13.02.2019

ದಿನ ಭವಿಷ್ಯ

         

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಮಾಘ ಮಾಸ /
ಶುಕ್ಲ ಪಕ್ಷ / ಅಷ್ಟಮೀ ತಿಥಿ/

                 ಬುಧವಾರ / ಕೃತ್ತಿಕಾ ನಕ್ಷತ್ರ /

                         ದಿನಾಂಕ13.02.2019

                        °~•~°~•~°~•~°~•~°~•~°

ಮೇಷ

 ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಬೆಳವಣಿಗೆ ಕಂಡುಬರುತ್ತದೆ. ಉತ್ತಮ ಹಣ ಸಂಪಾದನೆಯಾಗುತ್ತದೆ. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಆರೋಗ್ಯದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಏಳಿಗೆ ಕಂಡುಬರುತ್ತಿದ್ದು ಉತ್ತಮ ಪರಿಶ್ರಮದಿಂದ ಮುಂದುವರೆಯಿರಿ.



ಪರಿಹಾರ:
ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋಸ್ತುತೇ ||

°~•~°~•~°~•~°~•~°~•~°

    

ವೃಷಭ

         ಮಾಡುತ್ತಿರುವ ಕೆಲಸ ಕಾರ್ಯದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುತ್ತದೆ. ನೂತನ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ ಒದಗಿಬರುತ್ತದೆ. ಬಂಡವಾಳ ಹೂಡಲು ಉತ್ತಮ ಸಮಯ. ದಾಂಪತ್ಯಜೀವನದಲ್ಲಿ ಶಾಂತಿ ನೆಲೆಸುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿದಲ್ಲಿ ಉತ್ತಮ ಫಲ ಲಭ್ಯವಾಗಲಿದೆ.




ಪರಿಹಾರ
ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮ: / ಶ್ರೀಶಾಂತ್ಯೈ ನಮ: / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮ: / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮ: / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮ: / ಶ್ರೀಮಹಾಮಾಯಾಯೈ ನಮ: / ಶ್ರೀಯೋಗನಿದ್ರಾಯೈ ನಮ: / ಶ್ರೀಚಂಡಿಕಾಯೈ ನಮ:

°~•~°~•~°~•~°~•~°~•~°



ಮಿಥುನ


   ವ್ಯಾವಹಾರಿಕ ಕ್ಷೇತ್ರದಲ್ಲಿ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಅನ್ಯ ಕಾರಣಗಳಿಂದ ಖರ್ಚುವೆಚ್ಚ ಜಾಸ್ತಿ ಒದಗಿಬರುವ ಸಾಧ್ಯತೆಗಳಿರುವುದರಿಂದ ಜಾಗರೂಕತೆಯಿಂದ ಹಣವನ್ನು ವಿನಿಯೋಗಿಸಿ. ದಾಂಪತ್ಯಜೀವನದಲ್ಲಿ ಕಲಹ ಏರ್ಪಡುವ ಸಂಭವವಿದೆ. ವಿದ್ಯಾರ್ಥಿಗಳು ತಮ್ಮ ಉದಾಸೀನತೆ ಬಿಟ್ಟು ಮುಂದುವರಿಯಬೇಕು.



ಪರಿಹಾರ  
ಶ್ರೀಕೃಷ್ಣನ ಆರಾಧನೆಯಿಂದ ಶುಭ.

ಜಪಿಸಲು:
ವಸುದೇವಸುತಂ ದೇವಂ

ಕಂಸಚಾಣೂರಮರ್ದನಮ್|

ದೇವಕೀಪರಮಾನನ್ದಂ

ಕೃಷ್ಣಂ ವನ್ದೇ ಜಗದ್ಗುರುಮ್ ||

  °~•~°~•~°~•~°~•~°~•~°



ಕರ್ಕಾಟಕ

    ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ನಿಧಾನಗತಿಯ ಬೆಳವಣಿಗೆಗಳು ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯಜೀವನದಲ್ಲಿ ಕಲಹ ಸಂಭವಿಸುವ ಸಾಧ್ಯತೆಗಳಿರುವುದರಿಂದ ಜಾಗರೂಕರಾಗಿರಬೇಕು. ಮೈ  ಕೈ ಗಂಟು ನೋವು, ತಲೆನೋವು, ಶೀತ, ಜ್ವರ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಪರಿಶ್ರಮದಿಂದ ಮುಂದುವರೆದಲ್ಲಿ ಮಾತ್ರ ಉತ್ತಮ ಏಳಿಗೆ ಲಭ್ಯವಾಗಲಿದೆ.



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ  
ದುರ್ಗೇದೇವಿ ನಮೋಸ್ತುತೇ ||

 °~•~°~•~°~•~°~•~°~•~°



ಸಿಂಹ

      ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ನಿಧಾನಗತಿಯ ಬೆಳವಣಿಗೆ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡುಬರಲಿದ್ದು, ಉತ್ತಮ ಕಾರ್ಯಕ್ಕಾಗಿ ಹಣವನ್ನು ವಿನಿಯೋಗಿಸಿ. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಸಲಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ಕಂಡುಬರುತ್ತದೆ.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ

    °~•~°~•~°~•~°~•~°~•~°      


ಕನ್ಯಾ


    ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ನಿಧಾನಗತಿಯ ಬೆಳವಣಿಗೆ ಕಂಡುಬರುತ್ತದೆ. ಸಂಪಾದಿಸಿದ ಹಣವನ್ನು ಸದ್ವಿನಿಯೋಗ ಮಾಡಿ. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಚರ್ಮದ ಸಮಸ್ಯೆ, ಅಲರ್ಜಿ, ಮೈ ಕೈ ಗಂಟು ನೋವುಗಳು ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ  ಶುಭ.

ಜಪಿಸಲು:
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ|  
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||

  °~•~°~•~°~•~°~•~°~•~°       


ತುಲಾ


     ವ್ಯವಹಾರ ಕ್ಷೇತ್ರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಏಳಿಗೆ ಕಂಡುಬರುತ್ತದೆ. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಮೈ ಕೈ ನೋವುಗಳು, ಬೆನ್ನು ನೋವು, ಹೊಟ್ಟೆ ಸಂಬಂಧಿಸಿದ ಸಮಸ್ಯೆ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು. ಗುರುಹಿರಿಯರ ಮಾರ್ಗದರ್ಶನದಂತೆ ಮುಂದುವರಿಯಿರಿ.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮ: / ಶ್ರೀಶಾಂತ್ಯೈ ನಮ: / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮ: / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮ: / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮ: / ಶ್ರೀ ಮಹಾಮಾಯಾಯೈ ನಮ: / ಶ್ರೀಯೋಗನಿದ್ರಾಯೈ ನಮ: / ಶ್ರೀಚಂಡಿಕಾಯೈ ನಮ


 °~•~°~•~°~•~°~•~°~•~°


ವೃಶ್ಚಿಕ


  
ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಬೆಳವಣಿಗೆ ಕಂಡುಬರುತ್ತದೆ. ಆರ್ಥಿಕವಾಗಿ ತೊಂದರೆಯನ್ನು ಎದುರಿಸಬೇಕಾಗುತ್ತದೆ. ಬಂಧುಗಳಿಂದ ಸಹಾಯ ಒದಗಿಬರುತ್ತದೆ. ದಾಂಪತ್ಯಜೀವನದಲ್ಲಿ ಶಾಂತಿ ನೆಲೆಸುತ್ತದೆ. ಉತ್ತಮ ಆರೋಗ್ಯ ಪಡೆಯುವಿರಿ. ವಿದ್ಯಾರ್ಥಿಗಳು ತಮ್ಮ ಉದಾಸೀನತೆ ಬಿಟ್ಟು ಮುಂದುವರಿಯಬೇಕು.

ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.


ಜಪಿಸಲು:
ಷಡಾನನಂ ಕುಂಕುಮರಕ್ತವರ್ಣಂ

ಮಹಾಮತಿಂ ದಿವ್ಯಮಯೂರವಾಹಮ್ |

ರುದ್ರಸ್ಯ ಸೂನುಂ ಸುರಸೈನ್ಯನಾಥಂ

ಗುಹಂ ಸದಾ ಶರಣಮಹಂ ಪ್ರಪದ್ಯೇ ||

°~•~°~•~°~•~°~•~°~•~°


ಧನು


ಉದ್ಯೋಗ ಕ್ಷೇತ್ರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಉದಾಸೀನತೆಯಿಂದಾಗಿ ಅವಕಾಶವನ್ನು ಕಳೆದುಕೊಳ್ಳಬೇಕಾಗುತ್ತದೆ. ಹಣಕಾಸಿನ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯಜೀವನದಲ್ಲಿ ಶಾಂತಿ ನೆಲೆಸುತ್ತದೆ. ಶೀತ, ಜ್ವರ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ   ಉದಾಸೀನತೆ ಬಿಟ್ಟು ಮುಂದುವರಿಯಬೇಕು.


ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಜಪಿಸಲು:
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ

     °~•~°~•~°~•~°~•~°~•~°


ಮಕರ


    ಉದ್ಯೋಗ ಕ್ಷೇತ್ರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಆರ್ಥಿಕವಾದ ಮುನ್ನಡೆ ಕಂಡುಬರುತ್ತದೆ. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಮ್ಮದಿ ಕಂಡುಬರುತ್ತದೆ. ಉತ್ತಮ ಆರೋಗ್ಯ ಪಡೆಯುವಿರಿ. ವಿದ್ಯಾರ್ಥಿಗಳು ಉತ್ತಮ ಏಳಿಗೆ ಪಡೆಯುವಿರಿ.



ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.  

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ

   °~•~°~•~°~•~°~•~°~•~°          


ಕುಂಭ  


      ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಏಳಿಗೆ ಕಂಡುಬರಲಿದ್ದು, ಹಿರಿಯ ಅಧಿಕಾರಿಗಳಿಂದ ಪ್ರಶಂಸನಾ ಮಾತುಗಳು ಕೇಳಿಬರುವುದು. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಉತ್ತಮ ಆರೋಗ್ಯವನ್ನು ಹೊಂದುವಿರಿ. ವಿದ್ಯಾರ್ಥಿಗಳು ಪರಿಶ್ರಮದಿಂದ ಉತ್ತಮ ಪದವಿ ಹೊಂದುವಿರಿ.



ಪರಿಹಾರ  
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.

ಜಪಿಸಲು:
ರುದ್ರಂ ಪಶುಪತಿಂ ಸ್ಥಾಣುಂ

ನೀಲಕಂಠಂ ಉಮಾಪತಿಮ್ |

ನಮಾಮಿ ಶಿರಸಾ ದೇವಂ

ಕಿಂ ನೋ ಮೃತ್ಯುಃ ಕರಿಷ್ಯತಿ  ||

°~•~°~•~°~•~°~•~°~•~°


ಮೀನ   


  ವ್ಯವಹಾರಿಕ ಕ್ಷೇತ್ರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಆರೋಗ್ಯದಲ್ಲಿ ಚೇತರಿಕೆ. ಆಹಾರದ ಬಗ್ಗೆ ಗಮನ ಇರಲಿ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ  ಮುಂದುವರಿಯಬೇಕು.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು:    
ಶಾಂತಾಕಾರಂ ಭುಜಗಶಯನಂ

ಪದ್ಮನಾಭಂ ಸುರೇಶಂ  

ವಿಶ್ವಾಧಾರಂ ಗಗನಸದೃಶಂ

ಮೇಘವರ್ಣಂ ಶುಭಾಂಗಮ್ |

ಲಕ್ಷ್ಮೀಕಾಂತಂ ಕಮಲನಯನಂ

ಯೋಗಿಹೃದ್ಧ್ಯಾನಗಮ್ಯಂ

ವಂದೇ ವಿಷ್ಣುಂ ಭವಭಯಹರಂ

ಸರ್ವಲೋಕೈಕನಾಥಮ್  ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *