22.02.2019

ದಿನ ಭವಿಷ್ಯ

         

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಮಾಘ ಮಾಸ /
ಕೃಷ್ಣ ಪಕ್ಷ /ತೃತೀಯ ತಿಥಿ/

ಶುಕ್ರವಾರ/ಹಸ್ತ ನಕ್ಷತ್ರ /

ದಿನಾಂಕ: 22.02.2019

 °~•~°~•~°~•~°~•~°~•~°

ಮೇಷ

        ಮಾಡುತ್ತಿರುವ ಕೆಲಸ ಕಾರ್ಯಗಳಲ್ಲಿ ನಿಧಾನಗತಿಯ ಅಭಿವೃದ್ಧಿಗಳು ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ  ಸಣ್ಣ ಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಮಾತಿನ ಮೂಲಕ ಜಗಳಗಳು ಸಂಭವಿಸುವ ಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ವ್ಯವಹರಿಸಿ. ಶೀತ ಜ್ವರ, ಕಫ, ಕಣ್ಣು ನೋವು  ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯ ಬೇಕು.



ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.

ಜಪಿಸಲು:
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ

ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯ-ಪಾದಾರವಿನ್ದೇ

ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥

°~•~°~•~°~•~°~•~°~•~°

    

ವೃಷಭ

         ಉತ್ತಮ ಶ್ರದ್ಧೆಯಿಂದ ಹಾಗೂ ಏಕಾಗ್ರತೆಯಿಂದ ಕೆಲಸವನ್ನು ಮಾಡಿದಲ್ಲಿ ಮಾತ್ರ ಅಭಿವೃದ್ಧಿ ಕಂಡು ಬರುತ್ತದೆ. ಉದಾಸೀನತೆಯನ್ನು ಬಿಟ್ಟುಬಿಡಿ. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ.  ಮೂತ್ರ ಸಂಬಂಧಿ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಉತ್ತಮವಾಗಿ ನೀರನ್ನು ಕುಡಿಯಿರಿ. ವಿದ್ಯಾರ್ಥಿಗಳು ಪರಿಶ್ರಮದಿಂದ ಮುಂದುವರಿಯಬೇಕು.




ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.

ಜಪಿಸಲು:
ಸರ್ವದೇವಮಯೇ ದೇವಿ

ಸರ್ವದೇವೈ-ರಲಂಕೃತೇ |
ಮಾತರ್ಮಮಾ-ಭಿಲಷಿತಂ

ಸಫಲಂ ಕುರು ನಂದಿನಿ ||

°~•~°~•~°~•~°~•~°~•~°



ಮಿಥುನ


   ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಬರುವಂತಹ ತೊಂದರೆಯಿಂದಾಗಿ ಶಾಂತಿಯನ್ನು ಕಳೆದು ಕೊಳ್ಳಬೇಕಾಗುತ್ತದೆ. ಗಂಡ ಹೆಂಡತಿಯರ ನಡುವೆ ಜಗಳಗಳು ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು ಬರುವ ಲಕ್ಷಣ ಗಳುಗಳು ಇರುವುದರಿಂದ ಆಹಾರದಲ್ಲಿ ನಿಗಾ ಇರಲಿ.  ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು.



ಪರಿಹಾರ  
ನರಸಿಂಹನ ಆರಾಧನೆಯನ್ನು ಮಾಡಿ.

ಜಪಿಸಲು:
ದೇವತಾಕಾರ್ಯ-ಸಿದ್ಧ್ಯರ್ಥಂ

ಸಭಾಸ್ತಂಭ-ಸಮುದ್ಭವಮ್ |
ಶ್ರೀನೃಸಿಂಹ ಮಹಾವೀರಂ

ನಮಾಮಿ ಋಣಮುಕ್ತಯೇ ||

  °~•~°~•~°~•~°~•~°~•~°



ಕರ್ಕಾಟಕ

   ಹಾಟೆಲ್ ವ್ಯವಹಾರ, ಜಲ ಸಂಬಂಧಿ ವ್ಯವಹಾರ ಮಾಡುವವರಿಗೆ ಉತ್ತಮ ಅಭಿವೃದ್ಧಿ ಗಳು ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಏಳಿಗೆ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯಗಳು ಒದಗಿ ಬರುತ್ತದೆ. ಮೈ ಕೈಗೊಂಡು ನೋವು ಬರುವ ಲಕ್ಷಣಗಳು ಇರುವುದರಿಂದ  ಜಾಗರೂಕತೆಯಿಂದ ಇರಬೇಕು ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಏಕಾಗ್ರತೆಯಿಂದ ಮುಂದುವರಿಯಬೇಕು.



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮ: / ಶ್ರೀಶಾಂತ್ಯೈ ನಮ: / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮ: / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮ: / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮ: / ಶ್ರೀಮಹಾಮಾಯಾಯೈ ನಮ: / ಶ್ರೀಯೋಗನಿದ್ರಾಯೈ ನಮ: / ಶ್ರೀಚಂಡಿಕಾಯೈ ನಮ:

 °~•~°~•~°~•~°~•~°~•~°



ಸಿಂಹ

     ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿ ಅಭಿವೃದ್ಧಿಗಳು ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಮೈ ಕೈ ಗಂಟು ನೋವು, ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು ಬರುವ ಲಕ್ಷಣಗಳಿವೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು:
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಂ|
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||

    °~•~°~•~°~•~°~•~°~•~°      


ಕನ್ಯಾ


    ಕೆಲಸ ಕಾರ್ಯಗಳಲ್ಲಿ ಹಿನ್ನಡೆಗಳು ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ  ನಿಧಾನಗತಿಯ ಮುನ್ನಡೆ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಮನಃಶಾಂತಿಯನ್ನು ಪಡೆಯುವಿರಿ. ವ್ಯಾಪಾರ ಮಾಡುವವರಿಗೆ ಉತ್ತಮ ಲಾಭ ಸಂಪಾದನೆಯಾಗುತ್ತದೆ. ಆರೋಗ್ಯದಲ್ಲಿ  ಸುಧಾರಣೆಯ ಲಕ್ಷಣಗಳು ಕಂಡು ಬರುವುದು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ

ಜಪಿಸಲು:
ವಸುದೇವಸುತಂ  ದೇವಂ

ಕಂಸಚಾಣೂರ-ಮರ್ದನಮ್  |
ದೇವಕೀ-ಪರಮಾನಂದಂ  

ಕೃಷ್ಣಂ ವಂದೇ  ಜಗದ್ಗುರುಮ್ ||

  °~•~°~•~°~•~°~•~°~•~°       


ತುಲಾ


       ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ  ಹಿನ್ನಡೆಗಳು ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಉತ್ತಮ ಆರೋಗ್ಯವನ್ನು ಪಡೆಯುತ್ತೀರಿ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರೆದಲ್ಲಿ ಉತ್ತಮ ಏಳಿಗೆ ಲಭ್ಯವಾಗಲಿದೆ.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು:
ಸರ್ವರೂಪಮಯೀ ದೇವೀ

ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಂ

ನಮಾಮಿ ಪರಮೇಶ್ವರೀಮ್ ||


 °~•~°~•~°~•~°~•~°~•~°


ವೃಶ್ಚಿಕ


  
ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ  ಸಣ್ಣ ಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಶಾಂತಿ ನೆಲೆಗೊಳ್ಳುತ್ತದೆ. ಉತ್ತಮ ಆರೋಗ್ಯವನ್ನು  ಹೊಂದುತ್ತೀರಿ. ವಾಹನ ಪ್ರಯಾಣಗಳ ಸಂದರ್ಭದಲ್ಲಿ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿದಲ್ಲಿ ಉತ್ತಮ ಏಳಿಗೆ ಲಭ್ಯವಾಗಲಿದೆ.

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್

ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾ:

ಸುಬ್ರಮಣ್ಯ-ಮುಪಾಸ್ಮಹೇ ||

°~•~°~•~°~•~°~•~°~•~°


ಧನು


    ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಉತ್ತಮ ಏಳಿಗೆ ಲಭ್ಯವಾಗಲಿದ್ದು ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಅವಕಾಶಗಳು ಒದಗಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ  ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಆಲಸ್ಯತನವನ್ನು ಬಿಟ್ಟು   ಮುಂದುವರೆದರೆ ಮಾತ್ರ ಉತ್ತಮ ಏಳಿಗೆ ಲಭ್ಯವಾಗಲಿದೆ.


ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು  ಪಡೆಯಿರಿ.

ಜಪಿಸಲು:
ಅಖಂಡಮಂಡಲಾಕಾರಂ

ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ

ತಸ್ಮೈ ಶ್ರೀಗುರವೇ ನಮಃ ||

     °~•~°~•~°~•~°~•~°~•~°


ಮಕರ


    ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿಯು  ಕೂಡ ಅಡೆತಡೆಗಳು ಕಂಡುಬರುವುದು. ದಾಂಪತ್ಯ ಜೀವನದಲ್ಲಿ ತಕ್ಕಮಟ್ಟಿನ ಸಮಾಧಾನ ನೆಲೆಸುವುದು. ಆರೋಗ್ಯದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು  ಉತ್ತಮ ಪರಿಶ್ರಮದಿಂದ ಮುಂದುವರೆದಲ್ಲಿ ಏಳಿಗೆ ಲಭ್ಯವಾಗಲಿದೆ.



ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.  

ಜಪಿಸಲು:
ಶುದ್ಧಸ್ಫಟಿಕ-ಸಂಕಾಶಂ
ಶುದ್ಧವಿದ್ಯಾ-ಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಂ
ಸದಾಶಿವಮಹಂ ಭಜೇ ||

   °~•~°~•~°~•~°~•~°~•~°          


ಕುಂಭ  


      ವ್ಯಾವಹಾರಿಕ ಕ್ಷೇತ್ರದಲ್ಲಿ ಉತ್ತಮ ಏಳಿಗೆ ಲಭ್ಯವಾಗಲಿದೆ. ಹಣಕಾಸಿನ ವಿಚಾರದಲ್ಲಿ ಕೂಡ  ಅಭಿವೃದ್ಧಿ ಕಂಡುಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಶೀತ ಜ್ವರ, ಕಣ್ಣು ನೋವು, ತಲೆನೋವು ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು  ಉತ್ತಮ ಪರಿಶ್ರಮದಿಂದ ಮುಂದುವರೆದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು.



ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು:
ಅಂಜನಾಗರ್ಭ-ಸಂಭೂತ
ಕಪೀಂದ್ರ-ಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಂ
ಹನುಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


  ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ  ಏಳಿಗೆ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯಗಳು ಒದಗಿ ಬರುತ್ತದೆ. ಆರೋಗ್ಯದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.  ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರೆದಲ್ಲಿ ಉತ್ತಮ ಏಳಿಗೆ ಲಭ್ಯವಾಗಲಿದೆ.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥ ಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು:    
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *