ವಿಕಾರಿನಾಮ ಸಂವತ್ಸರ / ಉತ್ತರಾಯಣ /
ಗ್ರೀಷ್ಮ ಋತು / ಜ್ಯೇಷ್ಠ ಮಾಸ/
ಶುಕ್ಲಪಕ್ಷ/ದಶಮಿ ತಿಥಿ/
ಬುಧವಾರ/ಹಸ್ತಾ ನಕ್ಷತ್ರ /
ದಿನಾಂಕ 12.06.2019
°~•~°~•~°~•~°~•~°~•~°
ಮೇಷ
ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಶೀತ ಜ್ವರ ತಲೆನೋವು ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ನಿಧಾನಗತಿ ಅಭಿವೃದ್ಧಿ ಕಂಡು ಬರಲಿದೆ.
ಪರಿಹಾರ :
ದೇವಿಯ ಆರಾಧನೆಯಿಂದ ಶುಭ.
ಜಪಿಸಲು :
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋಽಸ್ತು ತೇ ||
°~•~°~•~°~•~°~•~°~•~°
ವೃಷಭ
ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶ ದೊರೆಯಲಿದೆ. ವ್ಯವಹಾರದಲ್ಲಿ ಉತ್ತಮ ಬದಲಾವಣೆಗಳು ಕಂಡು ಬರುವುದು. ಆರೋಗ್ಯ ಸಂಬಂಧವಾದ ಸಣ್ಣ ಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಆಲಸಿತನ ವನ್ನು ಬಿಟ್ಟು ಮುನ್ನಡೆಯಬೇಕು.
ಪರಿಹಾರ
ದೇವಿಯ ಆರಾಧನೆಯಿಂದ ಶುಭ.
ಜಪಿಸಲು:
ಶ್ರೀದುರ್ಗಾಯೈ ನಮಃ ಶ್ರೀಶಾಂತ್ಯೈ ನಮ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||
°~•~°~•~°~•~°~•~°~•~°
ಮಿಥುನ
ಆಲಸಿತನ ವನ್ನು ಬಿಟ್ಟು ಉತ್ತಮ ಪರಿಶ್ರಮದಿಂದ ಮುನ್ನಡೆಯಿರಿ. ದಾಂಪತ್ಯ ಜೀವನದಲ್ಲಿ ಕಲಹವನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡುಬರುವುದು. ವಿದ್ಯಾರ್ಥಿಗಳಿಗೆ ನಿಧಾನಗತಿಯ ಏಳಿಗೆ ಕಂಡು ಬರಲಿದೆ.
ಪರಿಹಾರ
ಶ್ರೀಕೃಷ್ಣನ ಆರಾಧನೆ,ಗುರುದೇವತಾ ಆರಾಧನೆಯಿಂದ ಶುಭ.
ಜಪಿಸಲು :
ವಸುದೇವಸುತಂ ದೇವಮ್
ಕಂಸಚಾಣೂರಮರ್ದನಮ್|
ದೇವಕೀಪರಮಾನನ್ದಮ್
ಕೃಷ್ಣಂ ವನ್ದೇ ಜಗದ್ಗುರುಮ್ ||
°~•~°~•~°~•~°~•~°~•~°
ಕರ್ಕಾಟಕ
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿಯ ಹೇಳಿಗೆ ಕಂಡುಬಂದರೂ ಕೂಡ ಮಾನಸಿಕ ನೆಮ್ಮದಿಯನ್ನು ಕಳೆದುಕೊಳ್ಳಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ ಎದುರಿಸಬೇಕಾಗುತ್ತದೆ ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.
ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.
ಜಪಿಸಲು :
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ
ದುರ್ಗೇದೇವಿ ನಮೋಽಸ್ತು ತೇ ||
°~•~°~•~°~•~°~•~°~•~°
ಸಿಂಹ
ತೊಡಗಿಸಿಕೊಂಡ ಕೆಲಸಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಹೇಳಿಗೆ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಮುನ್ನಡೆ ಕಂಡುಬರುವುದು.
ಪರಿಹಾರ
ಶಿವನ ಆರಾಧನೆ ಅಗತ್ಯ.
ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ / ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||
°~•~°~•~°~•~°~•~°~•~°
ಕನ್ಯಾ
ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಬದಲಾವಣೆಗಳು ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಹಾಗೂ ವಿವಾಹ ಯೋಗ ಒದಗಿ ಬರುತ್ತದೆ. ವಿದ್ಯಾರ್ಥಿಗಳಿಗೆ ಮುನ್ನಡೆ ಕಂಡುಬರುವುದು.
ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ ಶುಭ.
ಜಪಿಸಲು :
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ |
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||
°~•~°~•~°~•~°~•~°~•~°
ತುಲಾ
ತಲೆನೋವು ಜ್ವರ ನಿದ್ರಾಹೀನತೆ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆದರೆ ಮಾತ್ರ ಅಭಿವೃದ್ಧಿ ಕಂಡುಬರುವುದು.
ಪರಿಹಾರ
ದುರ್ಗಾದೇವಿಯ ಆರಾಧನೆಯಂದ ಶುಭ.
ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀ ಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||
°~•~°~•~°~•~°~•~°~•~°
ವೃಶ್ಚಿಕ
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ಹಿರಿಯ ಅಧಿಕಾರಿಗಳಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುವುದು. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಕುಟುಂಬ ಸಂಬಂಧಿ ಕಲಹಗಳು ತೋರಿ ಬರುವುದು. ವಿದ್ಯಾರ್ಥಿಗಳು ಆಲಸಿತನ ವನ್ನು ಬಿಟ್ಟು ಮುನ್ನಡೆಯಬೇಕು.
ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.
ಜಪಿಸಲು :
ಷಡಾನನಂ ಕುಂಕುಮರಕ್ತವರ್ಣಮ್
ಮಹಾಮತಿಂ ದಿವ್ಯಮಯೂರವಾಹಮ್ |
ರುದ್ರಸ್ಯ ಸೂನುಂ ಸುರಸೈನ್ಯನಾಥಮ್
ಗುಹಂ ಸದಾ ಶರಣಮಹಂ ಪ್ರಪದ್ಯೇ ||
°~•~°~•~°~•~°~•~°~•~°
ಧನು
ವ್ಯವಹಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯಜೀವನದಲ್ಲಿ ಕಲಹ ಕಂಡು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಾಹನ ಪ್ರಯಾಣದ ಸಂದರ್ಭದಲ್ಲಿ ಜಾಗರೂಕರಾಗಿರಬೇಕು. ಮಕ್ಕಳು ಓಡಾಟದ ಸಂದರ್ಭಗಳಲ್ಲಿ ಜಾಗರೂಕರಾಗಿರಬೇಕು.
ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.
ಜಪಿಸಲು :
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ / ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||
°~•~°~•~°~•~°~•~°~•~°
ಮಕರ
ಮಾಡುವಂತಹ ಕೆಲಸಕಾರ್ಯಗಳಲ್ಲಿ ನಿಧಾನಗತಿ ಅಭಿವೃದ್ಧಿ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುವುದು ಜಾಗರೂಕತೆಯಿಂದ ಖರ್ಚುವೆಚ್ಚವನ್ನು ನಿಭಾಯಿಸಿ.
ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.
ಜಪಿಸಲು :
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ / ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||
°~•~°~•~°~•~°~•~°~•~°
ಕುಂಭ
ಆರೋಗ್ಯದಲ್ಲಿ ಏರುಪೇರು ಸಂಭವಿಸುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಮಾನಸಿಕ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪ್ರಯತ್ನದಿಂದ ಮುನ್ನಡೆಯಬೇಕು.
ಪರಿಹಾರ
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.
ಜಪಿಸಲು :
ರುದ್ರಂ ಪಶುಪತಿಂ ಸ್ಥಾಣುಮ್
ನೀಲಕಂಠಂ ಉಮಾಪತಿಮ್ |
ನಮಾಮಿ ಶಿರಸಾ ದೇವಮ್
ಕಿಂ ನೋ ಮೃತ್ಯುಃ ಕರಿಷ್ಯತಿ ||
°~•~°~•~°~•~°~•~°~•~°
ಮೀನ
ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಬದಲಾವಣೆ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಹಾಗೂ ಯುವಕ-ಯುವತಿಯರಿಗೆ ವಿವಾಹಯೋಗ ಭಾಗ್ಯ ಬರುತ್ತದೆ. ಅನಿರೀಕ್ಷಿತವಾಗಿ ದೂರ ಪ್ರಯಾಣ ಮಾಡಬೇಕಾದ ಪರಿಸ್ಥಿತಿ ಒದಗಿ ಬಂದೀತು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.
ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.
ಜಪಿಸಲು :
ಶಾಂತಾಕಾರಂ ಭುಜಗಶಯನಮ್
ಪದ್ಮನಾಭಂ ಸುರೇಶಮ್
ವಿಶ್ವಾಧಾರಂ ಗಗನಸದೃಶಮ್
ಮೇಘವರ್ಣಂ ಶುಭಾಂಗಮ್ |
ಲಕ್ಷ್ಮೀಕಾಂತಂ ಕಮಲನಯನಮ್
ಯೋಗಿಹೃದ್ಧ್ಯಾನಗಮ್ಯಮ್
ವಂದೇ ವಿಷ್ಣುಂ ಭವಭಯಹರಮ್
ಸರ್ವಲೋಕೈಕನಾಥಮ್ ||
°~•~°~•~°~•~°~•~°~•~°
{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}