ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಮಾಘ ಮಾಸ /
ಕೃಷ್ಣ ಪಕ್ಷ /ಚತುರ್ಥಿ ತಿಥಿ/
ಶನಿವಾರ/ಚಿತ್ರಾ ನಕ್ಷತ್ರ /
ದಿನಾಂಕ: 23.02.2019
°~•~°~•~°~•~°~•~°~•~°
ಮೇಷ
ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಅವಕಾಶಗಳು ಒದಗಿ ಬರುತ್ತದೆ. ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ದೊರೆಯುತ್ತದೆ ವ್ಯಾಪಾರಿಗಳಿಗೆ ಉತ್ತಮ ಲಾಭ ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿಯಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಇವರಿಗೆ ವಿವಾಹ ಯೋಗ ಭಾಗ್ಯಗಳು ಒದಗಿ ಬರುತ್ತದೆ. ಚರ್ಮರೋಗ, ದೇಹದಲ್ಲಿ ಉಷ್ಣತೆ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ
ಪರಿಹಾರ :
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.
ಜಪಿಸಲು:
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ
ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ
ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥
°~•~°~•~°~•~°~•~°~•~°
ವೃಷಭ
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಕಂಡು ಬರುತ್ತದೆ ದಾಂಪತ್ಯ ಜೀವನದಲ್ಲಿ ಶಾಂತಿ ನೆಲೆಗೊಳ್ಳುತ್ತದೆ. ಶೀತ ಜ್ವರ, ಕಣ್ಣು ನೋವು, ಮೂತ್ರ ಸಂಬಂಧಿ ತೊಂದರೆ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಮುಂದುವರಿಯಬೇಕು.
ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ
ಜಪಿಸಲು:
ಸರ್ವದೇವಮಯೇ ದೇವಿ
ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್
ಸಫಲಂ ಕುರು ನಂದಿನಿ ||
°~•~°~•~°~•~°~•~°~•~°
ಮಿಥುನ
ಮಾಡುವಂತಹ ಕೆಲಸಕಾರ್ಯಗಳಲ್ಲಿ ಅಡೆತಡೆಗಳು ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಊಟದಲ್ಲಿ ಗಮನವಿರಲಿ. ವಿದ್ಯಾರ್ಥಿಗಳು ತಮ್ಮ ಆಲಸ್ಯತನ ಬಿಟ್ಟು ಉತ್ತಮ ಪ್ರಯತ್ನದಿಂದ ಮುಂದುವರಿಯಬೇಕು.
ಪರಿಹಾರ
ನರಸಿಂಹನ ಆರಾಧನೆಯನ್ನು ಮಾಡಿ.
ಜಪಿಸಲು:
ದೇವತಾಕಾರ್ಯಸಿದ್ಧ್ಯರ್ಥಮ್
ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹ ಮಹಾವೀರಮ್
ನಮಾಮಿ ಋಣಮುಕ್ತಯೇ ||
°~•~°~•~°~•~°~•~°~•~°
ಕರ್ಕಾಟಕ
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಸ್ಥಾನಮಾನ ದೊರೆಯಲಿದೆ ನೂತನ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಒದಗಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಮೈ ಕೈ ಗಂಟು ನೋವು ದೇಹದಲ್ಲಿ ಆಯಾಸ, ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.
ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||
°~•~°~•~°~•~°~•~°~•~°
ಸಿಂಹ
ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಕಂಡು ಬರುತ್ತದೆ ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ ಮೈ ಕೈ ನೋವ, ಉದರ ಸಂಬಂಧಿ ತೊಂದರೆಗಳು, ಮಲಬದ್ಧತೆ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು.
ಪರಿಹಾರ
ಶಿವನ ಆರಾಧನೆ ಅಗತ್ಯ.
ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||
°~•~°~•~°~•~°~•~°~•~°
ಕನ್ಯಾ
ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಸಣ್ಣಪುಟ್ಟ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಉದ್ಯೋಗದಲ್ಲಿ ಶತ್ರುಭಯ, ಚೋರ ಭಯ ಮುಂತಾದ ಲಕ್ಷಣಗಳು ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಉಷ್ಣ, ಅಜೀರ್ಣ ಮೈ ಕೈ ಗಂಟು ನೋವು, ಚರ್ಮ ಚರ್ಮರೋಗ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಸ್ವಪ್ರಯತ್ನದಿಂದ ಮುಂದುವರಿಯಬೇಕು.
ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ.
ಜಪಿಸಲು :
ವಸುದೇವಸುತಂ ದೇವಮ್
ಕಂಸಚಾಣೂರಮರ್ದನಮ್ |
ದೇವಕೀಪರಮಾನಂದಮ್
ಕೃಷ್ಣಂ ವಂದೇ ಜಗದ್ಗುರುಮ್ ||
°~•~°~•~°~•~°~•~°~•~°
ತುಲಾ
ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಅವಕಾಶಗಳು ಒದಗಿ ಬರುತ್ತದೆ. ಉದ್ಯೋಗದಲ್ಲಿ ಉನ್ನತ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಹೊಟ್ಟೆಗೆ ಸಂಬಂಧಿಸಿದಂತಹ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರೆದು ಅಭಿವೃದ್ಧಿಯನ್ನು ಸಾಧಿಸುತ್ತಾರೆ.
ಪರಿಹಾರ
ದುರ್ಗಾದೇವಿಯ ಆರಾಧನೆಯಂದ ಶುಭ.
ಜಪಿಸಲು :
ಸರ್ವರೂಪಮಯೀ ದೇವೀ
ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್
ನಮಾಮಿ ಪರಮೇಶ್ವರೀಮ್ ||
°~•~°~•~°~•~°~•~°~•~°
ವೃಶ್ಚಿಕ
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಮಾತಿನ ಮೂಲಕ ಜಗಳಗಳು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಉತ್ತಮ ಆರೋಗ್ಯ ಭಾಗ್ಯವನ್ನು ಪಡೆಯುತ್ತೀರಿ. ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡು ಬರುವುದು.
ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು :
ಶರಣ್ಯಂ ಸರ್ವಲೋಕಾನಾಮ್
ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ
ಸುಬ್ರಮಣ್ಯಮುಪಾಸ್ಮಹೇ ||
°~•~°~•~°~•~°~•~°~•~°
ಧನು
ವ್ಯಾವಹಾರಿಕ ಕ್ಷೇತ್ರಗಳಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ದಾಂಪತ್ಯ ಜೀವನದಲ್ಲಿ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು.
ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು ಪಡೆಯಿರಿ.
ಜಪಿಸಲು :
ಅಖಂಡಮಂಡಲಾಕಾರಮ್
ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ
ತಸ್ಮೈ ಶ್ರೀಗುರವೇ ನಮಃ ||
°~•~°~•~°~•~°~•~°~•~°
ಮಕರ
ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಅವಕಾಶಗಳು ಲಭ್ಯವಾಗಲಿದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನುಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ, ಯುವಕ-ಯುವತಿಯರಿಗೆ ನೂತನ ವಿವಾಹ ಯೋಗ ಭಾಗ್ಯಗಳು ಒದಗಿ ಬರಲಿದೆ. ಆರೋಗ್ಯದಲ್ಲಿ ಹದಗೆಡುವ ಲಕ್ಷಣಗಳಿದ್ದು ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.
ಜಪಿಸಲು :
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾ-ಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||
°~•~°~•~°~•~°~•~°~•~°
ಕುಂಭ
ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಏಳಿಗೆ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಉತ್ತಮ ಆರೋಗ್ಯ ಭಾಗ್ಯವನ್ನು ಪಡೆಯುತ್ತೀರಿ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿದಲ್ಲಿ ಉತ್ತಮ ಏಳಿಗೆ ಕಂಡು ಬರುವುದು.
ಪರಿಹಾರ
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||
°~•~°~•~°~•~°~•~°~•~°
ಮೀನ
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಕಂಡು ಬರುತ್ತದೆ ದಾಂಪತ್ಯ ಜೀವನದಲ್ಲಿ ಕಲಹಗಳನ್ನು ಎದುರಿಸಬೇಕಾಗುತ್ತದೆ. ಆರೋಗ್ಯದಲ್ಲಿ ಚೇತರಿಕೆ ಗಳು ಕಂಡುಬರುವುದು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿದರೆ ಮಾತ್ರ ಉತ್ತಮ ಏಳಿಗೆ ಲಭ್ಯ.
ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥ ಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.
ಜಪಿಸಲು :
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ / ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ
°~•~°~•~°~•~°~•~°~•~°
{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}