸಂಬಂಧಿ ಸಣ್ಣ-ಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಉತ್ತಮ ಪ್ರಯತ್ನದಿಂದ ವಿದ್ಯಾರ್ಥಿಗಳು ಮುನ್ನಡೆಯಬೇಕು.  
ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.  

ಜಪಿಸಲು :
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||

   °~•~°~•~°~•~°~•~°~•~°          


ಕುಂಭ  


      ತೊಡಗಿಸಿಕೊಂಡ ಕೆಲಸಕಾರ್ಯಗಳಲ್ಲಿ ನಿಧಾನಗತಿ ಅಭಿವೃದ್ಧಿ ಕಂಡುಬರುವುದು. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಕಂಡು ಬರುತ್ತದೆ. ಸಹೋದರರಿಂದ ಸಹಾಯ ಒದಗಿ ಬರುತ್ತದೆ. ಜೀವನದಲ್ಲಿ ಕಲಹಗಳ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಶೀತ ಜ್ವರ, ತಲೆನೋವು, ಬೆನ್ನು ನೋವು, ಕಫ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆಯಬೇಕು.



ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


   ಮಾಡುತ್ತಿರುವ ಕೆಲಸಕಾರ್ಯಗಳಲ್ಲಿ ಅಡೆತಡೆಗಳು ಎದುರಾಗುತ್ತವೆ. ಮೋಸ ಹೋಗುವ ಸಾಧ್ಯತೆಗಳಿರುವುದರಿಂದ  ಜಾಗರೂಕತೆಯಿಂದ ಇರಬೇಕು. ಹಣಕಾಸಿನ ವಿಚಾರದಲ್ಲಿ ನಿಧಾನಗತಿ ಅಭಿವೃದ್ಧಿ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆಹಾರದಿಂದಾಗಿ ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಆಹಾರದಲ್ಲಿ ಗಮನವಿರಲಿ .ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *