06.04.2019

ದಿನ ಭವಿಷ್ಯ

         

ವಿಕಾರಿನಾಮ ಸಂವತ್ಸರ / ಉತ್ತರಾಯಣ /
ವಸಂತ ಋತು /ಚೈತ್ರ ಮಾಸ /
ಶುಕ್ಲ ಪಕ್ಷ /ಪ್ರತಿಪತ್ ತಿಥಿ /

ಶನಿವಾರ/ರೇವತಿ/ಅಶ್ವಿನಿ ನಕ್ಷತ್ರ/

ದಿನಾಂಕ: 06.04.2019

 °~•~°~•~°~•~°~•~°~•~°

ಮೇಷ

        ನೂತನ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ, ಉತ್ತಮ ಸ್ಥಾನಮಾನ ಗೌರವಗಳು ಲಭಿಸುತ್ತವೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ, ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುವುದು. ಚರ್ಮ ಸಂಬಂಧಿ ತೊಂದರೆಗಳು, ಅಲರ್ಜಿ ತೊಂದರೆಗಳು, ಜ್ವರ, ದೇಹದಲ್ಲಿ ಉಷ್ಣತೆ  ಮೊದಲಾದತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಮುಂದುವರಿದರೆ ಉತ್ತಮ ಅಭಿವೃದ್ಧಿ ಕಂಡು ಬರುವುದು



ಪರಿಹಾರ:
ಮಂಗಳ ಗ್ರಹರ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಧರಣೀಗರ್ಭಸಂಭೂತಮ್ | ವಿದ್ಯುತ್ಕಾಂತಿಸಮಪ್ರಭಮ್ |
ಕುಮಾರಂ ಶಕ್ತಿಹಸ್ತಂ ಚ | ಮಂಗಲಮ್ ಪ್ರಣಮಾಮ್ಯಹಮ್ ||

°~•~°~•~°~•~°~•~°~•~°

    

ವೃಷಭ

         ಮಾಡುತ್ತಿರುವ ಕೆಲಸ ಕಾರ್ಯಗಳಲ್ಲಿ ಉತ್ತಮ ಶ್ರದ್ಧೆಯಿಂದ ಮುಂದುವರೆದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು. ಹಣಕಾಸಿನ ವಿಚಾರದಲ್ಲಿ  ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಕುಟುಂಬದಲ್ಲಿ ಅಶಾಂತಿ ತಲೆದೋರುತ್ತದೆ. ಆರೋಗ್ಯ ಸಂಬಂಧವಾದ ತೊಂದರೆಯನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ  ಮುಂದುವರಿಯಬೇಕು. ಗುರು ಹಿರಿಯರ ಆಶೀರ್ವಾದವನ್ನು ಪಡೆಯಿರಿ




ಪರಿಹಾರ
ಶುಕ್ರ  ಗ್ರಹರ ಆರಾಧನೆಯನ್ನು ಮಾಡಿಕೊಂಡು ಬಂದಲ್ಲಿ  ಶುಭ.

ಜಪಿಸಲು :
ಹಿಮಕುಂದ ಮೃಣಾಲಾಭಂ (ಸಮಾಭಾಸಂ) | ದೈತ್ಯಾನಾಂ ಪರಮಂ ಗುರುಮ್ |
ಸರ್ವಶಾಸ್ತ್ರಪ್ರವಕ್ತಾರಮ್ | ಭಾರ್ಗವಂ ಪ್ರಣಮಾಮ್ಯಹಮ್ ||

°~•~°~•~°~•~°~•~°~•~°



ಮಿಥುನ


   ಹಿರಿಯ ಅಧಿಕಾರಿಗಳಿಂದ ಅಸಮಾಧಾನದ ಮಾತುಗಳು ಕೇಳಿ ಬರುತ್ತದೆ, ವ್ಯವಹಾರಿಕ ಕ್ಷೇತ್ರದಲ್ಲಿ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ದಂಪತಿಗಳ ನಡುವೆ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ನರಸಂಬಂಧಿ ತೊಂದರೆಗಳು, ನಿದ್ರೆ ಗೆ ತೊಂದರೆ, ಉಷ್ಣತೆ,ಜ್ವರ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು



ಪರಿಹಾರ  
ಬುಧ  ಗ್ರಹರ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಪ್ರಿಯಂಗುಕಲಿಕಾಶ್ಯಾಮಮ್ |  ರೂಪೇಣಾಪ್ರತಿಮಂ ಬುಧಮ್ |
ಸೌಮ್ಯಂ ಸೌಮ್ಯಗುಣೋಪೇತಂ | ತಂ ಬುಧಮ್  ಪ್ರಣಮಾಮ್ಯಹಮ್ ||

  °~•~°~•~°~•~°~•~°~•~°



ಕರ್ಕಾಟಕ

   
ನೂತನ ವ್ಯವಹಾರವನ್ನು ತೊಡಗಿಸಿಕೊಳ್ಳುವ ಅವರಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ. ಕೃಷಿಕರಿಗೆ ಉತ್ತಮ ಲಾಭ  ಒದಗಿಬರುವುದು. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಮೈ ಕೈ ಗಂಟು ನೋವು, ಹೊಟ್ಟೆಗೆ ಸಂಬಂಧಿಸಿದ ತೊಂದರೆ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ವಿದ್ಯಾರ್ಥಿಗಳು ಉತ್ತಮ  ಪರಿಶ್ರಮದಿಂದ ಮುನ್ನಡೆಯಬೇಕು.ಗುರು ಹಿರಿಯರ ಆಶೀರ್ವಾದವನ್ನು ಪಡೆಯಿರಿ

ಪರಿಹಾರ
ಚಂದ್ರ ಗ್ರಹರ ಆರಾಧನೆಯಿಂದ ಉತ್ತಮ ಅಭಿವೃದ್ಧಿ ಕಂಡು ಬರುವುದು

ಜಪಿಸಲು :
ದಧಿಶಂಖತುಷಾರಾಭಮ್ |  ಕ್ಷೀರೋದಾರ್ಣವಸಂಭವಮ್ (ಸನ್ನಿಭಮ್) |
ನಮಾಮಿ ಶಶಿನಂ ಸೋಮಮ್ | ಶಂಭೋರ್ಮುಕುಟಭೂಷಣಮ್ ||

 °~•~°~•~°~•~°~•~°~•~°



ಸಿಂಹ

 ಉತ್ತಮ ಕಾರ್ಯಕ್ಷಮತೆಯಿಂದ ತೊಡಗಿಸಿಕೊಂಡಲ್ಲಿ ಮಾತ್ರ ವ್ಯವಹಾರಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು, ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುವುದು. ಆರೋಗ್ಯ ಸಂಬಂಧವಾದ  ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಮುನ್ನಡೆ.


ಪರಿಹಾರ
ರವಿ ಗ್ರಹರ ಆರಾಧನೆಯಿಂದ  ಶುಭವಾಗಲಿದೆ.

ಜಪಿಸಲು :
ಜಪಾಕುಸುಮಸಂಕಾಶಮ್ | ಕಾಶ್ಯಪೇಯಂ ಮಹಾದ್ಯುತಿಮ್ |
ತಮೋಽರಿಂ ಸರ್ವಪಾಪಘ್ನಮ್ | ಪ್ರಣತೋಽಸ್ಮಿ ದಿವಾಕರಮ್ ||

    °~•~°~•~°~•~°~•~°~•~°      


ಕನ್ಯಾ


     ವ್ಯವಹಾರಿಕ ಕ್ಷೇತ್ರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಆರ್ಥಿಕವಾದ  ಹಿನ್ನಡೆ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಜಗಳಗಳು ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಜ್ವರ, ಮೂತ್ರ ಸಂಬಂಧಿ ತೊಂದರೆಗಳು, ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳನ್ನು ಎದುರಿಸಬೇಕಾಗುವುದು ರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ  ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡು ಬರುವುದು



ಪರಿಹಾರ
ಗೋಪಾಲ ಕೃಷ್ಣನ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ವಂದೇ ವೃಂದಾವನಚರಮ್ | ವಲ್ಲವೀಜನವಲ್ಲಭಮ್ |
ಜಯಂತೀ ಸಂಭವಂ ಧಾಮ | ವೈಜಯಂತೀವಿಭೂಷಣಮ್ ||

  °~•~°~•~°~•~°~•~°~•~°       


ತುಲಾ


       ವ್ಯಾಪಾರಸ್ಥರು, ಕೃಷಿಕರು, ಜಲ ಸಂಬಂಧಿ ವ್ಯವಹಾರವನ್ನು ನಡೆಸುವವರು, ಭೂವ್ಯವಹಾರ ಮೊದಲಾದವರಿಗೆ ಉತ್ತಮ ಅಭಿವೃದ್ಧಿ ಕಂಡು ಬರುವುದು. ಉತ್ತಮ ಹಣ ಸಂಪಾದನೆ ಆಗುವುದು ಹಾಗೂ ದುಂದುವೆಚ್ಚ ಮಾಡದಿರಿ.  ಯುವಕ ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುವುದು. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||


 °~•~°~•~°~•~°~•~°~•~°


ವೃಶ್ಚಿಕ


  
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಕುಟುಂಬದಲ್ಲಿ ಶಾಂತಿ ನೆಲೆಗೊಳ್ಳುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಶೀತ ಜ್ವರ, ತಲೆನೋವು, ಕಫ, ತೊಂದರೆಗಳನ್ನು ಎದುರಿಸಬೇಕಾಗುವುದು ರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು  ಆಲಸ್ಯತನ ಬಿಟ್ಟು ಮುಂದುವರಿಯಬೇಕು.ಗುರು ಹಿರಿಯರ ಆಶೀರ್ವಾದವನ್ನು ಪಡೆಯಿರಿ

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್

ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ

ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°


ಧನು


    
ಉತ್ತಮ ಕಾರ್ಯಕ್ಷಮತೆಯನ್ನು  ಮೆಚ್ಚಿ ಉದ್ಯೋಗ ಕ್ಷೇತ್ರದಲ್ಲಿ   ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತದೆ. ಸ್ಥಾನಮಾನ ಗೌರವಗಳು ಲಭಿಸುತ್ತದೆ. ಉನ್ನತ ಹುದ್ದೆ ಲಭಿಸುತ್ತದೆ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ.  ದೇಹದಲ್ಲಿ ಉಷ್ಣತೆ ಗೆ ಸಂಬಂಧಪಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಾಹನ ಪ್ರಯಾಣಗಳ ಸಂದರ್ಭಗಳಲ್ಲಿ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಏಕಾಗ್ರತೆಯಿಂದ ಮುನ್ನಡೆಯಬೇಕು. ಮಕ್ಕಳ ಓಡಾಟದ ಸಂದರ್ಭಗಳಲ್ಲಿ ಜಾಗರೂಕರಾಗಿರಬೇಕು
ಪರಿಹಾರ
ಗುರು ಗ್ರಹರ ಆರಾಧನೆಯಿಂದ ಶುಭವಾಗಲಿದೆ

ಜಪಿಸಲು :
ದೇವಾನಾಂ ಚ ಋಷೀಣಾಂ ಚ | ಗುರುಂ ಕಾಂಚನಸನ್ನಿಭಮ್ |
ಬುದ್ಧಿಭೂತಂ ತ್ರಿಲೋಕೇಶಮ್ | ತಂ ನಮಾಮಿ ಬೃಹಸ್ಪತಿಮ್ ||

     °~•~°~•~°~•~°~•~°~•~°


ಮಕರ


    ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ. ಸ್ಥಾನಮಾನ ಗೌರವಗಳು ಲಭಿಸುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆಯಬೇಕು.ಗುರು ಹಿರಿಯರ ಆಶೀರ್ವಾದವನ್ನು ಪಡೆಯಿರಿ



ಪರಿಹಾರ
ಶನಿ ದೇವರ ಆರಾಧನೆಯಿಂದ ಶುಭ.  

ಜಪಿಸಲು :
ನೀಲಾಂಜನಸಮಾಭಾಸಮ್ | ರವಿಪುತ್ರಂ ಯಮಾಗ್ರಜಮ್ |
ಛಾಯಾಮಾರ್ತಾಂಡ ಸಂಭೂತಮ್ | ತಂ ನಮಾಮಿ ಶನೈಶ್ಚರಮ್||

   °~•~°~•~°~•~°~•~°~•~°          


ಕುಂಭ  


       ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿಯ ಅಭಿವೃದ್ಧಿಯನ್ನು  ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಏಳಿಗೆ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ನೆಲೆಗೊಳ್ಳುತ್ತದೆ. ಶೀತ ಜ್ವರ, ಮಾನಸಿಕವಾದ ತೊಂದರೆಗಳು ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು



ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಅಂಜನಾಗರ್ಭಸಂಭೂತ | ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್  | ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


    ವ್ಯವಹಾರಿಕ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಏಳಿಗೆ, ನಿಮಗೆ ಸೇರಬೇಕಾದ ಅಂತ ಹಣ, ಆಸ್ತಿ, ಭೂಮಿ ಮೊದಲಾದವುಗಳು ಒದಗಿ ಬರುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆದರೆ ಮಾತ್ರ ಅಭಿವೃದ್ಧಿ ಕಂಡು ಬರುವುದು


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ನಮಸ್ತೇ ಪುಂಡರೀಕಾಕ್ಷ | ನಮಸ್ತೇ ಪುರುಷೋತ್ತಮ |
ನಮಸ್ತೇ  ಸರ್ವಲೋಕಾತ್ಮನ್ | ನಮಸ್ತೇ ತಿಗ್ಮಚಕ್ರಿಣೇ ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *