ಜೀವಜಲ ಉಚಿತ ವಿತರಣಾ ಸೇವೆಯ ಶುಭಾರಂಭ

ಶ್ರೀಗೋಕರ್ಣ

 

ಪರಮಪೂಜ್ಯ ಶ್ರೀಸಂಸ್ಥಾನದವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವರ ಅನುಗ್ರಹ ರೂಪದಲ್ಲಿ ಶ್ರೀ ಕ್ಷೇತ್ರ ಗೋಕರ್ಣ ಹಾಗೂ ಸುತ್ತಮುತ್ತಲಿನ ಊರುಗಳಿಗೆ ಉಚಿತವಾಗಿ ನೀರು ವಿತರಿಸುವ ನಾಲ್ಕನೆಯ ವರ್ಷದ ಕಾರ್ಯಕ್ರಮಕ್ಕೆ 26-04-2019 ಶುಕ್ರವಾರ ಚಾಲನೆ ನೀಡಲಾಯಿತು. ಅಂದು ಗೋಕರ್ಣದ ಸಮೀಪದ ತಿಪ್ಪಸಗಿ ಗ್ರಾಮದಲ್ಲಿ ನೀರು ವಿತರಿಸುವ ಮೂಲಕ ಕಾರ್ಯಕ್ರಮ ಪ್ರಾರಂಭಗೊಂಡಿತು. ಈ ಸಂದರ್ಭದಲ್ಲಿ ವೇ|| ಶಿವರಾಮ ಮಯ್ಯರು ಶ್ರೀ ಲಂಬೋಧರ ಸಭಾಹಿತ, ಶ್ರೀ ಜಿ ವಿ ಹೆಗಡೆ ಹಾಗೂ ತಿಪ್ಪಸಗಿ, ಕಡಿಮೆ ಗ್ರಾಮಸ್ಥರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಆಡಳಿತಾಧಿಕಾರಿ ಶ್ರೀ ಜಿ. ಕೆ. ಹೆಗಡೆ ಯವರು ಮಾತನಾಡಿ, ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಶ್ರೀ ಮಹಾಬಲೇಶ್ವರ ದೇವಾಲಯದ ವತಿಯಿಂದ ಜರುಗುತ್ತಿರುವ ಈ ಸಮಾಜಮುಖಿ ಯೋಜನೆಯ ಸದುಪಯೋಗ ಪಡೆಯುವಂತೆ ಕೋರಿದರು.

Author Details


Srimukha

Leave a Reply

Your email address will not be published. Required fields are marked *