ವಿಕಾರಿನಾಮ ಸಂವತ್ಸರ / ದಕ್ಷಿಣಾಯನ /
ವರ್ಷ ಋತು / ಶ್ರಾವಣ ಮಾಸ/
ಶುಕ್ಲಪಕ್ಷ/ ಚತುರ್ಥಿ ತಿಥಿ/
ರವಿವಾರ/ಹುಬ್ಬಾ ನಕ್ಷತ್ರ /
ದಿನಾಂಕ 04.08.2019
°~•~°~•~°~•~°~•~°~•~°
ಮೇಷ
ಮಾಡುವಂತಹ ಕೆಲಸ ಕಾರ್ಯದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು. ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳು ಎದುರಾಗುತ್ತದೆ.
ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.
ಜಪಿಸಲು :
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ
ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ
ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥
°~•~°~•~°~•~°~•~°~•~°
ವೃಷಭ
ಗೃಹಪಯೋಗಿ ವಸ್ತುಗಳ ಖರೀದಿಗೆ ಉತ್ತಮ ಅವಕಾಶ ದೊರೆಯಲಿದೆ. ಆಭರಣ ಒಡವೆ ವಸ್ತ್ರಗಳ ಖರೀದಿಗೆ ಅವಕಾಶ ದೊರೆಯುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು
ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.
ಜಪಿಸಲು :
ಸರ್ವದೇವಮಯೇ ದೇವಿ
ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್
ಸಫಲಂ ಕುರು ನಂದಿನಿ ||
°~•~°~•~°~•~°~•~°~•~°
ಮಿಥುನ
ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಕಂಡು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಖರ್ಚುವೆಚ್ಚವನ್ನು ನಿಭಾಯಿಸಿ. ಮಾತಿನ ಮೂಲಕ ಜಗಳಗಳು ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು
ಪರಿಹಾರ
ನರಸಿಂಹನ ಆರಾಧನೆಯನ್ನು ಮಾಡಿ.
ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್
ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಮಹಾವೀರಮ್
ನಮಾಮಿ ಋಣಮುಕ್ತಯೇ ||
°~•~°~•~°~•~°~•~°~•~°
ಕರ್ಕಾಟಕ
ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು ದಾಂಪತ್ಯ ಜೀವನದಲ್ಲಿ ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ದೊರೆಯಲಿದೆ.
ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.
ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||
°~•~°~•~°~•~°~•~°~•~°
ಸಿಂಹ
ನೂತನ ವ್ಯವಹಾರವನ್ನು ತೊಡಗಿಸಿಕೊಳ್ಳುವ ಅವರಿಗೆ ಉತ್ತಮ ಅವಕಾಶ ದೊರೆಯಲಿದೆ. ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ನಡೆದರೆ ಮಾತ್ರ ಅಭಿವೃದ್ಧಿ ದೊರೆಯಲಿದೆ.
ಪರಿಹಾರ
ಶಿವನ ಆರಾಧನೆ ಅಗತ್ಯ.
ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||
°~•~°~•~°~•~°~•~°~•~°
ಕನ್ಯಾ
ಕೆಲಸಕಾರ್ಯ ಗಳಲ್ಲಿ ಅಡೆತಡೆಗಳು ಕಷ್ಟನಷ್ಟಗಳು ಎದುರಾಗುತ್ತವೆ. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು
ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ
ಜಪಿಸಲು :
ವಸುದೇವಸುತಂ ದೇವಮ್
ಕಂಸಚಾಣೂರಮರ್ದನಮ್ |
ದೇವಕೀಪರಮಾನಂದಮ್
ಕೃಷ್ಣಂ ವಂದೇ ಜಗದ್ಗುರುಮ್ ||
°~•~°~•~°~•~°~•~°~•~°
ತುಲಾ
ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶ ದೊರೆಯಲಿದೆ. ಉದ್ಯೋಗದಲ್ಲಿ ಉನ್ನತ ಸ್ಥಾನಮಾನ ಗೌರವಗಳು ಲಭಿಸಲಿದೆ ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ. ವಿದ್ಯಾರ್ಥಿಗಳಿಗೆ ಅಭಿವೃದ್ಧಿ ದೊರೆಯಲಿದೆ
ಪರಿಹಾರ
ದುರ್ಗಾದೇವಿಯ ಆರಾಧನೆಯಂದ ಶುಭ.
ಜಪಿಸಲು :
ಸರ್ವರೂಪಮಯೀ ದೇವೀ
ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್
ನಮಾಮಿ ಪರಮೇಶ್ವರೀಮ್ ||
°~•~°~•~°~•~°~•~°~•~°
ವೃಶ್ಚಿಕ
ನೂತನ ವ್ಯವಹಾರವನ್ನು ತೊಡಗಿಸಿಕೊಳ್ಳುವ ವರೆಗೆ ಉತ್ತಮ ಅಭಿವೃದ್ಧಿ ಕಂಡುಬರುವುದು, ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ. ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು ಮುನ್ನಡೆಯಬೇಕು
ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು:
ಶರಣ್ಯಂ ಸರ್ವಲೋಕಾನಾಮ್
ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ
ಸುಬ್ರಮಣ್ಯಮುಪಾಸ್ಮಹೇ ||
°~•~°~•~°~•~°~•~°~•~°
ಧನು
ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಕಂಡು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯ ಸಂಬಂಧಿ ತೊಂದರೆಗಳು ಎದುರಾಗುತ್ತದೆ . ದಾಂಪತ್ಯ ಜೀವನದಲ್ಲಿ ಕಲಹ ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು
ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು ಪಡೆಯಿರಿ.
ಜಪಿಸಲು :
ಅಖಂಡಮಂಡಲಾಕಾರಮ್
ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ
ತಸ್ಮೈ ಶ್ರೀಗುರವೇ ನಮಃ ||
°~•~°~•~°~•~°~•~°~•~°
ಮಕರ
ಶೀತ ಜ್ವರ ತಲೆನೋವು ಮೊದಲಾದ ಆರೋಗ್ಯ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಉದ್ಯೋಗದಲ್ಲಿ ಮನಶಾಂತಿ ಕಳೆದುಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು
ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.
ಜಪಿಸಲು :
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||
°~•~°~•~°~•~°~•~°~•~°
ಕುಂಭ
ಯುವಕ-ಯುವತಿಯರಿಗೆ ವಿವಾಹಯೋಗ ಭಾಗ್ಯ ಒದಗಿ ಬರುತ್ತದೆ. ಉದ್ಯೋಗದಲ್ಲಿ ಉನ್ನತ ಸ್ಥಾನಮಾನ ದೊರೆಯುತ್ತದೆ ವಿದ್ಯಾರ್ಥಿಗಳು ಆಲಸಿತನ ವನ್ನು ಬಿಟ್ಟು ತಮ್ಮ ಪರಿಶ್ರಮದಿಂದ ಮುನ್ನಡೆಯಬೇಕು.
ಪರಿಹಾರ
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||
°~•~°~•~°~•~°~•~°~•~°
ಮೀನ
ಶೀತ ಜ್ವರ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಆರೋಗ್ಯ ಸಂಬಂಧವಾಗಿ ಜಾಗರೂಕತೆಯಿಂದ ಇರಬೇಕು. ಮಾಡುವಂತಹ ಕೆಲಸ ಕಾರ್ಯಗಳನ್ನು ಉತ್ತಮ ಶ್ರದ್ಧೆಯಿಂದ ಮುನ್ನಡೆಸಿಕೊಂಡು ಬಂದರೆ ಅಭಿವೃದ್ಧಿ ಕಂಡುಬರುವುದು
ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.
ಜಪಿಸಲು :
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ / ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||
°~•~°~•~°~•~°~•~°~•~°
{ವಿ. ಸೂ. :
ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}