13.04.2019

ದಿನ ಭವಿಷ್ಯ

         

ವಿಕಾರಿನಾಮ ಸಂವತ್ಸರ / ಉತ್ತರಾಯಣ /
ವಸಂತ ಋತು /ಚೈತ್ರ ಮಾಸ /
ಶುಕ್ಲ ಪಕ್ಷ /ಅಷ್ಠಮಿ/ನವಮಿ ತಿಥಿ /

ಶನಿವಾರ/ಪುಷ್ಯ ನಕ್ಷತ್ರ/

ದಿನಾಂಕ: 13.04.2019

 °~•~°~•~°~•~°~•~°~•~°

 

ಮೇಷ

 

        ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ ಹಣಕಾಸಿನ ವಿಚಾರಗಳಲ್ಲಿ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ  ನೆಲೆಸುವುದು. ಆರೋಗ್ಯ ಸಂಬಂಧವಾದ ತೊಂದರೆಗಳು ಎದುರಾಗುತ್ತದೆ. ವಿದ್ಯಾರ್ಥಿಗಳು ಜಾಗರೂಕತೆಯಿಂದ ಮುನ್ನಡೆಯಬೇಕು.



ಪರಿಹಾರ:
ಮಂಗಳ ಗ್ರಹರ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಧರಣೀಗರ್ಭಸಂಭೂತಮ್ | ವಿದ್ಯುತ್ಕಾಂತಿಸಮಪ್ರಭಮ್ |
ಕುಮಾರಂ ಶಕ್ತಿಹಸ್ತಂ ಚ | ಮಂಗಲಮ್ ಪ್ರಣಮಾಮ್ಯಹಮ್ ||

°~•~°~•~°~•~°~•~°~•~°

    

ವೃಷಭ

         ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಅನಗತ್ಯ ತೊಂದರೆ ಎದುರಿಸಬೇಕಾಗುತ್ತದೆ. ಆಹಾರದ ಮೂಲಕ ಆರೋಗ್ಯ ಹದಗೆಡುವ ಲಕ್ಷಣ ಗಳಿರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಆಲಸ್ಯತನ ಬಿಟ್ಟು ಮುಂದುವರಿಯಬೇಕು.




ಪರಿಹಾರ
ಶುಕ್ರ  ಗ್ರಹರ ಆರಾಧನೆಯನ್ನು ಮಾಡಿಕೊಂಡು ಬಂದಲ್ಲಿ  ಶುಭ.

ಜಪಿಸಲು :
ಹಿಮಕುಂದ ಮೃಣಾಲಾಭಮ್ (ಸಮಾಭಾಸಂ) | ದೈತ್ಯಾನಾಂ ಪರಮಂ ಗುರುಮ್ |
ಸರ್ವಶಾಸ್ತ್ರಪ್ರವಕ್ತಾರಮ್ | ಭಾರ್ಗವಂ ಪ್ರಣಮಾಮ್ಯಹಮ್ ||

°~•~°~•~°~•~°~•~°~•~°



ಮಿಥುನ


   ನಿಮ್ಮ ಕಾರ್ಯಕ್ಷಮತೆಯಿಂದ ಉತ್ತಮ  ಹೊಗಳಿಕೆಗೆ ಒಳಗಾಗುವಿರಿ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು.ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯದಲ್ಲಿ ಸಮಸ್ಯೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಮುನ್ನಡೆ



ಪರಿಹಾರ  
ಬುಧ  ಗ್ರಹರ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಪ್ರಿಯಂಗುಕಲಿಕಾಶ್ಯಾಮಮ್ |  ರೂಪೇಣಾಪ್ರತಿಮಂ ಬುಧಮ್ |
ಸೌಮ್ಯಂ ಸೌಮ್ಯಗುಣೋಪೇತಮ್ | ತಂ ಬುಧಂ  ಪ್ರಣಮಾಮ್ಯಹಮ್ ||

  °~•~°~•~°~•~°~•~°~•~°



ಕರ್ಕಾಟಕ

   
ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತವೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ.‌ ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ವಿದ್ಯಾರ್ಥಿಗಳಿಗೆ ಮುನ್ನಡೆ.

ಪರಿಹಾರ
ಚಂದ್ರ ಗ್ರಹರ ಆರಾಧನೆಯಿಂದ ಉತ್ತಮ ಅಭಿವೃದ್ಧಿ ಕಂಡು ಬರುವುದು.

ಜಪಿಸಲು :
ದಧಿಶಂಖತುಷಾರಾಭಮ್ |  ಕ್ಷೀರೋದಾರ್ಣವಸಂಭವಮ್ (ಸನ್ನಿಭಮ್) |
ನಮಾಮಿ ಶಶಿನಂ ಸೋಮಮ್ | ಶಂಭೋರ್ಮುಕುಟಭೂಷಣಮ್ ||

 °~•~°~•~°~•~°~•~°~•~°



ಸಿಂಹ

 ಉತ್ತಮ ಶ್ರದ್ಧೆಯಿಂದ ಕೆಲಸ ಕಾರ್ಯವನ್ನು ತೊಡಗಿಸಿಕೊಂಡಲ್ಲಿ ಮಾತ್ರ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುವುದು.  ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಏಕಾಗ್ರತೆಯಿಂದ ಮುನ್ನಡೆದರೆ ಮಾತ್ರ ಅಭಿವೃದ್ಧಿ ಕಂಡು ಬರುವುದು.


ಪರಿಹಾರ
ರವಿ ಗ್ರಹರ ಆರಾಧನೆಯಿಂದ  ಶುಭವಾಗಲಿದೆ.

ಜಪಿಸಲು :
ಜಪಾಕುಸುಮಸಂಕಾಶಮ್ | ಕಾಶ್ಯಪೇಯಂ ಮಹಾದ್ಯುತಿಮ್ |
ತಮೋಽರಿಂ ಸರ್ವಪಾಪಘ್ನಮ್ | ಪ್ರಣತೋಽಸ್ಮಿ ದಿವಾಕರಮ್ ||

    °~•~°~•~°~•~°~•~°~•~°      

 


ಕನ್ಯಾ


     ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಅಡೆತಡೆಗಳು ಕಷ್ಟ ನಷ್ಟಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆಯಬೇಕು.



ಪರಿಹಾರ
ಗೋಪಾಲ ಕೃಷ್ಣನ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ವಂದೇ ವೃಂದಾವನಚರಮ್ | ವಲ್ಲವೀಜನವಲ್ಲಭಮ್ |
ಜಯಂತೀ ಸಂಭವಂ ಧಾಮ | ವೈಜಯಂತೀವಿಭೂಷಣಮ್ ||

  °~•~°~•~°~•~°~•~°~•~°       

 


ತುಲಾ


       ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಸ್ಥಾನಮಾನ ಗೌರವಗಳು ಲಭಿಸುತ್ತವೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು ಆರೋಗ್ಯ ಸಂಬಂಧವಾದ ತೊಂದರೆಗಳು ಎದುರಾಗುತ್ತದೆ ವಿದ್ಯಾರ್ಥಿಗಳು ಪರಿಶ್ರಮದಿಂದ ಮುನ್ನಡೆ.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||


 °~•~°~•~°~•~°~•~°~•~°

 


ವೃಶ್ಚಿಕ


  
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುತ್ತದೆ.  ದಾಂಪತ್ಯಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯದಲ್ಲಿ ಸುಧಾರಣೆ ಆಗುವುದು. ವಿದ್ಯಾರ್ಥಿಗಳಿಗೆ ಮುನ್ನಡೆ

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್ | ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ | ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°

 


ಧನು


    
ಉತ್ತಮ ಶ್ರದ್ಧೆಯಿಂದ ಕೆಲಸ ಕಾರ್ಯವನ್ನು ತೊಡಗಿಸಿಕೊಂಡಲ್ಲಿ  ನಿಧಾನ ಗತಿ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ  ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ತೊಂದರೆಗಳು ಎದುರಾಗುತ್ತದೆ. ವಿದ್ಯಾರ್ಥಿಗಳಿಗೆ ಶ್ರಮದಿಂದ ಮುನ್ನಡೆ.
ಪರಿಹಾರ
ಗುರು ಗ್ರಹರ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ದೇವಾನಾಂ ಚ ಋಷೀಣಾಂ ಚ | ಗುರುಂ ಕಾಂಚನಸನ್ನಿಭಮ್ |
ಬುದ್ಧಿಭೂತಂ ತ್ರಿಲೋಕೇಶಮ್ | ತಂ ನಮಾಮಿ ಬೃಹಸ್ಪತಿಮ್ ||

     °~•~°~•~°~•~°~•~°~•~°

 


ಮಕರ


    ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತವೆ.  ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಮುನ್ನಡೆ.



ಪರಿಹಾರ
ಶನಿ ದೇವರ ಆರಾಧನೆಯಿಂದ ಶುಭ.  

ಜಪಿಸಲು :
ನೀಲಾಂಜನಸಮಾಭಾಸಮ್ | ರವಿಪುತ್ರಂ ಯಮಾಗ್ರಜಮ್ |
ಛಾಯಾಮಾರ್ತಾಂಡ ಸಂಭೂತಮ್ | ತಂ ನಮಾಮಿ ಶನೈಶ್ಚರಮ್||

   °~•~°~•~°~•~°~•~°~•~°          

 


ಕುಂಭ  


       .ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಹಣಕಾಸಿನ ವಿಚಾರದಲ್ಲಿ  ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ಆರೋಗ್ಯದಲ್ಲಿ ಉತ್ತಮ ಚೇತರಿಕೆ ಕಂಡು ಬರುತ್ತದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದಿಂದ ತೊಡಗಿಸಿಕೊಂಡರೆ ಮಾತ್ರ  ಅಭಿವೃದ್ಧಿ ಕಂಡುಬರುವುದು
ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಅಂಜನಾಗರ್ಭಸಂಭೂತ | ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್  | ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


    ಉತ್ತಮ ಪರಿಶ್ರಮದಿಂದ ತೊಡಗಿಸಿಕೊಂಡರೆ ಮಾತ್ರ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ   ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಆರೋಗ್ಯ ಸಂಬಂಧವಾದ ತೊಂದರೆಗಳು ಎದುರಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು, ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆಯಬೇಕು.

 

ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ನಮಸ್ತೇ ಪುಂಡರೀಕಾಕ್ಷ | ನಮಸ್ತೇ ಪುರುಷೋತ್ತಮ |
ನಮಸ್ತೇ  ಸರ್ವಲೋಕಾತ್ಮನ್ | ನಮಸ್ತೇ ತಿಗ್ಮಚಕ್ರಿಣೇ ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *