ವಿಕಾರಿನಾಮ ಸಂವತ್ಸರ / ಉತ್ತರಾಯಣ /
ವಸಂತ ಋತು / ವೈಶಾಖ ಮಾಸ/
ಕೃಷ್ಣಪಕ್ಷ/ಸಪ್ತಮಿ ತಿಥಿ/
ರವಿವಾರ/ಧನಿಷ್ಠ ನಕ್ಷತ್ರ /
ದಿನಾಂಕ: 26.05.2019
°~•~°~•~°~•~°~•~°~•~°
ಮೇಷ
ಉತ್ತಮ ಪರಿಶ್ರಮದಿಂದ ಉನ್ನತ ಕೀರ್ತಿ, ಅಭಿವೃದ್ಧಿ ದೊರೆಯುತ್ತದೆ. ಆರ್ಥಿಕವಾದ ಸಣ್ಣಪುಟ್ಟ ತೊಂದರೆಗಳು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನರಳುವುದು. ಚರ್ಮ ಸಂಬಂಧಿ ತೊಂದರೆಗಳು, ಅಲರ್ಜಿ, ಜ್ವರ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು
ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.
ಜಪಿಸಲು :
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ
ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ
ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥
°~•~°~•~°~•~°~•~°~•~°
ವೃಷಭ
ನೂತನ ವ್ಯವಹಾರವನ್ನು ತೊಡಗಿಸಿಕೊಳ್ಳುವ ವರಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ. ದುಂದುವೆಚ್ಚವನ್ನು ಮಾಡದಿರಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಮೂತ್ರ ಸಂಬಂಧಿ ತೊಂದರೆಗಳು ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಉತ್ತಮವಾಗಿ ನೀರನ್ನು ಸೇವಿಸಿ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು
ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.
ಜಪಿಸಲು :
ಸರ್ವದೇವಮಯೇ ದೇವಿ
ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್
ಸಫಲಂ ಕುರು ನಂದಿನಿ ||
°~•~°~•~°~•~°~•~°~•~°
ಮಿಥುನ
ಆಲಸಿತನ ವನ್ನು ಬಿಟ್ಟು ಉತ್ತಮ ಪರಿಶ್ರಮದಿಂದ ಕೆಲಸ ಕಾರ್ಯವನ್ನು ತೊಡಗಿಸಿಕೊಳ್ಳಿ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡುಬರುತ್ತದೆ. ದಾಂಪತ್ಯಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು, ಜ್ವರ, ದೇಹದಲ್ಲಿ ಉಷ್ಣತೆ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು
ಪರಿಹಾರ
ನರಸಿಂಹನ ಆರಾಧನೆಯನ್ನು ಮಾಡಿ.
ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್
ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಮಹಾವೀರಮ್
ನಮಾಮಿ ಋಣಮುಕ್ತಯೇ ||
°~•~°~•~°~•~°~•~°~•~°
ಕರ್ಕಾಟಕ
ಉದ್ಯೋಗದಲ್ಲಿ ಉತ್ತಮ ಅಭಿವೃದ್ಧಿ ಕಂಡುಬಂದರೂ ಮಾನಸಿಕ ನೆಮ್ಮದಿಯನ್ನು ಕಳೆದುಕೊಳ್ಳಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಏಳಿಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆಯಬೇಕು
ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.
ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||
°~•~°~•~°~•~°~•~°~•~°
ಸಿಂಹ
ವ್ಯವಹಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಏಳಿಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ಹಾಗೂ ಯುವಕ-ಯುವತಿಯರಿಗೆ ನೂತನ ವಿವಾಹಯೋಗ ಭಾಗ್ಯಗಳು ದೊರೆಯುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ಕಂಡುಬರುವುದು
ಪರಿಹಾರ
ಶಿವನ ಆರಾಧನೆ ಅಗತ್ಯ.
ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||
°~•~°~•~°~•~°~•~°~•~°
ಕನ್ಯಾ
ದೂರ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕರಾಗಿರಬೇಕು. ಆರ್ಥಿಕವಾದ ಮುನ್ನಡೆ ದೊರೆಯುತ್ತದೆ. ದಾಂಪತ್ಯಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯ ಹದಗೆಡುವ ಲಕ್ಷಣಗಳಿವೆ. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ದೊರೆಯಲಿದೆ
ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ
ಜಪಿಸಲು :
ವಸುದೇವಸುತಂ ದೇವಮ್
ಕಂಸಚಾಣೂರಮರ್ದನಮ್ |
ದೇವಕೀಪರಮಾನಂದಮ್
ಕೃಷ್ಣಂ ವಂದೇ ಜಗದ್ಗುರುಮ್ ||
°~•~°~•~°~•~°~•~°~•~°
ತುಲಾ
ಸಮಾಜದಲ್ಲಿ ಉತ್ತಮ ಸ್ಥಾನಮಾನ ವಿವರಗಳು ಲಭಿಸಲಿದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು . ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ವಿದ್ಯಾರ್ಥಿಗಳು ಉತ್ತಮ ಮುನ್ನಡೆಯನ್ನು ಸಾಧಿಸುತ್ತಾರೆ
ಪರಿಹಾರ
ದುರ್ಗಾದೇವಿಯ ಆರಾಧನೆಯಂದ ಶುಭ.
ಜಪಿಸಲು :
ಸರ್ವರೂಪಮಯೀ ದೇವೀ
ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್
ನಮಾಮಿ ಪರಮೇಶ್ವರೀಮ್ ||
°~•~°~•~°~•~°~•~°~•~°
ವೃಶ್ಚಿಕ
ವ್ಯವಹಾರದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಕುಟುಂಬದಲ್ಲಿ ಕಲಹ ಏರ್ಪಡುವ ಲಕ್ಷಣಗಳು ಇರುವುದರಿಂದ ಜಾಗ್ರತೆಯಿಂದಿರಬೇಕು. ವಿದ್ಯಾರ್ಥಿಗಳು ಆಲಸಿತನ ವನ್ನು ಬಿಟ್ಟು ಮುನ್ನಡೆಯಬೇಕು
ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು:
ಶರಣ್ಯಂ ಸರ್ವಲೋಕಾನಾಮ್
ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ
ಸುಬ್ರಮಣ್ಯಮುಪಾಸ್ಮಹೇ ||
°~•~°~•~°~•~°~•~°~•~°
ಧನು
ನಿಮ್ಮ ಆಲಸ್ಯತನದಿಂದಾಗಿ ವ್ಯಾವಹಾರಿಕ ಹಿನ್ನಡೆ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು
ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು ಪಡೆಯಿರಿ.
ಜಪಿಸಲು :
ಅಖಂಡಮಂಡಲಾಕಾರಮ್
ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ
ತಸ್ಮೈ ಶ್ರೀಗುರವೇ ನಮಃ ||
°~•~°~•~°~•~°~•~°~•~°
ಮಕರ
ಕೆಲಸಕಾರ್ಯಗಳಲ್ಲಿ ಅಡೆತಡೆಗಳು ಕಷ್ಟನಷ್ಟಗಳು ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಹಣಕಾಸಿನ ವಿಚಾರದಲ್ಲೂ ಉತ್ತಮ ಅಭಿವೃದ್ಧಿ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಿರಿ
ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.
ಜಪಿಸಲು :
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||
°~•~°~•~°~•~°~•~°~•~°
ಕುಂಭ
ನೂತನ ವ್ಯವಹಾರವನ್ನು ತೊಡಗಿರುವವರಿಗೆ ಉತ್ತಮ ಅವಕಾಶಗಳು ಸ್ಥಾನಮಾನ ಗೌರವಗಳು ಲಭಿಸುತ್ತದೆ. ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುವುದು ರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆದರೆ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ
ಪರಿಹಾರ
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||
°~•~°~•~°~•~°~•~°~•~°
ಮೀನ
ಕೆಲಸಕಾರ್ಯಗಳಲ್ಲಿ ಆಲಸಿತನ ವನ್ನು ಬಿಟ್ಟು ಮುನ್ನಡೆಯಿರಿ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯ ಸಂಬಂಧವಾದ ತೊಂದರೆಗಳು ಎದುರಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಿರಿ
ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.
ಜಪಿಸಲು :
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ / ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||
°~•~°~•~°~•~°~•~°~•~°
{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}