ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಉತ್ತಮ ಏಳಿಗೆ !

ದಿನ ಭವಿಷ್ಯ

          

ವಿಕಾರಿನಾಮ ಸಂವತ್ಸರ / ದಕ್ಷಿಣಾಯನ /
ವರ್ಷ ಋತು / ಭಾದ್ರಪದ ಮಾಸ/
ಶುಕ್ಲಪಕ್ಷ/ ದ್ವಿತೀಯ ತಿಥಿ/

ರವಿವಾರ/ಉತ್ತರ ನಕ್ಷತ್ರ /

ದಿನಾಂಕ 1.09.2019

  °~•~°~•~°~•~°~•~°~•~°

ಮೇಷ

ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ  ವಿದ್ಯಾಭ್ಯಾಸದಲ್ಲಿ ಉತ್ತಮ ಏಳಿಗೆ ದೊರೆಯುತ್ತದೆ. ಆರೋಗ್ಯದಲ್ಲಿ ಉತ್ತಮ ಚೇತರಿಕೆ ಕಂಡುಬರುವುದು



ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.

ಜಪಿಸಲು :
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ 

ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ 

ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥

°~•~°~•~°~•~°~•~°~•~°

   

ವೃಷಭ

ಕುಟುಂಬದಲ್ಲಿ ಉತ್ತಮ ಮನಶ್ಯಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು
ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.

ಜಪಿಸಲು :
ಸರ್ವದೇವಮಯೇ ದೇವಿ 

ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್

ಸಫಲಂ ಕುರು ನಂದಿನಿ ||

°~•~°~•~°~•~°~•~°~•~°



ಮಿಥುನ


      ವ್ಯಾವಹಾರಿಕವಾದ ಅಡೆತಡೆಗಳು ಕಷ್ಟನಷ್ಟಗಳು ಎದುರಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯ ಹದಗೆಡುವ ಲಕ್ಷಣಗಳಿವೆ

ಪರಿಹಾರ 
ನರಸಿಂಹನ ಆರಾಧನೆಯನ್ನು ಮಾಡಿ.

ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್ 

ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಮಹಾವೀರಮ್ 

ನಮಾಮಿ ಋಣಮುಕ್ತಯೇ ||

   °~•~°~•~°~•~°~•~°~•~°



ಕರ್ಕಾಟಕ

 ಮಾಡುವಂತಹ ಕೆಲಸಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ದೊರೆಯಲಿದೆ. ಸಹೋದರರಿಂದ ಉತ್ತಮ  ಸಹಾಯ ಒದಗಿಬರುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ದೊರೆಯಲಿದೆ

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||

  °~•~°~•~°~•~°~•~°~•~°



ಸಿಂಹ

ಮಾಡುವಂತಹ ಕೆಲಸಕಾರ್ಯಗಳನ್ನು ಉತ್ತಮ ಪರಿಶ್ರಮದಿಂದ ಮುನ್ನಡೆಸಿಕೊಂಡು  ಬಂದಲ್ಲಿ ಉತ್ತಮ ಅಭಿವೃದ್ಧಿ ದೊರೆಯಲಿದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು.  ಮಾತಿನ ಮೂಲಕ ಜಗಳಗಳು ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು
ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||

    °~•~°~•~°~•~°~•~°~•~°     


ಕನ್ಯಾ


      ಉದ್ಯೋಗ ಕ್ಷೇತ್ರದಲ್ಲಿ ಅಡೆತಡೆಗಳು ಎದುರಾಗುತ್ತದೆ. ಮಾನಸಿಕ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಕುಟುಂಬದಲ್ಲಿ ಕಲಹಗಳು ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು



ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ

ಜಪಿಸಲು :
ವಸುದೇವಸುತಂ  ದೇವಮ್  

ಕಂಸಚಾಣೂರಮರ್ದನಮ್  |
ದೇವಕೀಪರಮಾನಂದಮ್ 

ಕೃಷ್ಣಂ ವಂದೇ  ಜಗದ್ಗುರುಮ್ ||

  °~•~°~•~°~•~°~•~°~•~°      


ತುಲಾ


        ಮಾಡುವಂತಹ ಕೆಲಸಕಾರ್ಯಗಳಲ್ಲಿ ನಿಧಾನಗತಿಯ ಅಭಿವೃದ್ಧಿ ದೊರೆಯುತ್ತದೆ. ಆರೋಗ್ಯ ಸಂಬಂಧವಾದ  ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಜಾಗರೂಕತೆಯಿಂದ ಖರ್ಚುವೆಚ್ಚವನ್ನು ನಿಭಾಯಿಸಬೇಕು


ಪರಿಹಾರ 
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಸರ್ವರೂಪಮಯೀ ದೇವೀ 

ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್ 

ನಮಾಮಿ ಪರಮೇಶ್ವರೀಮ್ ||


  °~•~°~•~°~•~°~•~°~•~°


ವೃಶ್ಚಿಕ


 
ಉದ್ಯೋಗ ಸಂಬಂಧವಾದ ಅಭಿವೃದ್ಧಿ ಕಂಡುಬರುವುದು.  ವಿದ್ಯಾರ್ಥಿಗಳಿಗೆ ಆಲಸ್ಯತನ ವನ್ನು ಬಿಟ್ಟು ಮುನ್ನಡೆದರೆ ಮಾತ್ರ  ಅಭಿವೃದ್ಧಿ ದೊರೆಯಲಿದೆ. ಮಾಡುವಂತಹ ಕೆಲಸ ಕಾರ್ಯವನ್ನು ಉತ್ತಮ ಪರಿಶ್ರಮದಿಂದ ಮುನ್ನಡೆಸಿಕೊಂಡು ಬರಬೇಕು

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

 


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್ 

ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ 

ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°


ಧನು


   
  ವ್ಯಾವಹಾರಿಕವಾದ ಹಿನ್ನಡೆಗಳು ಕಂಡುಬರುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು ವಿದ್ಯಾರ್ಥಿಗಳಿಗೆ ಅಭಿವೃದ್ಧಿ ದೊರೆಯಲಿದೆ.


ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು ಪಡೆಯಿರಿ.

ಜಪಿಸಲು :
ಅಖಂಡಮಂಡಲಾಕಾರಮ್ 

ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ 

ತಸ್ಮೈ ಶ್ರೀಗುರವೇ ನಮಃ ||

      °~•~°~•~°~•~°~•~°~•~°


ಮಕರ


      ಆರೋಗ್ಯ ಸಂಬಂಧದ ತೊಂದರೆಗಳು ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಮಾನಸಿಕ ನೆಮ್ಮದಿಯನ್ನು ಕಳೆದುಕೊಳ್ಳಬೇಕಾಗುತ್ತದೆ. ದೃಢಮನಸ್ಸಿನಿಂದ ಮುನ್ನಡೆಯಬೇಕು

ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ. 

ಜಪಿಸಲು :
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||

    °~•~°~•~°~•~°~•~°~•~°         


ಕುಂಭ  

 
      ಉತ್ತಮ ಪರಿಶ್ರಮದಿಂದ ಮುನ್ನಡೆದುಕೊಂಡು ಬಂದಲ್ಲಿ ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ದೊರೆಯಲಿದೆ.  ಹಣಕಾಸಿನ ವಿಚಾರದಲ್ಲಿ ಏಳಿಗೆ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಹಾಗೂ ಯುವಕ-ಯುವತಿಯರಿಗೆ ವಿವಾಹಯೋಗ  ಭಾಗ್ಯ ಒದಗಿ ಬರುತ್ತದೆ

ಪರಿಹಾರ 
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


    ಆರೋಗ್ಯ ಸಂಬಂಧವಾದ ತೊಂದರೆಗಳು ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.   ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.

 


ಜಪಿಸಲು :   
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

°~•~°~•~°~•~°~•~°~•~°

 

{ವಿ. ಸೂ. : 

ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Leave a Reply

Your email address will not be published. Required fields are marked *