|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

02.02.2019

         

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಹೇಮಂತ ಋತು / ಪೌಷ ಮಾಸ /
ಕೃಷ್ಣ ಪಕ್ಷ /ತ್ರಯೋದಶೀ ತಿಥಿ/

ಶನಿವಾರ/ಪೂರ್ವಾಷಾಢ ನಕ್ಷತ್ರ /

ದಿನಾಂಕ: 02.02.2019

 °~•~°~•~°~•~°~•~°~•~°

ಮೇಷ

        ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಬೆಳವಣಿಗೆಗಳು ಕಂಡುಬರುವುದು. ಹಣಕಾಸಿನ ವಿಚಾರದಲ್ಲಿ ಏಳಿಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ.  ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಏಳಿಗೆ ದೊರೆಯಲಿದೆ. ಸಂಗೀತ ಸಾಹಿತ್ಯ ಚಿತ್ರಕಲಾ ಮೊದಲ ವಿಚಾರಗಳಲ್ಲಿ ಮುನ್ನಡೆ ಕಾಣುವಿರಿ.



ಪರಿಹಾರ:
ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋಸ್ತುತೇ ||

°~•~°~•~°~•~°~•~°~•~°

    

ವೃಷಭ

         ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಮುನ್ನಡೆ  ಸಾಧಿಸಿದರೂ ಹಣಕಾಸಿನ ವಿಚಾರದಲ್ಲಿ ಹಿನ್ನಡೆ ಅನುಭವಿಸಬೇಕಾಗುತ್ತದೆ. ಆರೋಗ್ಯದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ವೈವಾಹಿಕ ಜೀವನದಲ್ಲಿ  ಕಲಹ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಫಲ ಲಭ್ಯ.




ಪರಿಹಾರ
ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮ: / ಶ್ರೀಶಾಂತ್ಯೈ ನಮ: / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮ: / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮ: / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮ: / ಶ್ರೀಮಹಾಮಾಯಾಯೈ ನಮ: / ಶ್ರೀಯೋಗನಿದ್ರಾಯೈ ನಮ: / ಶ್ರೀಚಂಡಿಕಾಯೈ ನಮ:

°~•~°~•~°~•~°~•~°~•~°



ಮಿಥುನ


   ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ ಉತ್ತಮ  ಅಭಿವೃದ್ಧಿ ಕಾಣಲಿದ್ದು ಹೊಸ ವಿಚಾರವಾದಿಗಳಿಂದ ಅಧಿಕಾರಿಗಳ ಮನ ಗೆಲ್ಲುವಿರಿ. ಆರ್ಥಿಕವಾಗಿ ಮುನ್ನಡೆ ಸಾಧಿಸುವಿರಿ. ದಾಂಪತ್ಯ ಜೀವನದಲ್ಲಿ ಸುಖ. ಆರೋಗ್ಯದಲ್ಲಿ ಮುನ್ನಡೆ ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಫಲ ಲಭ್ಯ. ಕ್ರೀಡೆಗಳಲ್ಲಿ ಉತ್ತಮ ಫಲಿತಾಂಶ ಕಂಡುಬರುವುದು.



ಪರಿಹಾರ  
ಶ್ರೀಕೃಷ್ಣನ ಆರಾಧನೆಯಿಂದ ಶುಭ.

ಜಪಿಸಲು:
ವಸುದೇವಸುತಂ ದೇವಂ

ಕಂಸಚಾಣೂರಮರ್ದನಮ್|

ದೇವಕೀಪರಮಾನನ್ದಂ

ಕೃಷ್ಣಂ ವನ್ದೇ ಜಗದ್ಗುರುಮ್ ||

  °~•~°~•~°~•~°~•~°~•~°



ಕರ್ಕಾಟಕ

    ವ್ಯಾವಹಾರಿಕ ಕ್ಷೇತ್ರದಲ್ಲಿ ಹಿನ್ನಡೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಮುನ್ನಡೆ. ಆರೋಗ್ಯದಲ್ಲಿ ಶೀತ ಜ್ವರ ಮೊದಲಾದ ತೊಂದರೆಗಳು ಬರುವ ಸಾಧ್ಯತೆ.   ದಾಂಪತ್ಯ ಜೀವನದಲ್ಲಿ ಸುಖ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಫಲ ಲಭ್ಯ.



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ  
ದುರ್ಗೇದೇವಿ ನಮೋಸ್ತುತೇ ||

 °~•~°~•~°~•~°~•~°~•~°



ಸಿಂಹ

      ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಮುನ್ನಡೆ ಕಂಡುಬರಲಿದ್ದು ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಹಿನ್ನಡೆ ಪಡೆಯುವಿರಿ. ದಾಂಪತ್ಯ ಜೀವನದಲ್ಲಿ ಸುಖ. ಆರೋಗ್ಯದಲ್ಲಿ ಮುನ್ನಡೆ.  ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಮಾತ್ರ ಉತ್ತಮ ಫಲ ಲಭ್ಯ.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ

    °~•~°~•~°~•~°~•~°~•~°      


ಕನ್ಯಾ


    ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ  ಬದಲಾವಣೆಗಳು ಕಂಡುಬರುವುದು. ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿದ್ದು ಮುನ್ನಡೆಯಬೇಕು. ನಿಮ್ಮನ್ನು ಮೋಸಗೊಳಿಸುವ ಸಾಧ್ಯತೆ ಬಹಳವಾಗಿದೆ. ಆರೋಗ್ಯದಲ್ಲಿ ನಿಧಾನಗತಿಯ ಚೇತರಿಕೆ ಕಂಡುಬರುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಫಲ.



ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ  ಶುಭ.

ಜಪಿಸಲು:
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ|  
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||

  °~•~°~•~°~•~°~•~°~•~°       


ತುಲಾ


        ವ್ಯವಹಾರ ಕ್ಷೇತ್ರದಲ್ಲಿ ನಿಧಾನಗತಿಯ ಹಿನ್ನಡೆ ಕಂಡುಬಂದರೂ, ಇತರರಿಂದ ಸಹಾಯ ಒದಗಿ ಬರುವುದು. ಹಣಕಾಸಿನ ವಿಚಾರದಲ್ಲಿ ಏಳಿಗೆ ಕಂಡುಬರುತ್ತದೆ. ದಾಂಪತ್ಯ ಜೀವನದಲ್ಲಿ  ಕಲಹ. ಆರೋಗ್ಯದಲ್ಲಿ ಏರುಪೇರು. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಫಲ ಲಭ್ಯ.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮ: / ಶ್ರೀಶಾಂತ್ಯೈ ನಮ: / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮ: / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮ: / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮ: / ಶ್ರೀ ಮಹಾಮಾಯಾಯೈ ನಮ: / ಶ್ರೀಯೋಗನಿದ್ರಾಯೈ ನಮ: / ಶ್ರೀಚಂಡಿಕಾಯೈ ನಮ


 °~•~°~•~°~•~°~•~°~•~°


ವೃಶ್ಚಿಕ


  
ವ್ಯವಹಾರಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಉಂಟಾಗುವುದು. ಹಣಕಾಸಿನ ವಿಚಾರದಲ್ಲಿ ಲಾಭ ಒದಗಿ ಬರುವುದು.  ನಿಮಗೆ ಸಿಗಬೇಕಾದ ಹಣ ನಿಮಗೆ ಒದಗಿಬರುವುದು. ಆರೋಗ್ಯದಲ್ಲಿ ಸಣ್ಣಪುಟ್ಟ ತೊಂದರೆ ಎದುರಿಸಬೇಕಾಗುತ್ತದೆ. ಮಕ್ಕಳ ಆರೋಗ್ಯವೂ ಹದಗೆಡುವ ಪರಿಸ್ಥಿತಿ ಒದಗಿ ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ. ವಿದ್ಯಾರ್ಥಿಗಳಿಗೆ ಏಳಿಗೆ.

ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.


ಜಪಿಸಲು:
ಷಡಾನನಂ ಕುಂಕುಮರಕ್ತವರ್ಣಂ

ಮಹಾಮತಿಂ ದಿವ್ಯಮಯೂರವಾಹಮ್ |

ರುದ್ರಸ್ಯ ಸೂನುಂ ಸುರಸೈನ್ಯನಾಥಂ

ಗುಹಂ ಸದಾ ಶರಣಮಹಂ ಪ್ರಪದ್ಯೇ ||

°~•~°~•~°~•~°~•~°~•~°


ಧನು


    ವ್ಯಾವಹಾರಿಕ ಕ್ಷೇತ್ರದಲ್ಲಿ ನಿಧಾನಗತಿಯ ಮುನ್ನಡೆ ಕಂಡುಬರುವುದು. ಹಣಕಾಸಿನ ವಿಚಾರದಲ್ಲಿ ಏಳಿಗೆ. ದಾಂಪತ್ಯ ಜೀವನದಲ್ಲಿ ಸುಖ. ಆರೋಗ್ಯದಲ್ಲಿ ಹಿನ್ನಡೆ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮ, ಆಲಸಿತನ ಬಿಟ್ಟು ಸ್ವಪ್ರಯತ್ನದಿಂದ  ಮುಂದುವರಿದಲ್ಲಿ ಉತ್ತಮ ಅಂಕಗಳು ಲಭ್ಯವಾಗಲಿದೆ.


ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಜಪಿಸಲು:
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ

     °~•~°~•~°~•~°~•~°~•~°


ಮಕರ


    ಉದ್ಯೋಗ ಕ್ಷೇತ್ರದಲ್ಲಿ ತೊಂದರೆ ಅನುಭವಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಬರುವ ತೊಂದರೆಗಳಿಂದ ಮಾನಸಿಕ ಕಿರಿಕಿರಿ  ಅನುಭವಿಸಬೇಕಾಗುತ್ತದೆ. ಆರೋಗ್ಯದಲ್ಲಿ ಚರ್ಮ ಸಂಬಂಧಿ ತೊಂದರೆ, ಶೀತ ಜ್ವರ ಅಲರ್ಜಿ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಆಹಾರದ ಬಗ್ಗೆ ಗಮನವಿರಲಿ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಉತ್ತಮ ಫಲ ಲಭ್ಯ.



ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.  

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ

   °~•~°~•~°~•~°~•~°~•~°          


ಕುಂಭ  


      ಕಾರ್ಯಕ್ಷೇತ್ರದಲ್ಲಿ ಹಿನ್ನಡೆ ಎದುರಿಸಬೇಕಾಗಿದ್ದು ಶಾಂತಿಯನ್ನು ಕಳೆದುಕೊಳ್ಳುವಿರಿ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ. ಆರೋಗ್ಯದಲ್ಲಿ ಬರುವ   ಏರುಪೇರಿನಿಂದಾಗಿ ನೆಮ್ಮದಿ ಕಳೆದುಕೊಳ್ಳುವಿರಿ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಫಲ ಲಭ್ಯ.



ಪರಿಹಾರ  
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.

ಜಪಿಸಲು:
ರುದ್ರಂ ಪಶುಪತಿಂ ಸ್ಥಾಣುಂ

ನೀಲಕಂಠಂ ಉಮಾಪತಿಮ್ |

ನಮಾಮಿ ಶಿರಸಾ ದೇವಂ

ಕಿಂ ನೋ ಮೃತ್ಯುಃ ಕರಿಷ್ಯತಿ  ||

°~•~°~•~°~•~°~•~°~•~°


ಮೀನ   


  ಕಾರ್ಯಕ್ಷೇತ್ರದಲ್ಲಿ ಸಣ್ಣಪುಟ್ಟ ಬದಲಾವಣೆಗಳು  ಬರುವ ಸಾಧ್ಯತೆಗಳು ಇದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ. ಆರೋಗ್ಯದಲ್ಲಿ ಏರುಪೇರು. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಫಲ ಲಭ್ಯ.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು:    
ಶಾಂತಾಕಾರಂ ಭುಜಗಶಯನಂ

ಪದ್ಮನಾಭಂ ಸುರೇಶಂ  

ವಿಶ್ವಾಧಾರಂ ಗಗನಸದೃಶಂ

ಮೇಘವರ್ಣಂ ಶುಭಾಂಗಮ್ |

ಲಕ್ಷ್ಮೀಕಾಂತಂ ಕಮಲನಯನಂ

ಯೋಗಿಹೃದ್ಧ್ಯಾನಗಮ್ಯಂ

ವಂದೇ ವಿಷ್ಣುಂ ಭವಭಯಹರಂ

ಸರ್ವಲೋಕೈಕನಾಥಮ್  ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}