ಶ್ರೀಕ್ಷೇತ್ರ ಗೋಕರ್ಣದಲ್ಲಿ ತ್ರಿಪುರಾಖ್ಯ ದೀಪೋತ್ಸವ ನಿಮಿತ್ತ ಲಕ್ಷಬಿಲ್ವಾರ್ಚನೆ – ತೆಪ್ಪೋತ್ಸವ

ಶ್ರೀಗೋಕರ್ಣ ಸುದ್ದಿ

ಗೋಕರ್ಣ: ಶ್ರೀಸಂಸ್ಥಾನದವರ ದಿವ್ಯಾಶೀರ್ವಾದ ಹಾಗೂ ಮಾರ್ಗದರ್ಶನದೊಂದಿಗೆ ಶ್ರೀಕ್ಷೇತ್ರ ಗೋಕರ್ಣದ ಶ್ರೀಮಹಾಬಲೇಶ್ವರ ದೇವಾಲಯದಲ್ಲಿ ವಿಲಂಬ ಸಂವತ್ಸರದ ತ್ರಿಪುರಾಖ್ಯ ದೀಪೋತ್ಸವ ನಿಮಿತ್ತ ನವೆಂಬರ್ 22ರಂದು ಗುರುವಾರ ಮಧ್ಯಾಹ್ನ ಲಕ್ಷ ಬಿಲ್ವಾರ್ಚನೆ ಸಹಿತ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

 

ಮುಂಜಾನೆ ಲಕ್ಷಬಿಲ್ವಾರ್ಚನೆ, ವಿಶೇಷ ಮಹಾಪೂಜೆ, ಬಿಲ್ವಾರ್ಚನಾ ಹವನ , ನೈಮಿತ್ತಿಕ ಬಲಿ, ಅನಂತರ ಭೀಮಕೊಂಡಕ್ಕೆ ಉತ್ಸವ ಹೋಗಿ ಅಲ್ಲಿ ಧಾತ್ರಿ ಹವನ, ವನಭೋಜನ ಜರುಗಲಿವೆ.

 

ರಾತ್ರಿ ದೇವಾಲಯದಲ್ಲಿ ಲಕ್ಷ ದೀಪೋತ್ಸವ, ಕೋಟಿತೀರ್ಥದಲ್ಲಿ ಜಲಾಯನ ದೀಪೋತ್ಸವ , ತೆಪ್ಪೋತ್ಸವ ಹಾಗೂ ರಥಬೀದಿಯಲ್ಲಿ ರಥೋತ್ಸವ ಜರುಗಲಿವೆ. ಈ ಪುಣ್ಯಕಾರ್ಯದಲ್ಲಿ ಎಲ್ಲ ಸದ್ಭಕ್ತರು ಆಗಮಿಸಿ ಪ್ರಸಾದ ಸ್ವೀಕರಿಸಬೇಕಾಗಿ ದೇವಾಲಯದ ಆಡಳಿತ ಮಂಡಳಿ ಕೋರಿದೆ.

Author Details


Srimukha

Leave a Reply

Your email address will not be published. Required fields are marked *