12.04.2019

ದಿನ ಭವಿಷ್ಯ

         

ವಿಕಾರಿನಾಮ ಸಂವತ್ಸರ / ಉತ್ತರಾಯಣ /
ವಸಂತ ಋತು /ಚೈತ್ರ ಮಾಸ /
ಶುಕ್ಲ ಪಕ್ಷ /ಸಪ್ತಮಿ ತಿಥಿ /

ಶುಕ್ರವಾರ/ಆರ್ದ್ರಾ/ಪುನರ್ವಸು ನಕ್ಷತ್ರ/

ದಿನಾಂಕ: 12.04.2019

 °~•~°~•~°~•~°~•~°~•~°

ಮೇಷ

        ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ಮನಃಶಾಂತಿ ಕಳೆದುಕೊಳ್ಳಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು.  ಆಹಾರದಮೂಲಕವಾಗಿ ಆರೋಗ್ಯ ಹದಗೆಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು, ಚರ್ಮ ಸಂಬಂಧಿ ತೊಂದರೆಗಳು, ಅಲ್ಲರ್ಜಿ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಆಲಸಿ ತನವನ್ನು ಬಿಟ್ಟೂ ಮುಂದುವರಿಯಬೇಕು.



ಪರಿಹಾರ:
ಮಂಗಳ ಗ್ರಹರ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಧರಣೀಗರ್ಭಸಂಭೂತಮ್ | ವಿದ್ಯುತ್ಕಾಂತಿಸಮಪ್ರಭಮ್ |
ಕುಮಾರಂ ಶಕ್ತಿಹಸ್ತಂ ಚ | ಮಂಗಲಮ್ ಪ್ರಣಮಾಮ್ಯಹಮ್ ||

°~•~°~•~°~•~°~•~°~•~°

    

ವೃಷಭ

         ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿ  ಅಭಿವೃದ್ಧಿ ಕಂಡುಬರುವುದು. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಇತರರಿಂದ ಹಣದ ಸಹಾಯ ಒದಗಿ ಬರುತ್ತದೆ. ಕುಟುಂಬದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯ ಸಂಬಂಧಿ ತೊಂದರೆಗಳು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಮುನ್ನಡೆ ಕಂಡುಬರುತ್ತದೆ.




ಪರಿಹಾರ
ಶುಕ್ರ  ಗ್ರಹರ ಆರಾಧನೆಯನ್ನು ಮಾಡಿಕೊಂಡು ಬಂದಲ್ಲಿ  ಶುಭ.

ಜಪಿಸಲು :
ಹಿಮಕುಂದ ಮೃಣಾಲಾಭಮ್ (ಸಮಾಭಾಸಂ) | ದೈತ್ಯಾನಾಂ ಪರಮಂ ಗುರುಮ್ |
ಸರ್ವಶಾಸ್ತ್ರಪ್ರವಕ್ತಾರಮ್ | ಭಾರ್ಗವಂ ಪ್ರಣಮಾಮ್ಯಹಮ್ ||

°~•~°~•~°~•~°~•~°~•~°



ಮಿಥುನ


   ರಾಜಕೀಯ   ಕ್ಷೇತ್ರದಲ್ಲಿ ಇರುವವರು, ಸರಕಾರಿ ಸಂಬಂಧಪಟ್ಟ ಕೆಲಸ ಮಾಡುವವರು, ಅಧ್ಯಾಪಕರು ಮೊದಲಾದವರಿಗೆ ಉತ್ತಮ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ದೊರೆಯುತ್ತದೆ. ನೂತನ  ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ. ಕುಟುಂಬದಲ್ಲಿ ಶಾಂತಿ ನೆಲೆಗೊಳ್ಳುತ್ತದೆ. ಹೊಟ್ಟೆಗೆ ಸಂಬಂಧಪಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಸಾಧನೆಯಿಂದ ಉದ್ಯಮ ಅಭಿವೃದ್ಧಿ ಕಂಡು ಬರುವುದು.



ಪರಿಹಾರ  
ಬುಧ  ಗ್ರಹರ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಪ್ರಿಯಂಗುಕಲಿಕಾಶ್ಯಾಮಮ್ |  ರೂಪೇಣಾಪ್ರತಿಮಂ ಬುಧಮ್ |
ಸೌಮ್ಯಂ ಸೌಮ್ಯಗುಣೋಪೇತಂ | ತಂ ಬುಧಮ್  ಪ್ರಣಮಾಮ್ಯಹಮ್ ||

  °~•~°~•~°~•~°~•~°~•~°



ಕರ್ಕಾಟಕ

   
ಉತ್ತಮ ಶ್ರದ್ಧೆಯಿಂದ ಕೆಲಸ ಕಾರ್ಯವನ್ನು ತೊಡಗಿಸಿಕೊಂಡಲ್ಲಿ ಕಾರ್ಯಕ್ಷೇತ್ರದಲ್ಲಿ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಏಳಿಗೆ,  ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗ್ರತೆಯಿಂದ ಇರಬೇಕು. ಮೈ ಕೈ ಗಂಟು ನೋವು ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.  ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಏಕಾಗ್ರತೆಯಿಂದ ಮುನ್ನಡೆಯಬೇಕು.

ಪರಿಹಾರ
ಚಂದ್ರ ಗ್ರಹರ ಆರಾಧನೆಯಿಂದ ಉತ್ತಮ ಅಭಿವೃದ್ಧಿ ಕಂಡು ಬರುವುದು.

ಜಪಿಸಲು :
ದಧಿಶಂಖತುಷಾರಾಭಮ್ |  ಕ್ಷೀರೋದಾರ್ಣವಸಂಭವಮ್ (ಸನ್ನಿಭಮ್) |
ನಮಾಮಿ ಶಶಿನಂ ಸೋಮಮ್ | ಶಂಭೋರ್ಮುಕುಟಭೂಷಣಮ್ ||

 °~•~°~•~°~•~°~•~°~•~°



ಸಿಂಹ

 ನೂತನ ಉದ್ಯೋಗವನ್ನು ತೊಡಗಿಸಿಕೊಳ್ಳುವ ಅವರಿಗೆ ಉತ್ತಮ ಅಭಿವೃದ್ಧಿ, ಸ್ಥಾನಮಾನಗಳು, ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ, ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ.  ಮೈ ಕೈ ಗಂಟು ನೋವು, ತಲೆನೋವು, ಉಷ್ಣತೆ, ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಮುನ್ನಡೆ.


ಪರಿಹಾರ
ರವಿ ಗ್ರಹರ ಆರಾಧನೆಯಿಂದ  ಶುಭವಾಗಲಿದೆ.

ಜಪಿಸಲು :
ಜಪಾಕುಸುಮಸಂಕಾಶಮ್ | ಕಾಶ್ಯಪೇಯಂ ಮಹಾದ್ಯುತಿಮ್ |
ತಮೋಽರಿಂ ಸರ್ವಪಾಪಘ್ನಮ್ | ಪ್ರಣತೋಽಸ್ಮಿ ದಿವಾಕರಮ್ ||

    °~•~°~•~°~•~°~•~°~•~°      


ಕನ್ಯಾ


     ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ, ವ್ಯವಹರಿಕ ಕ್ಷೇತ್ರದಲ್ಲಿ ಉತ್ತಮ ಸ್ಥಾನಮಾನಗಳು ಗೌರವಗಳು ದೊರಕುತ್ತವೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ನೂತನ  ಗೃಹಉಪಯೋಗಿ ವಸ್ತುಗಳ ಖರೀದಿಗೆ ಅವಕಾಶಗಳು ಒದಗಿ ಬರುತ್ತದೆ. ಮೂತ್ರಸಂಬಂಧಿ ತೊಂದರೆಗಳು ಬರುವ ಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡು ಬರುತ್ತದೆ.



ಪರಿಹಾರ
ಗೋಪಾಲ ಕೃಷ್ಣನ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ವಂದೇ ವೃಂದಾವನಚರಮ್ | ವಲ್ಲವೀಜನವಲ್ಲಭಮ್ |
ಜಯಂತೀ ಸಂಭವಂ ಧಾಮ | ವೈಜಯಂತೀವಿಭೂಷಣಮ್ ||

  °~•~°~•~°~•~°~•~°~•~°       


ತುಲಾ


       ತೊಡಗಿಸಿಕೊಂಡ ಕೆಲಸಕಾರ್ಯಗಳಲ್ಲಿ ಪರಿಶ್ರಮದಿಂದ ಮುಂದುವರಿಯಬೇಕು. ಹಣಕಾಸಿನ ವಿಚಾರದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ  ಆಹಾರದಲ್ಲಿ ಜಾಗ್ರತೆಯಿಂದ ಇರಬೇಕು. ಚರ್ಮ ಸಂಬಂಧಿ ತೊಂದರೆಗಳು, ಅಲರ್ಜಿ, ಜ್ವರ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||


 °~•~°~•~°~•~°~•~°~•~°


ವೃಶ್ಚಿಕ


  
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿಯ ಮುನ್ನಡೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ನರಸಂಬಂಧಿ ತೊಂದರೆಗಳು, ದೇಹದಲ್ಲಿ ಉಷ್ಣತೆ, ತಲೆನೋವು ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು  ಆಲಸ್ಯತನ ಬಿಟ್ಟು ಮುಂದುವರಿಯಬೇಕು.

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್ | ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ | ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°


ಧನು


    
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ,  ಸ್ಥಾನ ಮಾನಗಳು ಬರೆಯುತ್ತದೆ, ಹೊಸ ಉದ್ಯೋಗ ಆಸಕ್ತರಿಗೆ ಅವಕಾಶಗಳು ದೊರೆಯುತ್ತವೆ.  ಹಣಕಾಸಿನ ವಿಷಯಗಳಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ, ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಚರ್ಮ ಸಂಬಂಧಿ ತೊಂದರೆಗಳು, ಅಲರ್ಜಿ, ಶೀತ ಜ್ವರ, ನರ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆಯಬೇಕು.
ಪರಿಹಾರ
ಗುರು ಗ್ರಹರ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ದೇವಾನಾಂ ಚ ಋಷೀಣಾಂ ಚ | ಗುರುಂ ಕಾಂಚನಸನ್ನಿಭಮ್ |
ಬುದ್ಧಿಭೂತಂ ತ್ರಿಲೋಕೇಶಮ್ | ತಂ ನಮಾಮಿ ಬೃಹಸ್ಪತಿಮ್ ||

     °~•~°~•~°~•~°~•~°~•~°


ಮಕರ


    ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು.  ಶ್ವಾಸ ಸಂಬಂಧಿ ತೊಂದರೆಗಳು, ಅಲರ್ಜಿ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಏಕಾಗ್ರತೆಯಿಂದ ಮುನ್ನಡೆಯಬೇಕು.



ಪರಿಹಾರ
ಶನಿ ದೇವರ ಆರಾಧನೆಯಿಂದ ಶುಭ.  

ಜಪಿಸಲು :
ನೀಲಾಂಜನಸಮಾಭಾಸಮ್ | ರವಿಪುತ್ರಂ ಯಮಾಗ್ರಜಮ್ |
ಛಾಯಾಮಾರ್ತಾಂಡ ಸಂಭೂತಮ್ | ತಂ ನಮಾಮಿ ಶನೈಶ್ಚರಮ್||

   °~•~°~•~°~•~°~•~°~•~°          


ಕುಂಭ  


       ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ ಪರಿಶ್ರಮದಿಂದ ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರಗಳಲ್ಲಿ ನಿಧಾನಗತಿಯ  ಅಭಿವೃದ್ಧಿ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನಡೆಯುತ್ತದೆ. ಶೀತ ಜ್ವರ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ನಿಧಾನಗತಿಯ ಮುನ್ನಡೆ.



ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಅಂಜನಾಗರ್ಭಸಂಭೂತ | ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್  | ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


    ತಮ್ಮ ಆಲಸ್ಯತನ ದಿಂದ ಹೊಸ ಅವಕಾಶಗಳನ್ನು ಕಳೆದುಕೊಳ್ಳಬೇಡಿ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ  ಅಭಿವೃದ್ಧಿ ಕಂಡುಬರುತ್ತದೆ. ದಾಂಪತ್ಯ ಜೀವನದಲ್ಲಿ ಶಾಂತಿ ನೆಲೆಗೊಳ್ಳುವುದು ಹಾಗೂ ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಮುನ್ನಡೆ.

ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ನಮಸ್ತೇ ಪುಂಡರೀಕಾಕ್ಷ | ನಮಸ್ತೇ ಪುರುಷೋತ್ತಮ |
ನಮಸ್ತೇ  ಸರ್ವಲೋಕಾತ್ಮನ್ | ನಮಸ್ತೇ ತಿಗ್ಮಚಕ್ರಿಣೇ ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Leave a Reply

Your email address will not be published. Required fields are marked *