ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾದ್ದು ಯಾವ ರಾಶಿ?

ದಿನ ಭವಿಷ್ಯ

          

ವಿಕಾರಿನಾಮ ಸಂವತ್ಸರ / ದಕ್ಷಿಣಾಯನ /
ವರ್ಷ ಋತು / ಶ್ರಾವಣ ಮಾಸ/
ಕೃಷ್ಣಪಕ್ಷ/ ಅಮಾವಾಸ್ಯ ತಿಥಿ/

ಶುಕ್ರವಾರ/ಮಘಾ ನಕ್ಷತ್ರ /

ದಿನಾಂಕ 30.08.2019

  °~•~°~•~°~•~°~•~°~•~°

ಮೇಷ

ಉತ್ತಮ  ಮಾನಸಿಕ ದೃಢತೆಯಿಂದ ಕೆಲಸವನ್ನು  ಮುಂದುವರೆಸಿಕೊಂಡು ಬಂದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರಲಿದೆ. ಪುತ್ರನ ಆಗಮನದಿಂದಾಗಿ ಸಂತೋಷ ದೊರೆಯಲಿದೆ. ಕುಟುಂಬದಲ್ಲಿ ಮನಃಶಾಂತಿ ನೆಲೆಗೊಳ್ಳುವುದು



ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.

ಜಪಿಸಲು :
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ 

ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ 

ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥

°~•~°~•~°~•~°~•~°~•~°

   

ವೃಷಭ

ಗೃಹೋಪಯೋಗಿ ವಸ್ತುಗಳ ಖರೀದಿಗೆ ಉತ್ತಮ ಅವಕಾಶ ದೊರೆಯುತ್ತದೆ. ವಾಹನ ಲಾಭ ಭೂಲಾಭ ಮೊದಲಾದ ಅಭಿವೃದ್ಧಿಗಳು ಕಂಡುಬರುತ್ತದೆ. ಭೂಮಿ ಸಂಬಂಧಿ ವ್ಯವಹಾರ ಮಾಡುವವರಿಗೆ ಉತ್ತಮ ಅಭಿವೃದ್ಧಿ ದೊರೆಯಲಿದೆ.
ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.

ಜಪಿಸಲು :
ಸರ್ವದೇವಮಯೇ ದೇವಿ 

ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್

ಸಫಲಂ ಕುರು ನಂದಿನಿ ||

°~•~°~•~°~•~°~•~°~•~°



ಮಿಥುನ


      ಸ್ನೇಹಿತರಿಂದ ಉತ್ತಮ  ಸಹಾಯ ಒದಗಿಬರುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ದೊರೆಯಲಿದೆ. ಬೇರೆಯವರಿಂದ ಮೋಸ ಹೋಗುವ ಲಕ್ಷಣ ಗಳಿರುವುದರಿಂದ ಜಾಗರೂಕತೆಯಿಂದ ಇರಬೇಕು

ಪರಿಹಾರ 
ನರಸಿಂಹನ ಆರಾಧನೆಯನ್ನು ಮಾಡಿ.

ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್ 

ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಮಹಾವೀರಮ್ 

ನಮಾಮಿ ಋಣಮುಕ್ತಯೇ ||

   °~•~°~•~°~•~°~•~°~•~°



ಕರ್ಕಾಟಕ

 ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಮಾಡುವಂತಹ ಕೆಲಸ ಕಾರ್ಯವನ್ನು ಉತ್ತಮ ಪರಿಶ್ರಮದಿಂದ ನಡೆಸಿಕೊಂಡು ಬಂದಲ್ಲಿ ಉತ್ತಮ ಏಳಿಗೆ ಕಂಡುಬರುವುದು

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||

  °~•~°~•~°~•~°~•~°~•~°



ಸಿಂಹ

ಆರೋಗ್ಯದಲ್ಲಿ ಒಳ್ಳೆಯ ಚೇತರಿಕೆ ಕಂಡು ಬರುತ್ತದೆ.  ಮಾನಸಿಕವಾಗಿ ಕುಂದದೆ ಉತ್ತಮ ದೃಢಮನಸ್ಸಿನಿಂದ ಮುಂದುವರೆಯಿರಿ.
ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||

    °~•~°~•~°~•~°~•~°~•~°     


ಕನ್ಯಾ


      ಆರೋಗ್ಯ ಸಂಬಂಧವಾದ ತೊಂದರೆಗಳು ಎದುರಾಗುತ್ತದೆ ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.  ನಷ್ಟವನ್ನು ಎದುರಿಸಬೇಕಾಗುತ್ತದೆ. ಖರ್ಚುವೆಚ್ಚಗಳು ಅಧಿಕವಾಗುತ್ತದೆ ಜಾಗರೂಕತೆಯಿಂದ ನಿಭಾಯಿಸಬೇಕು



ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ

ಜಪಿಸಲು :
ವಸುದೇವಸುತಂ  ದೇವಮ್  

ಕಂಸಚಾಣೂರಮರ್ದನಮ್  |
ದೇವಕೀಪರಮಾನಂದಮ್ 

ಕೃಷ್ಣಂ ವಂದೇ  ಜಗದ್ಗುರುಮ್ ||

  °~•~°~•~°~•~°~•~°~•~°      


ತುಲಾ


        ಉದ್ಯೋಗ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ದೊರೆಯಲಿದೆ. ಹಣಕಾಸಿನ ವಿಚಾರದಲ್ಲ ಏಳಿಗೆ ಕಂಡುಬರುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆದಲ್ಲಿ ತಮ್ಮ ಗುರಿಯನ್ನು  ತಲುಪುತ್ತೀರಿ


ಪರಿಹಾರ 
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಸರ್ವರೂಪಮಯೀ ದೇವೀ 

ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್ 

ನಮಾಮಿ ಪರಮೇಶ್ವರೀಮ್ ||


  °~•~°~•~°~•~°~•~°~•~°


ವೃಶ್ಚಿಕ


 
ನೂತನ ವ್ಯವಹಾರವನ್ನು ತೊಡಗಿಸಿಕೊಳ್ಳುವ ಅವರಿಗೆ ಉತ್ತಮ ಅವಕಾಶಗಳು ದೊರೆಯುತ್ತದೆ. ತಂದೆಯಿಂದ ಹಣಕಾಸಿನ ವಿಚಾರದಲ್ಲಿ  ಉತ್ತಮ ಪ್ರೋತ್ಸಾಹ ದೊರೆಯಲಿದೆ. ಆರೋಗ್ಯ ಸಂಬಂಧಿ ತೊಂದರೆಗಳು ಎದುರಾಗುವುದರಿಂದ ಜಾಗರೂಕತೆಯಿಂದ ಇರಬೇಕು

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

 


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್ 

ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ 

ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°


ಧನು


   
  ಉತ್ತಮ ಪರಿಶ್ರಮದಿಂದ ಕೆಲಸವನ್ನು ಮುನ್ನಡೆಸಿಕೊಂಡು ಬಂದಲ್ಲಿ ಮಾತ್ರ ಅಭಿವೃದ್ಧಿ ದೊರೆಯಲಿದೆ. ಆಲಸ್ಯತನ ವನ್ನು ಬಿಟ್ಟು ಮುನ್ನಡೆಯಬೇಕು. ಇನ್ನೊಬ್ಬರಿಗೆ ಮೋಸವನ್ನು ಮಾಡದಿರಿ.


ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು ಪಡೆಯಿರಿ.

ಜಪಿಸಲು :
ಅಖಂಡಮಂಡಲಾಕಾರಮ್ 

ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ 

ತಸ್ಮೈ ಶ್ರೀಗುರವೇ ನಮಃ ||

      °~•~°~•~°~•~°~•~°~•~°


ಮಕರ


      ಉದ್ಯೋಗದಲ್ಲಿ ಉತ್ತಮ ಅಭಿವೃದ್ಧಿ ಕಂಡುಬಂದರೂ ಕೂಡ ಮಾನಸಿಕ ನೆಮ್ಮದಿಯನ್ನು ಕಳೆದುಕೊಳ್ಳಬೇಕಾಗುತ್ತದೆ. ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳು ಎದುರಾಗುತ್ತದೆ.

ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ. 

ಜಪಿಸಲು :
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||

    °~•~°~•~°~•~°~•~°~•~°         


ಕುಂಭ  

 
      ನೂತನ ವ್ಯವಹಾರವನ್ನು ತೊಡಗಿಸಿಕೊಳ್ಳುವಲ್ಲಿ ಉತ್ತಮ ಅಭಿವೃದ್ಧಿ ಪ್ರೋತ್ಸಾಹ  ದೊರೆಯಲಿದೆ. ವಿದ್ಯಾರ್ಥಿಗಳಿಗೆ ಅಭಿವೃದ್ಧಿ ಕಂಡುಬರುವುದು. ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ

ಪರಿಹಾರ 
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


    ಉದ್ಯೋಗ ಸಂಬಂಧಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ದೊರೆಯಲಿದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು. ಶೀತ ಜ್ವರ ತಲೆನೋವು ಮೊದಲಾದ ತೊಂದರೆಗಳು ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.

 


ಜಪಿಸಲು :   
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

°~•~°~•~°~•~°~•~°~•~°

 

{ವಿ. ಸೂ. : 

ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Leave a Reply

Your email address will not be published. Required fields are marked *