ವಿಕಾರಿನಾಮ ಸಂವತ್ಸರ / ದಕ್ಷಿಣಾಯನ /
ಶರದೃತು / ಆಶ್ವಯುಜ ಮಾಸ/
ಶುಕ್ಲಪಕ್ಷ/ದ್ವಿತೀಯ ತಿಥಿ/
ಸೋಮವಾರ/ಚಿತ್ರ ನಕ್ಷತ್ರ /
ದಿನಾಂಕ 30.09.2019
°•°•°•°•°•°
ಮೇಷ
ಯುವಕ-ಯುವತಿಯರಿಗೆ ವಿವಾಹಯೋಗ ಭಾಗ್ಯ ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯದಲ್ಲಿ ಉತ್ತಮ ಚೇತರಿಕೆ ಕಂಡುಬರುವುದು. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ದೊರೆಯಲಿದೆ
ಪರಿಹಾರ:
ದೇವಿಯ ಆರಾಧನೆಯಿಂದ ಶುಭ.
ಜಪಿಸಲು :
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋsಸ್ತು ತೇ ||
°•°•°•°•°•°
ವೃಷಭ
ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುವುದು ರಿಂದ ಜಾಗರೂಕತೆಯಿಂದ ಇರಬೇಕು ಜಾಗರೂಕತೆಯಿಂದ ಇರಬೇಕು. ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಎದುರಾಗುತ್ತದೆ ಖರ್ಚುವೆಚ್ಚಗಳು ಒದಗಿ ಬರುವುದರಿಂದ ಜಾಗರೂಕತೆಯಿಂದ ಇರಬೇಕು
ಪರಿಹಾರ
ದೇವಿಯ ಆರಾಧನೆಯಿಂದ ಶುಭ.
ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||
°•°•°•°•°•°
ಮಿಥುನ
ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಕುಟುಂಬದಲ್ಲಿ ಉತ್ತಮ ಮನಶ್ಯಾಂತಿ ನೆಲೆಗೊಳ್ಳುವುದು. ಕುಲದೇವತಾ ದರ್ಶನದಿಂದ ಉತ್ತಮ ಯೋಗ ಭಾಗ್ಯಗಳು ದೊರೆಯಲಿದೆ
ಪರಿಹಾರ
ಶ್ರೀಕೃಷ್ಣನ ಆರಾಧನೆ,ಗುರುದೇವತಾ ಆರಾಧನೆಯಿಂದ ಶುಭ.
ಜಪಿಸಲು :
ವಸುದೇವಸುತಂ ದೇವಮ್
ಕಂಸಚಾಣೂರಮರ್ದನಮ್ |
ದೇವಕೀಪರಮಾನನ್ದಮ್
ಕೃಷ್ಣಂ ವನ್ದೇ ಜಗದ್ಗುರುಮ್ ||
°•°•°•°•°•°
ಕರ್ಕಾಟಕ
ಮನೆಯಲ್ಲಿ ಉತ್ತಮ ಮನಶಾಂತಿ ನೆಲೆಗೊಳ್ಳುತ್ತದೆ ಆರೋಗ್ಯದಲ್ಲಿ ನಿಧಾನಗತಿಯ ಚೇತರಿಕೆ ಕಂಡುಬರುವುದು ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ದೊರೆಯಲಿದೆ
ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.
ಜಪಿಸಲು :
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ
ದುರ್ಗೇದೇವಿ ನಮೋsಸ್ತು ತೇ ||
°•°•°•°•°•°
ಸಿಂಹ
ಆಹಾರದಿಂದಾಗಿ ಆರೋಗ್ಯ ಹದಗೆಡುವ ಲಕ್ಷಣಗಳು ಇರುವುದರಿಂದ ಜಾಗರೂಕರಾಗಿರಬೇಕು ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ವಿದ್ಯಾರ್ಥಿಗಳಿಗೆ ನಿಧಾನಗತಿಯ ಅಭಿವೃದ್ಧಿ ದೊರೆಯಲಿದೆ
ಪರಿಹಾರ
ಶಿವನ ಆರಾಧನೆ ಅಗತ್ಯ.
ಜಪಿಸಲು :
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ / ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||
°•°•°•°•°•°
ಕನ್ಯಾ
ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುತ್ತದೆ ಕುಟುಂಬಸ್ಥರ ಆಗಮನದಿಂದಾಗಿ ಸಂತೋಷ ದೊರೆಯಲಿದೆ ಮನೆಯಲ್ಲಿ ಉತ್ತಮ ಮನಃಶಾಂತಿ ದೊರೆಯುತ್ತದೆ
ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ ಶುಭ.
ಜಪಿಸಲು :
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ |
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||
°•°•°•°•°•°
ತುಲಾ
ನೂತನ ಉದ್ಯೋಗಕಾಂಕ್ಷಿಗಳಿಗೆ ಉತ್ತಮ ಅವಕಾಶ ದೊರೆಯುತ್ತದೆ ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ವಿದ್ಯಾರ್ಥಿಗಳಿಗೆ ನಿಧಾನಗತಿಯ ಅಭಿವೃದ್ಧಿ ಕಂಡುಬರುವುದು
ಪರಿಹಾರ
ದುರ್ಗಾದೇವಿಯ ಆರಾಧನೆಯಂದ ಶುಭ.
ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀ ಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||
°•°•°•°•°•°
ವೃಶ್ಚಿಕ
ನಿದ್ರಾಹೀನತೆ, ಹಣಕಾಸಿನ ವಿಚಾರದಲ್ಲಿ ತೊಂದರೆಗಳು ವಿಚಾರದಲ್ಲಿ ತೊಂದರೆಗಳು, ಮಾನಸಿಕವಾಗಿ ಕುಂದುವಿಕೆಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುವ ದರಿಂದ ಜಾಗರೂಕತೆಯಿಂದ ಇರಬೇಕು
ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.
ಜಪಿಸಲು :
ಷಡಾನನಂ ಕುಂಕುಮರಕ್ತವರ್ಣಮ್
ಮಹಾಮತಿಂ ದಿವ್ಯಮಯೂರವಾಹಮ್ |
ರುದ್ರಸ್ಯ ಸೂನುಂ ಸುರಸೈನ್ಯನಾಥಮ್
ಗುಹಂ ಸದಾ ಶರಣಮಹಂ ಪ್ರಪದ್ಯೇ ||
°•°•°•°•°•°
ಧನು
ಉದ್ಯೋಗ ಕ್ಷೇತ್ರದಲ್ಲಿ ಅಡೆತಡೆಗಳು ಕಷ್ಟನಷ್ಟಗಳು ಎದುರಾದರೂ ಕೂಡ ಹಣಕಾಸಿನ ವಿಚಾರದಲ್ಲಿ ನಿಧಾನಗತಿ ಅಭಿವೃದ್ಧಿ ದೊರೆಯಲಿದೆ. ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ
ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.
ಜಪಿಸಲು:
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ / ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ
°•°•°•°•°•°
ಮಕರ
ಮಾತಿನ ಮೂಲಕ ಜಗಳಗಳು ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳು ಎದುರಾಗುತ್ತದೆ
ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.
ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ / ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||
°•°•°•°•°•°
ಕುಂಭ
ತಂದೆಯ ಆರೋಗ್ಯ ಹದಗೆಡುವ ಲಕ್ಷಣ ಗಳಿರುವುದರಿಂದ ಜಾಗರೂಕರಾಗಿರಬೇಕು ವಿದ್ಯಾರ್ಥಿಗಳು ವಿದ್ಯಾಕ್ಷೇತ್ರದಲ್ಲಿ ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆ ಗೊಳ್ಳಲಿದೆ
ಪರಿಹಾರ
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.
ಜಪಿಸಲು:
ರುದ್ರಂ ಪಶುಪತಿಂ ಸ್ಥಾಣುಮ್
ನೀಲಕಂಠಂ ಉಮಾಪತಿಮ್ |
ನಮಾಮಿ ಶಿರಸಾ ದೇವಮ್
ಕಿಂ ನೋ ಮೃತ್ಯುಃ ಕರಿಷ್ಯತಿ ||
°•°•°•°•°•°
ಮೀನ
ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ದೊರೆಯಲಿದೆ ವ್ಯವಹಾರಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು ಮಾನಸಿಕ ನೆಮ್ಮದಿಯನ್ನು ಕಳೆದುಕೊಳ್ಳಬೇಕಾಗುತ್ತದೆ
ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.
ಜಪಿಸಲು :
ಶಾಂತಾಕಾರಂ ಭುಜಗಶಯನಮ್
ಪದ್ಮನಾಭಂ ಸುರೇಶಮ್
ವಿಶ್ವಾಧಾರಂ ಗಗನಸದೃಶಮ್
ಮೇಘವರ್ಣಂ ಶುಭಾಂಗಮ್ |
ಲಕ್ಷ್ಮೀಕಾಂತಂ ಕಮಲನಯನಮ್
ಯೋಗಿಹೃದ್ಧ್ಯಾನಗಮ್ಯಮ್
ವಂದೇ ವಿಷ್ಣುಂ ಭವಭಯಹರಮ್
ಸರ್ವಲೋಕೈಕನಾಥಮ್ ||
°•°•°•°•°•°
{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.