ವಿಕಾರಿನಾಮ ಸಂವತ್ಸರ / ಉತ್ತರಾಯಣ /
ವಸಂತ ಋತು / ವೈಶಾಖ ಮಾಸ/
ಕೃಷ್ಣಪಕ್ಷ/ದಶಮಿ ತಿಥಿ/
ಬುಧವಾರ/ಉತ್ತರಭಾದ್ರಾ ನಕ್ಷತ್ರ /
ದಿನಾಂಕ: 29.05.2019
°~•~°~•~°~•~°~•~°~•~°
ಮೇಷ
ಉತ್ತಮ ಶ್ರದ್ಧೆಯಿಂದ ನಿಮ್ಮ ಕೆಲಸ ಕಾರ್ಯವನ್ನು ಮುನ್ನಡೆಸಿಕೊಂಡು ಬನ್ನಿ. ಆರ್ಥಿಕ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಮಾತಿನ ಮೂಲಕ ಜಗಳಗಳು ಸಂಭವಿಸುವ ಲಕ್ಷಣಗಳು ಇರುವುದರಿಂದ ಮಾತಿನಲ್ಲಿ ನಿಗಾ ಇರಲಿ. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ಕಂಡು ಬರಬಹುದು.
ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.
ಜಪಿಸಲು :
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ
ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ
ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥
°~•~°~•~°~•~°~•~°~•~°
ವೃಷಭ
ತೊಡಗಿಸಿಕೊಂಡ ಕೆಲಸ ಕಾರ್ಯದಲ್ಲಿ ಉತ್ತಮ ಅಭಿವೃದ್ಧಿ ದೊರೆಯಲಿದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕರಾಗಿರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಿರಿ.
ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.
ಜಪಿಸಲು :
ಸರ್ವದೇವಮಯೇ ದೇವಿ
ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್
ಸಫಲಂ ಕುರು ನಂದಿನಿ ||
°~•~°~•~°~•~°~•~°~•~°
ಮಿಥುನ
ಆಲಸ್ಯತನ ವನ್ನು ಬಿಟ್ಟು ಬಿಟ್ಟು ತಮ್ಮ ಪರಿಶ್ರಮದಿಂದ ತೊಡಗಿಸಿಕೊಳ್ಳಬೇಕು. ವ್ಯಾಪಾರಸ್ತರಿಗೆ ಮೋಸ ಆಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.
ಪರಿಹಾರ
ನರಸಿಂಹನ ಆರಾಧನೆಯನ್ನು ಮಾಡಿ.
ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್
ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಮಹಾವೀರಮ್
ನಮಾಮಿ ಋಣಮುಕ್ತಯೇ ||
°~•~°~•~°~•~°~•~°~•~°
ಕರ್ಕಾಟಕ
ವ್ಯವಹಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡು ಬರುವುದು ಹಾಗೂ ಉತ್ತಮ ಕಾರ್ಯಗಳಿಗೋಸ್ಕರ ವಾಗಿ ಹಣವನ್ನು ವಿನಿಯೋಗಿಸಿ. ಆರೋಗ್ಯ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಮುನ್ನಡೆ ದೊರೆಯಲಿದೆ.
ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.
ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||
°~•~°~•~°~•~°~•~°~•~°
ಸಿಂಹ
ಮಾಡುವಂತಹ ಕೆಲಸ ಕಾರ್ಯದಲ್ಲಿ ಅಭಿವೃದ್ಧಿ ಕಂಡುಬಂದರೂ ಕೂಡ ಮಾನಸಿಕ ನೆಮ್ಮದಿ ಕಳೆದುಕೊಳ್ಳಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಏಳಿಗೆ ದೊರೆಯುತ್ತದೆ. ದಾಂಪತ್ಯಜೀವನದಲ್ಲಿ ಕಲಹ ಏರ್ಪಡುವ ಲಕ್ಷಣಗಳು ಇರುವುದರಿಂದ ಜಾಗರೂಕರಾಗಿರಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ಕಂಡುಬರುವುದು.
ಪರಿಹಾರ
ಶಿವನ ಆರಾಧನೆ ಅಗತ್ಯ.
ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||
°~•~°~•~°~•~°~•~°~•~°
ಕನ್ಯಾ
ನೂತನ ವ್ಯವಹಾರತೊಡಗಿಕೊಳ್ಳುವವರಿಗೆ ಉತ್ತಮ ಅವಕಾಶ ದೊರೆಯುತ್ತದೆ. ಉದ್ಯೋಗದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರಬಹುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಹಾಗೂ ಯುವಕ-ಯುವತಿಯರಿಗೆ ವಿವಾಹಯೋಗ ಭಾಗ್ಯ ಒದಗಿ ಬರುತ್ತದೆ. ಆರೋಗ್ಯದಲ್ಲಿ ಉತ್ತಮ ಚೇತರಿಕೆ ಕಂಡು ಬರುತ್ತದೆ. ವಿದ್ಯಾರ್ಥಿಗಳಿಗೆ ಮುನ್ನಡೆ.
ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ
ಜಪಿಸಲು :
ವಸುದೇವಸುತಂ ದೇವಮ್
ಕಂಸಚಾಣೂರಮರ್ದನಮ್ |
ದೇವಕೀಪರಮಾನಂದಮ್
ಕೃಷ್ಣಂ ವಂದೇ ಜಗದ್ಗುರುಮ್ ||
°~•~°~•~°~•~°~•~°~•~°
ತುಲಾ
ನೀವ್ ಮಾಡುವಂತಹ ಕೆಲಸಕಾರ್ಯಗಳಲ್ಲಿ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಪ್ರಯಾಣದಲ್ಲಿ ವಿಘ್ನಗಳು ಎದುರಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಶೀತ ಜ್ವರ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಮುನ್ನಡೆ ದೊರೆಯಲಿದೆ.
ಪರಿಹಾರ
ದುರ್ಗಾದೇವಿಯ ಆರಾಧನೆಯಂದ ಶುಭ.
ಜಪಿಸಲು :
ಸರ್ವರೂಪಮಯೀ ದೇವೀ
ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್
ನಮಾಮಿ ಪರಮೇಶ್ವರೀಮ್ ||
°~•~°~•~°~•~°~•~°~•~°
ವೃಶ್ಚಿಕ
ನಿಮ್ಮ ಪ್ರತಿಭೆ ಪ್ರದರ್ಶಿಸಲು ಉತ್ತಮ ಉತ್ತಮ ವೇದಿಕೆ ದೊರೆಯಲಿದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ವಿದ್ಯಾರ್ಥಿಗಳಿಗೆ ಆಲಸ್ಯತನ ವನ್ನು ಬಿಟ್ಟು ಮುನ್ನಡೆದರೆ ಮಾತ್ರ ಅಭಿವೃದ್ಧಿ ದೊರೆಯುತ್ತದೆ.
ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು:
ಶರಣ್ಯಂ ಸರ್ವಲೋಕಾನಾಮ್
ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ
ಸುಬ್ರಮಣ್ಯಮುಪಾಸ್ಮಹೇ ||
°~•~°~•~°~•~°~•~°~•~°
ಧನು
ವ್ಯವಹಾರ ಕಾರ್ಯಕ್ಷೇತ್ರದಲ್ಲಿ ಆಲಸ್ಯವನ್ನು ತೋರಬೇಡಿ. ಹಣಕಾಸಿನ ವಿಚಾರದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯಜೀವನದಲ್ಲಿ ಕಲಹ ಏರ್ಪಡುವ ಲಕ್ಷಣಗಳು ಇರುವುದರಿಂದ ಜಾಗರೂಕರಾಗಿರಿ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ದೊರೆಯುವುದು.
ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು ಪಡೆಯಿರಿ.
ಜಪಿಸಲು :
ಅಖಂಡಮಂಡಲಾಕಾರಮ್
ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ
ತಸ್ಮೈ ಶ್ರೀಗುರವೇ ನಮಃ ||
°~•~°~•~°~•~°~•~°~•~°
ಮಕರ
ಕೆಲಸಕಾರ್ಯದಲ್ಲಿ ಹಿನ್ನಡೆ ಕಂಡುಬಂದರೂ ಕೂಡ ಸಹೋದರರಿಂದ ಸಹಾಯ ಒದಗಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿ ಏಳಿಗೆ ಕಂಡುಬರುವುದು. ಗುರು-ಹಿರಿಯರನ್ನು, ತಂದೆ-ತಾಯಿಯನ್ನು ಗೌರವಿಸಿ.
ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.
ಜಪಿಸಲು :
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||
°~•~°~•~°~•~°~•~°~•~°
ಕುಂಭ
ಮಾಡುವಂತಹ ಕೆಲಸಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.
ಪರಿಹಾರ
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||
°~•~°~•~°~•~°~•~°~•~°
ಮೀನ
ನೂತನ ವ್ಯವಹಾರವನ್ನು ತೊಡಗಿಸಿಕೊಳ್ಳುವ ವರಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಹಾಗೂ ಯುವಕ-ಯುವತಿಯರಿಗೆ ವಿವಾಹಯೋಗ ಭಾಗ್ಯ ಒದಗಿ ಬರುವುದು. ಆರೋಗ್ಯ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳ ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.
ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.
ಜಪಿಸಲು :
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ / ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||
°~•~°~•~°~•~°~•~°~•~°
{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}