06.03.2019

ದಿನ ಭವಿಷ್ಯ

         

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಮಾಘ ಮಾಸ /
ಕೃಷ್ಣ ಪಕ್ಷ /ಅಮವಾಸ್ಯಾ ತಿಥಿ/

ಬುಧವಾರ/ಶತಭಿಷಾ ನಕ್ಷತ್ರ /

ದಿನಾಂಕ 06.03..2019

 °~•~°~•~°~•~°~•~°~•~°

ಮೇಷ

          ವ್ಯಾವಹಾರಿಕ ಕ್ಷೇತ್ರದಲ್ಲಿನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಬಂದಿರುವಂತಹ ಕಷ್ಟ ದೂರವಾಗುತ್ತದೆ. ದಾಂಪತ್ಯ ಜೀವನದಲ್ಲಿ ಶಾಂತಿ ನೆಲೆಗೊಳ್ಳುವುದು. ಉತ್ತಮ ಆರೋಗ್ಯವನ್ನು  ಪಡೆಯುತ್ತೀರಿ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಉತ್ತಮ ಏಳಿಗೆಯನ್ನು ಪಡೆಯುತ್ತಾರೆ



ಪರಿಹಾರ:
ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋsಸ್ತು ತೇ ||

°~•~°~•~°~•~°~•~°~•~°

    

ವೃಷಭ

          ಮಾಡುವಂತಹ ಕೆಲಸ ಕಾರ್ಯಗಳಲ್ಲಿ ನೂತನ ಅಭಿವೃದ್ಧಿ ಕಂಡು ಬರುವುದು, ಉತ್ತಮ ಸ್ಥಾನಮಾನ ಗೌರವ ಉನ್ನತ ಹುದ್ದೆಗಳು ಲಭಿಸಲಿದೆ. ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಕುಟುಂಬ ಸಂಬಂಧಿಯಾಗಿ ಖರ್ಚುವೆಚ್ಚಗಳು ಮಾಡಬೇಕಾದಂತಹ ಪರಿಸ್ಥಿತಿ ಎದುರಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು




ಪರಿಹಾರ
ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ  / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ  / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ  / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ  / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ  / ಶ್ರೀಚಂಡಿಕಾಯೈ ನಮಃ |

°~•~°~•~°~•~°~•~°~•~°



ಮಿಥುನ


     ತಮ್ಮ ಉದಾಸೀನತೆಯಿಂದ ಹಾಗೂ ಸಂಡೆ ತನದಿಂದ ವ್ಯಾವಹಾರಿಕ ಕ್ಷೇತ್ರದಲ್ಲಿ  ಹಿನ್ನಡೆ ಕಂಡುಬರುವುದು. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಮನಃಶಾಂತಿ ಕಳೆದುಕೊಳ್ಳಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಷ್ಟಗಳು ಎದುರಾಗುತ್ತದೆ. ಆರೋಗ್ಯದಲ್ಲಿ ಸಣ್ಣಪುಟ್ಟ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ  ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡು ಬರುವುದು. ಗುರುಹಿರಿಯರ ಆಶೀರ್ವಾದವನ್ನು ಪಡೆಯಿರಿ



ಪರಿಹಾರ  
ಶ್ರೀಕೃಷ್ಣನ ಆರಾಧನೆ,ಗುರುದೇವತಾ ಆರಾಧನೆಯಿಂದ ಶುಭ.

ಜಪಿಸಲು :
ವಸುದೇವಸುತಂ ದೇವಮ್

ಕಂಸಚಾಣೂರಮರ್ದನಮ್|

ದೇವಕೀಪರಮಾನನ್ದಮ್

ಕೃಷ್ಣಂ ವನ್ದೇ ಜಗದ್ಗುರುಮ್ ||

  °~•~°~•~°~•~°~•~°~•~°



ಕರ್ಕಾಟಕ

       ತೊಡಗಿಸಿಕೊಂಡ ಕೆಲಸ ಕಾರ್ಯದಲ್ಲಿ ಅಡೆತಡೆಗಳು ಕಷ್ಟನಷ್ಟಗಳು ಎದುರಾಗುತ್ತವೆ. ಹಣಕಾಸಿನ ವಿಚಾರದಲ್ಲಿ  ತೊಂದರೆಯನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಪುಟ್ಟ ಕಲಹಗಳು ತೋರಿ ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯ ಸಂಬಂಧವಾಗಿ ಶೀತ, ಜ್ವರ, ಕಫ, ಅಲರ್ಜಿ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.  ವಿದ್ಯಾರ್ಥಿಗಳು ಆಲಸ್ಯತನ ಬಿಟ್ಟು ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡು ಬರಬಹುದು. ಏಕಾಗ್ರತೆಯಿಂದ ಮುಂದುವರಿಯಬೇಕು



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ  
ದುರ್ಗೇದೇವಿ ನಮೋsಸ್ತು ತೇ ||

 °~•~°~•~°~•~°~•~°~•~°



ಸಿಂಹ

          ಮಾಡುವಂತಹ ಕೆಲಸ ಕಾರ್ಯದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆಯನ್ನು ಎದುರಿಸ ಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸಣ್ಣ ಪುಟ್ಟ ಕಲಹಗಳು ಎದುರಾಗುತ್ತದೆ ಆರೋಗ್ಯ ಸಂಬಂಧವಾಗಿ  ತೊಂದರೆಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು ಏಕಾಗ್ರತೆಯಿಂದ ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡು ಬರುತ್ತದೆ


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

    °~•~°~•~°~•~°~•~°~•~°      


ಕನ್ಯಾ


    ತೊಡಗಿಸಿಕೊಂಡ ಕೆಲಸ ಕಾರ್ಯದಲ್ಲಿ ಅಡೆತಡೆಗಳು ಕಷ್ಟನಷ್ಟಗಳು ಎದುರಾಗುತ್ತದೆ. ಹಣಕಾಸಿನ ವಿಚಾರದಲ್ಲಿ  ತೊಂದರೆಯನ್ನು ಎದುರಿಸಬೇಕಾಗುತ್ತದೆ. ಮನಃಶಾಂತಿ ಕಳೆದುಕೊಳ್ಳಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸಣ್ಣ ಪುಟ್ಟ ಕಲಹಗಳು ಎದುರಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು



ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ  ಶುಭ.

ಜಪಿಸಲು :
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ |  
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||

  °~•~°~•~°~•~°~•~°~•~°       


ತುಲಾ


        ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ನಷ್ಟ ಎದುರಾಗುತ್ತದೆ. ಮಾನಸಿಕ ವಾದಂತಹ ಸ್ಥಿಮಿತವನ್ನು ಕಳೆದುಕೊಳ್ಳಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಕಲಹಗಳು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡು ಬರುವುದು


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮಃ  / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ  / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀ ಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||


 °~•~°~•~°~•~°~•~°~•~°


ವೃಶ್ಚಿಕ


  
 ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸಣ್ಣಪುಟ್ಟ ಕಲಹಗಳು ಕಂಡುಬರುತ್ತದೆ. ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು ಏಕಾಗ್ರತೆಯಿಂದ ಮುಂದುವರೆಯಬೇಕು. ವಾಹನ ಪ್ರಯಾಣದ ಸಂದರ್ಭದಲ್ಲಿ  ಜಾಗರೂಕತೆಯಿಂದ ಇರಬೇಕು.

ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.


ಜಪಿಸಲು :
ಷಡಾನನಂ ಕುಂಕುಮರಕ್ತವರ್ಣಮ್

ಮಹಾಮತಿಂ ದಿವ್ಯಮಯೂರವಾಹಮ್ |

ರುದ್ರಸ್ಯ ಸೂನುಂ ಸುರಸೈನ್ಯನಾಥಮ್

ಗುಹಂ ಸದಾ ಶರಣಮಹಂ ಪ್ರಪದ್ಯೇ ||

°~•~°~•~°~•~°~•~°~•~°


ಧನು


   ಮಾಡುತ್ತಿರುವ ಕೆಲಸ ಕಾರ್ಯದಲ್ಲಿ ಕಷ್ಟನಷ್ಟಗಳು ಎದುರಾಗುತ್ತವೆ  ಹಾಗೂ ಶತ್ರು ಕಾಟಗಳು ಕಂಡುಬರುವುದು. ಹಣಕಾಸಿನವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸಣ್ಣ ಪುಟ್ಟ ಕಲಹಗಳು ಎದುರಾಗುತ್ತದೆ. ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡು ಬರುವುದು

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಜಪಿಸಲು:
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ

     °~•~°~•~°~•~°~•~°~•~°


ಮಕರ


    ತಾವು ಮಾಡುತ್ತಿರುವ ಕೆಲಸ ಕಾರ್ಯದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳಲು ಇದೆ. ಆರೋಗ್ಯ ಸಂಬಂಧವಾಗಿ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು



ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.  

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

   °~•~°~•~°~•~°~•~°~•~°          


ಕುಂಭ  


      ಮಾಡುತ್ತಿರುವ ಕೆಲಸ ಕಾರ್ಯಗಳಲ್ಲಿ ಅಡೆತಡೆಗಳು ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯ ಸಂಬಂಧವಾಗಿ ತೊಂದರೆಗಳು ಕಂಡು ಬರುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ  
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.

ಜಪಿಸಲು :
ರುದ್ರಂ ಪಶುಪತಿಂ ಸ್ಥಾಣುಮ್

ನೀಲಕಂಠಂ ಉಮಾಪತಿಮ್ |

ನಮಾಮಿ ಶಿರಸಾ ದೇವಮ್

ಕಿಂ ನೋ ಮೃತ್ಯುಃ ಕರಿಷ್ಯತಿ  ||

°~•~°~•~°~•~°~•~°~•~°


ಮೀನ   


   ತಾವು ತೊಡಗಿಸಿಕೊಂಡ ಕೆಲಸದಲ್ಲಿ   ಹಿನ್ನಡೆ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲೂ ಕೂಡಾ ತೊಂದರೆಗಳು ಕಂಡು ಬರುವುದು. ವಿನಾಕಾರಣ ಖರ್ಚು ವೆಚ್ಚ ಮಾಡದಿರಿ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯ ಸಂಬಂಧವಾಗಿ ತೊಂದರೆಗಳ ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಸರದಿಂದ ಮುಂದುವರೆದರೆ ಮಾತ್ರ  ಏಳಿಗೆ ಲಭ್ಯವಾಗಲಿದೆ


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶಾಂತಾಕಾರಂ ಭುಜಗಶಯನಮ್  

ಪದ್ಮನಾಭಂ ಸುರೇಶಮ್

ವಿಶ್ವಾಧಾರಂ ಗಗನಸದೃಶಮ್

ಮೇಘವರ್ಣಂ ಶುಭಾಂಗಮ್ |

ಲಕ್ಷ್ಮೀಕಾಂತಂ ಕಮಲನಯನಮ್

ಯೋಗಿಹೃದ್ಧ್ಯಾನಗಮ್ಯಮ್

ವಂದೇ ವಿಷ್ಣುಂ ಭವಭಯಹರಮ್

ಸರ್ವಲೋಕೈಕನಾಥಮ್  ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *