21.04.2019

ದಿನ ಭವಿಷ್ಯ

       

ವಿಕಾರಿನಾಮ ಸಂವತ್ಸರ / ಉತ್ತರಾಯಣ /
ವಸಂತ ಋತು /ಚೈತ್ರ ಮಾಸ /
ಕೃಷ್ಣ ಪಕ್ಷ /ದ್ವಿತೀಯಾ ತಿಥಿ /

ರವಿವಾರ/ವಿಶಾಖಾ ನಕ್ಷತ್ರ/

ದಿನಾಂಕ: 21.04.2019

 °~•~°~•~°~•~°~•~°~•~°

ಮೇಷ

        ಉತ್ತಮವಾಗಿ ಕೆಲಸವನ್ನು ತೊಡಗಿಸಿಕೊಂಡಲ್ಲಿ ವ್ಯಾವಹಾರಿಕ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ದೊರೆಯುತ್ತದೆ. ಸ್ಥಾನಮಾನ ಗೌರವಗಳು ಲಭಿಸುತ್ತವೆ.  ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಯುವಕ ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಚರ್ಮ ಸಂಬಂಧಿ ತೊಂದರೆಗಳು, ಶ್ವಾಸ  ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆದರೆ ಮಾತ್ರ ಅಭಿವೃದ್ಧಿ ಕಂಡು ಬರುತ್ತದೆ.



ಪರಿಹಾರ:
ಮಂಗಳ ಗ್ರಹರ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಧರಣೀಗರ್ಭಸಂಭೂತಮ್ | ವಿದ್ಯುತ್ಕಾಂತಿಸಮಪ್ರಭಮ್ |
ಕುಮಾರಂ ಶಕ್ತಿಹಸ್ತಂ ಚ | ಮಂಗಲಮ್ ಪ್ರಣಮಾಮ್ಯಹಮ್ ||

°~•~°~•~°~•~°~•~°~•~°

    

ವೃಷಭ

         ಉದ್ಯೋಗ ಕ್ಷೇತ್ರದಲ್ಲಿ  ನಿಧಾನಗತಿಯ ಅಭಿವೃದ್ಧಿ ಕಂಡು ಬಂದರೂ ಕೂಡ  ಮನಃಶಾಂತಿ ಕಳೆದುಕೊಳ್ಳಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಶೀತ ಜ್ವರ, ಕಫ, ತಲೆನೋವು, ಕಣ್ಣು ನೋವು, ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುವುದು ರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ದೊರೆಯುತ್ತದೆ.




ಪರಿಹಾರ
ಶುಕ್ರ  ಗ್ರಹರ ಆರಾಧನೆಯನ್ನು ಮಾಡಿಕೊಂಡು ಬಂದಲ್ಲಿ  ಶುಭ.

ಜಪಿಸಲು :
ಹಿಮಕುಂದ ಮೃಣಾಲಾಭಮ್ (ಸಮಾಭಾಸಂ) | ದೈತ್ಯಾನಾಂ ಪರಮಂ ಗುರುಮ್ |
ಸರ್ವಶಾಸ್ತ್ರಪ್ರವಕ್ತಾರಮ್ | ಭಾರ್ಗವಂ ಪ್ರಣಮಾಮ್ಯಹಮ್ ||

°~•~°~•~°~•~°~•~°~•~°



ಮಿಥುನ


   ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರೆಯುತ್ತವೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು.  ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕರಾಗಿರಬೇಕು. ಪುತ್ರನ ಆಗಮನದಿಂದ ಸಂತಸ ದೊರೆಯುತ್ತದೆ. ಮೈ ಕೈಗೊಂಡು ನೋವು, ಚರ್ಮ ಸಂಬಂಧಿ ತೊಂದರೆಗಳು, ರಕ್ತ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆದರೆ ಉತ್ತಮ ಅಭಿವೃದ್ಧಿ  ಕಂಡುಬರುವುದು.



ಪರಿಹಾರ  
ಬುಧ  ಗ್ರಹರ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಪ್ರಿಯಂಗುಕಲಿಕಾಶ್ಯಾಮಮ್ |  ರೂಪೇಣಾಪ್ರತಿಮಂ ಬುಧಮ್ |
ಸೌಮ್ಯಂ ಸೌಮ್ಯಗುಣೋಪೇತಮ್ | ತಂ ಬುಧಂ  ಪ್ರಣಮಾಮ್ಯಹಮ್ ||

  °~•~°~•~°~•~°~•~°~•~°



ಕರ್ಕಾಟಕ

   
ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಒಳ್ಳೆಯ ಮುನ್ನಡೆ ಕಂಡುಬರುತ್ತದೆ. ಸರಕಾರಿ ಕೆಲಸದಲ್ಲಿ ಇರುವವರಿಗೆ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯ ಸಂಬಂಧವಾದ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು.   ಗೃಹಪಯೋಗಿ ವಸ್ತುಗಳ ಖರೀದಿಗೆ ಅವಕಾಶಗಳು ಒದಗಿ ಬರುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ.

ಪರಿಹಾರ
ಚಂದ್ರ ಗ್ರಹರ ಆರಾಧನೆಯಿಂದ ಉತ್ತಮ ಅಭಿವೃದ್ಧಿ ಕಂಡು ಬರುವುದು.

ಜಪಿಸಲು :
ದಧಿಶಂಖತುಷಾರಾಭಮ್ |  ಕ್ಷೀರೋದಾರ್ಣವಸಂಭವಮ್ (ಸನ್ನಿಭಮ್) |
ನಮಾಮಿ ಶಶಿನಂ ಸೋಮಮ್ | ಶಂಭೋರ್ಮುಕುಟಭೂಷಣಮ್ ||

 °~•~°~•~°~•~°~•~°~•~°



ಸಿಂಹ

 ಮಾಡುವಂತಹ ಕೆಲಸಕಾರ್ಯಗಳಲ್ಲಿ ಅಡೆತಡೆಗಳು ಕಷ್ಟನಷ್ಟಗಳು ಎದುರಾಗುತ್ತವೆ ಆದುದರಿಂದ ಜಾಗರೂಕತೆಯಿಂದ ವ್ಯವಹರಿಸಬೇಕು. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುವುದು ರಿಂದ ದುಂದು ವೆಚ್ಚ ಮಾಡಬೇಡಿ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಮೈ ಕೈ  ಗಂಟು ನೋವು ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದಿಂದ ಉತ್ತಮ ಫಲ ಲಭ್ಯ.


ಪರಿಹಾರ
ರವಿ ಗ್ರಹರ ಆರಾಧನೆಯಿಂದ  ಶುಭವಾಗಲಿದೆ.

ಜಪಿಸಲು :
ಜಪಾಕುಸುಮಸಂಕಾಶಮ್ | ಕಾಶ್ಯಪೇಯಂ ಮಹಾದ್ಯುತಿಮ್ |
ತಮೋಽರಿಂ ಸರ್ವಪಾಪಘ್ನಮ್ | ಪ್ರಣತೋಽಸ್ಮಿ ದಿವಾಕರಮ್ ||

    °~•~°~•~°~•~°~•~°~•~°      


ಕನ್ಯಾ


     ನೂತನ ವ್ಯವಹಾರವನ್ನು ತೊಡಗಿಸಿಕೊಳ್ಳುವ ವರಿಗೆ ಬಂಡವಾಳ ಹೂಡುವವರಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತವೆ. ಹಣಕಾಸು ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಹಾಗೂ ಯುವಕ ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಆರೋಗ್ಯ ಸಂಬಂಧಿ ಆದ ತೊಂದರೆಗಳು ಎದುರಾಗುತ್ತದೆ. ಕಲೆ, ಸಾಹಿತ್ಯ, ನೃತ್ಯ, ಸಂಗೀತ ಮೊದಲಾದವುಗಳನ್ನು  ಅಭ್ಯಾಸ ಮಾಡಲು ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಒದಗಿ ಬರುತ್ತದೆ.



ಪರಿಹಾರ
ಗೋಪಾಲ ಕೃಷ್ಣನ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ವಂದೇ ವೃಂದಾವನಚರಮ್ | ವಲ್ಲವೀಜನವಲ್ಲಭಮ್ |
ಜಯಂತೀ ಸಂಭವಂ ಧಾಮ | ವೈಜಯಂತೀವಿಭೂಷಣಮ್ ||

  °~•~°~•~°~•~°~•~°~•~°       


ತುಲಾ


       ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ  ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ತೊಂದರೆಗಳು ಆಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||


 °~•~°~•~°~•~°~•~°~•~°


ವೃಶ್ಚಿಕ


  
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬಂದರೂ ಕೂಡ ಮನಃಶಾಂತಿ ಕಳೆದುಕೊಳ್ಳಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು, ರಕ್ತ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡು ಬರುತ್ತದೆ.

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್ | ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ | ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°


ಧನು


    
ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಕನ್ನಡ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕರಾಗಿರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಿರಿ.
ಪರಿಹಾರ
ಗುರು ಗ್ರಹರ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ದೇವಾನಾಂ ಚ ಋಷೀಣಾಂ ಚ | ಗುರುಂ ಕಾಂಚನಸನ್ನಿಭಮ್ |
ಬುದ್ಧಿಭೂತಂ ತ್ರಿಲೋಕೇಶಮ್ | ತಂ ನಮಾಮಿ ಬೃಹಸ್ಪತಿಮ್ ||

     °~•~°~•~°~•~°~•~°~•~°


ಮಕರ


    ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತವೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು ಹಾಗೂ ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಶ್ವಾಸ ಸಂಬಂಧಿ ತೊಂದರೆಗಳು, ಅಲರ್ಜಿ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.  ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ನಡೆಯಬೇಕು.



ಪರಿಹಾರ
ಶನಿ ದೇವರ ಆರಾಧನೆಯಿಂದ ಶುಭ.  

ಜಪಿಸಲು :
ನೀಲಾಂಜನಸಮಾಭಾಸಮ್ | ರವಿಪುತ್ರಂ ಯಮಾಗ್ರಜಮ್ |
ಛಾಯಾಮಾರ್ತಾಂಡ ಸಂಭೂತಮ್ | ತಂ ನಮಾಮಿ ಶನೈಶ್ಚರಮ್||

   °~•~°~•~°~•~°~•~°~•~°          


ಕುಂಭ  


       ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಅಡೆತಡೆಗಳು  ಕಷ್ಟ ನಷ್ಟಗಳು ಎದುರಾಗುತ್ತವೆ. ಹಣಕಾಸಿನ ವಿಚಾರದಲ್ಲೂ ಉತ್ತಮ ಅಭಿವೃದ್ಧಿ ಕಂಡು ಬಂದರೂ ಕೂಡ ದುಂದುವೆಚ್ಚ ಮಾಡದಿರಿ ಖರ್ಚುವೆಚ್ಚಗಳನ್ನು ಕಡಿಮೆ ಗೊಳಿಸಿ ಹಾಗೂ ಉತ್ತಮ ಕಾರ್ಯಗಳಿಗೆ ಹಣವನ್ನು ವಿನಿಯೋಗಿಸಿ. ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯ ಸಂಬಂಧಿ ಆದ ತೊಂದರೆಗಳು ದೂರವಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ದೊರೆಯುತ್ತದೆ, ಸಂಗೀತ, ಕಲೆ, ನೃತ್ಯ ಮೊದಲಾದವುಗಳನ್ನು ಕಲಿಯಲು ಉತ್ತಮ ಅವಕಾಶಗಳು ಒದಗಿ ಬರುತ್ತದೆ.  
ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಅಂಜನಾಗರ್ಭಸಂಭೂತ | ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್  | ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


    ನೂತನ ಉದ್ಯೋಗವನ್ನು ತೊಡಗಿಸಿಕೊಳ್ಳುವ ಅವರಿಗೆ ಉತ್ತಮ ಅವಕಾಶಗಳು, ಉತ್ತಮ ಸ್ಥಾನಮಾನ ಗೌರವಗಳು ಲಭಿಸುತ್ತವೆ. ಹಣಕಾಸಿನ ವಿಚಾರದಲ್ಲೂ ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನರಗಳು ತಲೆ ಹಾಗೂ ಯುವಕ ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುವುದು. ಆರೋಗ್ಯ ಸಂಬಂಧಿ ತೊಂದರೆಗಳು ಕಂಡುಬರುವುದು. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ದೊರೆಯುತ್ತದೆ.

ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ನಮಸ್ತೇ ಪುಂಡರೀಕಾಕ್ಷ | ನಮಸ್ತೇ ಪುರುಷೋತ್ತಮ |
ನಮಸ್ತೇ  ಸರ್ವಲೋಕಾತ್ಮನ್ | ನಮಸ್ತೇ ತಿಗ್ಮಚಕ್ರಿಣೇ ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *