ಭೂಕೈಲಾಸವೆನಿಸಿದ ಆತ್ಮಲಿಂಗದ ದಿವ್ಯ ಸನ್ನಿಧಿಯಾದ ಶ್ರೀಕ್ಷೇತ್ರ ಗೋಕರ್ಣದಲ್ಲಿ ಶಿವರಾತ್ರಿಯ ಪುಣ್ಯ ಕಾಲದಲ್ಲಿ ಶ್ರೀ ಮಹಾಬಲೇಶ್ವರ ದೇವರ ದರ್ಶನಕ್ಕೆ ಜನಸಾಗರ ಹರಿದುಬಂದಿತ್ತು.
ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ , ಉಪಾಧಿವಂತ ಮಂಡಲದ ವತಿಯಿಂದ ವಿವಿಧ ಧಾರ್ಮಿಕ ವಿನಿಯೋಗಗಳು ಜರುಗಿದವು . ಆಗಮಿಸಿದ ಭಗವದ್ಭಕ್ತರಿಗೆ ಅಮೃತಾನ್ನ ವಿಭಾಗದಲ್ಲಿ ಉಪಾಹಾರ ವ್ಯವಸ್ಥೆ ಏರ್ಪಡಿಸಲಾಗಿತ್ತು .
ಪರಮಪೂಜ್ಯ ಶ್ರೀಸಂಸ್ಥಾನದವರೊಂದಿಗೆ ಪ.ಪೂ. ಶ್ರೀ ಶ್ರೀ ಶಿವಾನಂದ ಸರಸ್ವತಿ ಮಹಾಸ್ವಾಮಿಗಳು , ಶ್ರೀ ಗೌಡಪಾದಾಚಾರ್ಯ ಕವಳೆಮಠ ಇವರು ಶ್ರೀ ಕ್ಷೇತ್ರ ಗೋಕರ್ಣದ ಸಂಸ್ಥಾನ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಶಿವರಾತ್ರಿಯ ಪರ್ವಕಾಲದಲ್ಲಿ ಆತ್ಮಲಿಂಗ ಪೂಜೆ ನೆರವೇರಿಸಿದರು.