ವಿಕಾರಿನಾಮ ಸಂವತ್ಸರ / ದಕ್ಷಿಣಾಯನ /
ವರ್ಷ ಋತು / ಶ್ರಾವಣ ಮಾಸ/
ಕೃಷ್ಣಪಕ್ಷ/ ಚತುರ್ದಶಿ ತಿಥಿ/
ಗುರುವಾರ/ಆಶ್ಲೇಷ ನಕ್ಷತ್ರ /
ದಿನಾಂಕ 29.08.2019
°~•~°~•~°~•~°~•~°~•~°
ಮೇಷ
ಮಾಡುವಂತಹ ಕೆಲಸ ಕಾರ್ಯದಲ್ಲಿ ಉತ್ತಮ ಅಭಿವೃದ್ಧಿ ದೊರೆಯಲಿದೆ. ತಾಯಿಯ ಆಗಮನದಿಂದಾಗಿ ಸಂತೋಷ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಅಭಿವೃದ್ಧಿ ಕಂಡುಬರಲಿದೆ.
ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.
ಜಪಿಸಲು :
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ
ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ
ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥
°~•~°~•~°~•~°~•~°~•~°
ವೃಷಭ
ಆರೋಗ್ಯ ಸಂಬಂಧವಾದ ತೊಂದರೆಗಳು ಎದುರಾಗುವ ಲಕ್ಷಣಗಳಿರುವ ದರಿಂದ ಜಾಗರೂಕತೆಯಿಂದ ಇರಬೇಕು. ಸಹೋದರರ ಆಗಮನದಿಂದಾಗಿ ಸಂತೋಷ ಆಗುವುದು. ಗೆಳೆಯರಿಂದ ಉತ್ತಮ ಸಹಕಾರ ದೊರೆಯಲಿದೆ
ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.
ಜಪಿಸಲು :
ಸರ್ವದೇವಮಯೇ ದೇವಿ
ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್
ಸಫಲಂ ಕುರು ನಂದಿನಿ ||
°~•~°~•~°~•~°~•~°~•~°
ಮಿಥುನ
ಕುಟುಂಬದಲ್ಲಿ ಸಂತೋಷ ನೆಮ್ಮದಿ ನೆಲೆಗೊಳ್ಳುತ್ತದೆ. ದೂರದ ಕುಟುಂಬಸ್ಥರ ಆಗಮನದಿಂದಾಗಿ ಸಂತೋಷ ದೊರೆಯಲಿದೆ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಉತ್ತಮ ಅನುಕೂಲತೆ ಒದಗಿಬರುತ್ತದೆ
ಪರಿಹಾರ
ನರಸಿಂಹನ ಆರಾಧನೆಯನ್ನು ಮಾಡಿ.
ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್
ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಮಹಾವೀರಮ್
ನಮಾಮಿ ಋಣಮುಕ್ತಯೇ ||
°~•~°~•~°~•~°~•~°~•~°
ಕರ್ಕಾಟಕ
ಆರೋಗ್ಯದಲ್ಲಿ ಉತ್ತಮ ಚೇತರಿಕೆ ಕಂಡು ಬರುತ್ತದೆ. ಮಾಡುವಂತಹ ಕೆಲಸಕಾರ್ಯಗಳಲ್ಲಿ ಉತ್ತಮ ಯಶಸ್ಸು ಲಭ್ಯವಾಗುವುದು. ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಗೊಳ್ಳುವುದು.
ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.
ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||
°~•~°~•~°~•~°~•~°~•~°
ಸಿಂಹ
ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುವುದು ರಿಂದ ಜಾಗರೂಕತೆಯಿಂದ ಇರಬೇಕು. ಖರ್ಚುವೆಚ್ಚಗಳು ಒದಗಿಬರುತ್ತದೆ. ಇತರರಿಗೆ ಹಣವನ್ನು ಕೊಟ್ಟು ಮೋಸ ಹೋಗಬೇಡಿ.
ಪರಿಹಾರ
ಶಿವನ ಆರಾಧನೆ ಅಗತ್ಯ.
ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||
°~•~°~•~°~•~°~•~°~•~°
ಕನ್ಯಾ
ಉದ್ಯೋಗ ಕ್ಷೇತ್ರದಲ್ಲಿ ಸಣ್ಣಪುಟ್ಟ ತೊಂದರೆಗಳು ಎದುರಾಗುತ್ತದೆ. ಮಾನಸಿಕವಾಗಿ ಕುಂದದೆ ದೃಢ ಸಂಕಲ್ಪದಿಂದ ಮುನ್ನಡೆಯಿರಿ. ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳು ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು
ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ
ಜಪಿಸಲು :
ವಸುದೇವಸುತಂ ದೇವಮ್
ಕಂಸಚಾಣೂರಮರ್ದನಮ್ |
ದೇವಕೀಪರಮಾನಂದಮ್
ಕೃಷ್ಣಂ ವಂದೇ ಜಗದ್ಗುರುಮ್ ||
°~•~°~•~°~•~°~•~°~•~°
ತುಲಾ
ನೂತನ ಉದ್ಯೋಗವನ್ನು ತೊಡಗಿಸಿಕೊಳ್ಳುವ ಅವರಿಗೆ ಉತ್ತಮ ಅವಕಾಶಗಳು ದೊರೆಯುತ್ತದೆ. ಉದ್ಯೋಗದಲ್ಲಿ ಉನ್ನತ ಸ್ಥಾನಮಾನ ಗೌರವಗಳು ಲಭಿಸಲಿವೆ. ಮಾಡುವಂತಹ ಕೆಲಸ ಕಾರ್ಯವನ್ನು ಉತ್ತಮ ಪರಿಶ್ರಮದಿಂದ ಮುನ್ನಡೆಸಿಕೊಂಡು ಬನ್ನಿ.
ಪರಿಹಾರ
ದುರ್ಗಾದೇವಿಯ ಆರಾಧನೆಯಂದ ಶುಭ.
ಜಪಿಸಲು :
ಸರ್ವರೂಪಮಯೀ ದೇವೀ
ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್
ನಮಾಮಿ ಪರಮೇಶ್ವರೀಮ್ ||
°~•~°~•~°~•~°~•~°~•~°
ವೃಶ್ಚಿಕ
ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರಲಿದೆ. ಗಾಜಿನ ವಿಚಾರದಲ್ಲಿ ತೊಂದರೆಗಳು ಕಂಡು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಖರ್ಚು-ವೆಚ್ಚವನ್ನು ನಿಭಾಯಿಸಬೇಕು
ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು:
ಶರಣ್ಯಂ ಸರ್ವಲೋಕಾನಾಮ್
ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ
ಸುಬ್ರಮಣ್ಯಮುಪಾಸ್ಮಹೇ ||
°~•~°~•~°~•~°~•~°~•~°
ಧನು
ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುವುದು ರಿಂದ ಜಾಗರೂಕತೆಯಿಂದ ಇರಬೇಕು. ದಾಂಪತ್ಯ ಜೀವನದಲ್ಲಿ ಸಣ್ಣಪುಟ್ಟ ಕಲಹಗಳು ಎದುರಾಗುತ್ತದೆ.ಮಾನಸಿಕವಾಗಿ ಕುಂದದೆ ಉತ್ತಮ ಮನಸ್ಥೈರ್ಯ ದಿಂದ ಮುನ್ನಡೆಯಿರಿ.
ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು ಪಡೆಯಿರಿ.
ಜಪಿಸಲು :
ಅಖಂಡಮಂಡಲಾಕಾರಮ್
ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ
ತಸ್ಮೈ ಶ್ರೀಗುರವೇ ನಮಃ ||
°~•~°~•~°~•~°~•~°~•~°
ಮಕರ
ನೂತನ ಉದ್ಯೋಗವನ್ನು ತೊಡಗಿಸಿಕೊಳ್ಳುವ ಅವರಿಗೆ ಉತ್ತಮ ಅವಕಾಶ ದೊರೆಯಲಿದೆ ಹಾಗೂ ಉದ್ಯೋಗದಲ್ಲಿ ಉತ್ತಮ ಬದಲಾವಣೆಗಳು ಕಂಡು ಬರುತ್ತದೆ. ವ್ಯಾಪಾರಸ್ಥರಿಗೆ ಉತ್ತಮ ಅಭಿವೃದ್ಧಿ ಕಂಡುಬರುವುದು.
ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.
ಜಪಿಸಲು :
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||
°~•~°~•~°~•~°~•~°~•~°
ಕುಂಭ
ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ, ಜಾಗರೂಕತೆಯಿಂದ ಇರಬೇಕು. ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಕಂಡುಬರುವ ಲಕ್ಷಣಗಳಿವೆ. ಶತ್ರುಗಳಿಂದ ತೊಂದರೆ, ಕಳ್ಳರ ಕಾಟ ಮೊದಲಾದ ತೊಂದರೆಗಳು ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು
ಪರಿಹಾರ
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.
ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||
°~•~°~•~°~•~°~•~°~•~°
ಮೀನ
ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಕಲಹಗಳು ಸಂಭವಿಸುವ ಲಕ್ಷಣಗಳಿರುವ ದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಿರಿ
ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.
ಜಪಿಸಲು :
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ / ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||
°~•~°~•~°~•~°~•~°~•~°
{ವಿ. ಸೂ. :
ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}