16.07.2019

ದಿನ ಭವಿಷ್ಯ

          

ವಿಕಾರಿನಾಮ ಸಂವತ್ಸರ / ಉತ್ತರಾಯಣ /
ಗ್ರೀಷ್ಮ ಋತು / ಆಷಾಢ ಮಾಸ/
ಶುಕ್ಲಪಕ್ಷ/ ಪೂರ್ಣಿಮಾತಿಥಿ/

ಮಂಗಳವಾರ/ಪೂರ್ವಾಷಾಢ ನಕ್ಷತ್ರ /

ದಿನಾಂಕ 16.07.2019

  °~•~°~•~°~•~°~•~°~•~°

 

ಮೇಷ

 

         ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡುಬರುವುದು.  ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ತಮ್ಮ ಪರಿಶ್ರಮದಿಂದ  ವಿದ್ಯಾರ್ಥಿಗಳು ಮುನ್ನಡೆಯಬೇಕು



ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.

ಜಪಿಸಲು :
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ 

ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ 

ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥

°~•~°~•~°~•~°~•~°~•~°

   

ವೃಷಭ

          ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣ ಗಳಿರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯದಲ್ಲಿ  ತೊಂದರೆ ಎದುರಾಗುತ್ತದೆ. ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕತೆಯಿಂದ ಇರಬೇಕು. ಕೋಪವನ್ನು ನಿಯಂತ್ರಣದಲ್ಲಿಡಿ. ಜಗಳವನ್ನು ಮಾಡಬೇಡಿ. ಮಾನಸಿಕ ನೆಮ್ಮದಿಯನ್ನು ಕಳೆದುಕೊಳ್ಳಬೇಕಾಗುತ್ತದೆ.
ಗ್ರಹಣ ಸಂಬಂಧಿ ದೋಷಗಳು ಇರುವುದರಿಂದ ಗ್ರಹಣಕಾಲದಲ್ಲಿ ತುಪ್ಪದ ದೀಪವನ್ನು ಹಚ್ಚಿ ದೇವರಲ್ಲಿ ಪ್ರಾರ್ಥನೆ ಮಾಡಿಕೊಳ್ಳಿ




ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.

ಜಪಿಸಲು :
ಸರ್ವದೇವಮಯೇ ದೇವಿ 

ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್

ಸಫಲಂ ಕುರು ನಂದಿನಿ ||

°~•~°~•~°~•~°~•~°~•~°



ಮಿಥುನ


    ವ್ಯವಹಾರ ಕ್ಷೇತ್ರದಲ್ಲಿ ಅಡೆತಡೆಗಳು ಕಷ್ಟನಷ್ಟಗಳು ಎದುರಾಗುತ್ತದೆ.  ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಇತರರಿಂದ ಮೋಸಹೋಗುವ ಸಾಧ್ಯತೆಗಳಿರುವುದರಿಂದ ಜಾಗರೂಕತೆಯಿಂದ ಇರಬೇಕು. ಗ್ರಹಣ ಸಂಬಂಧಿ ದೋಷವಿರುವುದರಿಂದ ಗ್ರಹಣದ ಸಂದರ್ಭದಲ್ಲಿ ತುಪ್ಪದ ದೀಪವನ್ನು ಹಚ್ಚಿ ದೇವರಲ್ಲಿ ಪ್ರಾರ್ಥನೆ ಮಾಡಿಕೊಳ್ಳಿ



ಪರಿಹಾರ 
ನರಸಿಂಹನ ಆರಾಧನೆಯನ್ನು ಮಾಡಿ.

ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್ 

ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಮಹಾವೀರಮ್ 

ನಮಾಮಿ ಋಣಮುಕ್ತಯೇ ||

   °~•~°~•~°~•~°~•~°~•~°



ಕರ್ಕಾಟಕ

    ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ.  ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||

  °~•~°~•~°~•~°~•~°~•~°



ಸಿಂಹ

  ತೊಡಗಿಸಿಕೊಂಡ ಕೆಲಸ ಕಾರ್ಯದಲ್ಲಿ ನಿಧಾನಗತಿ ಅಭಿವೃದ್ಧಿ ದೊರೆಯಲಿದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳು ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||

    °~•~°~•~°~•~°~•~°~•~°     

 


ಕನ್ಯಾ


      ವಾಹನ ಪ್ರಯಾಣದ ಸಂದರ್ಭಗಳಲ್ಲಿ ಅಪಘಾತಗಳು ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯ ಸಂಬಂಧವಾದ ತೊಂದರೆಗಳು ಎದುರಾಗುತ್ತದೆ. ತಾಯಿಯ ಆರೋಗ್ಯ ಹದಗೆಡುವ ಲಕ್ಷಣಗಳು ಇರುವುದರಿಂದ ಜಾಗರೂಕರಾಗಿರಬೇಕು. ಗ್ರಹಣ ಸಂಬಂಧ  ದೋಷ ಇರುವುದರಿಂದ ದಾನಾದಿಗಳನ್ನು ಮಾಡಿ



ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ

ಜಪಿಸಲು :
ವಸುದೇವಸುತಂ  ದೇವಮ್  

ಕಂಸಚಾಣೂರಮರ್ದನಮ್  |
ದೇವಕೀಪರಮಾನಂದಮ್ 

ಕೃಷ್ಣಂ ವಂದೇ  ಜಗದ್ಗುರುಮ್ ||

  °~•~°~•~°~•~°~•~°~•~°      

 


ತುಲಾ


        ಸಹೋದರರೊಂದಿಗೆ ಜಗಳ ಸಂಭ್ರಮಿಸುವ ಲಕ್ಷಣಗಳಿರುವ ದರಿಂದ ಜಾಗರೂಕತೆಯಿಂದ ಇರಬೇಕು. ಮಿತ್ರತ್ವವನ್ನು ಕಳೆದುಕೊಳ್ಳಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿ ಅಭಿವೃದ್ಧಿ  ದೊರೆಯಲಿದೆ ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಗ್ರಹಣ ಸಂಬಂಧಿ ದೋಷ ಗಳಿರುವುದರಿಂದ ಗ್ರಹಣಕಾಲದಲ್ಲಿ ತುಪ್ಪದ ದೀಪವನ್ನು ಹಚ್ಚಿ ಭಗವಂತನ ಧ್ಯಾನವನ್ನು ಮಾಡಿ


ಪರಿಹಾರ 
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಸರ್ವರೂಪಮಯೀ ದೇವೀ 

ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್ 

ನಮಾಮಿ ಪರಮೇಶ್ವರೀಮ್ ||


  °~•~°~•~°~•~°~•~°~•~°

 


ವೃಶ್ಚಿಕ


 
ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಎದುರಾಗುತ್ತದೆ. ಕುಟುಂಬದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಮಾತಿನ ಮೂಲಕವಾಗಿ ಜಗಳಗಳು ಸಂಭವಿಸುತ್ತದೆ. ಆರೋಗ್ಯ ಸಂಬಂಧಿ ತೊಂದರೆಗಳು ಎದುರಾಗುತ್ತದೆ. ಗ್ರಹಣ ಸಂಬಂಧ  ದೋಷ ಇರುವುದರಿಂದ ತುಪ್ಪದ ದೀಪವನ್ನು ಹಚ್ಚಿ ಭಗವಂತನ ಪ್ರಾರ್ಥನೆಯನ್ನು ಮಾಡಬೇಕು

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

 


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್ 

ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ 

ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°

 


ಧನು


   
ಆರೋಗ್ಯ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ತೊಂದರೆ ಕಂಡುಬರುವುದು. ಮಾನಸಿಕ ನೆಮ್ಮದಿ ಕಳೆದುಕೊಳ್ಳಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕರಾಗಿರಬೇಕು. ಗ್ರಹಣ ಸಂಬಂಧಿ ದೋಷ ಗಳಿರುವುದರಿಂದ  ಅಕ್ಕಿ ಮತ್ತು ಹುರುಳಿಯನ್ನು ದಾನ ಮಾಡಿ
ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು ಪಡೆಯಿರಿ.

ಜಪಿಸಲು :
ಅಖಂಡಮಂಡಲಾಕಾರಮ್ 

ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ 

ತಸ್ಮೈ ಶ್ರೀಗುರವೇ ನಮಃ ||

      °~•~°~•~°~•~°~•~°~•~°

 


ಮಕರ


    ಹಣಕಾಸಿನ ವಿಚಾರದಲ್ಲಿ ಉತ್ತಮ ತೊಂದರೆ ಕಂಡು ಬರುತ್ತದೆ. ಮಾನಸಿಕ ನೆಮ್ಮದಿಯನ್ನು ಕಳೆದುಕೊಳ್ಳಬೇಕಾಗುತ್ತದೆ. ನಿದ್ರಾಹೀನತೆಯನ್ನು ಎದುರಿಸಬೇಕಾಗುತ್ತದೆ. ಕುಟುಂಬದಲ್ಲಿ ಕಲಹ ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ದಾಂಪತ್ಯ ಜೀವನದಲ್ಲಿ ಕಲಹಗಳು ಎದುರಾಗುತ್ತದೆ. ಗ್ರಹಣ ಸಂಬಂಧಿ ದೋಷ ಗಳಿರುವುದರಿಂದ ಅಕ್ಕಿ ಹಾಗೂ ಹುರುಳಿ ದಾನ ಮಾಡಿ



ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ. 

ಜಪಿಸಲು :
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||

    °~•~°~•~°~•~°~•~°~•~°         

 


ಕುಂಭ  

 
      ಜೀವನದಲ್ಲಿ ಸುಖ ನೆಲೆಗೊಂಡರು ಕೂಡ ಮಾನಸಿಕ ನೆಮ್ಮದಿ ಕಳೆದುಕೊಳ್ಳಬೇಕಾಗುತ್ತದೆ. ಆರೋಗ್ಯ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ  ಕಲಹ ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು ಗ್ರಹಣ ಸಂಬಂಧಿ ದೋಷಗಳ ನಿವಾರಣೆ ಗೋಸ್ಕರವಾಗಿ ತುಪ್ಪದ ದೀಪವನ್ನು ಹಚ್ಚಿ ಭಗವಂತನ ಸ್ಮರಣೆ ಮಾಡಿ



ಪರಿಹಾರ 
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


  ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.  ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆದಲ್ಲಿ ಉತ್ತಮ ಅಭಿವೃದ್ಧಿ ದೊರೆಯುವುದು


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.

 


ಜಪಿಸಲು :   
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

°~•~°~•~°~•~°~•~°~•~°

 

{ವಿ. ಸೂ. : 

ಗ್ರಹಣ ಸಂಬಂಧಿ ದೋಷಗಳ ನಿವಾರಣೆ ಗೋಸ್ಕರವಾಗಿ ಗ್ರಹಣಕಾಲದಲ್ಲಿ ಶುಚಿಯಾಗಿ ತುಪ್ಪದ ದೀಪವನ್ನು ಹಚ್ಚಿ ಭಗವಂತನ ಧ್ಯಾನ, ಜಪ , ಗ್ರಹಣ ಶಾಂತಿ, ದಾನಮಾಡಬೇಕು.

ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *