10.05.2019

ದಿನ ಭವಿಷ್ಯ

         
ವಿಕಾರಿನಾಮ ಸಂವತ್ಸರ / ಉತ್ತರಾಯಣ /
ವಸಂತ ಋತು / ವೈಶಾಖ ಮಾಸ/

                       ಶುಕ್ಲಪಕ್ಷ /ಷಷ್ಠಿ ತಿಥಿ/

ಶುಕ್ರವಾರ/ಪುನರ್ವಸು ನಕ್ಷತ್ರ /

ದಿನಾಂಕ 10.05.2019

 °~•~°~•~°~•~°~•~°~•~°

ಮೇಷ
ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಉತ್ತಮ ಪರಿಶ್ರಮದಿಂದ ತೊಡಗಿಸಿಕೊಂಡರೆ  ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುವುದರಿಂದ ಜಾಗರೂಕತೆಯಿಂದ ಖರ್ಚುವೆಚ್ಚ ನಿಭಾಯಿಸಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ನೆಲೆಗೊಳ್ಳುತ್ತದೆ .ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು



ಪರಿಹಾರ:
ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋಸ್ತು ತೇ ||

°~•~°~•~°~•~°~•~°~•~°

    

ವೃಷಭ

         ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ ಹಣಕಾಸಿನ ವಿಚಾರದಲ್ಲಿ  ಉತ್ತಮ ಏಳಿಗೆ ದೊರೆಯುತ್ತದೆ ಕುಟುಂಬದಲ್ಲಿ ಶಾಂತಿ ನೆಲೆಗೊಳ್ಳುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಉತ್ತಮ ಆರೋಗ್ಯವನ್ನು ಹೊಂದುತ್ತೀರಿ ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ದೊರೆಯುವುದು




ಪರಿಹಾರ
ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ  / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ  / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ  / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ  / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ  / ಶ್ರೀಚಂಡಿಕಾಯೈ ನಮಃ ||

°~•~°~•~°~•~°~•~°~•~°



ಮಿಥುನ


   ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು.ಕುಟುಂಬದಲ್ಲಿ ಉತ್ತಮ ಮನಃಶಾಂತಿ  ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು, ರಕ್ತ ಸಂಬಂಧಿ ತೊಂದರೆಗಳು, ಪಿತ್ತ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ಕಂಡು ಬರುವುದು



ಪರಿಹಾರ  
ಶ್ರೀಕೃಷ್ಣನ ಆರಾಧನೆ,ಗುರುದೇವತಾ ಆರಾಧನೆಯಿಂದ ಶುಭ.

ಜಪಿಸಲು :
ವಸುದೇವಸುತಂ ದೇವಮ್

ಕಂಸಚಾಣೂರಮರ್ದನಮ್ |

ದೇವಕೀಪರಮಾನನ್ದಮ್

ಕೃಷ್ಣಂ ವನ್ದೇ ಜಗದ್ಗುರುಮ್ ||

  °~•~°~•~°~•~°~•~°~•~°



ಕರ್ಕಾಟಕ

    ತೊಡಗಿಸಿಕೊಂಡ ಕೆಲಸಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು ಹಣಕಾಸಿನ ವಿಚಾರದಲ್ಲಿ ಉತ್ತಮ  ಏಳಿಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಮೈ ಕೈ ಗಂಟು ನೋವು ತಲೆನೋವು, ಜ್ವರ ದೇಹದಲ್ಲಿ ಉಷ್ಣತೆ ಮೊದಲಾದ  ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಮುನ್ನಡೆ ದೊರೆಯುತ್ತದೆ



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ  
ದುರ್ಗೇದೇವಿ ನಮೋಸ್ತು ತೇ ||

 °~•~°~•~°~•~°~•~°~•~°



ಸಿಂಹ

      ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಹಾಗೂ ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಆರೋಗ್ಯ ಸಂಬಂಧವಾದ ತೊಂದರೆಗಳನ್ನು  ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ಕಂಡು ಬರುವುದು


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

    °~•~°~•~°~•~°~•~°~•~°      


ಕನ್ಯಾ


     ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬಂದರೂ ಕೂಡ ಸಣ್ಣಪುಟ್ಟ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ದೊರೆಯುವುದು ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಹಾಗೂ ಯುವಕ ಯುವತಿಯರಿಗೆ ವಿವಾಹ ಯೋಗ ಒದಗಿ ಬರುತ್ತದೆ.  ಆರೋಗ್ಯಕ್ಕೆ ಸಂಬಂಧಪಟ್ಟಂತಹ ಸಣ್ಣಪುಟ್ಟ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ . ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ದೊರೆಯುತ್ತದೆ.



ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ  ಶುಭ.

ಜಪಿಸಲು :
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ |  
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||

  °~•~°~•~°~•~°~•~°~•~°       


ತುಲಾ

ಕೆಲಸ ಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಕಂಡು ಬರುತ್ತದೆ ಹಣಕಾಸು ವಿಚಾರದಲ್ಲಿ ಉತ್ತಮ ಏಳಿಗೆ ಕಂಡು ಬಂದರೂ ಕೂಡ ಖರ್ಚುವೆಚ್ಚಗಳು  ಅಧಿಕವಾಗಿ ಕಂಡು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ವ್ಯವಹರಿಸಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಆರೋಗ್ಯ ಸಂಬಂಧವಾದ ಸಣ್ಣ ಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ .  ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ದೊರೆಯುತ್ತದೆ


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮಃ  / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ  / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀ ಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||


 °~•~°~•~°~•~°~•~°~•~°


ವೃಶ್ಚಿಕ


  
   ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ  ಶಾಂತಿ ನೆಲೆಗೊಳ್ಳುವುದು.ಉದರ ಸಂಬಂಧಿ ತೊಂದರೆಗಳು ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ನಡೆಯಬೇಕು. ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕರಾಗಿರಬೇಕು ಹಾಗೂ ಮಕ್ಕಳ ಓಡಾಟದ ಸಂದರ್ಭಗಳಲ್ಲಿ ಜಾಗೃತರಾಗಿರಬೇಕು.

ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.


ಜಪಿಸಲು :
ಷಡಾನನಂ ಕುಂಕುಮರಕ್ತವರ್ಣಮ್

ಮಹಾಮತಿಂ ದಿವ್ಯಮಯೂರವಾಹಮ್ |

ರುದ್ರಸ್ಯ ಸೂನುಂ ಸುರಸೈನ್ಯನಾಥಮ್

ಗುಹಂ ಸದಾ ಶರಣಮಹಂ ಪ್ರಪದ್ಯೇ ||

°~•~°~•~°~•~°~•~°~•~°


ಧನು


      ನೂತನ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಏಳಿಗೆ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಹಾಗೂ ಯುವಕ ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಆರೋಗ್ಯಕ್ಕೆ ಸಂಬಂಧಪಟ್ಟಂತಹ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ದೊರೆಯುತ್ತದೆ.

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಜಪಿಸಲು:
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

     °~•~°~•~°~•~°~•~°~•~°


ಮಕರ


    ಶ್ರದ್ಧೆಯಿಂದ ಹಾಗೂ ಪರಿಶ್ರಮದಿಂದ ತೊಡಗಿಸಿಕೊಂಡಲ್ಲಿ ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಶೀತ ಜ್ವರ, ಅಲರ್ಜಿ, ಶ್ವಾಸಕ್ಕೆ ಸಂಬಂಧಪಟ್ಟಂತಹ ತೊಂದರೆಗಳು ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ  ದೊರೆಯುವುದು



ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.  

ಜಪಿಸಲು :
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

   °~•~°~•~°~•~°~•~°~•~°          


ಕುಂಭ  


      ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ದೊರೆಯುವುದು ಹಾಗೂ ಉತ್ತಮ  ಕಾರ್ಯಗಳಿಗೆಗೋಸ್ಕರ ವಾಗಿ ಹಣವನ್ನು ವಿನಿಯೋಗಿಸಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಉತ್ತಮ ಆರೋಗ್ಯವನ್ನು ಹೊಂದುತ್ತೀರಿ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಮುನ್ನಡೆ ದೊರೆಯುತ್ತದೆ



ಪರಿಹಾರ  
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.

ಜಪಿಸಲು :
ರುದ್ರಂ ಪಶುಪತಿಂ ಸ್ಥಾಣುಮ್

ನೀಲಕಂಠಂ ಉಮಾಪತಿಮ್ |

ನಮಾಮಿ ಶಿರಸಾ ದೇವಮ್

ಕಿಂ ನೋ ಮೃತ್ಯುಃ ಕರಿಷ್ಯತಿ  ||

°~•~°~•~°~•~°~•~°~•~°


ಮೀನ   


   ಉತ್ತಮ ಪರಿಶ್ರಮದಿಂದ ಕೆಲಸ ಕಾರ್ಯವನ್ನು ತೊಡಗಿಸಿಕೊಳ್ಳಬೇಕು. ಹಣಕಾಸಿನ ವಿಚಾರದಲ್ಲಿ ತೊಂದರೆ ಗಳು ಸಂಭವಿಸುವುದು ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಖರ್ಚುವೆಚ್ಚವನ್ನು ನಿಭಾಯಿಸಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ.  ಆರೋಗ್ಯದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ದೊರೆಯುತ್ತದೆ


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶಾಂತಾಕಾರಂ ಭುಜಗಶಯನಮ್  

ಪದ್ಮನಾಭಂ ಸುರೇಶಮ್

ವಿಶ್ವಾಧಾರಂ ಗಗನಸದೃಶಮ್

ಮೇಘವರ್ಣಂ ಶುಭಾಂಗಮ್ |

ಲಕ್ಷ್ಮೀಕಾಂತಂ ಕಮಲನಯನಮ್

ಯೋಗಿಹೃದ್ಧ್ಯಾನಗಮ್ಯಮ್

ವಂದೇ ವಿಷ್ಣುಂ ಭವಭಯಹರಮ್

ಸರ್ವಲೋಕೈಕನಾಥಮ್  ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *