26.02.2019

ದಿನ ಭವಿಷ್ಯ

         

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಮಾಘ ಮಾಸ /
ಕೃಷ್ಣ ಪಕ್ಷ /ಸಪ್ತಮಿ ತಿಥಿ/

ಮಂಗಳವಾರ/ಅನುರಾಧಾ ನಕ್ಷತ್ರ /

ದಿನಾಂಕ: 26.02.2019

 °~•~°~•~°~•~°~•~°~•~°

ಮೇಷ

        ಕೆಲಸಗಾರ ಗಳಲ್ಲಿ ನೂತನ ಅಭಿವೃದ್ಧಿ,   ಉನ್ನತ ಸ್ಥಾನಮಾನಗಳು ಲಭ್ಯವಾಗಲಿದೆ. ಉದ್ಯೋಗ ಆಕಾಂಕ್ಷಿಗಳಿಗೆ ಅವಕಾಶಗಳು ಲಭ್ಯವಾಗಲಿದೆ. ಹಣಕಾಸಿನ ವಿಚಾರದಲ್ಲಿ  ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲ ಗೊಳ್ಳಲಿದೆ. ಶೀತ ಜ್ವರ, ಮೈ ಕೈ ನೋವು ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.  ವಾಹನ ಪ್ರಯಾಣಗಳ ಸಂದರ್ಭದಲ್ಲಿ ಜಾಗರೂಕರಾಗಿರಬೇಕು. ವಿದ್ಯಾರ್ಥಿಗಳು ಉತ್ತಮ ಅಭಿವೃದ್ಧಿಯನ್ನು ಪಡೆದು ಹಿರಿಯರ ಆಶೀರ್ವಾದಕ್ಕೆ ಪಾತ್ರರಾಗುವಿರಿ



ಪರಿಹಾರ :
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.

ಜಪಿಸಲು:
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ

ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ

ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥

°~•~°~•~°~•~°~•~°~•~°

    

ವೃಷಭ

         ವ್ಯವಹಾರಿಕ ಕ್ಷೇತ್ರದಲ್ಲಿ ಉತ್ತಮವಾದ ಮುನ್ನಡೆ ಕಂಡುಬರುತ್ತದೆ.  ಮಾಡುವ ಕೆಲಸ ಕಾರ್ಯಗಳಿಂದ ಸಂತೋಷ ಹಾಗೂ ನೆಮ್ಮದಿ ದೊರೆಯುತ್ತದೆ. ವ್ಯಾಪಾರಿಗಳಿಗೆ ಅಧಿಕ ಲಾಭ ದೊರೆಯುವುದು.  ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ.  ವಿವಾಹ ಅಪೇಕ್ಷಿತ ರಿಗೆ ವಿವಾಹ ಯೋಗ ಭಾಗ್ಯಗಳು ಒದಗಿ ಬರುತ್ತದೆ. ವಿದ್ಯಾರ್ಥಿಗಳು ಉತ್ತಮ ಮುನ್ನಡೆಯನ್ನು ಸಾಧಿಸುತ್ತಾರೆ.




ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.

ಜಪಿಸಲು :
ಸರ್ವದೇವಮಯೇ ದೇವಿ

ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್

ಸಫಲಂ ಕುರು ನಂದಿನಿ ||

°~•~°~•~°~•~°~•~°~•~°



ಮಿಥುನ


   ಪ್ರಾಮಾಣಿಕತನ ಹಾಗೂ ಶ್ರದ್ಧೆಯಿಂದ ತಮ್ಮ ಕೆಲಸವನ್ನು ನಿರ್ವಹಿಸಿ. ಮಾಡುವಂತಹ ಕೆಲಸ ಕಾರ್ಯಗಳಲ್ಲಿ ತಮ್ಮ ಉದಾಸೀನತೆ ಇಂದಾಗಿ ಹಿನ್ನಡೆ ಕಂಡುಬರುವುದು. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲಹಗಳನ್ನು ಎದುರಿಸಬೇಕಾಗುತ್ತದೆ. ಶೀತ ಜ್ವರ, ಚರ್ಮರೋಗ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರೆದರೆ ಮಾತ್ರ  ಏಳಿಗೆ ಲಭ್ಯವಾಗಲಿದೆ



ಪರಿಹಾರ  
ನರಸಿಂಹನ ಆರಾಧನೆಯನ್ನು ಮಾಡಿ.

ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್

ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಮಹಾವೀರಮ್

ನಮಾಮಿ ಋಣಮುಕ್ತಯೇ ||

  °~•~°~•~°~•~°~•~°~•~°



ಕರ್ಕಾಟಕ

   ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಸ್ಥಾನ ಮಾನಗಳು ದೊರೆಯಲಿದೆ. ಹಣಕಾಸಿನ ವಿಚಾರದಲ್ಲಿ  ಉತ್ತಮ ಮುನ್ನಡೆ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ಕಂಡುಬರುವುದು. ಮೈ ಕೈ ಗಂಟು ನೋವು, ಮಲಬದ್ಧತೆ, ಹೊಟ್ಟೆ ನೋವು  ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಏಕಾಗ್ರತೆಯಿಂದ ಮುನ್ನಡೆಯಬೇಕು.



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||

 °~•~°~•~°~•~°~•~°~•~°



ಸಿಂಹ

     ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಹಿನ್ನಡೆ ಕಂಡುಬರುತ್ತದೆ.  ಹಾಗೂ ನಷ್ಟವನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸಣ್ಣಪುಟ್ಟ ಕಲಹವನ್ನು ಎದುರಿಸಬೇಕಾಗುತ್ತದೆ. ಹೊಟ್ಟೆಗೆ ಸಂಬಂಧಿಸಿದ ತೊಂದರೆ, ಮಾನಸಿಕವಾದ ಖಿನ್ನತೆ ಮುಂತಾದ ತೊಂದರೆಗಳು ಎದುರಾಗುತ್ತದೆ. ವಿದ್ಯಾರ್ಥಿಗಳು ಶ್ರಮದಿಂದ ಮುನ್ನಡೆದರೆ ಮಾತ್ರ ಏಳಿಗೆ ಲಭ್ಯವಾಗಲಿದೆ.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ ||

    °~•~°~•~°~•~°~•~°~•~°      


ಕನ್ಯಾ


    ಕೆಲಸ ಕಾರ್ಯಕ್ಕೆ ಅನುಗುಣವಾಗಿ ನೂತನವಾದ ಸ್ಥಾನಮಾನಗಳು ಲಭ್ಯವಾಗಲಿದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳಲು ಇದೆ. ನೂತನ  ವಿವಾಹ ಯೋಗ ಭಾಗ್ಯಗಳು ಒದಗಿ ಬರುತ್ತದೆ. ಉದರ ಸಂಬಂಧಿ ತೊಂದರೆಗಳು ಸಂಭವಿಸುವ ಲಕ್ಷಣಗಳಿವೆ. ವಿದ್ಯಾರ್ಥಿಗಳು ಉತ್ತಮವಾಗಿ ಮುನ್ನಡೆಯಬೇಕು.ಮಕ್ಕಳಿಗೆ ಸನ್ಮಾರ್ಗದಲ್ಲಿ ನಡೆಯಲು ಮಾರ್ಗದರ್ಶನವನ್ನು ನೀಡಿ.



ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ

ಜಪಿಸಲು :
ವಸುದೇವಸುತಂ  ದೇವಮ್

ಕಂಸಚಾಣೂರ-ಮರ್ದನಮ್  |
ದೇವಕೀ-ಪರಮಾನಂದಮ್

ಕೃಷ್ಣಂ ವಂದೇ  ಜಗದ್ಗುರುಮ್ ||

  °~•~°~•~°~•~°~•~°~•~°       


ತುಲಾ


       ಮಾಡುವಂತಹ ಕೆಲಸ ಕಾರ್ಯದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ಏಳಿಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳಲು ಇದೆ. ಚರ್ಮರೋಗ, ಅಲರ್ಜಿ, ಉದರ ಸಂಬಂಧಿ ತೊಂದರೆಗಳು, ಜ್ವರ  ಮುಂತಾದ ತೊಂದರೆಗಳು ಬರುವಂತಹ ಲಕ್ಷಣಗಳಿದ್ದು ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಅಂಕವನ್ನು ಪಡೆದು ಹಿರಿಯರ ಆಶೀರ್ವಾದಕ್ಕೆಪಾತ್ರರಾಗುತ್ತೀರಿ.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಸರ್ವರೂಪಮಯೀ ದೇವೀ

ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್

ನಮಾಮಿ ಪರಮೇಶ್ವರೀಮ್ ||


 °~•~°~•~°~•~°~•~°~•~°


ವೃಶ್ಚಿಕ


  
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಮಂದ ಗತಿಯ ಏಳಿಗೆ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ  ಸಣ್ಣಪುಟ್ಟ ತೊಂದರೆಗಳು ಕಂಡು ಬರುವುದು. ಆಹಾರ ಸಂಬಂಧವಾಗಿ ತೊಂದರೆಗಳು ಬರುವ ಲಕ್ಷಣಗಳು ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆಯಬೇಕು

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್

ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ

ಸುಬ್ರಮಣ್ಯ-ಮುಪಾಸ್ಮಹೇ ||

°~•~°~•~°~•~°~•~°~•~°


ಧನು


    ತಮ್ಮ ಉದಾಸೀನತೆ ಹಾಗೂ ನಿರ್ಲಕ್ಷದಿಂದ ಮಾಡುವಂತಹ ಕೆಲಸ ಕಾರ್ಯಗಳಲ್ಲಿ  ಹಿನ್ನಡೆ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುವುದು. ನಿಮಗೆ ಬರಬೇಕಾದ ಅಂತಹ ಹಣವು ಒದಗಿ ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಉತ್ತಮ ಆರೋಗ್ಯ ಭಾಗ್ಯವನ್ನು ಪಡೆಯುತ್ತೀರಿ. ವಿದ್ಯಾರ್ಥಿಗಳು  ಆಲಸ್ಯತನ ವನ್ನು ಬಿಟ್ಟರೆ ಮಾತ್ರ ಅಭಿವೃದ್ಧಿ ಲಭ್ಯ


ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು  ಪಡೆಯಿರಿ.

ಜಪಿಸಲು :
ಅಖಂಡಮಂಡಲಾಕಾರಮ್

ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ

ತಸ್ಮೈ ಶ್ರೀಗುರವೇ ನಮಃ ||

     °~•~°~•~°~•~°~•~°~•~°


ಮಕರ


    ವ್ಯವಹಾರಿಕ ಕ್ಷೇತ್ರದಲ್ಲಿ ಉತ್ತಮ ಸ್ಥಾನ ಮಾನಗಳು ದೊರೆಯಲಿ ಇದೆ. ನೂತನ ಉದ್ಯೋಗಕ್ಕೆ   ಅವಕಾಶಗಳು ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳಲಿದೆ. ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯಗಳು ಒದಗಿ ಬರುತ್ತದೆ. ಆಹಾರದ ಮೂಲಕವಾಗಿ ತೊಂದರೆಗಳು ಬರುವ ಲಕ್ಷಣ ಗಳಿದ್ದು  ಜಾಗರೂಕತೆಯಿಂದ ಇರಿ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆದರೆ.
ಉತ್ತಮ ಏಳಿಗೆ  ಲಭ್ಯ



ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.  

ಜಪಿಸಲು:
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾ-ಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||

   °~•~°~•~°~•~°~•~°~•~°          


ಕುಂಭ  


      ಮಾಡುವಂತಹ ಕೆಲಸ ಕಾರ್ಯಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು.  ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳು ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ.  ಶೀತ ಜ್ವರ, ಕಫ, ಅಲರ್ಜಿ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಉತ್ತಮ ಪರಿಶ್ರಮದಿಂದ ಮುನ್ನಡೆದರೆ ವಿದ್ಯಾರ್ಥಿಗಳಿಗೆ ಏಳಿಗೆ ಲಭ್ಯವಾಗಲಿದೆ.



ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು:
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನುಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


  ವ್ಯಾವಹಾರಿಕ ಕ್ಷೇತ್ರದಲ್ಲಿ ಉತ್ತಮವಾದ ಏಳಿಗೆ ಕಂಡು ಬರುತ್ತದೆ.   ಆರ್ಥಿಕ ವಿಚಾರದಲ್ಲಿ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಕಲಹಗಳನ್ನು ಎದುರಿಸಬೇಕಾಗುತ್ತದೆ.  ಉದರ ಸಂಬಂಧಿ ತೊಂದರೆಗಳು, ಉಷ್ಣ ಉಷ್ಣ, ಅಲರ್ಜಿ, ಅಜೀರ್ಣ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಉತ್ತಮ ಪ್ರಯತ್ನದಿಂದ  ಅಭಿವೃದ್ಧಿಯನ್ನು ಸಾಧಿಸುತ್ತಾರೆ.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥ ಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *