23.03.2019

ದಿನ ಭವಿಷ್ಯ

         

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಪಾಲ್ಗುನ ಮಾಸ /
ಕೃಷ್ಣ ಪಕ್ಷ /ತೃತೀಯ ತಿಥಿ /

ಶನಿವಾರ/‌ಚಿತ್ರ ನಕ್ಷತ್ರ/

ದಿನಾಂಕ: 23.03.2019

 °~•~°~•~°~•~°~•~°~•~°

ಮೇಷ

        ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ   ನಿಧಾನ ಗತಿ ಅಭಿವೃದ್ಧಿ ಕಂಡು ಬರುತ್ತದೆ. ಕುಟುಂಬದಲ್ಲಿ ಕಲಹ ಸಂಭವಿಸುತ್ತದೆ, ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಶ್ವಾಸ ಸಂಬಂಧಿ ತೊಂದರೆ,   ಅಲರ್ಜಿ ಮೊದಲಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡು ಬರುತ್ತದೆ



ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.

ಜಪಿಸಲು :
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ

ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ

ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥

°~•~°~•~°~•~°~•~°~•~°

    

ವೃಷಭ

         ಭೂ ಸಂಬಂಧಿ ಕೆಲಸ ಮಾಡುವವರಿಗೆ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಶೀತ ಜ್ವರ, ತಲೆನೋವು, ಮೈ ಕೈ ನೋವು, ಮೊದಲಾದ ತೊಂದರೆ ಎದುರಿಸಬೇಕಾಗುತ್ತದೆ.  ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡು ಬರುತ್ತದೆ. ನೃತ್ಯ ಹಾಗೂ ಆಟೋಟ ವನ್ನು ಕಲಿಯುವವರಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ




ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.

ಜಪಿಸಲು :
ಸರ್ವದೇವಮಯೇ ದೇವಿ

ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್

ಸಫಲಂ ಕುರು ನಂದಿನಿ ||

°~•~°~•~°~•~°~•~°~•~°



ಮಿಥುನ


   ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ಖರ್ಚುವೆಚ್ಚಗಳು ಬರುವುದರಿಂದ  ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕರಾಗಿರಬೇಕು. ವಾಹನ ಪ್ರಯಾಣದ ಸಂದರ್ಭದಲ್ಲಿ  ಜಾಗ್ರತೆಯಿಂದ ಇರಬೇಕು. ಹೊಟ್ಟೆಗೆ ಸಂಬಂಧಿಸಿದ ತೊಂದರೆ, ಪಿತ್ತ ಸಂಬಂಧಿ ತೊಂದರೆ, ಮೊದಲಾದವುಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ  ಏಕಾಗ್ರತೆಯಿಂದ ಮುಂದುವರಿಯಬೇಕು



ಪರಿಹಾರ  
ನರಸಿಂಹನ ಆರಾಧನೆಯನ್ನು ಮಾಡಿ.

ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್

ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಮಹಾವೀರಮ್

ನಮಾಮಿ ಋಣಮುಕ್ತಯೇ ||

  °~•~°~•~°~•~°~•~°~•~°



ಕರ್ಕಾಟಕ

   ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ಕೃಷಿಕರಿಗೆ ಬೆಳೆ ಹಾನಿಯಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ  ಕಲಹ ಏರ್ಪಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಗಂಟು ನೋವು, ಬೆನ್ನು ನೋವು, ನರ ಸಂಬಂಧಿ ತೊಂದರೆ, ತಲೆನೋವು ಮೊದಲಾದವುಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||

 °~•~°~•~°~•~°~•~°~•~°



ಸಿಂಹ

 ಆರಕ್ಷಕರು, ಸೈನಿಕರು, ಕ್ರೀಡಾಪಟುಗಳು,ಅಡುಗೆ ವ್ಯವಹಾರ ಮಾಡುವವರು, ಮೊದಲಾದವರಿಗೆ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ.ಉತ್ತಮ ಶ್ರದ್ಧೆ, ಹಾಗೂ ಏಕಾಗ್ರತೆಯಿಂದ  ಕಾರ್ಯಕ್ಷೇತ್ರದಲ್ಲಿ ತೊಡಗಿಸಿಕೊಂಡರುೂ ಕೂಡ ಕೆಲಸದಲ್ಲಿ ಹಿನ್ನಡೆ, ಅಡೆತಡೆಗಳು ಕಂಡುಬರುತ್ತದೆ. ಹಣ ಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಹಾಗೂ ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಮಗನ ಆರೋಗ್ಯ ಹದಗೆಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||

    °~•~°~•~°~•~°~•~°~•~°      


ಕನ್ಯಾ


     ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ ಅಡೆತಡೆಗಳು ಕಷ್ಟ ನಷ್ಟಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ಕುಟುಂಬದಲ್ಲಿ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು   ಹಾಗೂ ಹಿರಿಯರ ಮಾರ್ಗದರ್ಶನದಂತೆ ಮುನ್ನಡೆಯಿರಿ



ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ

ಜಪಿಸಲು :
ವಸುದೇವಸುತಂ  ದೇವಮ್

ಕಂಸಚಾಣೂರಮರ್ದನಮ್  |
ದೇವಕೀಪರಮಾನಂದಮ್

ಕೃಷ್ಣಂ ವಂದೇ  ಜಗದ್ಗುರುಮ್ ||

  °~•~°~•~°~•~°~•~°~•~°       


ತುಲಾ


       ನೂತನ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ ಒದಗಿ ಬರುತ್ತದೆ, ಕೃಷಿಕರಿಗೆ ಉತ್ತಮ ಬೆಳೆ ದೊರೆಯುತ್ತದೆ. ಸಮಾಜದಲ್ಲಿ ಉತ್ತಮ ಸ್ಥಾನಮಾನ ಗಳು  ದೊರೆಯಲಿದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಹೊಟ್ಟೆಗೆ ಸಂಬಂಧಿಸಿ ತೊಂದರೆ ಬರುವ ಲಕ್ಷಣಗಳು ಇರುವುದರಿಂದ ಆಹಾರದಲ್ಲಿ ಗಮನವಿರಲಿ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಏಕಾಗ್ರತೆಯಿಂದ ಮುನ್ನಡೆದರೆ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಸರ್ವರೂಪಮಯೀ ದೇವೀ

ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್

ನಮಾಮಿ ಪರಮೇಶ್ವರೀಮ್ ||


 °~•~°~•~°~•~°~•~°~•~°


ವೃಶ್ಚಿಕ


  
ನೀವು ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ ಅಡೆತಡೆಗಳು ಎದುರಾಗುತ್ತವೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಪಿತ್ತ ಸಂಬಂಧವಾದ ತೊಂದರೆಗಳು  ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಆಲಸ್ಯತನ ಬಿಟ್ಟು ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡು ಬರುತ್ತದೆ

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್

ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ

ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°


ಧನು


    
ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ.  ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ರಕ್ತ ಸಂಬಂಧಿ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕರಾಗಿರಬೇಕು, ವಾಹನ ಪ್ರಯಾಣ ದಲ್ಲಿ ಜಾಗರೂಕರಾಗಿರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು
ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು  ಪಡೆಯಿರಿ.

ಜಪಿಸಲು :
ಅಖಂಡಮಂಡಲಾಕಾರಮ್

ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ

ತಸ್ಮೈ ಶ್ರೀಗುರವೇ ನಮಃ ||

     °~•~°~•~°~•~°~•~°~•~°


ಮಕರ


    ನೂತನ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ಒದಗಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ  ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಮಗನ ಆರೋಗ್ಯ ಹದಗೆಡುವ ಲಕ್ಷಣಗಳು ಇರುವುದರಿಂದ ಜಾಗರೂಕರಾಗಿರಬೇಕು. ವಾತ ಸಂಬಂಧಿ ತೊಂದರೆ, ಶ್ವಾಸ ಸಂಬಂಧಿ ತೊಂದರೆ,  ಅಲರ್ಜಿ ಮೊದಲಾದವುಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ಕಂಡು ಬರುವುದು. ಮೊಬೈಲ್ ಟಿವಿ ಮೊದಲಾದವುಗಳಿಂದ ದೂರ ಇರಬೇಕು



ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.  

ಜಪಿಸಲು :
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||

   °~•~°~•~°~•~°~•~°~•~°          


ಕುಂಭ  


      ಭೂ ಸಂಬಂಧಿ ವ್ಯವಹಾರ ಮಾಡುವವರಿಗೆ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ.ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಶೀತ ಜ್ವರ ಮೊದಲಾದ ತೊಂದರೆ ಎದುರಿಸಬೇಕಾಗುತ್ತದೆ. ತಾಯಿಯ ಆರೋಗ್ಯ ಹದಗೆಡುವ ಲಕ್ಷಣಗಳು ಇರುವುದರಿಂದ ಜಾಗರೂಕರಾಗಿರಬೇಕು. ವಿದ್ಯಾರ್ಥಿಗಳು ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು



ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


  ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಅಡೆತಡೆಗಳು ಕಷ್ಟ ನಷ್ಟಗಳನ್ನು ಎದುರಿಸಬೇಕಾಗುತ್ತದೆ. ಅಧಿಕಾರಿಗಳಿಂದ ಅಸಮಾಧಾನದ ಮಾತುಗಳು ಕೇಳಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಆಹಾರದ ಮೂಲಕವಾಗಿ ಆರೋಗ್ಯ ಹದಗೆಡುವ  ಲಕ್ಷಣಗಳು ಇರುವುದರಿಂದ ಜಾಗರೂಕರಾಗಿರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡು ಬರುವುದು.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *