ವಿಕಾರಿನಾಮ ಸಂವತ್ಸರ / ದಕ್ಷಿಣಾಯನ /
ವರ್ಷ ಋತು / ಶ್ರಾವಣ ಮಾಸ/
ಶುಕ್ಲಪಕ್ಷ/ ಪ್ರತಿಪತ್/ದ್ವಿತೀಯ ತಿಥಿ/
ಶುಕ್ರವಾರ/ಆಶ್ಲೇಷ ನಕ್ಷತ್ರ /
ದಿನಾಂಕ 02.08.2019
°~•~°~•~°~•~°~•~°~•~°
ಮೇಷ
ಕೃಷಿಕರಿಗೆ ಉತ್ತಮ ಅಭಿವೃದ್ಧಿ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ದೊರೆಯಲಿದೆ
ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.
ಜಪಿಸಲು :
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ
ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ
ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥
°~•~°~•~°~•~°~•~°~•~°
ವೃಷಭ
ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲ ಗೊಳ್ಳಲಿದೆ. ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.
ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.
ಜಪಿಸಲು :
ಸರ್ವದೇವಮಯೇ ದೇವಿ
ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್
ಸಫಲಂ ಕುರು ನಂದಿನಿ ||
°~•~°~•~°~•~°~•~°~•~°
ಮಿಥುನ
ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ದೊರೆಯಲಿದೆ.
ಪರಿಹಾರ
ನರಸಿಂಹನ ಆರಾಧನೆಯನ್ನು ಮಾಡಿ.
ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್
ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಮಹಾವೀರಮ್
ನಮಾಮಿ ಋಣಮುಕ್ತಯೇ ||
°~•~°~•~°~•~°~•~°~•~°
ಕರ್ಕಾಟಕ
ಮಾನಸಿಕ ನೆಮ್ಮದಿಯನ್ನು ಕಳೆದುಕೊಳ್ಳಬೇಕಾಗುತ್ತದೆ. ಶೀತ ಜ್ವರ ತಲೆನೋವು ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು
ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.
ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||
°~•~°~•~°~•~°~•~°~•~°
ಸಿಂಹ
ಜ್ವರ ಕಣ್ಣು ನೋವು ನಿದ್ರಾಹೀನತೆ ಮೊದಲಾದ ತೊಂದರೆಗಳು ಎದುರಾಗುತ್ತದೆ. ವಿದ್ಯಾರ್ಥಿಗಳಿಗೆ ಹಿನ್ನಡೆ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಕಲಹ ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು
ಪರಿಹಾರ
ಶಿವನ ಆರಾಧನೆ ಅಗತ್ಯ.
ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||
°~•~°~•~°~•~°~•~°~•~°
ಕನ್ಯಾ
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಅಡೆತಡೆಗಳು ಕಷ್ಟನಷ್ಟಗಳು ಎದುರಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲರ ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು
ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ
ಜಪಿಸಲು :
ವಸುದೇವಸುತಂ ದೇವಮ್
ಕಂಸಚಾಣೂರಮರ್ದನಮ್ |
ದೇವಕೀಪರಮಾನಂದಮ್
ಕೃಷ್ಣಂ ವಂದೇ ಜಗದ್ಗುರುಮ್ ||
°~•~°~•~°~•~°~•~°~•~°
ತುಲಾ
ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಜೀವನದಲ್ಲಿ ಶಾಂತಿ ನೆಲೆಗೊಳ್ಳುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ದೊರೆಯಲಿದೆ
ಪರಿಹಾರ
ದುರ್ಗಾದೇವಿಯ ಆರಾಧನೆಯಂದ ಶುಭ.
ಜಪಿಸಲು :
ಸರ್ವರೂಪಮಯೀ ದೇವೀ
ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್
ನಮಾಮಿ ಪರಮೇಶ್ವರೀಮ್ ||
°~•~°~•~°~•~°~•~°~•~°
ವೃಶ್ಚಿಕ
ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡುಬರುವುದು. ಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ . ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ
ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು:
ಶರಣ್ಯಂ ಸರ್ವಲೋಕಾನಾಮ್
ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ
ಸುಬ್ರಮಣ್ಯಮುಪಾಸ್ಮಹೇ ||
°~•~°~•~°~•~°~•~°~•~°
ಧನು
ಆರೋಗ್ಯದಲ್ಲಿ ವ್ಯತ್ಯಾಸಗಳ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಾಹನ ಪ್ರಯಾಣ ಸಂದರ್ಭದಲ್ಲಿ ಜಾಗರೂಕರಾಗಿರಬೇಕು. ಉದ್ಯೋಗ ವ್ಯವಹಾರದಲ್ಲಿ ಅಡೆತಡೆಗಳು ಕಷ್ಟನಷ್ಟಗಳು ಎದುರಾಗುತ್ತದೆ.
ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು ಪಡೆಯಿರಿ.
ಜಪಿಸಲು :
ಅಖಂಡಮಂಡಲಾಕಾರಮ್
ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ
ತಸ್ಮೈ ಶ್ರೀಗುರವೇ ನಮಃ ||
°~•~°~•~°~•~°~•~°~•~°
ಮಕರ
ಮಾಡುವಂತಹ ಕೆಲಸಕಾರ್ಯಗಳಲ್ಲಿ ನಿಧಾನಗತಿಯಲ್ಲಿ ಅಭಿವೃದ್ಧಿ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ. ವಿದ್ಯಾರ್ಥಿಗಳಿಗೆ ಅಭಿವೃದ್ಧಿ ದೊರೆಯಲಿದೆ
ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.
ಜಪಿಸಲು :
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||
°~•~°~•~°~•~°~•~°~•~°
ಕುಂಭ
ಆರೋಗ್ಯ ಸಂಬಂಧವಾದ ತೊಂದರೆಗಳು ಕಂಡು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆದಲ್ಲಿ ಮಾತ್ರ ಅಭಿವೃದ್ಧಿ ದೊರೆಯಲಿದೆ
ಪರಿಹಾರ
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||
°~•~°~•~°~•~°~•~°~•~°
ಮೀನ
ವ್ಯವಹಾರ ಕ್ಷೇತ್ರದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು
ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.
ಜಪಿಸಲು :
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ / ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||
°~•~°~•~°~•~°~•~°~•~°
{ವಿ. ಸೂ. :
ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}