27.06.2019

ದಿನ ಭವಿಷ್ಯ

         

ವಿಕಾರಿನಾಮ ಸಂವತ್ಸರ / ಉತ್ತರಾಯಣ /
ಗ್ರೀಷ್ಮ ಋತು / ಜ್ಯೇಷ್ಠ ಮಾಸ/
ಕೃಷ್ಣಪಕ್ಷ/ದಶಮೀ ತಿಥಿ/

ಗುರುವಾರ/ಅಶ್ವಿನೀ ನಕ್ಷತ್ರ /

ದಿನಾಂಕ 27.06.2019

 °~•~°~•~°~•~°~•~°~•~°

ಮೇಷ

         ಕೃಷಿಕರಿಗೆ ಅಭಿವೃದ್ಧಿ ದೊರೆಯಲಿದೆ.  ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ದೊರೆಯಲಿದೆ. ಸುಖ ಶಾಂತಿ ನೆಲೆಗೊಳ್ಳುವುದು. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ಕಂಡುಬರುವುದು.



ಪರಿಹಾರ :
ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋಸ್ತು ತೇ ||

°~•~°~•~°~•~°~•~°~•~°

    

ವೃಷಭ

          ವ್ಯವಹಾರ ಸಂಬಂಧವಾದ ಹಿನ್ನಡೆ ಕಂಡು ಬರುತ್ತದೆ. ಮಾನಸಿಕ ಕಿರಿಕಿರಿ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯದ  ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.




ಪರಿಹಾರ
ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮಃ ಶ್ರೀಶಾಂತ್ಯೈ ನಮ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||
°~•~°~•~°~•~°~•~°~•~°



ಮಿಥುನ


   ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ದೊರೆಯಲಿದೆ. ದಾಂಪತ್ಯ ಜೀವನದಲ್ಲಿ ಕಲಹ ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು ಎದುರಾಗುತ್ತವೆ.



ಪರಿಹಾರ  
ಶ್ರೀಕೃಷ್ಣನ ಆರಾಧನೆ,ಗುರುದೇವತಾ ಆರಾಧನೆಯಿಂದ ಶುಭ.

ಜಪಿಸಲು :
ವಸುದೇವಸುತಂ ದೇವಮ್

ಕಂಸಚಾಣೂರಮರ್ದನಮ್|

ದೇವಕೀಪರಮಾನನ್ದಮ್

ಕೃಷ್ಣಂ ವನ್ದೇ ಜಗದ್ಗುರುಮ್ ||

  °~•~°~•~°~•~°~•~°~•~°



ಕರ್ಕಾಟಕ

    ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಬದಲಾವಣೆ ಕಂಡುಬರುತ್ತದೆ. ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶ ದೊರೆಯಲಿದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುವುದರಿಂದ ಜಾಗರೂಕತೆಯಿಂದ ಖರ್ಚುವೆಚ್ಚವನ್ನು ನಿಭಾಯಿಸಿ.



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ  
ದುರ್ಗೇದೇವಿ ನಮೋಸ್ತು ತೇ ||

 °~•~°~•~°~•~°~•~°~•~°



ಸಿಂಹ

      ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ನಿಧಾನಗತಿಯ ಅಭಿವೃದ್ಧಿ ದೊರೆಯಲಿದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳು ಎದುರಿಸಬೇಕಾಗುವುದು ರಿಂದ ಜಾಗರೂಕತೆಯಿಂದ ಇರಬೇಕು.  


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

    °~•~°~•~°~•~°~•~°~•~°      


ಕನ್ಯಾ


    ಉದ್ಯೋಗ ಕ್ಷೇತ್ರದಲ್ಲಿ ಅಡೆತಡೆಗಳು ಕಷ್ಟನಷ್ಟಗಳು ಎದುರಾಗುತ್ತವೆ. ಶೀತ ಜ್ವರ ತಲೆನೋವು ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಮಾನಸಿಕ ತೊಂದರೆಯನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಏಕಾಗ್ರತೆಯಿಂದ ಮುನ್ನಡೆಯಬೇಕು.   

ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ  ಶುಭ.

ಜಪಿಸಲು :
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ |  
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||

  °~•~°~•~°~•~°~•~°~•~°       


ತುಲಾ


        ನೂತನ ಉದ್ಯೋಗಕಾಂಕ್ಷಿಗಳಿಗೆ ಉತ್ತಮ ಅವಕಾಶ ದೊರೆಯಲಿದೆ. ಯುವಕ-ಯುವತಿಯರಿಗೆ ವಿವಾಹಯೋಗ ಭಾಗ್ಯ ಬರಲಿದೆ. ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳು  ಎದುರಿಸಬೇಕಾಗುತ್ತದೆ.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀ ಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||


 °~•~°~•~°~•~°~•~°~•~°


ವೃಶ್ಚಿಕ


  
 ತೊಡಗಿಸಿಕೊಂಡ ಕೆಲಸಕಾರ್ಯಗಳಲ್ಲಿ ಅಭಿವೃದ್ಧಿ ಕಂಡುಬಂದರೂ ಕೂಡ ಮಾನಸಿಕ ನೆಮ್ಮದಿಯನ್ನು ಕಳೆದುಕೊಳ್ಳಬೇಕಾಗುತ್ತದೆ. ತಲೆ ನೋವು ಕಣ್ಣು ನೋವು ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.

ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.


ಜಪಿಸಲು :
ಷಡಾನನಂ ಕುಂಕುಮರಕ್ತವರ್ಣಮ್

ಮಹಾಮತಿಂ ದಿವ್ಯಮಯೂರವಾಹಮ್ |

ರುದ್ರಸ್ಯ ಸೂನುಂ ಸುರಸೈನ್ಯನಾಥಮ್

ಗುಹಂ ಸದಾ ಶರಣಮಹಂ ಪ್ರಪದ್ಯೇ ||

°~•~°~•~°~•~°~•~°~•~°


ಧನು


   ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕರಾಗಿರಬೇಕು. ಆರೋಗ್ಯ ಸಮಸ್ಯೆಗಳು ಎದುರಾಗುತ್ತದೆ. ಉತ್ತಮ ಪರಿಶ್ರಮದಿಂದ  ತಮ್ಮ ಕೆಲಸವನ್ನು ಮುನ್ನಡೆಸಿಕೊಂಡು ಬಂದಲ್ಲಿ ಮುನ್ನಡೆ ದೊರೆಯಲಿದೆ.

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಜಪಿಸಲು :
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

     °~•~°~•~°~•~°~•~°~•~°


ಮಕರ


    ಭೂಮಿ ಸಂಬಂಧಿ ಕೆಲಸ ಮಾಡುವವರಿಗೆ ಉತ್ತಮ ಅಭಿವೃದ್ಧಿ ದೊರೆಯಲಿದೆ. ಕೃಷಿಕರಿಗೆ ಉತ್ತಮ ಬೆಳೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ತೊಂದರೆಗಳು ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಿ.



ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.  

ಜಪಿಸಲು :
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

   °~•~°~•~°~•~°~•~°~•~°          


ಕುಂಭ  


      ಆಹಾರದ ಮೂಲಕವಾಗಿ ಆರೋಗ್ಯ ಹದಗೆಡುವ ಲಕ್ಷಣಗಳು ಇರುವುದರಿಂದ ಜಾಗರೂಕರಾಗಿರಬೇಕು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆದರೆ ಮಾತ್ರ ಅಭಿವೃದ್ಧಿ ದೊರೆಯಲಿದೆ.



ಪರಿಹಾರ  
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.

ಜಪಿಸಲು :
ರುದ್ರಂ ಪಶುಪತಿಂ ಸ್ಥಾಣುಮ್

ನೀಲಕಂಠಂ ಉಮಾಪತಿಮ್ |

ನಮಾಮಿ ಶಿರಸಾ ದೇವಮ್

ಕಿಂ ನೋ ಮೃತ್ಯುಃ ಕರಿಷ್ಯತಿ  ||

°~•~°~•~°~•~°~•~°~•~°


ಮೀನ   


    ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು.  ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳು ಎದುರಾಗುತ್ತದೆ. ವಿದ್ಯಾರ್ಥಿಗಳಿಗೆ ಅಭಿವೃದ್ಧಿ ದೊರೆಯಲಿದೆ.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶಾಂತಾಕಾರಂ ಭುಜಗಶಯನಮ್

ಪದ್ಮನಾಭಂ ಸುರೇಶಮ್  

ವಿಶ್ವಾಧಾರಂ ಗಗನಸದೃಶಮ್

ಮೇಘವರ್ಣಂ ಶುಭಾಂಗಮ್ |

ಲಕ್ಷ್ಮೀಕಾಂತಂ ಕಮಲನಯನಮ್

ಯೋಗಿಹೃದ್ಧ್ಯಾನಗಮ್ಯಮ್

ವಂದೇ ವಿಷ್ಣುಂ ಭವಭಯಹರಮ್

ಸರ್ವಲೋಕೈಕನಾಥಮ್  ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Leave a Reply

Your email address will not be published. Required fields are marked *