ಶ್ರೀಸಂಸ್ಥಾನದವರ ದಿವ್ಯ ಮಾರ್ಗದರ್ಶನದಲ್ಲಿ ಶ್ರೀಕ್ಷೇತ್ರ ಗೋಕರ್ಣದ ಶ್ರೀಮಹಾಬಲೇಶ್ವರ ದೇವಾಲಯದಲ್ಲಿ ವಿಲಂಬ ಸಂವತ್ಸರದ ತ್ರಿಪುರಾಖ್ಯ ದೀಪೋತ್ಸವವು ದಿನಾಂಕ 22.11.2018ರ ಗುರುವಾರ ವಿಜೃಂಭಣೆಯಿಂದ ಜರುಗಿತು.
ಲಕ್ಷಬಿಲ್ವಾರ್ಚನೆ , ಭೂತಬಲಿ, ವನಭೋಜನ ಸೇರಿದಂತೆ ಅನೇಕ ಕಾರ್ಯಕ್ರಮಗಳಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡರು.
ದೇವಾಲಯದಲ್ಲಿ ಲಕ್ಷದೀಪೋತ್ಸವ, ಕೋಟಿತೀರ್ಥದಲ್ಲಿ ತೆಪ್ಪೋತ್ಸವ, ಕೊನೆಯಲ್ಲಿ ರಾತ್ರಿ ರಥೋತ್ಸವ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡವು. ವೇದಮೂರ್ತಿ ಶ್ರೀ ಕೃಷ್ಣ ಭಟ್ ಷಡಕ್ಷರಿಪೂಜಾ ಕೈಂಕರ್ಯ ನೆರವೇರಿಸಿದರು. ಶ್ರೀ ದೇವಾಲಯದ ಹೊರ ಆವಾರ, ನಂದಿಮಂಟಪ , ಗರ್ಭಗುಡಿಯಲ್ಲಿ ವಿಶೇಷ ಹೂವಿನ ಅಲಂಕಾರ ಮಾಡಲಾಗಿದ್ದು ಎಲ್ಲರ ಚಿತ್ತವನ್ನು ತನ್ನತ್ತ ಸೆಳೆದಿತ್ತು.