23.06.2019

ದಿನ ಭವಿಷ್ಯ

         

ವಿಕಾರಿನಾಮ ಸಂವತ್ಸರ / ಉತ್ತರಾಯಣ /
ಗ್ರೀಷ್ಮ ಋತು / ಜ್ಯೇಷ್ಠ ಮಾಸ/
ಕೃಷ್ಣಪಕ್ಷ/ಷಷ್ಠೀ ತಿಥಿ/
ರವಿವಾರ/ಶತಭಿಷಾ ನಕ್ಷತ್ರ /

ದಿನಾಂಕ 23.06.2019

 °~•~°~•~°~•~°~•~°~•~°

 

ಮೇಷ

 

         ಭೂಮಿ ಸಂಬಂಧಿ ವ್ಯವಹಾರ ಮಾಡುವವರು ಹಾಗೂ ನೂತನ  ಮನೆ ಕಟ್ಟುವವರಿಗೆ ಉತ್ತಮ ಅವಕಾಶ ದೊರೆಯಲಿದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಅಲರ್ಜಿ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕರಾಗಿರಿ.



ಪರಿಹಾರ :
ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋಸ್ತು ತೇ ||

°~•~°~•~°~•~°~•~°~•~°

    

ವೃಷಭ

          ಆಹಾರದಿಂದಾಗಿ ಆರೋಗ್ಯ ಹದಗೆಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಆಹಾರವನ್ನು ಸೇವಿಸಿ. ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಸಹೋದರರ ನಡುವೆ ಜಗಳ ಸಂಭವಿಸುವ ಲಕ್ಷಣಗಳೇ ಇರುವುದರಿಂದ ಜಾಗರೂಕತೆಯಿಂದ ಇರಬೇಕು.




ಪರಿಹಾರ
ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮಃ ಶ್ರೀಶಾಂತ್ಯೈ ನಮ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||
°~•~°~•~°~•~°~•~°~•~°



ಮಿಥುನ


   ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು. ತೊಡಗಿಸಿಕೊಂಡ ಕೆಲಸದಲ್ಲಿ ಅಡೆತಡೆಗಳು ಎದುರಾಗುತ್ತವೆ. ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ನಿಧಾನಗತಿ ಅಭಿವೃದ್ಧಿ ದೊರೆಯಲಿದೆ.



ಪರಿಹಾರ  
ಶ್ರೀಕೃಷ್ಣನ ಆರಾಧನೆ,ಗುರುದೇವತಾ ಆರಾಧನೆಯಿಂದ ಶುಭ.

ಜಪಿಸಲು :
ವಸುದೇವಸುತಂ ದೇವಮ್

ಕಂಸಚಾಣೂರಮರ್ದನಮ್|

ದೇವಕೀಪರಮಾನನ್ದಮ್

ಕೃಷ್ಣಂ ವನ್ದೇ ಜಗದ್ಗುರುಮ್ ||

  °~•~°~•~°~•~°~•~°~•~°



ಕರ್ಕಾಟಕ

    ಶ್ವಾಸ ಸಂಬಂಧಿ ತೊಂದರೆಗಳು, ಜ್ವರ, ದೇಹದಲ್ಲಿ ಉಷ್ಣತೆ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ ಎದುರಾಗುತ್ತದೆ. ವಿದ್ಯಾರ್ಥಿಗಳಿಗೆ ಮುನ್ನಡೆ ದೊರೆಯುವುದು.



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ  
ದುರ್ಗೇದೇವಿ ನಮೋಸ್ತು ತೇ ||

 °~•~°~•~°~•~°~•~°~•~°



ಸಿಂಹ

      ಹಣಕಾಸಿನ ವಿಚಾರದಲ್ಲಿ ತುಂಬ ತೊಂದರೆಯನ್ನು ಎದುರಿಸಬೇಕಾಗುತ್ತದೆ. ಕುಟುಂಬದಲ್ಲಿ ಕಲಹ ಏರ್ಪಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯ ಸಂಬಂಧಿ ತೊಂದರೆಗಳು ಎದುರಾಗುತ್ತವೆ.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

    °~•~°~•~°~•~°~•~°~•~°      

 


ಕನ್ಯಾ


    ಕೆಲಸ-ಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಹಾಗೂ ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯದಲ್ಲಿ ಉತ್ತಮ ಚೇತರಿಕೆ ಕಂಡು ಬರುತ್ತದೆ.

ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ  ಶುಭ.

ಜಪಿಸಲು :
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ |  
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||

  °~•~°~•~°~•~°~•~°~•~°       

 


ತುಲಾ


        ಉದ್ಯೋಗ ಕ್ಷೇತ್ರದಲ್ಲಿ  ವಿಘ್ನಗಳು ಎದುರಾಗುತ್ತದೆ. ಆರೋಗ್ಯದ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀ ಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||


 °~•~°~•~°~•~°~•~°~•~°

 


ವೃಶ್ಚಿಕ


  
 ತಂದೆಯ ಆರೋಗ್ಯ ಹದಗೆಡುವ ಲಕ್ಷಣ ಗಳಿರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳಿಗೆ ಚೇತನವನ್ನು ಬಿಟ್ಟು ಮುನ್ನಡೆದರೆ ಮಾತ್ರ ಅಭಿವೃದ್ಧಿ ದೊರೆಯಲಿದೆ. ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕರಾಗಿರಿ.

ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.


ಜಪಿಸಲು :
ಷಡಾನನಂ ಕುಂಕುಮರಕ್ತವರ್ಣಮ್

ಮಹಾಮತಿಂ ದಿವ್ಯಮಯೂರವಾಹಮ್ |

ರುದ್ರಸ್ಯ ಸೂನುಂ ಸುರಸೈನ್ಯನಾಥಮ್

ಗುಹಂ ಸದಾ ಶರಣಮಹಂ ಪ್ರಪದ್ಯೇ ||

°~•~°~•~°~•~°~•~°~•~°

 


ಧನು


   ವ್ಯವಹಾರದಲ್ಲಿ ಅಡೆತಡೆಗಳು ಕಷ್ಟನಷ್ಟಗಳು ಎದುರಾಗುತ್ತದೆ. ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ . ಕುಟುಂಬದಲ್ಲಿ ಕಲಹಗಳು ಏರ್ಪಡುತ್ತದೆ. ವಿದ್ಯಾರ್ಥಿಗಳು ಪರಿಶ್ರಮದಿಂದ ಮುನ್ನಡೆಯಬೇಕು.  

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಜಪಿಸಲು :
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

     °~•~°~•~°~•~°~•~°~•~°

 


ಮಕರ


    ಭೂ ಸಂಬಂಧಿ ವ್ಯವಹಾರ ಮಾಡುವವರಿಗೆ ಉತ್ತಮ ಲಾಭ ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ದೊರೆಯಲಿದೆ ಶ್ವಾಸ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.



ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.  

ಜಪಿಸಲು :
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

   °~•~°~•~°~•~°~•~°~•~°          

 


ಕುಂಭ  


      ಚರ್ಮರೋಗ, ಅಲರ್ಜಿ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯಜೀವನದಲ್ಲಿ ಕಲಹ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆದರೆ ಮಾತ್ರ ಅಭಿವೃದ್ಧಿ ದೊರೆಯಲಿದೆ.



ಪರಿಹಾರ  
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.

ಜಪಿಸಲು :
ರುದ್ರಂ ಪಶುಪತಿಂ ಸ್ಥಾಣುಮ್

ನೀಲಕಂಠಂ ಉಮಾಪತಿಮ್ |

ನಮಾಮಿ ಶಿರಸಾ ದೇವಮ್

ಕಿಂ ನೋ ಮೃತ್ಯುಃ ಕರಿಷ್ಯತಿ  ||

°~•~°~•~°~•~°~•~°~•~°


ಮೀನ   


    ವಿದ್ಯಾರ್ಥಿಗಳಿಗೆ ವಿದ್ಯಾಕ್ಷೇತ್ರದಲ್ಲಿ ವಿಘ್ನಗಳು ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಕಲಹ ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶಾಂತಾಕಾರಂ ಭುಜಗಶಯನಮ್

ಪದ್ಮನಾಭಂ ಸುರೇಶಮ್  

ವಿಶ್ವಾಧಾರಂ ಗಗನಸದೃಶಮ್

ಮೇಘವರ್ಣಂ ಶುಭಾಂಗಮ್ |

ಲಕ್ಷ್ಮೀಕಾಂತಂ ಕಮಲನಯನಮ್

ಯೋಗಿಹೃದ್ಧ್ಯಾನಗಮ್ಯಮ್

ವಂದೇ ವಿಷ್ಣುಂ ಭವಭಯಹರಮ್

ಸರ್ವಲೋಕೈಕನಾಥಮ್  ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Leave a Reply

Your email address will not be published. Required fields are marked *