23.05.2019

ದಿನ ಭವಿಷ್ಯ

         

ವಿಕಾರಿನಾಮ ಸಂವತ್ಸರ / ಉತ್ತರಾಯಣ /
ವಸಂತ ಋತು / ವೈಶಾಖ ಮಾಸ/

ಕೃಷ್ಣಪಕ್ಷ/ಪಂಚಮಿ ತಿಥಿ/

ಗುರುವಾರ/ಪೂರ್ವಾಷಾಢ/ಉತ್ತರಾಷಾಢ ನಕ್ಷತ್ರ /



ದಿನಾಂಕ: 23.05.2019

 °~•~°~•~°~•~°~•~°~•~°

ಮೇಷ
ನೂತನ   ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರೆಯುತ್ತದೆ, ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಗೌರವಗಳು ಲಭಿಸುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಹಾಗೂ ಯುವಕ ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುವುದು.  ಚರ್ಮ ರೋಗ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು

ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.

ಜಪಿಸಲು :
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ

ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ

ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥

°~•~°~•~°~•~°~•~°~•~°

    

ವೃಷಭ

ತಮ್ಮ ಉತ್ತಮ ನಡತೆಯಿಂದ ಜನರ ಮೆಚ್ಚುಗೆಯನ್ನು ಗಳಿಸುತ್ತೀರಿ. ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಮೂತ್ರ ಸಂಬಂಧಿ ತೊಂದರೆಗಳು,  ಗುಹ್ಯ ರೋಗ, ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.

ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.

ಜಪಿಸಲು :
ಸರ್ವದೇವಮಯೇ ದೇವಿ

ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್

ಸಫಲಂ ಕುರು ನಂದಿನಿ ||

°~•~°~•~°~•~°~•~°~•~°



ಮಿಥುನ

     ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ ತಡೆಗಳು ಕಷ್ಟನಷ್ಟಗಳು ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ತಮ್ಮ ಕರ್ತವ್ಯವನ್ನು ನಿಭಾಯಿಸಿ. ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಎದುರಾಗುತ್ತದೆ. ದಾಂಪತ್ಯಜೀವನದಲ್ಲಿ ಕಲಹ ಸಂಭವಿಸುವ  ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು



ಪರಿಹಾರ  
ನರಸಿಂಹನ ಆರಾಧನೆಯನ್ನು ಮಾಡಿ.

ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್

ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಮಹಾವೀರಮ್

ನಮಾಮಿ ಋಣಮುಕ್ತಯೇ ||

  °~•~°~•~°~•~°~•~°~•~°



ಕರ್ಕಾಟಕ

ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ. ಜಾಗದಲ್ಲಿ ಉತ್ತಮ ಅಭಿವೃದ್ಧಿ,  ಹಣಕಾಸಿನ ವಿಚಾರದಲ್ಲಿ ಏಳಿಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಹಾಗೂ  ಯುವಕಯುವತಿಯರಿಗೆ ವಿವಾಹಯೋಗ ಭಾಗ್ಯ ಒದಗಿ ಬರುವುದು. ಮೈ ಕೈ ಗಂಟು ನೋವು ತಲೆನೋವು ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು  

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||

 °~•~°~•~°~•~°~•~°~•~°



ಸಿಂಹ

   ನಿಮ್ಮ ಉತ್ತಮವಾದ  ಗುಣಗಳಿಂದ ಮೆಚ್ಚುಗೆಗೆ ಪಾತ್ರರಾಗುತ್ತೀರಿ. ಕೆಲಸಕಾರ್ಯಗಳಲ್ಲಿನ ಕಾರ್ಯಕ್ಷಮತೆಗೆ ಹಿರಿಯ ಅಧಿಕಾರಿಗಳಿಂದ ಮೆಚ್ಚುಗೆ ದೊರೆಯುತ್ತದೆ ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ  ಅಭಿವೃದ್ಧಿ ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಶೀತ ಜ್ವರ, ಮಾನಸಿಕ ಕಿನ್ನತೆ, ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ದೊರೆಯುವುದು


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||

    °~•~°~•~°~•~°~•~°~•~°      


ಕನ್ಯಾ


     ಸ್ನೇಹಿತರಿಂದ ವ್ಯವಹಾರ ಕ್ಷೇತ್ರಕ್ಕೆ ಉತ್ತಮ ಸಹಾಯ ಒದಗಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ದೊರೆಯುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ. ಆರೋಗ್ಯದ  ಸಣ್ಣಪುಟ್ಟ ತೊಂದರೆಗಳು ಎದುರಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಮುನ್ನಡೆ ದೊರೆಯಲಿದೆ



ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ

ಜಪಿಸಲು :
ವಸುದೇವಸುತಂ  ದೇವಮ್

ಕಂಸಚಾಣೂರಮರ್ದನಮ್  |
ದೇವಕೀಪರಮಾನಂದಮ್

ಕೃಷ್ಣಂ ವಂದೇ  ಜಗದ್ಗುರುಮ್ ||

  °~•~°~•~°~•~°~•~°~•~°       


ತುಲಾ

ಉತ್ತಮ ಏಕಾಗ್ರತೆಯಿಂದ ಹಾಗೂ ಶ್ರದ್ಧೆಯಿಂದ ತೊಡಗಿಸಿಕೊಂಡರೆ ಮಾತ್ರ ಕೆಲಸದಲ್ಲಿ ಅಭಿವೃದ್ಧಿ ಕಂಡುಬರುವುದು. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಹಾಗೂ ಯುವಕ-ಯುವತಿಯರಿಗೆ ವಿವಾಹಯೋಗ ಭಾಗ್ಯ ಒದಗಿ ಬರುವುದು. ಆಹಾರದ ಮೂಲಕವಾಗಿ ಆರೋಗ್ಯ  ಹದಗೆಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಿರಿ


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಸರ್ವರೂಪಮಯೀ ದೇವೀ

ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್

ನಮಾಮಿ ಪರಮೇಶ್ವರೀಮ್ ||


 °~•~°~•~°~•~°~•~°~•~°


ವೃಶ್ಚಿಕ

ತೊಡಗಿಸಿಕೊಂಡ ಕೆಲಸಕಾರ್ಯಗಳಲ್ಲಿ ತೊಂದರೆಗಳು ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಎದುರಾಗುತ್ತದೆ  ಹಾಗೂ ಖರ್ಚು ವೆಚ್ಚವನ್ನು ಜಾಗರೂಕತೆಯಿಂದ ನಿಭಾಯಿಸಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ವಿದ್ಯಾರ್ಥಿಗಳು ಆಲಸಿತನ ವನ್ನು ಬಿಟ್ಟು ಮುಂದುವರಿಯಬೇಕು.

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್

ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ

ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°


ಧನು


ಆಲಸ್ಯತನ ದಿಂದಾಗಿ ಕೆಲಸಕಾರ್ಯಗಳಲ್ಲಿ ಅಡೆತಡೆಗಳು ಕಷ್ಟನಷ್ಟಗಳು ಎದುರಾಗುತ್ತದೆ. ಕುಟುಂಬದಲ್ಲಿ ಮನಃಶಾಂತಿ ನೆಲೆಗೊಳ್ಳುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ದೊರೆಯುತ್ತದೆ. ದಾಂಪತ್ಯಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು ಕಂಡು ಬರುವುದು. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆಯಬೇಕು.

ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು  ಪಡೆಯಿರಿ.

ಜಪಿಸಲು :
ಅಖಂಡಮಂಡಲಾಕಾರಮ್

ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ

ತಸ್ಮೈ ಶ್ರೀಗುರವೇ ನಮಃ ||

     °~•~°~•~°~•~°~•~°~•~°


ಮಕರ


   ನೂತನ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಗೌರವಗಳು, ಉನ್ನತ ಅಭಿವೃದ್ಧಿಗಳು ಲಭಿಸುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ  ಏಳಿಗೆ ದೊರೆಯುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಹಾಗೂ ಯುವಕ-ಯುವತಿಯರಿಗೆ ವಿವಾಹಯೋಗ ಭಾಗ್ಯ ಬರುವುದು. ಶ್ವಾಸ ಸಂಬಂಧಿ ತೊಂದರೆಗಳು, ಅಲರ್ಜಿ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು   
ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.  

ಜಪಿಸಲು :
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||

   °~•~°~•~°~•~°~•~°~•~°          


ಕುಂಭ  

ಶ್ರದ್ಧೆಯಿಂದ ನಿಮ್ಮ ಕೆಲಸವನ್ನು ಮುನ್ನಡೆಸಿಕೊಂಡು ಬಂದಲ್ಲಿ ಉತ್ತಮ ಅಭಿವೃದ್ಧಿ ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಶೀತ ಜ್ವರ ತಲೆನೋವು ಕಣ್ಣು ನೋವು ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು



ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


     ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿಯ ಅಭಿವೃದ್ಧಿ ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳು ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ದೊರೆಯುತ್ತದೆ  


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Leave a Reply

Your email address will not be published. Required fields are marked *