14.04.2019

ದಿನ ಭವಿಷ್ಯ

         

ವಿಕಾರಿನಾಮ ಸಂವತ್ಸರ / ಉತ್ತರಾಯಣ /
ವಸಂತ ಋತು /ಚೈತ್ರ ಮಾಸ /
ಶುಕ್ಲ ಪಕ್ಷ /ದಶಮಿ ತಿಥಿ /

ರವಿವಾರ/ಆಶ್ಲೇಷಾ ನಕ್ಷತ್ರ/

ದಿನಾಂಕ: 14.04.2019

 °~•~°~•~°~•~°~•~°~•~°

ಮೇಷ

        ನೂತನ ಗೃಹ ಉಪಯೋಗಿ ವಸ್ತುಗಳ ಖರೀದಿಗೆ ಅವಕಾಶಗಳು ಒದಗಿ ಬರುತ್ತವೆ. ನೂತನ ವಾಹನ, ಅಲಂಕಾರಿಕ ವಸ್ತುಗಳನ್ನು ಖರೀದಿಸುವಲ್ಲಿ ಉತ್ತಮ ಅವಕಾಶಗಳು ದೊರೆಯಲಿವೆ. ಹಣಕಾಸಿನ ವಿಚಾರಗಳಲ್ಲಿ  ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ವ್ಯಾವಹಾರಿಕ ಕ್ಷೇತ್ರದಲ್ಲಿ ನಿಧಾನಗತಿಯ ಏಳಿಗೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಚರ್ಮ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ  ಮುನ್ನಡೆಯಬೇಕು.



ಪರಿಹಾರ:
ಮಂಗಳ ಗ್ರಹರ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಧರಣೀಗರ್ಭಸಂಭೂತಮ್ | ವಿದ್ಯುತ್ಕಾಂತಿಸಮಪ್ರಭಮ್ |
ಕುಮಾರಂ ಶಕ್ತಿಹಸ್ತಂ ಚ | ಮಂಗಲಮ್ ಪ್ರಣಮಾಮ್ಯಹಮ್ ||

°~•~°~•~°~•~°~•~°~•~°

    

ವೃಷಭ

         ಆಹಾರದ ಮೂಲಕವಾಗಿ ಆರೋಗ್ಯ  ಹದಗೆಡುವ ಲಕ್ಷಣಗಳು ಇರುವುದರಿಂದ  ಜಾಗ್ರತೆಯಿಂದ ಇರಬೇಕು. ಹಣಕಾಸಿನ ವಿಚಾರಗಳಲ್ಲಿ   ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಉತ್ತಮ ಶ್ರದ್ಧೆಯಿಂದ, ಏಕಾಗ್ರತೆಯಿಂದ ಕೆಲಸವನ್ನು ಮುಂದುವರಿಸಿದಲ್ಲಿ ಮಾತ್ರ ಅಭಿವೃದ್ಧಿ ಕಂಡು ಬರುವುದು. ವಿದ್ಯಾರ್ಥಿಗಳು ಆಲಸ್ಯತನ ಬಿಟ್ಟು ಮುಂದುವರಿಯಬೇಕು.




ಪರಿಹಾರ
ಶುಕ್ರ  ಗ್ರಹರ ಆರಾಧನೆಯನ್ನು ಮಾಡಿಕೊಂಡು ಬಂದಲ್ಲಿ  ಶುಭ.

ಜಪಿಸಲು :
ಹಿಮಕುಂದ ಮೃಣಾಲಾಭಮ್ (ಸಮಾಭಾಸಂ) | ದೈತ್ಯಾನಾಂ ಪರಮಂ ಗುರುಮ್ |
ಸರ್ವಶಾಸ್ತ್ರಪ್ರವಕ್ತಾರಮ್ | ಭಾರ್ಗವಂ ಪ್ರಣಮಾಮ್ಯಹಮ್ ||

°~•~°~•~°~•~°~•~°~•~°



ಮಿಥುನ


   ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ.  ಕುಟುಂಬದಲ್ಲಿ ಉತ್ತಮ ಮನಃಶಾಂತಿ ನೆಲೆಗೊಳ್ಳುತ್ತದೆ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಕಂಡು ಬರುವುದು.  ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ನರ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ.



ಪರಿಹಾರ  
ಬುಧ  ಗ್ರಹರ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಪ್ರಿಯಂಗುಕಲಿಕಾಶ್ಯಾಮಮ್ |  ರೂಪೇಣಾಪ್ರತಿಮಂ ಬುಧಮ್ |
ಸೌಮ್ಯಂ ಸೌಮ್ಯಗುಣೋಪೇತಮ್ | ತಂ ಬುಧಂ  ಪ್ರಣಮಾಮ್ಯಹಮ್ ||

  °~•~°~•~°~•~°~•~°~•~°



ಕರ್ಕಾಟಕ

   
ನೂತನ ಕೆಲಸವನ್ನು ಆರಂಭಿಸುವವರೆಗೆ ಉತ್ತಮ ಸಮಯ ಒದಗಿ ಬರುತ್ತದೆ. ಉದ್ಯೋಗ ಕ್ಷೇತ್ರದಲ್ಲಿ  ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ, ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಮೈ ಕೈ ಗಂಟು ನೋವು, ಹೊಟ್ಟೆ ನೋವು ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕತೆಯಿಂದ ಇರಬೇಕು. ಮಕ್ಕಳ ಓಡಾಟಗಳ ಸಂದರ್ಭದಲ್ಲಿ ಜಾಗ್ರತೆ ವಹಿಸಿ.

ಪರಿಹಾರ
ಚಂದ್ರ ಗ್ರಹರ ಆರಾಧನೆಯಿಂದ ಉತ್ತಮ ಅಭಿವೃದ್ಧಿ ಕಂಡು ಬರುವುದು.

ಜಪಿಸಲು :
ದಧಿಶಂಖತುಷಾರಾಭಮ್ |  ಕ್ಷೀರೋದಾರ್ಣವಸಂಭವಮ್ (ಸನ್ನಿಭಮ್) |
ನಮಾಮಿ ಶಶಿನಂ ಸೋಮಮ್ | ಶಂಭೋರ್ಮುಕುಟಭೂಷಣಮ್ ||

 °~•~°~•~°~•~°~•~°~•~°



ಸಿಂಹ

 ಆತ್ಮಸ್ಥೈರ್ಯದಿಂದ ಎದೆಗುಂದದೆ ಕೆಲಸವನ್ನು ಮುನ್ನಡೆಸಿಕೊಂಡು ಬಂದಲ್ಲಿ ಅಭಿವೃದ್ಧಿ  ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರಗಳಲ್ಲಿ ತೊಂದರೆ ಬರುವ ಲಕ್ಷಣಗಳು ಇರುವುದರಿಂದ ದುಂದು ವೆಚ್ಚ ಮಾಡದಿರಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು, ಆರೋಗ್ಯ ಸಂಬಂಧವಾದ ತೊಂದರೆಗಳು ಎದುರಾಗುತ್ತದೆ.  ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಮಾತ್ರ ಏಳಿಗೆ ದೊರೆಯಲಿದೆ.


ಪರಿಹಾರ
ರವಿ ಗ್ರಹರ ಆರಾಧನೆಯಿಂದ  ಶುಭವಾಗಲಿದೆ.

ಜಪಿಸಲು :
ಜಪಾಕುಸುಮಸಂಕಾಶಮ್ | ಕಾಶ್ಯಪೇಯಂ ಮಹಾದ್ಯುತಿಮ್ |
ತಮೋಽರಿಂ ಸರ್ವಪಾಪಘ್ನಮ್ | ಪ್ರಣತೋಽಸ್ಮಿ ದಿವಾಕರಮ್ ||

    °~•~°~•~°~•~°~•~°~•~°      


ಕನ್ಯಾ


     ವ್ಯಾಪಾರಸ್ಥರಿಗೆ ಆದಾಯದಲ್ಲಿ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಹಣಕಾಸಿನ  ವಿಚಾರಗಳಲ್ಲಿ ನಿಧಾನಗತಿ ಅಭಿವೃದ್ಧಿ ಕಂಡುಬರುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಿ. ಉದರ ಸಂಬಂಧಿ ತೊಂದರೆಗಳು ಎದುರಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಏಕಾಗ್ರತೆಯಿಂದ ಮುನ್ನಡೆಯಬೇಕು.



ಪರಿಹಾರ
ಗೋಪಾಲ ಕೃಷ್ಣನ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ವಂದೇ ವೃಂದಾವನಚರಮ್ | ವಲ್ಲವೀಜನವಲ್ಲಭಮ್ |
ಜಯಂತೀ ಸಂಭವಂ ಧಾಮ | ವೈಜಯಂತೀವಿಭೂಷಣಮ್ ||

  °~•~°~•~°~•~°~•~°~•~°       


ತುಲಾ


       ಆತ್ಮಸ್ಥೈರ್ಯದಿಂದ ಕೆಲಸ ಕಾರ್ಯವನ್ನು ಮುನ್ನಡೆಸಬೇಕು. ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕರಾಗಿರಬೇಕು. ವಿದ್ಯಾರ್ಥಿಗಳು ತಮ್ಮ ಉತ್ತಮ ಪ್ರಯತ್ನದಿಂದ ಮುನ್ನಡೆಯಬೇಕು.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||


 °~•~°~•~°~•~°~•~°~•~°


ವೃಶ್ಚಿಕ


  
ತೊಡಗಿಸಿಕೊಂಡ ಕೆಲಸಕಾರ್ಯಗಳಲ್ಲಿ ಅಡೆತಡೆಗಳು ಕಷ್ಟನಷ್ಟಗಳು ಎದುರಾಗುತ್ತವೆ. ಹಣಕಾಸಿನ ವಿಚಾರದಲ್ಲಿ  ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಆಲಸಿ ತನವನ್ನು ಬಿಟ್ಟೂ ಮುಂದುವರೆದರೆ ಮಾತ್ರ ವಿದ್ಯಾರ್ಥಿಗಳಿಗೆ ಮುನ್ನಡೆ.

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್ | ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ | ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°


ಧನು


    
ಶಿಸ್ತಿನಿಂದ  ತಮ್ಮ ಕೆಲಸವನ್ನು ನಿಭಾಯಿಸಿ. ಆರ್ಥಿಕವಾದ ನಿಧಾನಗತಿಯ ಅಭಿವೃದ್ಧಿ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಮನಸ್ಸಿನಿಂದ ಏಕಾಗ್ರತೆಯಿಂದ ಮುಂದುವರಿಯಬೇಕು.
ಪರಿಹಾರ
ಗುರು ಗ್ರಹರ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ದೇವಾನಾಂ ಚ ಋಷೀಣಾಂ ಚ | ಗುರುಂ ಕಾಂಚನಸನ್ನಿಭಮ್ |
ಬುದ್ಧಿಭೂತಂ ತ್ರಿಲೋಕೇಶಮ್ | ತಂ ನಮಾಮಿ ಬೃಹಸ್ಪತಿಮ್ ||

     °~•~°~•~°~•~°~•~°~•~°


ಮಕರ


    ವ್ಯಾಪಾರಸ್ಥರಿಗೆ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ ನೂತನ ವ್ಯವಹಾರವನ್ನು ತೊಡಗಿಕೊಳ್ಳುವವರಿಗೆ ಉತ್ತಮ ಅವಕಾಶಗಳು ದೊರೆಯುತ್ತದೆ ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಹಾಗೂ   ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಅಲರ್ಜಿ ಗೆ ಸಂಬಂಧಿಸಿದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಮುನ್ನಡೆ.



ಪರಿಹಾರ
ಶನಿ ದೇವರ ಆರಾಧನೆಯಿಂದ ಶುಭ.  

ಜಪಿಸಲು :
ನೀಲಾಂಜನಸಮಾಭಾಸಮ್ | ರವಿಪುತ್ರಂ ಯಮಾಗ್ರಜಮ್ |
ಛಾಯಾಮಾರ್ತಾಂಡ ಸಂಭೂತಮ್ | ತಂ ನಮಾಮಿ ಶನೈಶ್ಚರಮ್||

   °~•~°~•~°~•~°~•~°~•~°          


ಕುಂಭ  


       .ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ದೊರೆಯುತ್ತದೆ, ವಿನಾಕಾರಣ ಖರ್ಚು ವೆಚ್ಚಗಳನ್ನು ಮಾಡದಿರಿ. ದಾಂಪತ್ಯ ಜೀವನದಲ್ಲಿ ಶಾಂತಿ ನೆಲೆಗೊಳ್ಳುವುದು. ಶೀತ ಜ್ವರ,  ತಲೆನೋವು,ಕಣ್ಣು ನೋವು ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಮುನ್ನಡೆ.
ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಅಂಜನಾಗರ್ಭಸಂಭೂತ | ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್  | ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


    ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ  ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು.ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಯುವಕ ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುವುದು. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಮಾತ್ರ  ಅಭಿವೃದ್ಧಿ ಕಂಡು ಬರುವುದು.

ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ನಮಸ್ತೇ ಪುಂಡರೀಕಾಕ್ಷ | ನಮಸ್ತೇ ಪುರುಷೋತ್ತಮ |
ನಮಸ್ತೇ  ಸರ್ವಲೋಕಾತ್ಮನ್ | ನಮಸ್ತೇ ತಿಗ್ಮಚಕ್ರಿಣೇ ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Leave a Reply

Your email address will not be published. Required fields are marked *