ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಪಾಲ್ಗುನ ಮಾಸ /
ಶುಕ್ಲ ಪಕ್ಷ /ಚತುರ್ದಶಿ ತಿಥಿ /
ಬುಧವಾರ/ಹುಬ್ಬಾ ನಕ್ಷತ್ರ/
ದಿನಾಂಕ: 20.03.2019
°~•~°~•~°~•~°~•~°~•~°
ಮೇಷ
ನೂತನ ಉದ್ಯೋಗಾಕಾಂಕ್ಷಿಗಳಿಗೆ ಆಕಾಶಗಳು ಒದಗಿ ಬರುತ್ತದೆ. ಉತ್ತಮ ಸ್ಥಾನಮಾನ ಗೌರವಗಳು ಲಭಿಸಲಿದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ದೊರೆಯುತ್ತದೆ. ಪುತ್ರನ ಆಗಮನದಿಂದ ಸಂತೋಷ ದೊರೆಯುತ್ತಿದೆ. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರೆಯಬೇಕು.
ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.
ಜಪಿಸಲು :
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ
ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ
ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥
°~•~°~•~°~•~°~•~°~•~°
ವೃಷಭ
ಉತ್ತಮ ಪರಿಶ್ರಮದಿಂದ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡರು ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ದೂರದ ಬಂಧುಗಳ ಆಗಮನ ಸಂತೋಷ ತರುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ದೊರೆಯುತ್ತದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಅವಕಾಶ ಒದಗಿ ಬರುತ್ತದೆ. ಆರೋಗ್ಯದಲ್ಲಿ ಹದಗೆಡುವ ಲಕ್ಷಣಗಳಿದ್ದು ಜಾಗರೂಕರಾಗಿರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.
ಜಪಿಸಲು :
ಸರ್ವದೇವಮಯೇ ದೇವಿ
ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್
ಸಫಲಂ ಕುರು ನಂದಿನಿ ||
°~•~°~•~°~•~°~•~°~•~°
ಮಿಥುನ
ಉತ್ತಮ ಏಕಾಗ್ರತೆಯಿಂದ ಶ್ರದ್ಧೆಯಿಂದ ಮುನ್ನಡೆದರೆ ಮಾತ್ರ ಕಾರ್ಯಕ್ಷೇತ್ರದಲ್ಲಿ ಅಭಿವೃದ್ಧಿ ಕಂಡು ಬರುವುದು. ಸಂಪಾದಿಸಿದ ಹಣವನ್ನು ಉತ್ತಮ ಕಾರ್ಯಗಳಿಗೆ ವಿನಿಯೋಗಿಸಿ. ದಾಂಪತ್ಯ ಜೀವನದಲ್ಲಿ ಕಲಹ ಎದುರಿಸಬೇಕಾಗುತ್ತದೆ. ಹೊಟ್ಟೆಗೆ ಸಂಬಂಧಿಸಿದ ತೊಂದರೆ ಎದುರಿಸಬೇಕಾಗುತ್ತದೆ ಆದುದರಿಂದ ಆಹಾರದಲ್ಲಿ ಗಮನವಿರಲಿ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು
ಪರಿಹಾರ
ನರಸಿಂಹನ ಆರಾಧನೆಯನ್ನು ಮಾಡಿ.
ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್
ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಮಹಾವೀರಮ್
ನಮಾಮಿ ಋಣಮುಕ್ತಯೇ ||
°~•~°~•~°~•~°~•~°~•~°
ಕರ್ಕಾಟಕ
ಕೃಷಿಕರಿಗೆ ಉತ್ತಮ ಬೆಳೆ ದೊರೆಯುತ್ತದೆ. ಭೂ ಸಂಬಂಧಿ ವ್ಯವಹಾರ ನಡೆಸುವವರಿಗೆ ಅಭಿವೃದ್ಧಿ ಕಂಡು ಬರುವುದು ಹಣಕಾಸಿನ ವಿಚಾರದಲ್ಲಿ ಏಳಿಗೆ ಕಂಡುಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಹಾಗೂ ಯುವಕ ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಮೈ ಕೈ ಗಂಟು ನೋವು, ತಲೆನೋವು, ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.
ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||
°~•~°~•~°~•~°~•~°~•~°
ಸಿಂಹ
ನೂತನ ಉದ್ಯೋಗ ಆಕಾಂಕ್ಷೆಗಳಿಗೆ ಅವಕಾಶಗಳು ಒದಗಿ ಬರುತ್ತದೆ. ಉತ್ತಮ ಸ್ಥಾನಮಾನ ಗೌರವ ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ದೊರೆಯುತ್ತದೆ. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ಕಂಡು ಬರುವುದು.
ಪರಿಹಾರ
ಶಿವನ ಆರಾಧನೆ ಅಗತ್ಯ.
ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||
°~•~°~•~°~•~°~•~°~•~°
ಕನ್ಯಾ
ಉದ್ಯೋಗ ಕ್ಷೇತ್ರದಲ್ಲಿ ಕಷ್ಟ ನಷ್ಟವನ್ನು ಎದುರಿಸಬೇಕಾಗುತ್ತದೆ. ಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬಂದರೂ ಕೂಡ ಖರ್ಚುವೆಚ್ಚಗಳು ಒದಗಿ ಬರುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ ಕಂಡು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ
ಜಪಿಸಲು :
ವಸುದೇವಸುತಂ ದೇವಮ್
ಕಂಸಚಾಣೂರಮರ್ದನಮ್ |
ದೇವಕೀಪರಮಾನಂದಮ್
ಕೃಷ್ಣಂ ವಂದೇ ಜಗದ್ಗುರುಮ್ ||
°~•~°~•~°~•~°~•~°~•~°
ತುಲಾ
ಮಾಡುತ್ತಿರುವ ಕೆಲಸ ಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಏಳಿಗೆ ಕಂಡು ಬರುತ್ತದೆ. ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಹೊಟ್ಟೆಗೆ ಸಂಬಂಧಿಸಿದ ತೊಂದರೆ ಬರುವ ಲಕ್ಷಣಗಳು ಇರುವುದರಿಂದ ಆಹಾರದಲ್ಲಿ ಗಮನವಿರಲಿ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ
ದುರ್ಗಾದೇವಿಯ ಆರಾಧನೆಯಂದ ಶುಭ.
ಜಪಿಸಲು :
ಸರ್ವರೂಪಮಯೀ ದೇವೀ
ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್
ನಮಾಮಿ ಪರಮೇಶ್ವರೀಮ್ ||
°~•~°~•~°~•~°~•~°~•~°
ವೃಶ್ಚಿಕ
ನೂತನ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ಒದಗಿ ಬರುತ್ತದೆ ಉತ್ತಮ ಸ್ಥಾನಮಾನ ಗೌರವಗಳು ಲಭಿಸುತ್ತವೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಕುಟುಂಬದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಮೈ ಕೈ ಗಂಟು ನೋವು, ಪಿತ್ತಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು.
ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು:
ಶರಣ್ಯಂ ಸರ್ವಲೋಕಾನಾಮ್
ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ
ಸುಬ್ರಮಣ್ಯಮುಪಾಸ್ಮಹೇ ||
°~•~°~•~°~•~°~•~°~•~°
ಧನು
ವ್ಯವಹಾರಿಕ ತೊಂದರೆ ಎದುರಿಸಬೇಕಾಗುತ್ತದೆ ಮೋಸ ಹೋಗುವ ಸಾಧ್ಯತೆಗಳಿರುವುದರಿಂದ ಜಾಗರೂಕತೆಯಿಂದ ಇರಬೇಕು. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡು ಬರುತ್ತದೆ.
ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು ಪಡೆಯಿರಿ.
ಜಪಿಸಲು :
ಅಖಂಡಮಂಡಲಾಕಾರಮ್
ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ
ತಸ್ಮೈ ಶ್ರೀಗುರವೇ ನಮಃ ||
°~•~°~•~°~•~°~•~°~•~°
ಮಕರ
ಉತ್ತಮ ಶ್ರದ್ಧೆಯಿಂದ ಕೆಲಸವನ್ನು ತೊಡಗಿಸಿಕೊಂಡಲ್ಲಿ ಉತ್ತಮ ಅಭಿವೃದ್ಧಿ ಹಾಗೂ ಏಳಿಗೆ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ದೊರೆಯುತ್ತದೆ ಆರೋಗ್ಯಸಂಬಂಧವಾದ ತೊಂದರೆ ಎದುರಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು ಹಾಗೂ ಮೊಬೈಲ್ ಟಿವಿ ಇಂದ ದೂರ ಇರಬೇಕು.
ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.
ಜಪಿಸಲು :
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||
°~•~°~•~°~•~°~•~°~•~°
ಕುಂಭ
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಜೀವನದಲ್ಲಿ ಸುಖ ಶಾಂತಿ ಲಭಿಸುತ್ತದೆ ಲಭಿಸುತ್ತದೆ. ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಅಭಿವೃದ್ಧಿ ಕಂಡು ಬರುವುದು.
ಪರಿಹಾರ
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||
°~•~°~•~°~•~°~•~°~•~°
ಮೀನ
ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಅಡೆತಡೆಗಳು ಕಷ್ಟನಷ್ಟಗಳು ಎದುರಾಗುತ್ತವೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.
ಜಪಿಸಲು :
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ / ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||
°~•~°~•~°~•~°~•~°~•~°
{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}