ಶ್ರೀಗಳ ವಿಚಾರಣಾ ಪ್ರಕ್ರಿಯೆಗೆ ತಡೆ – ಆರೋಪಗಳಲ್ಲಿ ಹುರುಳಿಲ್ಲ ಎಂಬ ವಾದಕ್ಕೆ ಪುಷ್ಟಿ

ಪ್ರಕಟಣೆ

ಪುತ್ತೂರಿನ ಶ್ರೀ ಶ್ಯಾಮಶಾಸ್ತ್ರಿ ಅವರ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ಮೇಲಿನ ಆರೋಪಗಳ ವಿಚಾರಣೆಗಳಿಗೆ ರಾಜ್ಯ ಉಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿ ಆದೇಶ ನೀಡಿದೆ.

 

ಪುತ್ತೂರಿನ ಶ್ರೀ ಶ್ಯಾಮಶಾಸ್ತ್ರಿ ಅವರ ಅಸಹಜ ಸಾವು/ಆತ್ಮಹತ್ಯೆ ಪ್ರಕರಣದಲ್ಲಿ ವಿನಾಕಾರಣವಾಗಿ ಜಗದ್ಗುರು ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳನ್ನು ಸಿಲುಕಿಸುವ ಪ್ರಯತ್ನ ನಡೆದಿದ್ದು, ಯಾವುದೇ ದಾಖಲೆಗಳು ಇಲ್ಲದಿದ್ದರೂ, ಹುರುಳಿಲ್ಲದ ಆರೋಪಗಳನ್ನು ಆಧರಿಸಿ ಆರೋಪಿಯನ್ನಗಿಸಲಾಗಿದೆ. ಈ ಕ್ರಮವನ್ನು ಪ್ರಶ್ನಿಸಿ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿಯನ್ನು ದಾಖಲಿಸಲಾಗಿದ್ದು, ವಿಚಾರಣೆ ನಡೆಸಿದ ನ್ಯಾಯಪೀಠ ಈ ಕುರಿತಾಗಿ ಪೂಜ್ಯ ಶ್ರೀಗಳ ಮುಂದಿನ ವಿಚಾರಣಾ ಪ್ರಕ್ರಿಯೆಗಳಿಗೆ ತಡೆ ನೀಡಿ ಆದೇಶ ಹೊರಡಿಸಿದೆ.

 

ಪೂಜ್ಯ ಶ್ರೀಗಳು ಸಲ್ಲಿಸಿರುವ ರಿಟ್ ಅರ್ಜಿಯನ್ನು ಮಾನ್ಯ ಮಾಡಬಾರದು ಹಾಗೂ ವಿಚಾರಣಾ ಪ್ರಕ್ರಿಯೆಗಳಿಗೆ ತಡೆ ನೀಡಬಾರದೂ ಎಂಬ ಸರ್ಕಾರದ ಹೆಚ್ಚುವರಿ ಅಡ್ವಕೇಟ್ ಜನರಲ್ ಅವರ ತೀವ್ರವಾದ ಪ್ರತಿವಾದವನ್ನು ಆಲಿಸಿದ ನಂತರೂ ನ್ಯಾಯಪೀಠ ತಡೆಯಾಜ್ಞೆ ನೀಡಿದ್ದು, ಶ್ರೀಮಠದ ವಾದವನ್ನು ಮಾನ್ಯಮಾಡಿದೆ. ನ್ಯಾಯಾಲಯದ ಈ ಆದೇಶದಿಂದಾಗಿ ಶ್ರೀಗಳ ಮೇಲಿನ ಆರೋಪಗಳಲ್ಲಿ ಹುರುಳಿಲ್ಲ ಎಂಬ ವಾದಕ್ಕೆ ಪುಷ್ಟಿಸಿಕ್ಕಿದೆ.

2 thoughts on “ಶ್ರೀಗಳ ವಿಚಾರಣಾ ಪ್ರಕ್ರಿಯೆಗೆ ತಡೆ – ಆರೋಪಗಳಲ್ಲಿ ಹುರುಳಿಲ್ಲ ಎಂಬ ವಾದಕ್ಕೆ ಪುಷ್ಟಿ

Leave a Reply

Your email address will not be published. Required fields are marked *