ಮಾತಿನ ಮೂಲಕ ಜಗಳಗಳು ಸಂಭವಿಸುತ್ತದೆ !

ದಿನ ಭವಿಷ್ಯ

          

ವಿಕಾರಿನಾಮ ಸಂವತ್ಸರ / ದಕ್ಷಿಣಾಯನ /
ವರ್ಷ ಋತು / ಭಾದ್ರಪದ ಮಾಸ/
ಶುಕ್ಲಪಕ್ಷ/ದಶಮಿ ತಿಥಿ/

ರವಿವಾರ/ಮೂಲ ನಕ್ಷತ್ರ /

ದಿನಾಂಕ 08.09.2019

  °~•~°~•~°~•~°~•~°~•~°

 

ಮೇಷ

ಹಣಕಾಸಿನ ವಿಚಾರದಲ್ಲಿ ಉತ್ತಮ ಲಾಭ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ.   ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು



ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.

ಜಪಿಸಲು :
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ 

ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ 

ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥

°~•~°~•~°~•~°~•~°~•~°

   

ವೃಷಭ

ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುವುದು ರಿಂದ ಜಾಗರೂಕತೆಯಿಂದ ಇರಬೇಕು. ಮಾನಸಿಕ ನೆಮ್ಮದಿ ಶಾಂತಿ ಕಳೆದುಕೊಳ್ಳಬೇಕಾಗುತ್ತದೆ
ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.

ಜಪಿಸಲು :
ಸರ್ವದೇವಮಯೇ ದೇವಿ 

ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್

ಸಫಲಂ ಕುರು ನಂದಿನಿ ||

°~•~°~•~°~•~°~•~°~•~°



ಮಿಥುನ


      ಮಾಡುವಂತಹ ಕೆಲಸ  ಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ದೊರೆಯಲಿದೆ ಯುವಕ-ಯುವತಿಯರಿಗೆ ವಿವಾಹಯೋಗ ಭಾಗ್ಯ ಒದಗಿ ಬರುತ್ತದೆ

ಪರಿಹಾರ 
ನರಸಿಂಹನ ಆರಾಧನೆಯನ್ನು ಮಾಡಿ.

ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್ 

ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಮಹಾವೀರಮ್ 

ನಮಾಮಿ ಋಣಮುಕ್ತಯೇ ||

   °~•~°~•~°~•~°~•~°~•~°



ಕರ್ಕಾಟಕ

 ಕುಟುಂಬದಲ್ಲಿ ತೊಂದರೆಗಳು ಎದುರಾಗುತ್ತದೆ. ಜಾಗರೂಕತೆಯಿಂದ ತಮ್ಮ ಕರ್ತವ್ಯವನ್ನು ನಿಭಾಯಿಸಿ. ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು.

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||

  °~•~°~•~°~•~°~•~°~•~°



ಸಿಂಹ

ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬಂದರೂ ಕೂಡ  ಖರ್ಚುವೆಚ್ಚಗಳು ಒದಗಿಬರುತ್ತದೆ, ದುಂದುವೆಚ್ಚವನ್ನು ಮಾಡಬೇಡಿ.  ಮಾತಿನಮೂಲಕ ಜಗಳಗಳು ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು
ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||

    °~•~°~•~°~•~°~•~°~•~°     

 


ಕನ್ಯಾ


      ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬಂದರೂ ಕೂಡ  ಹಿರಿಯ ಅಧಿಕಾರಿಗಳಿಂದ ಅಸಮಾಧಾನದ ಮಾತುಗಳು ಕೇಳಿ ಬರುತ್ತದೆ. ವಿದ್ಯಾರ್ಥಿಗಳು ಜಾಗರೂಕತೆಯಿಂದ ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು



ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ

ಜಪಿಸಲು :
ವಸುದೇವಸುತಂ  ದೇವಮ್  

ಕಂಸಚಾಣೂರಮರ್ದನಮ್  |
ದೇವಕೀಪರಮಾನಂದಮ್ 

ಕೃಷ್ಣಂ ವಂದೇ  ಜಗದ್ಗುರುಮ್ ||

  °~•~°~•~°~•~°~•~°~•~°      

 


ತುಲಾ


        ಉದ್ಯೋಗ ಕ್ಷೇತ್ರದಲ್ಲಿ ಅಡೆತಡೆಗಳು ಕಷ್ಟನಷ್ಟಗಳು ಎದುರಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳು ಎದುರಾಗುವುದರಿಂದ ಜಾಗರೂಕತೆಯಿಂದ ಇರಬೇಕು


ಪರಿಹಾರ 
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಸರ್ವರೂಪಮಯೀ ದೇವೀ 

ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್ 

ನಮಾಮಿ ಪರಮೇಶ್ವರೀಮ್ ||


  °~•~°~•~°~•~°~•~°~•~°

 


ವೃಶ್ಚಿಕ


 
ಮಾತಿನ ಮೂಲಕ ಜಗಳಗಳು ಸಂಭವಿಸುತ್ತದೆ. ಕುಟುಂಬದಲ್ಲಿ ಕಲಹ ಏರ್ಪಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವ್ಯವಹಾರ ಕ್ಷೇತ್ರದಲ್ಲಿ ಅಡ್ಡಿ-ಆತಂಕಗಳು ಒದಗಿಬರುತ್ತದೆ ಒದಗಿಬರುತ್ತದೆ

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

 


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್ 

ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ 

ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°

 


ಧನು


   
  ವ್ಯವಹಾರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬಂದರೂ ಕೂಡ ಮಾನಸಿಕ ನೆಮ್ಮದಿಯನ್ನು ಕಳೆದುಕೊಳ್ಳಬೇಕಾಗುತ್ತದೆ.  ಆಹಾರದಲ್ಲಿ ವ್ಯತ್ಯಾಸಗಳು ಸಂಭವಿಸುವ ಲಕ್ಷಣಗಳಿರುವ ಇದರಿಂದ ಆಹಾರದಲ್ಲಿ ನಿಗಾ ಇರಲಿ


ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು ಪಡೆಯಿರಿ.

ಜಪಿಸಲು :
ಅಖಂಡಮಂಡಲಾಕಾರಮ್ 

ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ 

ತಸ್ಮೈ ಶ್ರೀಗುರವೇ ನಮಃ ||

      °~•~°~•~°~•~°~•~°~•~°

 


ಮಕರ


     
ದಾಂಪತ್ಯ ಜೀವನದಲ್ಲಿ ಕಲಹಗಳು ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು, ಅನುಮಾನಗಳಿಗೆ ಎಡೆಮಾಡಿ ಕೊಡಬೇಡಿ.  ಇನ್ನೊಬ್ಬರ ಮಾತನ್ನು ಕೇಳಿ ಜಗಳವನ್ನು ಕಾಯಬೇಡಿ

ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ. 

ಜಪಿಸಲು :
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||

    °~•~°~•~°~•~°~•~°~•~°         

 


ಕುಂಭ  

 
      ಆರೋಗ್ಯದಲ್ಲಿ ಉತ್ತಮ ಚೇತರಿಕೆ ಕಂಡು ಬರುತ್ತದೆ.  ದಾಂಪತ್ಯಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು.

ಪರಿಹಾರ 
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


    ಕಾರ್ಯಗಳನ್ನು ಉತ್ತಮ ಪರಿಶ್ರಮದಿಂದ ಅಚ್ಚುಕಟ್ಟಾಗಿ ನಿರ್ವಹಿಸಿ. ಇನ್ನೊಬ್ಬರ ಮಾತಿಗೆ ಅಡಿಯಾಗಿ ನಿಮ್ಮ ನಿರ್ಧಾರವನ್ನು ಬದಲಿಸಬೇಡಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ  ಕಳೆದುಕೊಳ್ಳಬೇಕಾಗುತ್ತದೆ


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.

 


ಜಪಿಸಲು :   
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

°~•~°~•~°~•~°~•~°~•~°

 

{ವಿ. ಸೂ. : 

ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *