ವಿಕಾರಿನಾಮ ಸಂವತ್ಸರ / ಉತ್ತರಾಯಣ /
ಗ್ರೀಷ್ಮ ಋತು / ಜ್ಯೇಷ್ಠ ಮಾಸ/
ಶುಕ್ಲಪಕ್ಷ/ನವಮಿ ತಿಥಿ/
ಮಂಗಳವಾರ/ಉತ್ತರಾ ನಕ್ಷತ್ರ /
ದಿನಾಂಕ: 11.06.2019
°~•~°~•~°~•~°~•~°~•~°
ಮೇಷ
ಶೀತ ಜ್ವರ ತಲೆನೋವು ಚರ್ಮ ಸಂಬಂಧಿ ತೊಂದರೆಗಳು ಕಾಲು ನೋವು ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಆಹಾರ ಸಂಬಂಧಿಯಾಗಿ ಆರೋಗ್ಯ ಹದಗೆಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಲ್ಲಿ ಇರಬೇಕು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ವಿದ್ಯಾರ್ಥಿಗಳು ತಮ್ಮ ಪ್ರಯತ್ನದಿಂದ ಮುನ್ನಡೆಯಬೇಕು.
ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.
ಜಪಿಸಲು :
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ
ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ
ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥
°~•~°~•~°~•~°~•~°~•~°
ವೃಷಭ
ಉದ್ಯೋಗದಲ್ಲಿ ಉತ್ತಮ ಬದಲಾವಣೆ ಕಂಡುಬರುವುದು. ಹಿರಿಯ ಅಧಿಕಾರಿಗಳಿಂದ ಉತ್ತಮ ಪ್ರಶಂಸನಾ ಮಾತುಗಳು ಕೇಳಿ ಬರುವುದು. ಆರೋಗ್ಯದಲ್ಲಿ ಉತ್ತಮ ಚೇತರಿಕೆ ಕಂಡು ಬರುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.
ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.
ಜಪಿಸಲು :
ಸರ್ವದೇವಮಯೇ ದೇವಿ
ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್
ಸಫಲಂ ಕುರು ನಂದಿನಿ ||
°~•~°~•~°~•~°~•~°~•~°
ಮಿಥುನ
ನೂತನ ಗೃಹ ಉಪಯೋಗಿ ವಸ್ತುಗಳ ಖರೀದಿಗೆ ಉತ್ತಮ ಅವಕಾಶಗಳು ಒದಗಿ ಬರಲಿದೆ. ದಾಂಪತ್ಯ ಜೀವನದಲ್ಲಿ ಕಲಹ ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಉದರ ಸಂಬಂಧಿ ತೊಂದರೆಗಳು ಎದುರಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ಕಂಡು ಬರಲಿದೆ.
ಪರಿಹಾರ
ನರಸಿಂಹನ ಆರಾಧನೆಯನ್ನು ಮಾಡಿ.
ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್
ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಮಹಾವೀರಮ್
ನಮಾಮಿ ಋಣಮುಕ್ತಯೇ ||
°~•~°~•~°~•~°~•~°~•~°
ಕರ್ಕಾಟಕ
ಸ್ನೇಹಿತರಿಂದ ಉತ್ತಮ ಸಹಾಯ ಒದಗಿ ಬರುತ್ತದೆ. ದಾಂಪತ್ಯಜೀವನದಲ್ಲಿ ಕಲಹ ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆಯಬೇಕು. ಕುಲದೇವತಾ ದರ್ಶನವನ್ನು ಮಾಡಿ.
ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.
ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||
°~•~°~•~°~•~°~•~°~•~°
ಸಿಂಹ
ಮಾತಿನ ಮೂಲಕ ಜಗಳ ಸಂಭವಿಸುವ ಲಕ್ಷಣಗಳು ಇರುವುದರಿಂದ ಈ ದಿನ ಜಾಗ್ರತೆಯಿಂದಿರಬೇಕು. ಆರೋಗ್ಯದಲ್ಲಿ ಏರುಪೇರಾಗುವ ಲಕ್ಷಣಗಳಿವೆ. ವಿದ್ಯಾರ್ಥಿಗಳು ಉತ್ತಮ ಪ್ರಯತ್ನದಿಂದ ಮುನ್ನಡೆಯಬೇಕು.
ಪರಿಹಾರ
ಶಿವನ ಆರಾಧನೆ ಅಗತ್ಯ.
ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||
°~•~°~•~°~•~°~•~°~•~°
ಕನ್ಯಾ
ಉತ್ತಮ ಪರಿಶ್ರಮದಿಂದ ಮುನ್ನಡೆದಲ್ಲಿ ಅಭಿವೃದ್ಧಿ ಕಂಡುಬರುವುದು. ಉದ್ಯೋಗದಲ್ಲಿ ಉತ್ತಮ ಬದಲಾವಣೆಗಳು ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ದೊರೆಯಲಿದೆ.
ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ
ಜಪಿಸಲು :
ವಸುದೇವಸುತಂ ದೇವಮ್
ಕಂಸಚಾಣೂರಮರ್ದನಮ್ |
ದೇವಕೀಪರಮಾನಂದಮ್
ಕೃಷ್ಣಂ ವಂದೇ ಜಗದ್ಗುರುಮ್ ||
°~•~°~•~°~•~°~•~°~•~°
ತುಲಾ
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಅಡೆತಡೆಗಳು ಕಷ್ಟನಷ್ಟಗಳು ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಏಳಿಗೆ ಕಂಡುಬರುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ಕಂಡು ಬರಲಿದೆ.
ಪರಿಹಾರ
ದುರ್ಗಾದೇವಿಯ ಆರಾಧನೆಯಂದ ಶುಭ.
ಜಪಿಸಲು :
ಸರ್ವರೂಪಮಯೀ ದೇವೀ
ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್
ನಮಾಮಿ ಪರಮೇಶ್ವರೀಮ್ ||
°~•~°~•~°~•~°~•~°~•~°
ವೃಶ್ಚಿಕ
ಹಣಕಾಸಿನ ವಿಚಾರದಲ್ಲಿ ಉತ್ತಮ ಹೇಳಿದೆ ದೊರೆಯುತ್ತದೆ ಹಾಗೂ ವ್ಯವಹಾರದಲ್ಲಿ ಉತ್ತಮ ಲಾಭ ಕಂಡುಬರುವುದು. ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ವಿದ್ಯಾರ್ಥಿಗಳು ಆಲಸಿತನ ವನ್ನು ಬಿಟ್ಟು ಏಕಾಗ್ರತೆಯಿಂದ ಮುನ್ನಡೆಯಬೇಕು.
ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು:
ಶರಣ್ಯಂ ಸರ್ವಲೋಕಾನಾಮ್
ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ
ಸುಬ್ರಮಣ್ಯಮುಪಾಸ್ಮಹೇ ||
°~•~°~•~°~•~°~•~°~•~°
ಧನು
ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಬದಲಾವಣೆಗಳು ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು ಮುನ್ನಡೆಯಬೇಕು.
ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು ಪಡೆಯಿರಿ.
ಜಪಿಸಲು :
ಅಖಂಡಮಂಡಲಾಕಾರಮ್
ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ
ತಸ್ಮೈ ಶ್ರೀಗುರವೇ ನಮಃ ||
°~•~°~•~°~•~°~•~°~•~°
ಮಕರ
ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶ ದೊರೆಯಲಿದೆ ಹಾಗೂ ಯುವಕ-ಯುವತಿಯರಿಗೆ ವಿವಾಹಯೋಗ ಭಾಗ್ಯ ಬರುತ್ತದೆ. ಕುಟುಂಬದಲ್ಲಿ ಶಾಂತಿ ನೆಲ ಗೊಳ್ಳಲಿದೆ. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ಕಂಡುಬರುವುದು.
ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.
ಜಪಿಸಲು :
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||
°~•~°~•~°~•~°~•~°~•~°
ಕುಂಭ
ಆರೋಗ್ಯ ಸಂಬಂಧವಾದ ತೊಂದರೆಗಳು ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ನಿಮ್ಮ ಸುತ್ತ ಮುತ್ತ ಶತ್ರುಗಳು ಇರುವುದರಿಂದ ಜಾಗರೂಕತೆಯಿಂದ ಇರಿ. ವ್ಯವಹಾರದಲ್ಲಿ ಮೋಸ ಹೋಗದಿರಿ. ವಿದ್ಯಾರ್ಥಿಗಳು ಉತ್ತಮ ಪ್ರಯತ್ನದಿಂದ ಮುನ್ನಡೆಯಬೇಕು.
ಪರಿಹಾರ
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||
°~•~°~•~°~•~°~•~°~•~°
ಮೀನ
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಮೋಸ ಹೋಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು. ಯುವಕ-ಯುವತಿಯರಿಗೆ ವಿವಾಹಯೋಗ ಒದಗಿ ಬರುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.
ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.
ಜಪಿಸಲು :
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ / ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||
°~•~°~•~°~•~°~•~°~•~°
{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}