26.06.2019

ದಿನ ಭವಿಷ್ಯ

         

ವಿಕಾರಿನಾಮ ಸಂವತ್ಸರ / ಉತ್ತರಾಯಣ /
ಗ್ರೀಷ್ಮ ಋತು / ಜ್ಯೇಷ್ಠ ಮಾಸ/
ಕೃಷ್ಣಪಕ್ಷ/ನವಮಿ ತಿಥಿ/

ಬುಧವಾರ/ರೇವತಿ ನಕ್ಷತ್ರ /

ದಿನಾಂಕ 26.06.2019

 °~•~°~•~°~•~°~•~°~•~°

ಮೇಷ

         ಮಾನಸಿಕ ಗೊಂದಲಕ್ಕೆ ಒಳಗಾಗುವಿರಿ ಹಾಗೂ  ಮಾನಸಿಕ ಕಿರಿಕಿರಿಯನ್ನು ಎದುರಿಸಬೇಕಾಗುತ್ತದೆ. ಕೃಷಿಕರಿಗೆ ಉತ್ತಮ ಅಭಿವೃದ್ಧಿ ದೊರೆಯಲಿದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆದರೆ ಉತ್ತಮ ಅಭಿವೃದ್ಧಿ ನಡೆಯಲಿದೆ.



ಪರಿಹಾರ :
ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋಸ್ತು ತೇ ||

°~•~°~•~°~•~°~•~°~•~°

    

ವೃಷಭ

          ಸಹೋದರರಿಂದ ಧನಸಹಾಯ ಒದಗಿಬರಲಿದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ




ಪರಿಹಾರ
ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮಃ ಶ್ರೀಶಾಂತ್ಯೈ ನಮ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||
°~•~°~•~°~•~°~•~°~•~°



ಮಿಥುನ


   ಉದಾಸೀನತೆಯಿಂದ ಬಿಟ್ಟು ಉತ್ತಮ ಪರಿಶ್ರಮದಿಂದ ಮುನ್ನಡೆಯಿರಿ. ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಎದುರಾಗುತ್ತದೆ.  ಯಾವುದೇ ಗೊಂದಲಕ್ಕೆ ಒಳಗಾಗದೆ ಮಾನಸಿಕ ಸ್ಥೈರ್ಯದಿಂದ ಮುನ್ನಡೆಯಿರಿ



ಪರಿಹಾರ  
ಶ್ರೀಕೃಷ್ಣನ ಆರಾಧನೆ,ಗುರುದೇವತಾ ಆರಾಧನೆಯಿಂದ ಶುಭ.

ಜಪಿಸಲು :
ವಸುದೇವಸುತಂ ದೇವಮ್

ಕಂಸಚಾಣೂರಮರ್ದನಮ್|

ದೇವಕೀಪರಮಾನನ್ದಮ್

ಕೃಷ್ಣಂ ವನ್ದೇ ಜಗದ್ಗುರುಮ್ ||

  °~•~°~•~°~•~°~•~°~•~°



ಕರ್ಕಾಟಕ

    ತಲೆನೋವು ಶೀತ ಜ್ವರ ಚರ್ಮ ಸಂಬಂಧಿ ತೊಂದರೆಗಳು ಮುಂತಾದ ಎದುರಿಸಬೇಕಾಗುವುದು ರಿಂದ ಜಾಗರೂಕತೆಯಿಂದ  ಇರಬೇಕು. ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಬೆಳವಣಿಗೆ ಕಂಡು ಬರುವುದು



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ  
ದುರ್ಗೇದೇವಿ ನಮೋಸ್ತು ತೇ ||

 °~•~°~•~°~•~°~•~°~•~°



ಸಿಂಹ

      ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುವುದು ರಿಂದ ಜಾಗರೂಕತೆಯಿಂದ ಖರ್ಚುವೆಚ್ಚವನ್ನು ನಿಭಾಯಿಸಿ. ನಿದ್ರಾಹೀನತೆ, ಮಾನಸಿಕ ಕಿರಿಕಿರಿ,  ಕುಟುಂಬದಲ್ಲಿ ಕಲಹ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುವುದು ರಿಂದ ಜಾಗರೂಕತೆಯಿಂದ ಇರಬೇಕು


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

    °~•~°~•~°~•~°~•~°~•~°      


ಕನ್ಯಾ


    ವ್ಯಾಪಾರಸ್ಥರಿಗೆ ಉತ್ತಮ ಅಭಿವೃದ್ಧಿ ದೊರೆಯಲಿದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನಿಲ್ಲುತ್ತದೆ ಹಾಗೂ ಯುವಕ-ಯುವತಿಯರಿಗೆ ವಿವಾಹಯೋಗ ಭಾಗ್ಯ ಒದಗಿ ಬರಲಿದೆ.  ಆರೋಗ್ಯ ಸಂಬಂಧಿ ಸಣ್ಣ ಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ

ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ  ಶುಭ.

ಜಪಿಸಲು :
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ |  
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||

  °~•~°~•~°~•~°~•~°~•~°       


ತುಲಾ


        ಉದ್ಯೋಗ ಕ್ಷೇತ್ರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡುಬಂದರೂ ಕೂಡ ಮಾನಸಿಕ ನೆಮ್ಮದಿಯನ್ನು ಕಳೆದುಕೊಳ್ಳಬೇಕಾಗುತ್ತದೆ. ಶೀತ ಜ್ವರ ತಲೆನೋವು ಮೊದಲಾದ ತೊಂದರೆಗಳು ಎದುರಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ದೊರೆಯಲಿದೆ


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀ ಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||


 °~•~°~•~°~•~°~•~°~•~°


ವೃಶ್ಚಿಕ


  
 ದೇವತಾನುಗ್ರಹ ದಿಂದ ಉದ್ಯೋಗ ಕ್ಷೇತ್ರದಲ್ಲಿ ಅಭಿವೃದ್ಧಿ ದೊರೆಯಲಿದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುವುದು ರಿಂದ ಜಾಗರೂಕತೆಯಿಂದ ಇರಬೇಕು. ಉತ್ತಮ ಪರಿಶ್ರಮದಿಂದ ಮುನ್ನಡೆಯಿರಿ

ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.


ಜಪಿಸಲು :
ಷಡಾನನಂ ಕುಂಕುಮರಕ್ತವರ್ಣಮ್

ಮಹಾಮತಿಂ ದಿವ್ಯಮಯೂರವಾಹಮ್ |

ರುದ್ರಸ್ಯ ಸೂನುಂ ಸುರಸೈನ್ಯನಾಥಮ್

ಗುಹಂ ಸದಾ ಶರಣಮಹಂ ಪ್ರಪದ್ಯೇ ||

°~•~°~•~°~•~°~•~°~•~°


ಧನು


   ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕತೆಯಿಂದ ಇರಬೇಕು. ಆರೋಗ್ಯ ಸಂಬಂಧಿ ತೊಂದರೆಗಳು  ಎದುರಾಗುತ್ತದೆ. ಕುಲದೇವತಾ ದರ್ಶನದಿಂದ ಶುಭವಾಗಲಿದೆ

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಜಪಿಸಲು :
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

     °~•~°~•~°~•~°~•~°~•~°


ಮಕರ


    ವ್ಯವಹಾರ ಕ್ಷೇತ್ರದಲ್ಲಿ ಅಭಿವೃದ್ಧಿ ಕಂಡುಬರುವುದು.  ಅನಿರೀಕ್ಷಿತ ಪ್ರಯಾಣ ಮಾಡಬೇಕಾಗಿ ಬಂದೀತು. ಆರೋಗ್ಯ ಸಂಬಂಧವಾದ ತೊಂದರೆಗಳು ಎದುರಾಗುತ್ತದೆ



ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.  

ಜಪಿಸಲು :
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

   °~•~°~•~°~•~°~•~°~•~°          


ಕುಂಭ  


      ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕತೆಯಿಂದ ಇರಬೇಕು.  ಕೋಪವನ್ನು ನಿಯಂತ್ರಣದಲ್ಲಿಡಿ. ಮಾನಸಿಕವಾಗಿ ಕುಗ್ಗದೇ ಆತ್ಮಸ್ಥೈರ್ಯದಿಂದ ಮುನ್ನಡೆದಲ್ಲಿ ಅಭಿವೃದ್ಧಿ ದೊರೆಯಲಿದೆ



ಪರಿಹಾರ  
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.

ಜಪಿಸಲು :
ರುದ್ರಂ ಪಶುಪತಿಂ ಸ್ಥಾಣುಮ್

ನೀಲಕಂಠಂ ಉಮಾಪತಿಮ್ |

ನಮಾಮಿ ಶಿರಸಾ ದೇವಮ್

ಕಿಂ ನೋ ಮೃತ್ಯುಃ ಕರಿಷ್ಯತಿ  ||

°~•~°~•~°~•~°~•~°~•~°


ಮೀನ   


    ವ್ಯವಹಾರ ಕ್ಷೇತ್ರದಲ್ಲಿಉತ್ತಮ ಅಭಿವೃದ್ಧಿ ದೊರೆಯಲಿದೆ. ದಾಂಪತ್ಯಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳಿಗೆ ಅಭಿವೃದ್ಧಿ ಕಂಡುಬರುವುದು


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶಾಂತಾಕಾರಂ ಭುಜಗಶಯನಮ್

ಪದ್ಮನಾಭಂ ಸುರೇಶಮ್  

ವಿಶ್ವಾಧಾರಂ ಗಗನಸದೃಶಮ್

ಮೇಘವರ್ಣಂ ಶುಭಾಂಗಮ್ |

ಲಕ್ಷ್ಮೀಕಾಂತಂ ಕಮಲನಯನಮ್

ಯೋಗಿಹೃದ್ಧ್ಯಾನಗಮ್ಯಮ್

ವಂದೇ ವಿಷ್ಣುಂ ಭವಭಯಹರಮ್

ಸರ್ವಲೋಕೈಕನಾಥಮ್  ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *