29.07.2019

ದಿನ ಭವಿಷ್ಯ

          

ವಿಕಾರಿನಾಮ ಸಂವತ್ಸರ / ದಕ್ಷಿಣಾಯನ /
ಗ್ರೀಷ್ಮ ಋತು / ಆಷಾಢ ಮಾಸ/
ಕೃಷ್ಣಪಕ್ಷ/ ದ್ವಾದಶಿ ತಿಥಿ/

ಸೋಮವಾರ/ಮೃಗಶಿರಾ ನಕ್ಷತ್ರ /

ದಿನಾಂಕ 29.07.2019

  °~•~°~•~°~•~°~•~°~•~°

 

ಮೇಷ

ಸಹೋದರರಿಂದ ಉತ್ತಮ ಸಹಾಯ ಒದಗಿಬರುತ್ತದೆ. ಜೀವನದಲ್ಲಿ ಸುಖ-ಶಾಂತಿ  ನೆಲೆಗೊಳ್ಳುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು



ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.

ಜಪಿಸಲು :
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ 

ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ 

ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥

°~•~°~•~°~•~°~•~°~•~°

   

ವೃಷಭ

ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಬರುವ  ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಖರ್ಚುವೆಚ್ಚವನ್ನು ನಿಭಾಯಿಸಿ.  ಮಾತಿನ ಮೂಲಕ ಜಗಳವಿಲ್ಲ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು




ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.

ಜಪಿಸಲು :
ಸರ್ವದೇವಮಯೇ ದೇವಿ 

ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್

ಸಫಲಂ ಕುರು ನಂದಿನಿ ||

°~•~°~•~°~•~°~•~°~•~°



ಮಿಥುನ


      ದಾಂಪತ್ಯ ಜೀವನದಲ್ಲಿ ಕಲಹ ಸಂಭ್ರಮಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಿ.   ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ಕಂಡು ಬರಲಿದೆ

ಪರಿಹಾರ 
ನರಸಿಂಹನ ಆರಾಧನೆಯನ್ನು ಮಾಡಿ.

ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್ 

ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಮಹಾವೀರಮ್ 

ನಮಾಮಿ ಋಣಮುಕ್ತಯೇ ||

   °~•~°~•~°~•~°~•~°~•~°



ಕರ್ಕಾಟಕ

 ಒಡವೆ ವಸ್ತ್ರಗಳ  ಖರೀದಿಗೆ ಉತ್ತಮ ಅವಕಾಶ ದೊರೆಯಲಿದೆ. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ ಹಾಗೂ ಯುವಕ-ಯುವತಿಯರಿಗೆ ವಿವಾಹಯೋಗ ಭಾಗ್ಯ  ಬರುತ್ತದೆ

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||

  °~•~°~•~°~•~°~•~°~•~°



ಸಿಂಹ

  ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು.  ಮಾತಿನ ಮೂಲಕ ಜಗಳಗಳು ಸಂಭವಿಸುತ್ತದೆ


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||

    °~•~°~•~°~•~°~•~°~•~°     

 


ಕನ್ಯಾ


      ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಅಡೆತಡೆಗಳು ಕಷ್ಟನಷ್ಟಗಳನ್ನು ಎದುರಿಸಬೇಕಾಗುತ್ತದೆ. ನಿಮ್ಮನ್ನು ಮೋಸ ಮಾಡುವ ಸಾಧ್ಯತೆ ಇರುವುದರಿಂದ ಜಾಗರೂಕತೆಯಿಂದ ಇರಿ



ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ

ಜಪಿಸಲು :
ವಸುದೇವಸುತಂ  ದೇವಮ್  

ಕಂಸಚಾಣೂರಮರ್ದನಮ್  |
ದೇವಕೀಪರಮಾನಂದಮ್ 

ಕೃಷ್ಣಂ ವಂದೇ  ಜಗದ್ಗುರುಮ್ ||

  °~•~°~•~°~•~°~•~°~•~°      

 


ತುಲಾ


        ಉದ್ಯೋಗ ಕ್ಷೇತ್ರದಲ್ಲಿ ಅಡೆತಡೆಗಳು ಎದುರಾಗುತ್ತದೆ. ದಾಂಪತ್ಯ ಜೀವನದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡುಬರುವುದು. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಏಳಿಗೆ ಕಂಡು ಬರುತ್ತದೆ


ಪರಿಹಾರ 
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಸರ್ವರೂಪಮಯೀ ದೇವೀ 

ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್ 

ನಮಾಮಿ ಪರಮೇಶ್ವರೀಮ್ ||


  °~•~°~•~°~•~°~•~°~•~°

 


ವೃಶ್ಚಿಕ


 
ನೂತನ ಉದ್ಯೋಗಆಕಾಂಕ್ಷಿಗಳಿಗೆ ಉತ್ತಮ ಅವಕಾಶ ದೊರೆಯಲಿದೆ. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ ಹಾಗೂ ಯುವಕ-ಯುವತಿಯರಿಗೆ ವಿವಾಹಯೋಗ ಭಾಗ್ಯ ಬರಲಿದೆ

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

 


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್ 

ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ 

ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°

 


ಧನು


   
  ಉದಾಸೀನತೆ ಬಿಟ್ಟು ಉತ್ತಮ ಪರಿಶ್ರಮದಿಂದ ಕೆಲಸ ಕಾರ್ಯವನ್ನು ತೊಡಗಿಸಿಕೊಂಡಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು


ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು ಪಡೆಯಿರಿ.

ಜಪಿಸಲು :
ಅಖಂಡಮಂಡಲಾಕಾರಮ್ 

ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ 

ತಸ್ಮೈ ಶ್ರೀಗುರವೇ ನಮಃ ||

      °~•~°~•~°~•~°~•~°~•~°

 


ಮಕರ


    ಮಾಡದಂತಹ ಕೆಲಸಕಾರ್ಯಗಳಲ್ಲಿ ಉತ್ತಮ ಪರಿಶ್ರಮದಿಂದ ಮುನ್ನಡೆಯಿರಿ. ಆರೋಗ್ಯ ಸಂಬಂಧವಾದ ಸಮಸ್ಯೆಗಳನ್ನು ಎದುರಿಸಬೇಕಾಗುವ ದರಿಂದ ಜಾಗರೂಕತೆಯಿಂದ ಇರಬೇಕು

ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ. 

ಜಪಿಸಲು :
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||

    °~•~°~•~°~•~°~•~°~•~°         

 


ಕುಂಭ  

 
      ಶೀತ ಜ್ವರ ತಲೆನೋವು, ರಕ್ತ ಸಂಬಂಧಿ ತೊಂದರೆಗಳು, ಮೂತ್ರ ಸಂಬಂಧಿ ತೊಂದರೆಗಳು, ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.  ಜಾಗರೂಕತೆಯಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.
  ಕುಲದೇವತಾ ದರ್ಶನವನ್ನು ಮಾಡಿ

ಪರಿಹಾರ 
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


    ಉದಾಸೀನತೆಯನ್ನು ಬಿಟ್ಟು ಉತ್ತಮ ಪರಿಶ್ರಮದಿಂದ ಕೆಲಸ ಕಾರ್ಯವನ್ನು ತೊಡಗಿಸಿಕೊಳ್ಳಬೇಕು. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ. ವಿದ್ಯಾರ್ಥಿಗಳಿಗೆ ಅಭಿವೃದ್ಧಿ  ಕಂಡುಬರುವುದು


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.

 


ಜಪಿಸಲು :   
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

°~•~°~•~°~•~°~•~°~•~°

 

{ವಿ. ಸೂ. : 

ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *